Horoscope: ಈ ರಾಶಿಯವರು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು
21 ಫೆಬ್ರವರಿ 2025: ಶುಕ್ರವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಇಂದು ನಿಮ್ಮ ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ, ಪ್ರಗತಿಯ ಸಾಧ್ಯತೆಗಳಿವೆ. ಹಾಗಾದರೆ ಫೆಬ್ರವರಿ 21ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸುಕರ್ಮ, ಕರಣ : ಬವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:19 – 12:46, ಯಮಘಂಡ ಕಾಲ 15:42 – 17:10, ಗುಳಿಕ ಕಾಲ 08:23 – 09:51.
ತುಲಾ ರಾಶಿ; ಇಂದು ಉನ್ನತ ಅಧಿಕಾರಿಗಳ ಜೊತೆ ಹೆಚ್ಚು ವ್ಯವಹಾರವನ್ನು ಮಾಡಬೇಕಾಗಿರುವ ಕಾರಣ ಅವರ ಜೊತೆ ಸಮಯ ಕಳೆಯುವಿರಿ. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹಿತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಉದ್ಯೋಗದಲ್ಲಿ ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸುವ ಸಾಧ್ಯತೆಯಿದೆ, ಹೆಚ್ಚಿನ ಶ್ರಮ ಇರುತ್ತದೆ, ಖರ್ಚುಗಳು ಹೆಚ್ಚಾಗುತ್ತವೆ. ಜಾಹೀರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.
ವೃಶ್ಚಿಕ ರಾಶಿ; ವಿದ್ಯಾರ್ಥಿಗಳು ಹಲವು ದಿನಗಳ ಅನಂತರ ಅಭ್ಯಾಸದಲ್ಲಿ ನಿರತರಾಗಿರುತ್ತಾರೆ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ನೂತನ ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ನಿಮ್ಮ ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಸಹಕಾರವನ್ನು ಪಡೆಯುತ್ತೀರಿ. ಸ್ಥಳ ಬದಲಾವಣೆ ಸಾಧ್ಯತೆ ಇದೆ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ.
ಧನು ರಾಶಿ: ಉದ್ಯೋಗವನ್ನು ಅರಸುತ್ತಿರುವ ನೀವು ಇಂದು ದುಡಿಕಿ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಒಳ್ಳೆಯ ಕೆಲಸವನ್ನು ನಷ್ಟ ಮಾಡಿಕೊಳ್ಳುವಿರಿ. ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ನಿಮ್ಮ ತಾಯಿಯಿಂದ ಬೆಂಬಲವನ್ನು ಪಡೆಯುತ್ತೀರಿ, ವೆಚ್ಚಗಳು ಹೆಚ್ಚಾಗುತ್ತವೆ. ವಾಹನ ನಿರ್ವಹಣೆಗೆ ಖರ್ಚು ಹೆಚ್ಚಾಗಬಹುದು. ನೀವು ಶೈಕ್ಷಣಿಕ ಕೆಲಸದ ಸಂತೋಷದ ಫಲಿತಾಂಶಗಳನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಇಂದು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣ ನಷ್ಟ. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಗೊತ್ತಾಗುವುದು. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ.
ಮಕರ ರಾಶಿ: ಇಂದು ನಿಮ್ಮ ಹಠದ ಸ್ವಭಾವದಿಂದ ಬೇರೆಯವರ ಹೃದಯವನ್ನೂ ನೋಯಿಸುವಿರಿ. ಮೇಲಧಿಕಾರಿಗಳಿಗೆ ನೇರ ನುಡಿಯ ಪ್ರತಿಕ್ರಿಯೆಯನ್ನು ನೀಡುವುದು ಬೇಡ. ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಕೌಟುಂಬಿಕ ಜೀವನವು ನೋವಿನಿಂದ ಕೂಡಿರಬಹುದು. ಕೆಲಸದ ವ್ಯಾಪ್ತಿಯಲ್ಲಿ ಬದಲಾವಣೆಯಾಗಬಹುದು. ಕೋಪದ ಸಂದರ್ಭದಲ್ಲಿ ಸಮಾಧಾನವನ್ನು ತಂದುಕೊಳ್ಳುವಿರಿ. ಎಲ್ಲರ ನಡುವೆ ಸಂವಹನ ಮಾಡುವಾಗ ತಾಳ್ಮೆಯಿಂದಿರಿ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ. ಕೊರಗುತ್ತ ಇರುವುದು ಬೇಡ.
ಕುಂಭ ರಾಶಿ: ಪರಿಚಿತರ ರಹಸ್ಯವನ್ನು ದ್ವೇಷದ ಕಾರಣಕ್ಕೆ ಹೊರ ಹಾಕುವಿರಿ. ನಿಮ್ಮ ಕಾರ್ಯದ ಅನುಭವವು ಇಂದು ಪ್ರಯೋಜನಕ್ಕೆ ಬರಲಿದ್ದು, ಎಲ್ಲರೂ ನಿಮ್ಮ ಸಲಹೆಯನ್ನು ಪಡೆಯುವರು. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಇಂದು ನೀವು ಕೆಲಸದ ನಿಮಿತ್ತ ಬೇರೆ ಸ್ಥಳಕ್ಕೆ ಹೋಗಬೇಕಾಗಬಹುದು. ಮಕ್ಕಳಿಗೆ ಆರೋಗ್ಯ ಸಮಸ್ಯೆಗಳಿರಬಹುದು. ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು.
ಮೀನ ರಾಶಿ: ಮೈಯೆಲ್ಲ ಕಣ್ಣಾಗಿ ಕಾರ್ಯದಲ್ಲಿ ಜಾಗರೂಕರಾದಾಗ ಮಾತ್ರ ಅವಕಾಶಗಳು ಸಿಗುತ್ತವೆ. ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ಇಂದು ನಿಮ್ಮ ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ, ಪ್ರಗತಿಯ ಸಾಧ್ಯತೆಗಳಿವೆ. ಆದಾಯ ಹೆಚ್ಚುತ್ತದೆ ಆದರೆ ಸ್ಥಳ ಬದಲಾವಣೆಯ ಸಾಧ್ಯತೆಗಳಿವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ.




