AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu shastra: ದೀಪ ಹಚ್ಚುವ ಮುನ್ನ ಈ ನಿಯಮಗಳನ್ನು ನೆನಪಿಟ್ಟುಕೊಳ್ಳಿ.. ಯಾವ ದಿಕ್ಕಿಗೆ ದೀಪ ಇಟ್ಟರೆ ಒಳ್ಳೆಯದು?

Lighting The Lamp or diya: ಪೂಜೆಯಲ್ಲಿ ದೇವರಿಗೆ ದೀಪ, ಧೂಪ, ಅರಿಶಿನ, ಕುಂಕುಮ, ಹೂವುಗಳು ಮತ್ತು ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಗೂ ವಾಸ್ತು ಶಾಸ್ತ್ರದಲ್ಲಿ ದೀಪ ಹಚ್ಚಲು ಕೂಡ ಕೆಲವು ವಿಶೇಷ ನಿಯಮಗಳಿವೆ. ಪೂಜೆಯಲ್ಲಿ ದೇವರಿಗೆ ದೀಪ, ಧೂಪ, ಅರಿಶಿನ, ಕುಂಕುಮ, ಹೂವುಗಳು ಮತ್ತು ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಗೂ ವಾಸ್ತು ಶಾಸ್ತ್ರದಲ್ಲಿ ದೀಪ ಹಚ್ಚಲು ಕೂಡ ಕೆಲವು ವಿಶೇಷ ನಿಯಮಗಳಿವೆ.

Vastu shastra: ದೀಪ ಹಚ್ಚುವ ಮುನ್ನ ಈ ನಿಯಮಗಳನ್ನು ನೆನಪಿಟ್ಟುಕೊಳ್ಳಿ.. ಯಾವ ದಿಕ್ಕಿಗೆ ದೀಪ ಇಟ್ಟರೆ ಒಳ್ಳೆಯದು?
ದೀಪ ಹಚ್ಚುವ ಮುನ್ನ ಈ ನಿಯಮಗಳನ್ನು ನೆನಪಿಟ್ಟುಕೊಳ್ಳಿ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 16, 2024 | 7:47 AM

Share

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಪೂಜೆಯಲ್ಲಿ ದೇವರಿಗೆ ದೀಪ, ಧೂಪ, ಅರಿಶಿನ, ಕುಂಕುಮ, ಹೂವುಗಳು ಮತ್ತು ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಗೂ ವಾಸ್ತು ಶಾಸ್ತ್ರದಲ್ಲಿ ದೀಪ ಹಚ್ಚಲು ಕೂಡ ಕೆಲವು ವಿಶೇಷ ನಿಯಮಗಳಿವೆ. ಯಾವುದೇ ಪೂಜೆ ಅಥವಾ ಶುಭ ಕಾರ್ಯವನ್ನು ಪ್ರಾರಂಭಿಸುವ ಮೊದಲು ದೀಪವನ್ನು ಬೆಳಗಿಸಲಾಗುತ್ತದೆ (Yellow Cotton Wicks). ನಂತರ ನಿಯಮಾನುಸಾರ ಪೂಜೆ ಆರಂಭವಾಗಿದೆ ಎಂಬುದು ನಂಬಿಕೆ. ಆದರೆ ದೀಪ ಹಚ್ಚಲು ಕೆಲವು ನಿಯಮಗಳಿವೆ ಗೊತ್ತಾ..! ಈ ನಿಯಮಗಳನ್ನು ಅನುಸರಿಸಿ ಪೂಜಿಸುವುದರಿಂದ ಪುಣ್ಯಫಲ ಸಿಗುತ್ತದೆ… ಮತ್ತು ಬಯಸಿದ ಇಷ್ಟಾರ್ಥಗಳು ಈಡೇರುತ್ತವೆ ಎಂದು ನಂಬಲಾಗಿದೆ. ವಾಸ್ತು ನಿಯಮಗಳು ಮತ್ತು ದೀಪವನ್ನು ಬೆಳಗಿಸುವುದರ ಬಗ್ಗೆ ತಿಳಿಯೋಣ.

* ದೀಪವನ್ನು ಬೆಳಗಿಸುವಾಗ ಬತ್ತಿಯು ಯಾವಾಗಲೂ ಪೂರ್ವ ಅಥವಾ ಉತ್ತರದ ಕಡೆಗೆ ಇರಬೇಕು. ಪೂಜೆಯ ಸಮಯದಲ್ಲಿ ಹಸುವಿನ ತುಪ್ಪದಿಂದ ದೀಪವನ್ನು ಹಚ್ಚಿದ ತಕ್ಷಣ ಇತರ ಎಣ್ಣೆಗಳಿಂದ ದೀಪವನ್ನು ಹಚ್ಚಬೇಡಿ.

Also Read: Political Crime Thriller: ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ ‘ಕೈ’ವಾಡ ಏನಿತ್ತು?

* ದೀಪವನ್ನು ಯಾವಾಗಲೂ ಪೂರ್ವಕ್ಕೆ ಮುಖ ಮಾಡಿ ಇಡುವುದರಿಂದ ಆರೋಗ್ಯಕ್ಕೆ ಲಾಭವಾಗುತ್ತದೆ. ಇದು ಮಾನಸಿಕ ಒತ್ತಡವನ್ನೂ ಕಡಿಮೆ ಮಾಡುತ್ತದೆ.

* ಉತ್ತರ ದಿಕ್ಕಿನಲ್ಲಿ ದೀಪವನ್ನು ಇಡುವುದರಿಂದ ಸಮೃದ್ಧಿ ಮತ್ತು ಬುದ್ಧಿವಂತಿಕೆ ಹೆಚ್ಚಾಗುತ್ತದೆ.

* ದೀಪವನ್ನು ಪಶ್ಚಿಮ ದಿಕ್ಕಿನಲ್ಲಿ ಇಟ್ಟರೆ ಜೀವನದಲ್ಲಿ ವಿಘ್ನ ಉಂಟಾಗುತ್ತದೆ. ಮಾನಸಿಕ ಆತಂಕ ಹೆಚ್ಚುತ್ತದೆ.

* ದೀಪವನ್ನು ದಕ್ಷಿಣ ದಿಕ್ಕಿನಲ್ಲಿ ಇಡುವುದರಿಂದ ಹಾನಿ ಉಂಟಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗಲಿವೆ. ಜೀವನವು ಕಿರಿಕಿರಿಗೊಳಿಸುವಷ್ಟು ಸಂಕೀರ್ಣವಾಗಲಿದೆ.

* ಹಿಂದೂ ಸಂಪ್ರದಾಯದ ಪ್ರಕಾರ, ದೇವರ ವಿಗ್ರಹ ಅಥವಾ ಫೋಟೋ ಮುಂದೆ ಪೂಜಾ ಸ್ಥಳದ ಮಧ್ಯದಲ್ಲಿ ದೀಪವನ್ನು ಬೆಳಗಿಸಬೇಕು.

Also Read: Shravan masa 2024: ವಿವಾಹಿತ ಮಹಿಳೆಯರಿಗೆ ಶ್ರಾವಣ ಮಾಸದಲ್ಲಿ ಮಂಗಳ ಗೌರಿ ವ್ರತ ಏಕೆ ವಿಶೇಷ? ತಿಳಿಯಿರಿ

* ಎಣ್ಣೆಯಿಂದ ದೀಪವನ್ನು ಹಚ್ಚಿದರೆ ಕೆಂಪು ಬತ್ತಿ (Red Cotton Wicks) ಬಳಸುವುದು ಉತ್ತಮ.

* ಮನೆಯಲ್ಲಿ ಪ್ರತಿದಿನ ಪೂಜಾ ಕೋಣೆಯಲ್ಲಿ ದೀಪವನ್ನು ಹಚ್ಚಿದರೆ ಹತ್ತಿ ಬತ್ತಿಯನ್ನು ಬಳಸುವುದು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು