ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ

Daily Numerology March 04: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ
ದಿನ ಭವಿಷ್ಯ
Image Credit source: Pinterest
Edited By:

Updated on: Mar 04, 2026 | 12:40 AM

ಸಂಜೆ ಸೂರ್ಯಾಸ್ತದ ನಂತರ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ಎಳ್ಳೆಣ್ಣೆಯ ದೀಪ ಹಚ್ಚಿ. ಎಳ್ಳೆಣ್ಣೆಯ ದೀಪವು ಶನಿ ಮತ್ತು ಕುಜ ದೋಷಗಳನ್ನು ಕಡಿಮೆ ಮಾಡಿ, ಮೈಗ್ರೇನ್‌ನಂತಹ ನೋವುಗಳಿಂದ ಮುಕ್ತಿ ನೀಡಲು ಸಹಕಾರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು ಪಡುವಂತೆ ಆಗುತ್ತದೆ. ಉಳಿತಾಯದ ಉದ್ದೇಶಕ್ಕೆ ಖರೀದಿ ಮಾಡಿಟ್ಟಿದ್ದ ಚಿನ್ನ ಅಥವಾ ಬೆಳ್ಳಿಯನ್ನು ಮಾರಾಟ ಮಾಡಿ, ಸದ್ಯದ ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಚಿಂತನೆ ಮಾಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದವರಿಗೆ ಲಾಭ ಸಿಗಲಿದೆ. ಪ್ರಾಫಿಟ್ ಬುಕ್ಕಿಂಗ್ ಗೆ ನಿರ್ಧಾರ ಮಾಡುತ್ತೀರಿ. ತಾಯಿ ಜೊತೆಗೆ ಅಭಿಪ್ರಾಯ ಭೇದ- ಮನಸ್ತಪ ಇದ್ದಲ್ಲಿ ಅದನ್ನು ನಿವಾರಿಸಿಕೊಳ್ಳಲು ಅವಕಾಶ ದೊರೆಯಲಿದೆ. ನೀರಿನ ಮಾರಾಟ ವ್ಯವಹಾರದಲ್ಲಿ ತೊಡಗಿರುವವರು ವಿಸ್ತರಣೆಗೆ ಆಲೋಚಿಸಿ, ಅಗತ್ಯ ಸಿದ್ಧತೆಯಲ್ಲಿ ಬಿಡುವಿಲ್ಲದಷ್ಟು ತನ್ಮಯರಾಗುತ್ತೀರಿ. ಹಲ್ಲು ನೋವಿನ ಸಮಸ್ಯೆ ತೀವ್ರವಾಗಿದ್ದಲ್ಲಿ ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಿನಿಮಾ ರಂಗದಲ್ಲಿ ಅವಕಾಶಕ್ಕಾಗಿ ಪ್ರಯತ್ನ ಮಾಡುತ್ತಾ ಇರುವವರಿಗೆ ಆತ್ಮವಿಶ್ವಾಸ ಹೆಚ್ಚಾಗುವಂಥ ದಿನ ಇದಾಗಿರಲಿದೆ. ನಿಮ್ಮ ಸ್ನೇಹಿತರು ಬಹಳ ದೊಡ್ಡ ಸಹಾಯವನ್ನು ಮಾಡಲಿದ್ದಾರೆ. ಈ ದಿನ ಯಾವುದೇ ಕೆಲಸದಲ್ಲಿ ಮನಸಾರೆ ತೊಡಗಿಕೊಳ್ಳಿ; ನಿಮಗೆ ಎದುರಾಗುವ ಸ್ಪರ್ಧೆ ಬಗ್ಗೆ ಆಲೋಚನೆಯನ್ನೇ ಮಾಡುವುದಕ್ಕೆ ಹೋಗಬೇಡಿ. ಮೈಗ್ರೇನ್ ಸಮಸ್ಯೆ ಇರುವಂಥವರು ಸರಿಯಾದ ಔಷಧೋಪಚಾರದ ಬಗ್ಗೆ ಲಕ್ಷ್ಯವನ್ನು ನೀಡಿ.

ಲೇಖನ- ಸ್ವಾತಿ ಎನ್.ಕೆ.

Follow Us