AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ

Daily Numerology March 08: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ
ಸಂಖ್ಯಾಶಾಸ್ತ್ರImage Credit source: Pinterest
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 09, 2026 | 12:30 AM

Share

ಈ ದಿನ ಬಿಳಿ ಬಟ್ಟೆ ಧರಿಸುವುದರಿಂದ ಚಂದ್ರ ಬಲ ವೃದ್ಧಿ. ಕೆಲಸ-ಕಾರ್ಯದಲ್ಲಿ ತೊಡಗಿಕೊಳ್ಳಲು ಉತ್ಸಾಹ ಬರುವುದಕ್ಕೆ, ಶೀಘ್ರ ನಿರ್ಧಾರ ಮಾಡುವುದಕ್ಕೆ, ಕ್ರಿಯೇಟಿವ್ ಆಲೋಚನೆಗಳು ಬರುವುದಕ್ಕೆ ಇದರಿಂದ ಸಹಕಾರಿ ಆಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರಾಣಿಗಳಿಂದ ಕಡಿತಕ್ಕೆ ಒಳಗಾಗುವ ಯೋಗ ಇದೆ, ಆದ್ದರಿಂದ ನೀವು ಅಂಥ ಪರಿಸರದಲ್ಲಿ ಓಡಾಡುವಾಗಲೋ ಅಥವಾ ಕಾರ್ಯ ನಿರ್ವಹಣೆ ಮಾಡುವಾಗಲೋ ಸಾಮಾನ್ಯ ದಿನಗಳಿಗಿಂತ ಎಚ್ಚರಿಕೆಯನ್ನು ವಹಿಸಿ. ಎಲೆಕ್ಟ್ರಿಕಲ್ ಸಾಧನಗಳ ಮಾರಾಟ ಮಳಿಗೆ ಇಟ್ಟಿರುವವರಿಗೆ ಆದಾಯ ಮೂಲ ಹೆಚ್ಚಿಕೊಳ್ಳುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಆದರೆ ಇದರ ಬಗ್ಗೆ ನಿಮ್ಮ ಆಸಕ್ತಿ ಕುದುರುವುದಿಲ್ಲ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮನಸ್ಸಿಗೆ ಸಮಾಧಾನ ತರುವಂಥ ಬೆಳವಣಿಗೆಗಳು ಆಗಲಿವೆ. ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಇಂಟರ್ ವ್ಯೂ ಕರೆ ಬರಬಹುದು. ಇನ್ನು ವೃತ್ತಿಪರರು ನೀವಾಗಿಯೇ ಕೆಲವು ಕ್ಲೈಂಟ್ ಗಳಿಗೆ ಇನ್ನು ಕೆಲಸ ಮಾಡಿಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ. ಊಟ- ತಿಂಡಿಗಾಗಿ ದೂರದ ಸ್ಥಳಗಳಿಗೆ ಹುಡುಕಿಕೊಂಡು ಹೋಗಲಿದ್ದೀರಿ. ಇದಕ್ಕೆ ನಿಮ್ಮ ಸ್ನೇಹಿತರು ಸಹ ಜೊತೆಯಾಗುತ್ತಾರೆ.

ಲೇಖನ- ಸ್ವಾತಿ ಎನ್.ಕೆ.

Follow Us
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?