ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು,
ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಅಷ್ಟಮೀ,
ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶಿವ, ಕರಣ: ಭವ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ,
ಸೂರ್ಯಾಸ್ತ ಸಂಜೆ 06 ಗಂಟೆ 17 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:28 ರಿಂದ ಸಂಜೆ 04:53ರ ವರೆಗೆ,
ಯಮಘಂಡ ಕಾಲ ಬೆಳಿಗ್ಗೆ 09:50 ರಿಂದ 11:15 ರವರೆಗೆ, ಗುಳಿಕ ಮಧ್ಯಾಹ್ನ 12:39 ರಿಂದ 02:04 ರವರೆಗೆ.
ತುಲಾ ರಾಶಿ; ಪರರಿಗೆ ತಿಳಿವಳಿಕೆಯನ್ನು ಕೊಡುವುದು ಕಷ್ಟವಾದೀತು. ಹಳೆಯ ಘಟನೆಗಳನ್ನು ಸ್ಮರಿಸಿ ದುಃಖಿಸುವಿರಿ. ನಿಮ್ಮ ಸಮಯ ಮೀರಿದ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವಿರಿ. ವಾಹನ ಓಡಾಡವು ಸುಖಕರವಲ್ಲ. ತಾಯಿಗೆ ಕೊಡುವ ಗೌರವವು ಕಡಿಮೆ ಆದೀತು. ಮೇಲಧಿಕಾರಿಗಳ ಮಾತಿನಿಂದ ಮನಸ್ಸು ತಲ್ಲಣಿಸಬಹುದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು. ಇಂದು ವಾಸದ ಮನೆಯನ್ನು ಬದಲಿಸುವಿರಿ. ಆಹಾರವನ್ನು ಮಿತಿವಾಗಿಯೂ ಹಾಗೂ ಬದಲಾವಣೆಯನ್ನೂ ಮಾಡಿಕೊಳ್ಳುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ನಿಮ್ಮ ಬಗ್ಗೆ ಸಹೋದ್ಯೋಗಿಗಳು ಆಡಿಕೊಳ್ಳುವರು. ಅನ್ಯರ ಹಂಗಿನಲ್ಲಿ ಇರುವಂತೆ ಭಾಸವಾಗಬಹುದು.
ವೃಶ್ಚಿಕ ರಾಶಿ: ಆರ್ಥಿಕತೆಗೆ ಸಂಬಂಧಿಸಿದ ವೃತ್ತಿಯಲ್ಲಿ ಒತ್ತಡ ಕಾಣಿಸುವುದು. ದೈವಬಲದಿಂದ ಯಶಸ್ಸು ಸಿಗುವುದು. ಹೊಸ ಮನೆಯಲ್ಲಿ ನಿಮಗೆ ಬೇಕಾದ ಅನುಕೂಲತೆಗಳ ಮನೆಯವರಲ್ಲಿ ಹೇಳುವಿರಿ. ನೀವು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾದೀತು. ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಹೊಗಳಿಕೆಯಿಂದ ನಿಮಗೆ ಬೇಕಾದುದನ್ನು ಪಡೆದುಕೊಳ್ಳುವಿರಿ. ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ ಬೇಡ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ. ವೃತ್ತಿಯನ್ನು ಸಂತೋಷದಿಂದ ಮಾಡುವುದನ್ನು ಕಲಿಯಬೇಕಾಗಬಹುದು. ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು.
ಧನು ರಾಶಿ: ಭೂಮಿಯ ವ್ಯವಹಾರವು ನಿಮಗೆ ಸಂಬಂಧಿಸಿದರೆ ಮಾತ್ರ ಮಾತ್ರ ಪ್ರವೇಶಿಸಿ. ಲಾಭದ ಆಸೆಯಿಂದ ಹೋದರೆ ಗಂಭೀರತೆಯನ್ನು ಎದುರು ನೋಡಬೇಕಾಗಬಹುದು. ಬೆಂಬಲಿಗರಿಗೆ ಸಂತೋಷವನ್ನು ಕೊಡುವಿರಿ. ಸರಳ ಎಂದುಕೊಂಡ ಕೆಲಸವೇ ಇಂದು ಕಷ್ಟವಾಗುವುದು. ನಿಮ್ಮ ಸಂಬಂಧಗಳ ಬಗ್ಗೆ ಇಂದು ಹೆಚ್ಚು ಆಲೋಚಿಸುವಿರಿ. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ನಿಮ್ಮ ಮನಸ್ಸಿನಲ್ಲಿ ತಳಮಳವಾಗುವುದು. ಅಧಿಕಾರಿಗಳಾಗಿದ್ದರೆ ನೀವೇ ಇಂದು ಆಗಬೇಕಾದ ಕಾರ್ಯಗಳ ಪರಿಶೀಲನೆ ಮಾಡುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ನಿಮ್ಮ ಕೆಲಸವು ಪೂರ್ಣವಾಗದೇ ಹೇಳಿಸಿಕೊಳ್ಳುವಿರಿ. ಸಿಟ್ಟಿನಿಂದ ನಿಮ್ಮ ಮನೋವಿಕಾರವು ಆಗಬಹುದು.
ಮಕರ ರಾಶಿ; ಇಂದು ನಿಮಗೆ ನೆಮ್ಮದಿಯೇ ದೊಡ್ಡಲಾಭವಾಗಿ ಕಾಣಿಸುವುದು. ವಿವಾಹದ ಮಾತುಕತೆಗೆ ನಿಮ್ಮ ಒಪ್ಪಿಗೆ ಇರದು. ನಾಚಿಕೆಯ ಸ್ವಭಾವವು ಯಸರ ಜೊತೆಯೂ ಬೆರೆಯಲಾಗದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಯುವಿರಿ. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ಗಮನ ಇರಲಿ. ನೀವು ವೃತ್ತಿಯನ್ನು ಮಾಡುತ್ತಲೇ ಉನ್ನತ ಪದವಿಯನ್ನು ಪಡೆಯುವಿರಿ. ಯಶಸ್ಸು ನಿಮ್ಮ ಹಿಂದೆ ತಾನಾಗಿಯೇ ಬರುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಸಾಧ್ಯವಾಗುವ ಕೆಲಸದ ಕಡೆ ನಿಮ್ಮ ಗಮನ ಹೆಚ್ಚಿರಲಿ. ಬಡ್ತಿಗಾಗಿ ಮೇಲಧಿಕಾರಿಗಳ ಜೊತೆ ಮಾತನಾಡುವಿರಿ. ನಿಮ್ಮ ಸಾಮರ್ಥ್ಯವನ್ನು ಇತರರಿಗೆ ನೀವೇ ತಿಳಿಸಬೇಕಾಗುವುದು. ಹಿರಿಯರ ಎದುರು ಅಹಂಕಾರವನ್ನು ತೋರಿಸುವುದು ಬೇಡ.
ಕುಂಭ ರಾಶಿ: ಇಂದು ನಿಮಗೆ ಹೋದಲ್ಲೆಲ್ಲ ನಕಾರಾತ್ಮಕ ಅಂಶಗಳೇ ಕಾಣಿಸುವುದು. ನಿಮ್ಮ ಸಾಹಸಕ್ಕೆ ಮೆಚ್ಚುಗೆ ಸಿಗಬಹುದು. ಬಂಧುಗಳ ಬಗ್ಗೆ ನಿಮಗೆ ಒಳ್ಳೆಯ ಅಭಿಪ್ರಾಯ ಬರದು. ಇಂದು ನಿಮಗೆ ಆತ್ಮೀಯರ ಒಡನಾಡ ಅಧಿಕವಾಗಲಿದೆ. ನಿಮ್ಮ ಸ್ವಭಾವದಿಂದ ನಿಮಗೆ ಕಿರಿಕಿರಿಯಾಗಬಹುದು. ಇನ್ನೊಬ್ಬರ ಮಾತುಗಳನ್ನು ನೀವು ಸಹಿಸುವುದು ಕಷ್ಟವಾದೀತು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ. ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಆರೋಗ್ಯದ ಬಗ್ಗೆ ಆತಂಕ ಬೇಡ. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ. ಪಶ್ಚಾತ್ತಾಪವು ನಿಮ್ಮ ನೋವನ್ನು ಪರಿಹರಿಸೀತು. ನಿಮ್ಮ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು. ಸ್ನೇಹಿತರು ನಿಮ್ಮನ್ನು ಇಷ್ಟಪಡುವರು. ಮಾತು ನೇರವಾಗಿದ್ದರೂ ಇತರರು ಇಷ್ಟಪಡುವಂತೆ ಇರುವುದು. ವೃತ್ತಿಯಲ್ಲಿ ಸರಳತೆಯನ್ನು ಹುಡುಕುವಿರಿ.
ಮೀನ ರಾಶಿ: ಪರರ ಸ್ಥಾನವನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನ ನಡೆಯುವುದು. ನಿಮ್ಮನ್ನು ಎಲ್ಲ ಕಡೆಯಿಂದ ನಿಯಂತ್ರಿಸುವ ಕಾರ್ಯವನ್ನು ಗೊತ್ತಾಗದಂತೆ ಮಾಡುವರು. ಉದ್ಯಮದ ಸ್ವರೂಪವನ್ನು ಇನ್ನಷ್ಟು ವಿಸ್ತರಿಸುವ ಯೋಜನೆಯನ್ನು ಹಾಕಿಕೊಳ್ಳುವಿರಿ. ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ. ದುಷ್ಟ ಮಾನಸಿಕತೆಯು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಅನಿರೀಕ್ಷಿತ ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ತಿಳಿದವರ ಜೊತೆ ಆಧ್ಯಾತ್ಮಿಕ ವಿಚಾರವನ್ನು ಚರ್ಚಿಸಿ. ಯಾರಾದರೂ ಕರ್ತವ್ಯದ ಬಗ್ಗೆ ನಿಮ್ಮನ್ನು ಎಚ್ಚರಿಸಬಹುದು. ಏರುದನಿಯಲ್ಲಿ ಮಾತನಾಡುವುದು ಬೇಡ. ಆದಾಯದ ಮೂಲವನ್ನು ಸರಿಯಾಗಿ ಇಟ್ಟುಕೊಳ್ಳಿ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವನ್ನು ಹೆಚ್ಚಿಸುತ್ತದೆ.