AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಚೆನ್ನಾಗಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ಡಿಸೆಂಬರ್​ 08: ಮಾತಾಡುವ ಅವಕಾಶವನ್ನು ಮಿತವಾಗಿ ಬಳಸಿ. ಅನಾಯಾಸದಿಂದ ಬರುವ ಹಣವನ್ನು ದುರುಪಯೋಗ‌ ಮಾಡುವಿರಿ.‌ ಒತ್ತಡದಿಂದ ಕಾರ್ಯವನ್ನು ಮಾಡುವುದು ನಿಮಗೆ ಅಭ್ಯಾಸವಾಗಿದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡುವಿರಿ. ಹಾಗಾದರೆ ಡಿಸೆಂಬರ್​ 08ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ಚೆನ್ನಾಗಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ
ಈ ರಾಶಿಯವರು ಚೆನ್ನಾಗಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 08, 2024 | 12:12 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಸಂಜೆ 04:38 ರಿಂದ 06:02ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:25 ರಿಂದ 01:49 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:14 ರಿಂದ 04:38 ರವರೆಗೆ.

ತುಲಾ ರಾಶಿ: ನಿಮ್ಮ ಮನಸ್ಸು ಹಲವು ದ್ವಂದ್ವಗಳಿಂದ ಏಕಾಂತದಲ್ಲಿ ಇರುವ ಮನಸ್ಸಾಗುವುದು. ಅನುಭವಿಗಳ ಮುಂದೆ ಮೌನವಾಗಿರುವುದು ಲೇಸು. ಚೆನ್ನಾಗಿ ಯೋಚಿಸಿದ ನಿರ್ಧಾರಗಳು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆಸ್ತಿ ವ್ಯವಹಾರಗಳು ನಿಮಗೆ ಲಾಭವನ್ನು ನೀಡುವುದು. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ನಿರಂತರ ಕಾರ್ಯದಿಂದ ನಿಮಗೆ ಫಲವು ಲಭ್ಯವಾಗುವುದು. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ದೈವದ ಬಗ್ಗೆ ಭಕ್ತಿಯ ಕೊರತೆ ಇರಲಿದೆ. ಸಂಬಂಧವನ್ನು ಉಳಿಸಿಕೊಳ್ಳಲು ಸಮಯವನ್ನೂ ಕೊಡಬೇಕಾದೀತು. ನಿಮಗೆ ಇಂದಿನ ಕಾರ್ಯದಿಂದ ಪಾಪಪ್ರಜ್ಞೆಯು ಕಾಡಬಹುದು. ಮನಸ್ಸನ್ನು ನಿರ್ಲಿಪ್ತಗೊಳಿಸಲು ಪ್ರಯತ್ನಿಸುವಿರಿ. ಸೌಹಾರ್ದತೆಯ ಚರ್ಚೆಯಿಂದ ಒಳ್ಳೆಯದಾಗುವುದು. ವೈಯಕ್ತಿಕ ಸಮಸ್ಯೆಗಳನ್ನು ವ್ಯವಹಾರಕ್ಕೆ ತಂದುಕೊಳ್ಳುವುದು ಬೇಡ.‌

ವೃಶ್ಚಿಕ ರಾಶಿ: ನಿವೃತ್ತಿಯನ್ನು ಘೋಷಿಸಿ ನೆಮ್ಮದಿಯಿಂದ ಇರುವುವುದು ಉತ್ತಮ. ಭೂಮಿಯ ಖರೀದಯಲ್ಲಿ ವಂಚನೆ ಆಗಬಹುದು. ಇಂದು ನಿಮ್ಮ ಬಗ್ಗೆ ಕಪೋಲಕಲ್ಪಿತ ಸುದ್ದಿಗಳು ಹರಡಬಹುದು. ವ್ಯವಹಾರಗಳ ವಿಷಯದಲ್ಲಿ ನಿಮ್ಮನ್ನು ಅದೃಷ್ಟವಂತರನ್ನಾಗಿ ಮಾಡುತ್ತದೆ. ನೀವು ಜನಪ್ರಿಯತೆಯನ್ನು ಗಳಿಸುವಿರಿ. ಪ್ರೇಮಿಗಳಿಗೆ ಈ ಸಮಯವು ಶುಭವಲ್ಲ. ನಿಮ್ಮನ್ನು ಸ್ಥಾನದಿಂದ‌ ಕೆಳಗೆ ಹಾಕಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ನಾನಾ ರೀತಿಯ ಸೌಲಭ್ಯಗಳು ಸಿಗಲಿದೆ. ಚೋರಭೀತಿಯು ನಿಮಗೆ ಕಾಡಬಹುದು. ಭೂಮಿಯ ವ್ಯವಹಾರದಿಂದ ಸಂಬಂಧಗಳು ಹಾಳಾಗುವುದು. ನೀವು ಕೆಲವು ಸಮಸ್ಯೆಯನ್ನು ಅನಿರೀಕ್ಷಿತವಾಗಿ ಎದುರಿಸಬೇಕಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟಕೊಳ್ಳಬೇಕಾಗುವುದು. ಪ್ರೇಮ ಸಂಬಂಧದ ಕೋಪದಿಂದ ನೀವು ಭಾವನಾತ್ಮಕ ದೂರವಾಗುವಿರಿ.

ಧನು ರಾಶಿ: ಜವಾಬ್ದಾರಿಯ ಸ್ಥಾನದಲ್ಲಿ ನಿಂತು ಕಾರ್ಯವನ್ನು ಮಾಡುವಿರಿ. ಇಂದು ಅನಾರೋಗ್ಯದಿಂದ ಚೇತರಿಕೆಯು ಕಾಣಿಸುವುದು. ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಯಾರ‌ ಮಾತನ್ನೋ ಕೇಳಿ ನೀವು ಸಮಸ್ಯೆಯನ್ನು ತಂದುಕೊಳ್ಳುವಿರಿ. ಕಣ್ಣಿನ ತೊಂದರೆ ಹೆಚ್ಚಾದೀತು. ವಿವಾಹ ಸಂಬಂಧದಿಂದ ನಿಮಗೆ ಕಿರಿಕಿರಿ ಎನಿಸಬಹುದು. ಕೆಲಸದಲ್ಲಿ ಮಂದಗತಿಯು ಇರಲಿದೆ. ಬಂಧುಗಳನ್ನು ನೀವು ದೂರ ಮಾಡಿಕೊಳ್ಳುವಿರಿ. ಉದ್ಯೋಗವನ್ನೇ ನಂಬಿಕೊಂಡಿದ್ದರೆ ನಿಮಗೆ ಆತಂಕವು ಸೃಷ್ಟಿಯಾಗಬಹುದು. ವಿದ್ಯಾರ್ಥಿಗಳು ಅಧ್ಯಯನದಿಂದ ದೂರವಾಗುತ್ತಾರೆ. ವ್ಯಾಪಾರವನ್ನು ಹೆಚ್ಚಿಸಲು ಸೂಕ್ತ ವಿಧಾನಗಳನ್ನು ಅಳವಡಿಸಿಕೊಳ್ಳಿ.

ಮಕರ ರಾಶಿ: ಹೊಸ ಗೆಳೆತನ ಆರಂಭವಾಗುವುದು. ದಾಂಪತ್ಯದಲ್ಲಿ ಸಂತೋಷವಿರಲು ಹೊಸತನ ಬೇಕಾದೀತು. ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕ ಮಾಡುವಿರಿ. ನೀವು ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ಮತ್ತು ನಿಮ್ಮ ಲಾಭವನ್ನು ಹೆಚ್ಚಿಸಬಹುದು. ಪ್ರಯತ್ನಕ್ಕೆ ಫಲ ಸಿಗದೇ ದುಃಖಿಸುವಿರಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದವು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ನಿಮಗೆ ಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗದು. ನಿಮ್ಮ‌ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯದೇ ನೋಯುವಿರಿ. ವಾಹನ ಸಂಚಾರದಲ್ಲಿ ನಿಮಗೆ ಭಯವಾಗಬಹುದು. ಆರ್ಥಿಕವಾಗಿ ನೀವು ಬಲವಾಗಿತ್ತಿರುವುದು ನಿಮಗೆ ಹೆಮ್ಮೆಯ ವಿಚಾರವಾಗುವುದು. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸಿದೆ.

ಕುಂಭ ರಾಶಿ: ಮಾತಾಡುವ ಅವಕಾಶವನ್ನು ಮಿತವಾಗಿ ಬಳಸಿ. ಅನಾಯಾಸದಿಂದ ಬರುವ ಹಣವನ್ನು ದುರುಪಯೋಗ‌ ಮಾಡುವಿರಿ.‌ ಒತ್ತಡದಿಂದ ಕಾರ್ಯವನ್ನು ಮಾಡುವುದು ನಿಮಗೆ ಅಭ್ಯಾಸವಾಗಿದೆ. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡುವಿರಿ. ಸಜ್ಜನರ ಸೇವೆಯಿಂದ ತೃಪ್ತಿಯಾಗುವುದು. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದು. ಕೂಡಿಟ್ಟ ಹಣದಿಂದ ನಿಮಗೆ ಇಂದು ಪ್ರಯೋಜನವಾದೀತು. ಮುಂದಾಗುವುದನ್ನು ಊಹಿಸಿಕೊಳ್ಳುವುದು ಸಾಧ್ಯವಾಗುವುದು. ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌ಮತ್ತೆ ಮತ್ತೆ ಒಂದೇ ಘಟನೆಗಳು ನಿಮಗೆ ಬೇಸರ ತರಿಸಬಹುದು. ಆರ್ಥಿಕ‌ಭದ್ರತೆಯ ಕಡೆ ಅಧಿಕ ಗಮನವನ್ನು ಕೊಡಿ. ನಿಮ್ಮ ಅಸಹಾಯಕತೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ಕೆಲವನ್ನು ಬಿಟ್ಟರೂ ಬಿಡಲಾಗದು.

ಮೀನ ರಾಶಿ: ಇಂದು ಕಾಯುವಿಕೆ ನಿಮಗೆ ಆಗದು. ಎಲ್ಲವನ್ನು ಕ್ಷಣದಲ್ಲಿ ಮಾಡುವ ಆತುರ ಇರುವುದು. ಅಸಾಧಾರಣ ಸೋಲು ನಿಮಗೆ ಹೆಮ್ಮೆಯನ್ನು ತರುವುದು. ಇಂದು ನಿಮ್ಮ ಕುಟುಂಬವು ಸಂತೋಷವಾಗಿ ಇರುವುದನ್ನು ಕಣ್ತುಂಬಿಕೊಳ್ಳುವಿರಿ. ಕೆಲಸದಲ್ಲಿ ಸಾವಧಾನತೆ ಇರಲಿ. ನಿಮಗೆ ಸಿಗುವ ಬಡ್ತಿಯಲ್ಲಿ ಸುಧಾರಣೆ ಇರಲಿದೆ. ಸಹಬಾಳ್ವೆ ಕಷ್ಟವಾಗುವ ಸಾಧ್ಯತೆ ಇದೆ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಕೆಲವು ಘಟನೆಗಳು ನಿಮಗೆ ಭ್ರಾಂತಿಯನ್ನು ತರಿಸಬಹುದು. ನೀರೀಕ್ಷಿಸಿದಂತೆ ಎಲ್ಲವೂ ನಡೆಯದೇ ಇರಬಹುದು. ಉತ್ತಮ‌ವಾದ ಸಮಯವನ್ನು ಎದುರು ನೋಡುವಿರಿ. ಹಣದ ಒಳ ಹರಿವು ನಿಮಗೆ ನೆಮ್ಮದಿಯನ್ನು ಕೊಟ್ಟೀತು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!