AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

Daily Numerology March 02: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 02, 2026 | 12:16 AM

Share

ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ ಅದರಿಂದ ಹೊರಬರುವಂತಹ ಮಾರ್ಗ, ಉಪಾಯಗಳು ಗೋಚರ ಆಗಲಿವೆ. ಸ್ವಂತ ವ್ಯಾಪಾರ, ಉದ್ಯಮ ಮಾಡಿಕೊಂಡು ಇರುವವರಿಗೆ ವಿಸ್ತರಣೆಯ ಅವಕಾಶಗಳು ದೊರೆಯಲಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮಲ್ಲಿ ಕೆಲವರು ಬ್ಯಾಂಕ್ ಗಳಲ್ಲಿ ಸಾಲಕ್ಕೆ ಪ್ರಯತ್ನ ಪಡಲಿದ್ದೀರಿ. ಇನ್ನು ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರು ಹಣಕಾಸಿನ ನೆರವನ್ನು ತಾತ್ಕಾಲಿಕವಾಗಿ ನೀಡಬಹುದು. ನೀವು ಮರೆತೇ ಹೋದಂತಹ ಅವಕಾಶವೊಂದು ಹುಡುಕಿಕೊಂಡು ಬರುವ ಸಾಧ್ಯತೆಗಳಿವೆ. ಅದನ್ನು ಒಪ್ಪಿಕೊಳ್ಳಬೇಕೋ ಅಥವಾ ಬೇಡವೋ ಎಂಬ ಗೊಂದಲಗಳು ಏನಾದರೂ ಇದ್ದಲ್ಲಿ ಹಿರಿಯರು ಅಥವಾ ಅನುಭವಗಳ ಸಲಹೆಯನ್ನು ಪಡೆದುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಈ ದಿನ ಒಂದು ಬಗೆಯ ಸಂತೋಷ- ಸಮಾಧಾನದ ಜತೆಗೆ, ಈ ನಿರ್ಧಾರ ಹೇಗೆ ಮಾಡಬೇಕು ಎಂಬ ಗೊಂದಲ ಇರುವಂಥ ಸವಾಲು ನಿಮ್ಮ ಎದುರು ನಿಲ್ಲಲಿದೆ. ಈ ಸಮಯದಲ್ಲಿ ನಿಮಗೆ ದೊರೆಯುವಂತಹ ಅವಕಾಶವೋ ಜವಾಬ್ದಾರಿಯೋ ಒಳ್ಳೆಯದಕ್ಕೋ ಅಥವಾ ಕೆಟ್ಟದ್ದಕ್ಕೋ ಎಂಬುದನ್ನು ನಿರ್ಧರಿಸುವುದಕ್ಕೆ ಬಹಳ ಸಮಯ ಬೇಕಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!