
ದೇವಾಲಯದಲ್ಲಿ ದೀಪಕ್ಕೆ ಬಳಸುವುದಕ್ಕೆ ಎಣ್ಣೆ ಅಥವಾ ತುಪ್ಪವನ್ನು ಯಥಾಶಕ್ತಿ ದಾನ ಮಾಡಿ. ಇದರಿಂದಾಗಿ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದ್ದಲ್ಲಿ ದೂರ ಆಗುತ್ತದೆ. ಇನ್ನು ಆರೋಗ್ಯ ಸಮಸ್ಯೆಗಳಲ್ಲಿ ಚೇತರಿಕೆ ಕಾಣಿಸಿಕೊಳ್ಳುತ್ತದೆ.
ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ ಜೊತೆಗೆ ಚರ್ಚೆ ಮಾಡಲಿದ್ದೀರಿ.
ಕೆಲವು ಬದಲಾವಣೆಗೆ ಸಂಬಂಧಿಸಿದಂತೆ ನಿಮ್ಮನ್ನು ಒಪ್ಪಿಸುವುದಕ್ಕೆ ಸಹೋದ್ಯೋಗಿಗಳು ಪ್ರಯತ್ನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಇಲ್ಲಿಯ ತನಕ ಎಲ್ಲಿಯೂ ಹೇಳಿಕೊಳ್ಳದ ಸಂಗತಿಗಳನ್ನು ಬಾಯಿ ಬಿಟ್ಟು ಹೇಳಿಕೊಳ್ಳುವಂತೆ ಆಗಲಿದೆ. ನಿಮ್ಮ ಸಾಮರ್ಥ್ಯ, ಬದ್ಧತೆ, ಅದರಿಂದ ಆಗಿರುವ ಅನುಕೂಲಗಳ ಬಗ್ಗೆ ಮಾತನಾಡುತ್ತೀರಿ. ಇದರ ಆಚೆಗೆ ಆಗುವ ಯಾವುದೇ ಬದಲಾವಣೆಗೆ ಒಪ್ಪಿಕೊಳ್ಳುವುದಕ್ಕೆ ಸಿದ್ಧರಿಲ್ಲ ಎಂಬುದನ್ನು ಸಹ ಹೇಳಲಿದ್ದೀರಿ.
ಯಾವುದಾದರೂ ನಿರ್ದಿಷ್ಟ ಕಾಯಿಲೆ ಆಗಿದೆಯಾ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಏನಾದರೂ ಸೂಚಿಸಿದ್ದಲ್ಲಿ ಗಂಭೀರ ಸಮಸ್ಯೆ ಇಲ್ಲ ಎಂಬುದು ತಿಳಿದುಬರಲಿದೆ. ಸಮಾರಂಭಗಳಿಗೆ ತೆರಳುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ಆಪತ್ಕಾಲಕ್ಕೆ ಇರಲಿ ಎಂಬ ಉದ್ದೇಶದಿಂದ ಕೂಡಿಟ್ಟುಕೊಂಡಿದ್ದ ಹಣವನ್ನು ಬೇರೆ ಉದ್ದೇಶಕ್ಕೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವ ಆಗಲಿದೆ. ಉನ್ನತ ವ್ಯಾಸಂಗ ಮಾಡುತ್ತಾ ಇರುವವರಿಗೆ ಉದ್ಯೋಗದ ಆಫರ್ ಬರಬಹುದು.
ಲೇಖನ- ಸ್ವಾತಿ ಎನ್.ಕೆ.
Published On - 12:45 am, Mon, 9 March 26