AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ?

ಈ ತಿಂಗಳಲ್ಲಿ ಕೇತುವು ರವಿ, ಬುಧ, ಶನಿ, ಕುಜರ ವಿಶಿಷ್ಟ ಪ್ರಭಾವದಲ್ಲಿ ಮಘಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಗಣಪತಿ ಆರಾಧನೆಯಿಂದ ದೋಷ ನಿವಾರಣೆ ಆಗುತ್ತದೆ. ಮೇಷದಿಂದ ಮೀನದವರೆಗೆ ಪ್ರತಿ ರಾಶಿಗಳಿಗೂ ಕೇತುವಿನ ಈ ಸಂಚಾರವು ವಿಭಿನ್ನ ಫಲಗಳನ್ನು ನೀಡಲಿದೆ. ಧನಲಾಭ, ಉದ್ಯೋಗದಲ್ಲಿ ಪ್ರಗತಿ, ಆಧ್ಯಾತ್ಮಿಕ ಸಾಧನೆ, ಆರೋಗ್ಯದ ಬಗ್ಗೆ ಎಚ್ಚರಿಕೆ ಮತ್ತು ವೈಯಕ್ತಿಕ ಬೆಳವಣಿಗೆಯನ್ನು ನಿರೀಕ್ಷಿಸಬಹುದು. ಇದು ಹಲವರಿಗೆ ಶುಭದಾಯಕವಾಗಲಿದೆ.

ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ?
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 11, 2026 | 9:47 PM

Share

ಈ ತಿಂಗಳಲ್ಲಿ ಕೊನೆಯ ಗ್ರಹವಾದ ಕೇತುವು ರವಿ, ಬುಧ, ಶನಿ ಮತ್ತು ಕುಜರ ವಿಶಿಷ್ಟ ಪ್ರಭಾವದಲ್ಲಿ ಇರುವನು. ಮಘಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದು ಇದರ ಅಧಿಪತಿ ಕೇತುವೇ ಆಗಿದ್ದಾನೆ. ಕುಜನ ಫಲವನ್ನು ಕೊಡುತ್ತಾನೆ ಎಂಬ ಪ್ರತೀತಿ ಇದೆ‌. ಕುಜನ ದೃಷ್ಟಿ ಈ ಗ್ರಹದ ಮೇಲಿರಲಿದೆ. ಗಣಪತಿಯ ಆರಾಧನೆಯಿಂದ ದೋಷಗಳನ್ನು ಕಡಿಮೆ ಮಾಡಿಕೊಳ್ಳಬಹುದು.

​ಮೇಷ ರಾಶಿ

​ಕುಜನ ದ್ವಾದಶಾಂಶವಿರುವುದರಿಂದ ಧೈರ್ಯ ಹೆಚ್ಚಲಿದೆ. ಶತ್ರುಗಳ ನಾಶ ಹಾಗೂ ದಿಢೀರ್ ಧನಲಾಭವಾಗಲಿದೆ. ರವಿಯ ಪ್ರಭಾವದಿಂದ ಸಮಾಜದಲ್ಲಿ ಗೌರವ ಸಿಗಲಿದ್ದು, ಸರ್ಕಾರಿ ಕೆಲಸಗಳು ಯಶಸ್ವಿಯಾಗಲಿವೆ. ಆದರೆ, ರಕ್ತದೊತ್ತಡ ಮತ್ತು ಕೋಪದ ಮೇಲೆ ನಿಯಂತ್ರಣವಿರಲಿ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ. ​ ವೃಷಭ ರಾಶಿ

​ಆಧ್ಯಾತ್ಮಿಕ ಕ್ಷೇತ್ರಕ್ಕೆ ಹೆಜ್ಜೆಯಿಡಲು ಇದು ಸಕಾಲ. ಬುಧನ ನವಾಂಶದಿಂದಾಗಿ ವ್ಯಾಪಾರದಲ್ಲಿ ಚತುರತೆ ಮೂಡಲಿದೆ. ವಿದೇಶ ಪ್ರಯಾಣದ ಯೋಗವಿದ್ದು, ಹಳೆಯ ಸಾಲಗಳಿಂದ ಮುಕ್ತಿ ಸಿಗಲಿದೆ. ಶನಿಯ ತ್ರಿಂಶಾಂಶವು ನಿಧಾನಗತಿಯ ಪ್ರಗತಿ ನೀಡಿದರೂ, ದೀರ್ಘಕಾಲೀನ ಆಸ್ತಿ ಸಂಪಾದನೆಗೆ ಈ ದಶೆ ಶುಭ ತರಲಿದೆ. ​ ಮಿಥುನ ರಾಶಿ

​ಬುಧನ ನವಾಂಶವು ನಿಮಗೆ ಬುದ್ಧಿವಂತಿಕೆ ಮತ್ತು ಸಂವಹನ ಕಲೆಯನ್ನು ಹೆಚ್ಚಿಸಲಿದೆ. ಉದ್ಯೋಗದಲ್ಲಿ ದೊಡ್ಡ ಬದಲಾವಣೆ ಕಂಡುಬರಲಿದ್ದು, ಆದಾಯದ ಮೂಲಗಳು ಹೆಚ್ಚಲಿವೆ. ಶನಿಯ ಪ್ರಭಾವದಿಂದ ಕಠಿಣ ಪರಿಶ್ರಮ ಅಗತ್ಯವಿರುತ್ತದೆ. ಚರ್ಮದ ಅಲರ್ಜಿ ಮತ್ತು ನರಗಳ ದೌರ್ಬಲ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

​ಕರ್ಕಾಟಕ ರಾಶಿ

​ರವಿಯ ರಾಶ್ಯಾಧಿಪತ್ಯದ ಪ್ರಭಾವದಿಂದ ಉದ್ಯೋಗದಲ್ಲಿ ಬಡ್ತಿ ಮತ್ತು ಕೀರ್ತಿ ಲಭಿಸಲಿದೆ. ದೈವಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ತೀರ್ಥಯಾತ್ರೆ ಮಾಡುವಿರಿ. ಆರಂಭದಲ್ಲಿ ಕೆಲಸಗಳಲ್ಲಿ ಅಡೆತಡೆಗಳು ಎದುರಾದರೂ, ಅಂತಿಮವಾಗಿ ಉನ್ನತ ಜ್ಞಾನ ಮತ್ತು ಮಾನಸಿಕ ನೆಮ್ಮದಿ ನಿಮ್ಮದಾಗಲಿದೆ. ಆಸ್ತಿ ಖರೀದಿ ಯೋಗವಿದೆ. ​ ಸಿಂಹ ರಾಶಿ

​ಕೇತು ರವಿಯ ಮನೆ ಮತ್ತು ಹೋರೆಯಲ್ಲೇ ಇರುವುದರಿಂದ ನಿಮಗೆ ಪೂರ್ಣ ರಾಜಯೋಗ ಫಲ ಸಿಗಲಿದೆ. ನಾಯಕತ್ವದ ಗುಣಗಳು ವೃದ್ಧಿಸಲಿವೆ. ತಂದೆಯ ಕಡೆಯಿಂದ ಅಪಾರ ಲಾಭ ಮತ್ತು ಪಿತ್ರಾರ್ಜಿತ ಆಸ್ತಿ ಸಿಗಲಿದೆ. ಕುಜನ ಪ್ರಭಾವದಿಂದ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾರಿ ಧನಲಾಭವಾಗಲಿದ್ದು, ಸಮಾಜದಲ್ಲಿ ಉನ್ನತ ಸ್ಥಾನ ಸಿಗಲಿದೆ. ​ ಕನ್ಯಾ ರಾಶಿ

​ಬುಧನ ನವಾಂಶವು ಹೊಸ ಉದ್ಯಮ ಆರಂಭಿಸಲು ಪ್ರೇರಣೆ ನೀಡಲಿದೆ. ಸಂಶೋಧನೆ ಮತ್ತು ಗೂಢ ಶಾಸ್ತ್ರಗಳಲ್ಲಿ ಆಸಕ್ತಿ ಮೂಡಲಿದೆ. ಶನಿಯ ತ್ರಿಂಶಾಂಶದಿಂದಾಗಿ ಕೋರ್ಟ್ ಕಚೇರಿ ಕಲಾಪಗಳಲ್ಲಿ ಜಯ ಸಿಗಲಿದೆ. ಆರೋಗ್ಯದ ಕಡೆ ಗಮನವಿರಲಿ. ಹಠಾತ್ ಧನಲಾಭದ ಮೂಲಕ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ​ ತುಲಾ ರಾಶಿ

​ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ, ವ್ಯಾಪಾರ ಪಾಲುದಾರಿಕೆಯಲ್ಲಿ ಲಾಭವಾಗಲಿದೆ. ರವಿಯ ಪ್ರಭಾವದಿಂದ ಸಮಾಜದ ಗಣ್ಯರ ಒಡನಾಟ ಸಿಗಲಿದೆ. ಆಧ್ಯಾತ್ಮಿಕ ಸಾಧನೆಗೆ ಈ ದಶೆ ಪೂರಕವಾಗಿದೆ. ಶನಿಯ ಪ್ರಭಾವದಿಂದ ಆಸ್ತಿ ಹೂಡಿಕೆಯಲ್ಲಿ ಯಶಸ್ಸು ಸಿಗಲಿದ್ದು, ಅನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ​ ವೃಶ್ಚಿಕ ರಾಶಿ

​ಕುಜನ ದ್ವಾದಶಾಂಶವಿರುವುದರಿಂದ ಸಾಹಸ ಪ್ರವೃತ್ತಿ ಹೆಚ್ಚಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭೂತಪೂರ್ವ ಯಶಸ್ಸು ಸಿಗಲಿದೆ. ಸಾಲ ಬಾಧೆಗಳು ತೀರಲಿವೆ. ರವಿಯ ಹೋರೆಯು ಸರ್ಕಾರಿ ವಲಯದಿಂದ ಅಪಾರ ಲಾಭ ತಂದುಕೊಡಲಿದೆ. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದು ಒಳಿತು. ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ​ ಧನು ರಾಶಿ

​ಬುದ್ಧಿಮತ್ತೆ ಮತ್ತು ಜ್ಞಾನದ ವಿಕಾಸವಾಗಲಿದೆ. ಸಂತಾನ ಭಾಗ್ಯದ ನಿರೀಕ್ಷೆಯಲ್ಲಿದ್ದವರಿಗೆ ಶುಭ ವಾರ್ತೆ ಸಿಗಲಿದೆ. ಧರ್ಮಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರವಿಯ ಪ್ರಭಾವದಿಂದಾಗಿ ದೀರ್ಘಕಾಲದ ತೊಂದರೆಗಳು ಮತ್ತು ಕೌಟುಂಬಿಕ ಕಲಹಗಳು ಕೊನೆಗೊಳ್ಳಲಿವೆ. ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣದ ಯೋಗವಿದೆ. ​ ಮಕರ ರಾಶಿ

​ಶನಿಯ ತ್ರಿಂಶಾಂಶದ ಪ್ರಭಾವದಿಂದ ಕಠಿಣ ಶ್ರಮಕ್ಕೆ ತಕ್ಕ ಉತ್ತಮ ಪ್ರತಿಫಲ ಸಿಗಲಿದೆ. ಭೂಮಿ ಅಥವಾ ವಾಹನ ಖರೀದಿ ಯೋಗವಿದೆ. ಕೌಟುಂಬಿಕವಾಗಿ ವೈರಾಗ್ಯ ಭಾವ ಮೂಡಿದರೂ, ವೃತ್ತಿಜೀವನದಲ್ಲಿ ಸ್ಥಿರತೆ ಇರಲಿದೆ. ಕುಜನ ದ್ವಾದಶಾಂಶವು ರಿಯಲ್ ಎಸ್ಟೇಟ್ ಮತ್ತು ಕೃಷಿ ಭೂಮಿಯಿಂದ ಲಾಭ ತಂದುಕೊಡಲಿದೆ. ​ ಕುಂಭ ರಾಶಿ

​ನಿಮ್ಮ ಆತ್ಮವಿಶ್ವಾಸ ಮತ್ತು ಪರಾಕ್ರಮ ಹೆಚ್ಚಾಗಲಿದೆ. ಸಹೋದರರೊಂದಿಗೆ ಇದ್ದ ಭಿನ್ನಾಭಿಪ್ರಾಯಗಳು ದೂರಾಗಲಿವೆ. ಬುಧನ ನವಾಂಶದಿಂದಾಗಿ ಸಣ್ಣ ಪ್ರಯಾಣಗಳು ಲಾಭದಾಯಕವಾಗಿರಲಿವೆ. ರವಿಯ ಪ್ರಭಾವದಿಂದ ಕೀರ್ತಿ ವೃದ್ಧಿಸಲಿದೆ. ಆಧ್ಯಾತ್ಮಿಕ ಚಿಂತನೆಗಳು ನಿಮ್ಮನ್ನು ಸನ್ಮಾರ್ಗದತ್ತ ಮುನ್ನಡೆಸಲಿದ್ದು, ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.

ಇದನ್ನೂ ಓದಿ: ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಗೊತ್ತಾ?ಮೀನ ರಾಶಿ

​ಆರ್ಥಿಕವಾಗಿ ಧನಲಾಭ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗಲಿವೆ. ಮಾತಿನಲ್ಲಿ ಚತುರತೆ ಮೂಡಲಿದ್ದು, ಬುದ್ಧಿವಂತಿಕೆಯಿಂದ ಕಾರ್ಯಸಿದ್ಧಿಯಾಗಲಿದೆ. ರವಿ ಮತ್ತು ಕುಜನ ಪ್ರಭಾವದಿಂದ ಆಸ್ತಿ ವಿವಾದಗಳು ಬಗೆಹರಿಯಲಿವೆ. ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರವಿರಲಿ. ದೈವಿಕ ಅನುಗ್ರಹದಿಂದ ಸರ್ವ ಅಡೆತಡೆಗಳು ದೂರಾಗಿ ಯಶಸ್ಸು ಸಿಗಲಿದೆ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!