Horoscope: ನಟನೆ ಇಷ್ಟಪಡುವವರಿಗೆ ಅವಕಾಶಗಳು ಸಿಗುವುದು
2 ಮಾರ್ಚ್ 2025: ಭಾನುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಹಾಗಾದರೆ ಮಾರ್ಚ್ 2ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್ 02: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ಉತ್ತರಾಭಾದ್ರ/ರೇವತೀ, ಯೋಗ : ಶುಭ, ಕರಣ : ತೈತಿಲ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:11 – 18:40, ಯಮಘಂಡ ಕಾಲ 12:45 – 14:14, ಗುಳಿಕ ಕಾಲ 15:42 – 17:11.
ತುಲಾ ರಾಶಿ: ಅಂಗೈನಲ್ಲಿ ಆಕಾಶವಿದೆ ಎಂದು ಆಕಾಶಕ್ಕೆ ಹಾರುವುದು ಸರಿಯಾಗದು. ಹದವರಿತು ಮುನ್ನುಗ್ಗುವುದು ಉಚಿತ. ಸಂಬಂಧಗಳ ಸತ್ತ್ವವನ್ನು ನೀವು ಅರಿಯುವಿರಿ. ನಿಮ್ಮ ನೈಪುಣ್ಯತೆಯನ್ನು ಯಾರೂ ಊಹಿಸಲಾರರು. ನಿಮ್ಮನ್ನು ಎದುರಗೆ ಹೊಗಳಿ, ನಿಮ್ಮಿಂದ ಆಗಬೇಕಾದುದನ್ನು ಮಾಡಿಸಿಕೊಂಡಾರು. ಇಂದು ನೀವು ಕೋಪವನ್ನು ಮಾಡಿಕೊಳ್ಳಲು ಕಾರಣವೇ ಬೇಕಾಗದು. ಕುಟುಂಬ ಜೊತೆ ದೇವರ ದರ್ಶನವನ್ನು ಮಾಡುವಿರಿ. ನೌಕರರಿಂದ ನಿಮಗೆ ಸರಿಯಾದ ಪ್ರತಿಕ್ರಿಯೆ ಸಿಗದು. ವಿವೇಚನೆ ಇಲ್ಲದೇ ಆಡಿದ ಮಾತುಗಳಿಂದ ಕಲಹವಾಗಬಹುದು. ಅಜಾಗರೂಕತೆಯಿಂದ ಬಿದ್ದು ಗಾಯ ಮಾಡಿಕೊಳ್ಳಬಹುದು. ಕೈಗೊಂಡ ಕಾರ್ಯಗಳಲ್ಲಿ ಪೂರ್ಣ ಜಯವು ಪ್ರಾಪ್ತವಾಗುವುದು. ನಟನೆಯನ್ನು ಇಷ್ಟಪಡುವವರಿಗೆ ಅವಕಾಶಗಳು ಸಿಗುವುದು. ಪ್ರಾಮಾಣಿಕತೆಗೆ ಸಿಕ್ಕ ಪ್ರಶಂಸೆಯಿಂದ ಇನ್ನಷ್ಟು ಉತ್ಸಾಹ ಇರುವುದು. ಯಾರದೋ ಕಾರ್ಯಕ್ಕೆ ನೀವು ದಂಡಿಸಿ ಕೆಲಸ ಮಾಡಬೇಕಾದೀತು. ನಿಮ್ಮ ಮಾತುಗಳು ಹಾಸ್ಯದಿಂದ ಕೂಡಿರಲಿದೆ. ಅನಾರೋಗ್ಯದಿಂದ ವಿಶ್ರಮಿಸಿಕೊಳ್ಳುವಿರಿ.
ವೃಶ್ಚಿಕ ರಾಶಿ: ಆರಂಭದಿಂದಲೇ ನಿಮ್ಮೊಳಗೆ ಆತ್ಮವಿಶ್ವಾಸ ಇರಲಿದ್ದು ಅತಿಯಾದ ಉತ್ಸಾಹದಿಂದ ದಿನವಿಡೀ ಕೆಲಸವನ್ನು ಮಾಡುವಿರಿ. ಆಸ್ತಿ ವ್ಯವಹಾರದ ನಿರ್ಧಾರಗಳು ನಿಮ್ಮ ಪರವಾಗಿರಬಹುದು. ಆದಾಯದ ವಿಚಾರದಲ್ಲಿ ಮನೆಯಿಂದ ಮೆಚ್ಚುಗೆ ಸಿಗಲಿದೆ. ನಿಮ್ಮ ವ್ಯಾಪ್ತಿಯನ್ನು ಮೀರಿದ ಕೆಲಸವನ್ನು ನೀವು ಮಾಡಬೇಕಾದೀತು. ಆಸಕ್ತಿಯು ಇಲ್ಲದಿದ್ದರೂ ಒತ್ತಾಯಕ್ಕೆ ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಅನಿವಾರ್ಯವಿದ್ದರೂ ಧನವ್ಯಯದ ಕಾರಣ ಖರೀದಿಯನ್ನು ಮುಂದೂಡುವಿರಿ. ಸಾಮಾಜಿಕ ಗೌರವವನ್ನು ಪಡೆಯಲು ಆಸೆ ಇರುವುದು. ಎಲ್ಲರ ಮಾತುಗಳಿಗೂ ಉತ್ತರಿಸಬೇಕೆಂದಿಲ್ಲ. ನಕ್ಕು ನಿಮ್ಮ ಕೆಲಸದಲ್ಲಿ ನೀವಿರಿ. ಇಂದು ನೀವು ತಾಯಿಯ ಪ್ರೀತಿಯಿಂದ ವಂಚಿತರಾಗಬಹುದು. ಉದ್ಯೋಗದ ಕಾರಣಕ್ಕೆ ದೂರದ ಊರಿಗೆ ಹೋಗಬೇಕಾಗುವುದು. ಪ್ರಯಾಣದ ಮುಂಜಾಗ್ರತೆಯ ಕ್ರಮವಿರಲಿ. ಗೊತ್ತಿಲ್ಲದ ಪ್ರದೇಶಕ್ಕೆ ಒಂಟಿಯಾಗಿ ಹೋಗಬೇಕಾಗಬಹುದು.
ಧನು ರಾಶಿ: ಇಂದು ನಿಮ್ಮ ಮನಸ್ಸನ್ನು ಒಂದೆಡೆ ಏಕಾಗ್ರವಾಗಿಸಲು ಪ್ರಯತ್ನಿಸಿ. ನಾನಾ ಸಮಸ್ಯೆಗಳು ನಿಮ್ಮೆದುರು ಬಂದರೂ ಮರೆಯುವುದೊಂದೇ ನಿಮಗೆ ಸದ್ಯಕ್ಕಿರುವ ದಾರಿಯಾಗಿದೆ. ಯುವಕರು ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯು ಅವಕಾಶಗಳಿದ್ದರೂ ಅದನ್ನು ಬಳಸಿಕೊಳ್ಳಲು ಮಾರ್ಗದರ್ಶನದ ಅವಶ್ಯಕತೆ ಇದೆ. ಜೀವನದಲ್ಲಿ ಸಣ್ಣಪುಟ್ಟ ಸವಾಲುಗಳನ್ನು ಎದುರಿಸಬೇಕಾಗಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ. ರಾಜಕೀಯ ವಿಷಯಗಳನ್ನು ಅತಿಯಾಗಿ ಹಚ್ಚಿಕೊಳ್ಳುವುದು ಬೇಡ. ಕಛೇರಿಯಲ್ಲಿ ಯಾರದೋ ತಪ್ಪಿಗೆ ನೀವು ತಲೆ ತಗ್ಗಿಸಬೇಕಾಗಬಹುದು. ಪ್ರಾಣಿಗಳ ಮೇಲೆ ಪ್ರೀತಿ ತೋರಿಸುವಿರಿ. ನಿಮ್ಮ ಕಾರ್ಯದಲ್ಲಿ ನಿಮಗೆ ತಪ್ಪು ಕಾಣಿಸುವುದು. ಹೊಗಳಿಕೆಯಿಂದ ನಿಮಗೆ ಸಂಕೋಚ ಉಂಟಾಗಬಹುದು. ಮಿತಿಮೀರಿದ ಓಡಾವು ನಿಮ್ಮ ದೇಹಬಲವನ್ನು ಕುಗ್ಗಿಸುವುದು. ನಿಮ್ಮ ಬಯಕೆಗಳಿಗೆ ಇನ್ಮೊಬ್ಬರು ಪ್ರೇರಣೆ ಆಗಬಹುದು.
ಮಕರ ರಾಶಿ: ನಿಮ್ಮ ಜಾಣ್ಮೆಯ ಕೆಲಸಕ್ಕೆ ಅಧಿಕಾರಿಗಳಿಂದ ಮೆಚ್ಚುಗೆ. ಸಣ್ಣ ಹೂಡಿಕೆಗಳು ಭವಿಷ್ಯಕ್ಕೆ ಪ್ರಯೋಜನ ಆಗಬಲ್ಲವು. ಮಹಿಳೆಯರು ಸ್ವ ಉದ್ಯೋಗದ ಕಡೆ ಗಮನಹರಿಸುವರು. ನೂತನ ವಸ್ತುಗಳ ಮೇಲೆ ನಿಮಗೆ ಪ್ರೀತಿ ಹೆಚ್ಚಿರುವುದು. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ. ಹಳೆಯ ಆಸ್ತಿಯನ್ನು ಮಾರಾಟ ಮಾಡುವುದರಿಂದ ಅಥವಾ ಬಾಡಿಗೆಗೆ ನೀಡುವುದರಿಂದ ಆರ್ಥಿಕ ಲಾಭವಿದೆ. ಭೂಮಿ ಅಥವಾ ವಾಹನದ ನಿರ್ವಹಣೆಗೆ ಹಣವನ್ನು ಖರ್ಚು ಮಾಡಲಾಗುವುದು. ವಿದೇಶದಲ್ಲಿ ಓದುವ ಆಸೆಯು ನಿಮ್ಮೊಳಗೆ ಆರಂಭವಾಗುವುದು. ನಿಮ್ಮನ್ನು ಕೈಬಿಟ್ಟ ಸಂಸ್ಥೆಯು ಪುನಃ ಆಮಂತ್ರಣ ನೀಡುವ ಸಾಧ್ಯತೆ ಇದೆ. ಉತ್ತಮ ವಿಶ್ವಾಸಿಗಳನ್ನು ಕಳೆದುಕೊಳ್ಳುವಿರಿ. ಭೂಮಿಯ ವ್ಯವಹಾರದಲ್ಲಿ ಪಾಲುದಾರರಾಗಿ ಸೇರಿಕೊಳ್ಳುವ ಮನಸ್ಸು ಮಾಡುವಿರಿ. ಸಂಗಾತಿಯ ಜೊತೆ ಬಹಳ ಸಂಯೋಷದ ಕ್ಷಣವನ್ನು ಕಳೆಯುವಿರಿ. ಉದ್ಯೋಗದ ಸ್ಥಳದಲ್ಲಿ ಉಂಟಾದ ಪಕ್ಷಪಾತದಿಂದ ದ್ವೇಷಭಾವವು ಉಂಟಾಗಬಹುದು
ಕುಂಭ ರಾಶಿ: ಇಂದು ನಿಮ್ಮ ಬಗ್ಗೆ ಆಡುವ ಮಾತಿನಿಂದ ಉತ್ಸಾಹವು ಅಧಿಕವಾಗಿ ಇರುವುದು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಶ್ರಮದ ಫಲವೇ ಕಾಣುವರು. ನಿಮ್ಮ ಆಪ್ತ ಸ್ನೇಹಿತರ ಅನಿರೀಕ್ಷಿತ ಭೇಟಿಯಾಗುವುದು. ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ವೃತ್ತಿ ಜೀವನದಲ್ಲಿ ಪ್ರಮುಖ ಸಾಧನೆಗಳನ್ನು ಸಾಧಿಸಲಾಗುವುದು. ಜೀವನದಲ್ಲಿ ಧನಾತ್ಮಕ ಶಕ್ತಿಯ ಒಳಹರಿವು ಇರುತ್ತದೆ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ. ಸಮಾಜಸೇವೆಯಲ್ಲಿ ಆಸಕ್ತಿ ಹೆಚ್ಚಲಿದೆ. ವಾಹನ ಖರೀದಿಗೆ ಬಂಧುಗಳಿಂದ ಒತ್ತಡವು ಬರಬಹುದು. ಬಹಳ ಶ್ರಮದಿಂದ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶಪ್ರಯಾಣವನ್ನು ಮಾಡಬೇಕಾಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಪೂರ್ವಯೋಜಿತ ಕಾರ್ಯಗಳನ್ನು ನೀವು ಬದಲಾಯಿಸುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲು ಮನೆಯಿಂದ ಒಪ್ಪಿಗೆಯನ್ನು ನಿರಾಕರಿಸಬಹುದು.
ಮೀನ ರಾಶಿ: ಇಂದು ನಿಮ್ಮ ಅದೃಷ್ಟದ ದಿನವಾಗಿದ್ದು ಆಗಬೇಕಾದ ಕೆಲಸಗಳು ಸರಾಗವಾಗಿ ಆಗುವುದು. ಇಂದು ನಿಮ್ಮ ಕಾರ್ಯಕ್ಷಮತೂ ಉತ್ತಮವಾಗಿರುವುದು. ನಿಮಗೆ ಮಾತನಾಡುವ ಕಲೆಯು ಕರಗತವಾಗಲಿದೆ. ನಿಮ್ಮನ್ನು ಇಂದು ಮಾತಿನಿಂದ ಸೋಲಿಸುವುದು ಕಷ್ಟವಾದೀತು. ಕೆಲವರು ಆಸ್ತಿಯಲ್ಲಿ ಹೂಡಿಕೆ ಮಾಡಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ಉದ್ಯೋಗದಲ್ಲಿನ ಒತ್ತಡವು ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಉಂಟುಮಾಡಬಹುದು. ಮೊದಲೇ ಸಮಯವನ್ನು ಸರಿಯಾಗಿ ನಿರ್ಧರಿಸಿಕೊಂಡು ಕಾರ್ಯವನ್ನು ಆರಂಭಿಸಿದರೆ ಸಕಾಲಕ್ಕೆ ಮುಗಿಯುವುದು.




