Horoscope: ಈ ರಾಶಿಯವರು ತಮ್ಮ ಜವಾಬ್ದಾರಿ ಅರಿತು ಮುನ್ನಡೆಯುವಿರಿ

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ನವೆಂಬರ್​ 18: ಸಸಹೋದರನ ಮಾತಗಳನ್ನು ನೀವು ಜೀರ್ಣಮಾಡಿಕೊಳ್ಳುವುದು ಕಷ್ಟವಾಗಿ ಸಿಟ್ಟಾಗುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಹಾಗಾದರೆ ನವೆಂಬರ್​ 18ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ತಮ್ಮ ಜವಾಬ್ದಾರಿ ಅರಿತು ಮುನ್ನಡೆಯುವಿರಿ
ಈ ರಾಶಿಯವರು ತಮ್ಮ ಜವಾಬ್ದಾರಿ ಅರಿತು ಮುನ್ನಡೆಯುವಿರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 18, 2024 | 12:15 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:02 ರಿಂದ 09:27ರವರೆಗೆ, ಯಮಘಂಡ ಕಾಲ 10:52 ರಿಂದ ಮಧ್ಯಾಹ್ನ 12:18 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43ರಿಂದ 03:09 ರವರೆಗೆ.

ತುಲಾ ರಾಶಿ: ವೈವಾಹಿಕ ತೀರ್ಮಾನವನ್ನು ನೀವು ಮುಂದಕ್ಕೆ ಹಾಕುವಿರಿ. ಇಂದು ಭೂಮಿಯ ಖರೀದಿಯ ಬಗ್ಗೆ ಚಿಂತನೆ ಇದ್ದರೆ ಮುಂದುವರಿಯಬಹುದು. ಸಹೋದರನ ಮಾತಗಳನ್ನು ನೀವು ಜೀರ್ಣಮಾಡಿಕೊಳ್ಳುವುದು ಕಷ್ಟವಾಗಿ ಸಿಟ್ಟಾಗುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಸ್ತ್ರೀಸಂಬಂಧವಾದ ಆರೋಪವು ಬರಲಿದೆ. ಹೊಸದಾಗಿ ಸಾರ್ವಜನಿಕ ಕೆಲಸದಲ್ಲಿ ಕಾರ್ಯ ಮಾಡುವವರಿಗೆ ಮುಜುಗರವಿರಲಿದೆ. ಉದ್ಯೋಗದಲ್ಲಿ ಗಾಂಭೀರ್ಯವಿರಲಿದೆ. ಉನ್ನತ ವಿದ್ಯಾಭ್ಯಾಸಕ್ಕೆ ಸರಿಯಾದ ದಿಕ್ಕು ಕಾಣಿಸದು. ಕೋಪದಿಂದ ವ್ಯವಸ್ಥೆ ಸರಿಯಾಗುವುದಾದರೆ ಮಾಡಿ.

ವೃಶ್ಚಿಕ ರಾಶಿ: ಗಂಭೀರವಾದ ಆಲೋಚನೆಯಿಂದ ಹೊಸ ಯೋಜನೆಯು ಹೊರಬರುವುದು. ನೀವು ಇಂದು ಅನೇಕ ದಿನಗಳಿಂದ ನಿಂತಿದ್ದ ಕೆಲಸಗಳನ್ನು ಪೂರ್ಣಗೊಳ್ಳಬಹುದು. ಉದ್ಯೋಗಕ್ಕೆ ಅನೇಕ ಮಾರ್ಗಗಳು ತೆರೆದುಕೊಳ್ಳಲಿವೆ.  ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನು ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಇಂದು ನಿಮ್ಮ‌ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ. ನಿಮ್ಮ ಮೇಲೆ‌ ಬಂದ ಅಪವಾದವನ್ನು ನೀವು ಇನ್ನೊಬ್ಬರ ಮೇಲೆ‌ ಹಾಕುವುದು ಬೇಡ. ಸತ್ಯಾಸತ್ಯತೆಯನ್ನು ಸಾಬೀತು ಮಾಡಿ. ಪ್ರಾಣಿಗಳ‌ ಜೊತೆ ಒಡನಾಡಲಿದ್ದೀರಿ. ‌ಅನುಮಾನವನ್ನು ಬಿಟ್ಟು ನೇರವಾಗಿ ಇರಲು ಪ್ರಯತ್ನಿಸಿ. ಇನ್ನೊಬ್ಬರ ಅವಲಂಬನೆಯಿಂದ ನಿಮಗೆ ಮುಜುಗರವಾಗುವುದು. ದುಡಿಮೆಯಿಂದ ಸುಮ್ಮನಿರುವುದು ನಿಮಗೆ ಆಗದು.

ಧನು ರಾಶಿ: ಅಧಿಕಾರಿ ವರ್ಗದವರಿಗೆ ಇಂದು ಮೇಲಿನಿಂದ ಒತ್ತಡ ಬರುವುದು. ಇಂದು ನಿಮಗೆ ಸಾಲ ಕೊಡಲಿಕ್ಕಾಗಿ ಒಂದರಮೇಲೆ‌ ಒಂದರಂತೆ ಕರೆಗಳು ಬರಬಹುದು. ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ಕಣ್ಣಿಗೆ ಪರಮಸ್ವಾರ್ಥಿ ಎನಿಸಿಕೊಳ್ಳುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದು ನಿಮಗೆ ಇಷ್ಟವಾಗದು. ಸ್ತ್ರೀಯರ ವಿಚಾರದಲ್ಲಿ ನಿಮಗೆ ಬುದ್ಧಿಯು ಸರಿಯಾಗಿ ಸೂಚಿಸದು. ಇಂದಿನ ವೈಯಕ್ತಿಕ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು.

ಮಕರ ರಾಶಿ: ನಿಮಗೆ ಗೊತ್ತಿರುವುದನ್ನು ಹೇಳಲು ನಿಮಗೆ ನಿರ್ಭೀತಿ ಇರುವುದು. ಕಿಂಚಿತ್ತಾದರೂ ನಿಮ್ಮಿಂದ ಸಹಕರಾವಾದರೆ ನಿಮಗೆ ಸಮಾಧಾನ ಸಿಗಲಿದೆ. ಹಿರಿಯರಿಗೆ ಅಗೌರವದ ಮಾತುಗಳನ್ನು ಆಡುವಿರಿ. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ನಿಮ್ಮ ನಿರ್ಧಾರಕ್ಕೆ ನಿಮಗೆ ಸಂಪೂರ್ಣ ಬೆಂಬಲವಿರುವುದು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು. ಭವಿಷ್ಯದ ಬಗ್ಗೆ ಚಿಂತೆ ಇದ್ದರೂ ಬಂದಂತೆ ಸ್ವೀಕರಿಸಬೇಕು ಎಂದು ನಿರ್ಧರಿಸುವಿರಿ. ಸಂಗಾತಿಯ ಮಾತಿನಿಂದ ಸಿಟ್ಟಾಗುವಿರಿ. ಇಂದು ಕಛೇರಿಯಲ್ಲಿ ನಿಮಗೆ ಸ್ವಲ್ಪ ಬಿಡುವುದು ಸಿಗಬಹುದು. ಆಟದತ್ತ ನಿಮಗೆ ಗಮನ ಇರಲಿದೆ. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಹಿರಿಯರ ಜೊತೆಗೆ ನಿಮ್ಮ ಸಂಬಂಧವು ಆಪ್ತವಾಗುವುದು.

ಕುಂಭ ರಾಶಿ: ಆಕಸ್ಮಿಕವಾಗಿ ಬರುವ ಜವಾಬ್ದಾರಿಗಳನ್ನು ಧೈರ್ಯವಾಗಿ ನಿರ್ವಹಿಸುವಿರಿ. ನಿಮ್ಮ ಇಂದಿನ‌ ಯೋಜನೆಗಳು ತಲೆಕೆಳಗಾಗುವುದು. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು‌ ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನಿಮಗೆ ಮುಜುಗರವಾದೀತು. ಆಸ್ತಿಯ ವಿಚಾರವಾಗಿ ಮನೆಯಲ್ಲಿ ವಾಗ್ವಾದ ಆಗಬಹುದು. ಜೊತೆಗಿರುವವರಿಂದ ಏನನ್ನಾದರೂ ನಿರೀಕ್ಷಿಸುವಿರಿ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಹಣವು ಬರುವ ನಿರೀಕ್ಷೆಯಲ್ಲಿ ಎಲ್ಲವನ್ನೂ ಮಾಡುವಿರಿ.

ಮೀನ ರಾಶಿ; ಆಪ್ತರಿಗೆ ನಿಮ್ಮಿಂದ ಸಹಾಯ ಸಿಗಲಿದೆ. ನಿಮ್ಮ ಕನಸುಗಳು ನನಸಾಗಿಸುವ ಸಮಯವನ್ನು ನಿರೀಕ್ಷಿಸುವಿರಿ. ಸಮಯವನ್ನು ವ್ಯರ್ಥ ಮಾಡಲು ಇಷ್ಟಪಡುವುದಿಲ್ಲ. ಯಾವ ಫಲಾಪೇಕ್ಷೆಯನ್ನೂ ಇಂದು ಇಟ್ಟುಕೊಳ್ಳಲಾರಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಆಸಕ್ತಿಯು ಕಡಿಮೆ ಇರುವುದು.‌ ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃತ್ತಿಯಲ್ಲಿ ನಿಮ್ಮ‌ ಸೇವೆಯು ಗಣನೀಯವಾಗಿರುವುದು. ನಿಮ್ಮನ್ನು ನಂಬಿಸಿ ಕೆಲಸವನ್ನು ಮಾಡಿಸಿಕೊಳ್ಳುವರು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಯಾವದೇ ಸಂದರ್ಭದಲ್ಲಿಯೂ ಗಾಬರಿಯಾಗದೇ ಸಮಯಪ್ರಜ್ಞೆಯಿಂದ ಮುನ್ನಡೆಯಿರಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್