AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನೀವು ಸಂಗಾತಿಯ ಆದಾಯವನ್ನು ಬಳಸಿಕೊಳ್ಳುವಿರಿ

01 ಮಾರ್ಚ್​​​ 2025: ಶನಿವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಉಪಕಾರಕ್ಕೆ ಕೃತಜ್ಞತೆಯಾದರೂ ಇರಲಿ. ವಾಹನ ಖರೀದಿಯಲ್ಲಿ ಗೊಂದಲ ಉಂಟಾಗಬಹುದು. ಹಾಗಾದರೆ ಮಾರ್ಚ್ 01ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ನೀವು ಸಂಗಾತಿಯ ಆದಾಯವನ್ನು ಬಳಸಿಕೊಳ್ಳುವಿರಿ
TV9 Web
| Edited By: |

Updated on:Mar 01, 2025 | 12:12 AM

Share

ಬೆಂಗಳೂರು, ಮಾರ್ಚ್​​ 01: ನಿತ್ಯ ಪಂಚಾಗ ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಿದ್ಧ, ಕರಣ : ಬವ ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:48 – 11:16, ಯಮಘಂಡ ಕಾಲ 14:14 – 15:42, ಗುಳಿಕ ಕಾಲ 06:51 – 08:19.

ತುಲಾ ರಾಶಿ: ನೀವು ಸಂಗಾತಿಯ ಆದಾಯವನ್ನು ಬಳಸಿಕೊಳ್ಳುವಿರಿ. ನಿಮ್ಮ ಪ್ರತಿಭೆಯ ಅನಾವರಣವಾಗುವುದು. ಪ್ರಾಮಾಣಿಕತೆಯನ್ನು ನೀವು ಬಿಡದೇ ಮುಂದುವರಿಸಿ. ಭೂಮಿಯ ವ್ಯವಹಾರಕ್ಕೆ ಯಾರನ್ನಾದರೂ ಸಹಾಯಕರನ್ನು ಪಡೆಯುವಿರಿ. ಯಾವುದಾದರೂ ದುರಂತದಲ್ಲಿ ಸಿಕ್ಕಿಬೀಳಬಹುದು. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳುವ ಹಂಬಲವಿರುವುದು. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಕೆಲವು ಕೆಲಸಗಳಿಗೆ ತಾತ್ಕಾಲಿಕ ವಿರಾಮವನ್ನು ಕೊಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದ್ದು ಹಿರಿಯರಿಂದ ಕೇಳಿಪಡೆಯುವಿರಿ. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು. ಮನೆಯಲ್ಲಿ ಸಂಭ್ರಮಕ್ಕೆ ತಯಾರಿಯನ್ನು ನಡೆಸುವಿರಿ.

ವೃಶ್ಚಿಕ ರಾಶಿ: ಸರ್ಕಾರದಲ್ಲಿ ಉನ್ನತ ಅಧಿಕಾರಿಗಳಿಗೆ ಬೇರೆ ಬೇರೆ ಕಡೆಗಳಿಂದ ಒತ್ತಡ, ನಿರ್ವಹಣೆ ಅಸಾಧ್ಯ. ಆತುರದ ತೀರ್ಮಾನದಿಂದ ಹಣವನ್ನು ನಷ್ಟ ಮಾಡಿಕೊಳ್ಳುವಿರಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಗೃಹನಿರ್ಮಾಣ ಕಾರ್ಯವನ್ನು ಪರಿಶೀಲನೆ ಮಾಡುವಿರಿ. ಅವಕಾಶಗಳು ಬಂದು ಬಾಗಿಲು ತಟ್ಟಿದರೂ ತೆರೆಯುವ ಕಲ್ಪನೆಯೂ ಬಾರದು. ಹೊಂದಾಣಿಕೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಬಹುದು. ಸಂಗಾತಿಯ ಮಾತುಗಳು ನಿಮ್ಮ ಅಭಿಮಾನಕ್ಕೆ ತೊಂದರೆ ಕೊಡಬಹುದು. ನೀವು ಅಪಮಾನವನ್ನೂ ನುಂಗಿಕೊಂಡು ಕಾರ್ಯದಲ್ಲಿ ಮಗ್ನರಾಗುವಿರಿ. ಗುರಿಯ ಸಾಧನೆಗೆ ಅಲ್ಪವಾದರೂ ಶ್ರಮ ಬೇಕು.‌ ಧಾರ್ಮಿಕ ನಂಬಿಕೆಯನ್ನು ಬಲವಾಗಿಸಿಕೊಳ್ಳಬೇಕಾಗುವುದು.

ಧನು ರಾಶಿ: ನಿಮ್ಮ ಹೂಡಿಕೆ ಕೃಷಿಯ ಕಡೆಗೆ ಇದ್ದರೂ ಅದನ್ನು ನಿಭಾಯಿಸುವ ಕಲೆ ಗೊತ್ತಿರದು. ಪಾಲುದಾರಿಕೆಯಲ್ಲಿ ಮಾಡಬೇಕಾಗುವುದು. ವಿರೋಧಿಗಳು ನಿಮ್ಮನ್ನು ಯಾವುದಾದರೂ ಕೆಲಸದಲ್ಲಿ ಸಿಕ್ಕಿಸಬಹುದು. ಕಾನೂನಿನ ಬಗ್ಗೆ ನಿಮಗೆ ಸರಿಯಾದ ಜ್ಞಾನವಿರಲಿ. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಸ್ವಾರ್ಥವು ನಿಮ್ಮ ಯಶಸ್ಸನ್ನು ತಿನ್ನುವುದು. ಆರಂಭಿಸಿದ ಕಾರ್ಯವು ಪೂರ್ಣ ಸಫಲವಾಗುವವರೆಗೂ ನೀವು ನಿಲ್ಲಿಸುವುದಿಲ್ಲ. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು. ವೈದ್ಯರಲ್ಲಿ ಸರಿಯಾದ ಮಾಹಿತಿ ನೀಡಿ ಚಿಕಿತ್ಸೆಯನ್ನು ಪಡೆಯಿರಿ. ಶುಭ ಸಮಾರಂಭಗಳಿಗೆ ಹೋಗಬೇಕು ಎಂದುಕೊಂಡರೂ ಆಗದೇಹೋಗುವುದು. ಸಂತಾನದ ಖುಷಿಯು ಇರಲಿದೆ. ಸಹೋದರರ ಬಗ್ಗೆ ನಿಮ್ಮಲ್ಲಿ ನಕಾರಾತ್ಮಕ ಗುಣಗಳು ಕಾಣಿಸಿಕೊಳ್ಳಬಹುದು.

ಮಕರ ರಾಶಿ: ಸಣ್ಣ ವ್ಯಾಪಾರದಲ್ಲಿ ಲಾಭ ಇದೆ. ಹೂಡಿಕೆಯನ್ನು ಯಾವುದಕ್ಕೋ ಕುರುಡಾಗಿ ಮಾಡುವುದು ಬೇಡ. ಕೆಲವು ಅನುಭವಿಗಳ ತಜ್ಞತೆಯನ್ನು ಬಳಿಸಿಕೊಳ್ಳಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ನಿಮಗೆ ನ್ಯಾಯಾಲಯದಿಂದ ನ್ಯಾಯಯವನ್ನು ಪಡೆಯುವ ಸನ್ನಿವೇಶ ಬರಲಿದೆ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಬಹುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ಅನ್ಯರ ಸಂಪಾದನೆಯನ್ನು ನೀವು ಹಾಳುಮಾಡುವುದು ಬೇಡ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಮಕ್ಕಳ ಯಶಸ್ಸು ನೀವು ನಿರೀಕ್ಷಿಸಿದಂತೆ ಆಗುವುದು ಕಷ್ಟ. ಕೃಷಿಗೆ ಚಟುವಟಿಕೆಗಲ್ಲಿ ಆಸಕ್ತಿ ಹೆಚ್ಚಿರುವುದು. ನಿಮಗೆ ಸಂಬಂಧಿಸಿದ ಕಾರ್ಯವನ್ನು ಮಾತ್ರ ಮಾಡಿ.

ಕುಂಭ ರಾಶಿ: ಕುಟುಂಬವನ್ನು ಸಹಭಾಗಿತ್ವದಲ್ಲಿ ನಡೆಸಬೇಕಿದೆ. ಹಲವು ದಿನಗಳ ಯೋಜನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿ ಮುನ್ನಡೆಸುವಿರಿ. ವೇತನದ ವಿಚಾರದಲ್ಲಿ ಘರ್ಷಣೆಯಾದೀತು. ಪ್ರಯಾಣದಿಂದ ಆಯಾಸಗೊಂಡು ವಿಶ್ರಾಂತಿ ಪಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದ ಬೀಳಬಹುದು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು. ನಿವೃತ್ತಿಯಿಂದ ನಿಮಗೆ ಸಮಯ ಸಾಧನೆ ಕಷ್ಟವಾಗಲಿದೆ. ಇಂದು ಬಂಧುಗಳ ಮನೆಯಲ್ಲಿ ವಾಸಮಾಡಬೇಕಾಗಬಹುದು. ಉತ್ಸಾಹದ ಭರದಲ್ಲಿ ಏನ್ನಾದರೂ ಮಾಡಿಕೊಂಡೀರ. ದಾಂಪತ್ಯದಲ್ಲಿ ಪರಸ್ಪರ ಅನುರಾಗದ ಕೊರತೆ ಕಾಣಿಸಬಹುದು. ಪರರಕಾರ್ಯಕ್ಕೆ ಸಹಾಯ ಮಾಡಲಿದ್ದೀರಿ.

ಮೀನ ರಾಶಿ: ನಿಮ್ಮ ಆಲಸ್ಯವೇ ಉದ್ಯಮಕ್ಕೆ ಬೇಕಾದ ಅರ್ಹತೆಯನ್ನು ಕಡಿಮೆ ಮಾಡಿದೆ. ನಿಮ್ಮ ಪ್ರಯತ್ನಗಳು ಫಲ ನೀಡುವ ಕಾರಣ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸಾಮಾಜಿಕ ವಲಯವು ವಿಸ್ತಾರವಾಗಿ ಉದ್ಯಮಕ್ಕೆ ಪೂರ್ಕವಾಗಲಿದೆ, ಸಾಹಿತಿಗಳಿಗೆ ಅವಕಾಶಗಳು ಸಿಕ್ಕಿದ್ದು ಅದನ್ನು ಉಪಯೋಗಿಸಿಕೊಳ್ಳುವಿರಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಶ್ರಮದಿಂದ ಮಾಡುವ ಬದಲು ಜಾಣತನದಿಂದ ಎದುರಿಸಬೇಕು. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಉಪಕಾರಕ್ಕೆ ಕೃತಜ್ಞತೆಯಾದರೂ ಇರಲಿ. ವಾಹನ ಖರೀದಿಯಲ್ಲಿ ಗೊಂದಲ ಉಂಟಾಗಬಹುದು.

Published On - 12:12 am, Sat, 1 March 25

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್