ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ

Daily Numerology March 02: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 2ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ
ದಿನ ಭವಿಷ್ಯ
Edited By:

Updated on: Mar 02, 2026 | 12:40 AM

ಈ ದಿನ ಸಂಜೆ ವೇಳೆ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ತುಪ್ಪದ ದೀಪ ಹಚ್ಚುವುದರಿಂದ ದಾರಿದ್ರ್ಯ ದೂರವಾಗಿ, ಹಣಕಾಸಿನ ಒತ್ತಡದಿಂದ ಹೊರಬರಲು ಅನುಕೂಲವಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಾಗೂ ಪ್ರೀತಿ- ಪ್ರೇಮ ಹಾಗೂ ಮದುವೆಗೆ ಸಂಬಂಧಪಟ್ಟ ಸಂಗತಿಗಳನ್ನು ಮೂರನೇ ವ್ಯಕ್ತಿಗಳು ವಿಪರೀತ ಪ್ರಭಾವ ಬೀರುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ. ಇದೇ ವೇಳೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ನಿಟ್ಟಿನಲ್ಲಿ ನಾನಾ ರೀತಿಯಲ್ಲಿ ಯೋಜನೆ, ಆಲೋಚನೆ ಶುರು ಆಗಲಿದೆ. ಆಸ್ತಿ ಮಾರಾಟಕ್ಕೆ ಇಟ್ಟಿದ್ದಲ್ಲಿ ಅದಕ್ಕೆ ಬೇಡಿಕೆ ಹೆಚ್ಚಾಗುವಂಥ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮಲ್ಲಿ ಕೆಲವರು ಬಾಡಿಗೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವುದಕ್ಕಾಗಿ ಮನೆಯನ್ನೋ ಮಳಿಗೆಯನ್ನೋ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದುರ್ಗಾದೇವಿ ಆರಾಧನೆ ಮಾಡುವುದರಿಂದ ಹಾಗೂ ವಿಷ್ಣು ಸಹಸ್ರನಾಮ ಶ್ರವಣ ಅಥವಾ ಪಠಣ ಮಾಡುವುದರಿಂದ ಆಲೋಚನೆಯಲ್ಲಿ ಸ್ಪಷ್ಟತೆ ಇರಲಿದೆ. ಅದೇ ವೇಳೆ ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ಫೋಟೋಗ್ರಫಿಯನ್ನೇ ವೃತ್ತಿ ಮಾಡಿಕೊಂಡಿರುವವರಿಗೆ ಹೊಸ ಹೊಸ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕ್ರೆಡಿಟ್ ಕಾರ್ಡ್ ಹೆಚ್ಚು ಬಳಸುತ್ತೀರಿ ಅಂತಾದಲ್ಲಿ ಅದರ ಬಳಕೆ ಬಗ್ಗೆ ಸರಿಯಾದ ತೀರ್ಮಾನವನ್ನು ಮಾಡುವುದು ಮುಖ್ಯ. ಸ್ನೇಹಿತರು ಅಥವಾ ಸಂಬಂಧಿಕರು ತಮಗೆ ಕ್ರೆಡಿಟ್ ಕಾರ್ಡ್ ನಲ್ಲಿ ಸಾಲ ಕೊಡಿಸುವಂತೆ ಕೇಳಲಿದ್ದಾರೆ. ಇನ್ನು ಈ ದಿನ ಬೆಳ್ಳಿ ವಸ್ತುಗಳು ಅಥವಾ ಒಡವೆಗಳನ್ನು ಖರೀದಿಸುವಂಥ ಯೋಗ ನಿಮ್ಮ ಪಾಲಿಗಿದೆ. ಇನ್ನು ನಿಮ್ಮಲ್ಲಿ ಕೆಲವರು ದಾನ- ಧರ್ಮ ಕಾರ್ಯಗಳನ್ನು ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Follow Us