Horoscope: ಈ ರಾಶಿಯವರು ಅನಿರೀಕ್ಷಿತ ಗೆಲುವಿನಿಂದ ಹಿಗ್ಗುವ ಅವಶ್ಯಕತೆಯಿಲ್ಲ
8 ಮಾರ್ಚ್ 2025: ಶನಿವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಹಾಗಾದರೆ ಮಾರ್ಚ್ 8ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್ 07: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ನವಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಆಯುಷ್ಮಾನ್, ಕರಣ : ಬವ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:45 – 11:14, ಯಮಘಂಡ ಕಾಲ 14:13 – 15:42, ಗುಳಿಕ ಕಾಲ 06:46 – 08:15.
ತುಲಾ ರಾಶಿ: ಶೋಧನೆಗೆ ಪ್ರಶಂಸೆಯನ್ನು ಪಡೆಯುವಿರಿ. ಯಾರನ್ನೋ ನಂಬಿ ಮನೆಯ ಜವಾಬ್ದಾರಿಯನ್ನು ಕೊಡುವುದು ಬೇಡ. ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ನಿಮಗೆ ಇಷ್ಟವಾಗಬಹುದು. ಸಮಾಜದಲ್ಲಿ ಗೌರವ ಕೀರ್ತಿ ಹೆಚ್ಚಾಗುತ್ತದೆ. ಸರ್ಕಾರದಿಂದ ಬೆಂಬಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮಾಡಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಬಾಂಧವರ ನಡುವೆ ವ್ಯವಹಾರದ ಕಾರಣ ಭಿನ್ನಾಭಿಪ್ರಾಯ ಬರಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ಮೇಲಧಿಕಾರಿಗಳ ಜೊತೆ ಕಲಹವಾಡುವಿರಿ. ವಿವಾಹದ ವಿಳಂಬದಿಂದ ನಿಮಗೆ ಬೇಸರವಾದೀತು. ನಿಮ್ಮ ತಪ್ಪಿನಿಂದ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ಇಂದು ಮೌಲ್ಯಯುತವಾದ ವಸ್ತುಗಳನ್ನು ಖರೀದಿಸುವಿರಿ.
ವೃಶ್ಚಿಕ ರಾಶಿ: ನೀವು ಒತ್ತಡವನ್ನು ಕಡಿಮೆ ಮಾಡಿಕೊಂಡು ಕಾರ್ಯವನ್ನು ಮಾಡಬೇಕೆಂದು ಅಂದುಕೊಳ್ಳುವಾಗಲೇ ಹಲವಾರು ಕಾರ್ಯಗಳು ಬಂದು ಸೇರಬಹುದು. ನಿಮ್ಮನ್ನು ಆಡಿಕೊಳ್ಳುವುದು ಹೊಸದಲ್ಲದಿದ್ದರೂ ಇಂದು ಮಾತ್ರ ನಿಮಗೇ ಬೇರೆ ಭಾವವು ಬರಬಹುದು. ಅನಿರೀಕ್ಷಿತ ಗೆಲುವಿನಿಂದ ಹಿಗ್ಗುವ ಅವಶ್ಯಕತೆ ಇಲ್ಲ. ವಿವಾಹಿತರ ಸಂಬಂಧ ಬಲಗೊಳ್ಳುತ್ತದೆ. ಪ್ರೇಮಿಗಳಿಗೆ ಈ ದಿನ ಆಹ್ಲಾದಕರವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ತಿಳುವಳಿಕೆ ಹೆಚ್ಚಾಗುತ್ತದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿಯು ಸಿಗಬಹುದು. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಭೂಸ್ವಾದೀನವನ್ನು ಮಾಡಿಕೊಳ್ಳುವ ಸಂದರ್ಭವು ಬರಬಹುದು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು. ಇಂದಿನ ವ್ಯವಹಾರವು ಎಚ್ಚರಿಕೆಯಿಂದ ಇರಲಿ. ಕೆಲವೊಮ್ಮೆ ನಿಮ್ಮ ಮಾತುಗಳೇ ನಿಮಗೆ ಮುಳುವಾಗಬಹುದು.
ಧನು ರಾಶಿ: ಇಂದು ನಿಮ್ಮ ಬಲವಾದ ಇಚ್ಛಾಶಕ್ತಿಯಿಂದ ತೊಡಕುಗಳನ್ನು ನಿವಾರಿಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ಕಛೇರಿಯಲ್ಲಿ ನೀವು ಇಂದು ಕೇಂದ್ರಬಿಂದುವಾಗಿರಬಹುದು. ನಿಮ್ಮ ಸಂಗಾತಿಯಿಂದ ನಿಮಗೆ ಕೆಲಸದಲ್ಲಿ ಬೆಂಬಲ ಸಿಗುತ್ತದೆ. ಮನಸ್ಸು ಅಪರಿಚಿತ ಭಯಗಳಿಂದ ಪೀಡಿತವಾಗಬಹುದು. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ ನಿಮ್ಮ ಸಣ್ಣ ಶತ್ರುಗಳು ಇಲ್ಲವಾಗುವರು. ಕೆಲವರ ಬಗೆಗಿನ ಮನೋಭಾವವನ್ನು ತಿದ್ದಿಕೊಳ್ಳಬೇಕಾಗುವುದು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ.
ಮಕರ ರಾಶಿ: ದುಶ್ಚಟದ ಬಗ್ಗೆ ಎಲ್ಲರಿಂದ ಹೇಳಿಸಿಕೊಳ್ಳುವಿರಿ. ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ಸಿಗುವ ಸಾಧ್ಯತೆ ಇದೆ. ಕಷ್ಟಪಟ್ಟು ಪ್ರಯತ್ನಿಸಿ, ನಿಮಗೆ ಅದೃಷ್ಟದ ಬೆಂಬಲವೂ ಸಿಗಲಿದೆ. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಆರ್ಥಿಕ ಜೀವನ ಸುಧಾರಿಸಲಿದೆ. ಆಪ್ತರಿಂದ ಅಮೂಲ್ಯ ಉಡುಗೊರೆ ಪಡೆಯುವ ಅವಕಾಶವಿದೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನ ಬರಬಹುದು. ಸತ್ಯಸಂಗತಿಯನ್ನು ನಂಬುವ ಸ್ಥಿತಿಯಲ್ಲಿ ನೀವಿರಲಾರಿರಿ. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಕೊಡುಕೊಳ್ಳುವ ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರಲಿ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ.
ಕುಂಭ ರಾಶಿ: ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗವನ್ನು ದಿನಚರಿಯಲ್ಲಿ ತಂದುಕೊಳ್ಳುವುದು ಉತ್ತಮ. ಅನವಶ್ಯಕವಾಗಿ ಹಣ ಖರ್ಚು ಮಾಡುವವರಿಗೆ ಇಂದು ಹಣದ ಬೆಲೆ ಅರ್ಥವಾಗಬಹುದು. ಹೊಸ ಹೂಡಿಕೆಗಳನ್ನು ಮಾಡಲು ಈ ಸಮಯ ಶುಭವಾಗಿರುತ್ತದೆ. ಕುಟುಂಬದಲ್ಲಿ ಕೆಲವು ಒಳ್ಳೆಯ ಸುದ್ದಿಗಳು ಬರಬಹುದು. ಇದರಿಂದಾಗಿ ಮನೆಯ ವಾತಾವರಣ ಸಂತೋಷವಾಗಿರುತ್ತದೆ. ನೀವು ಪ್ರೀತಿಯ ಮನಃಸ್ಥಿತಿಯಲ್ಲಿರುವಿರಿ. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು.
ಮೀನ ರಾಶಿ: ನಿಮ್ಮ ಸಂತೋಷದ ಜೀವನಕ್ಕಾಗಿ ಮೊಂಡುತನವನ್ನು ಬಿಡಬೇಕಾಗುವುದು. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಂಗಾತಿಯ ಜೊತೆ ವಾದದ ಸಾಧ್ಯತೆಯು ಬರಲಿದೆ. ದಿನ ನಿಮ್ಮ ವೃತ್ತಿಜೀವನದಲ್ಲಿ ಹೊಸ ಎತ್ತರವನ್ನು ಮುಟ್ಟುವ ಅವಕಾಶ ನಿಮಗೆ ಸಿಗಬಹುದು. ನೀವು ಉದ್ಯೋಗ ಮಾಡುತ್ತಿದ್ದರೆ ಬಡ್ತಿ ಅಥವಾ ಸಂಬಳ ಹೆಚ್ಚಳದ ಸಾಧ್ಯತೆಯಿದೆ. ವ್ಯಾಪಾರ ಮಾಡುವವರು ಸಹ ದೊಡ್ಡ ಲಾಭ ಗಳಿಸಬಹುದು. ಸಂಘರ್ಷವನ್ನು ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸಿ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಬೆರೆಯುವುದು ಕಷ್ಟವಾದೀತು. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು.