ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ

Daily Numerology March 13: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಭವಿಷ್ಯ
Image Credit source: Pinterest
ಸ್ವಾತಿ ಎನ್​ಕೆ Edited By:

Updated on: Mar 13, 2026 | 12:35 AM

ಇಂದು ಲಕ್ಷ್ಮಿ ನಾರಾಯಣ ಪೂಜೆ ಮಾಡಿ. ಹಳದಿ ಬಣ್ಣದ ಹೂವುಗಳನ್ನು ವಿಷ್ಣುವಿಗೆ ಅರ್ಪಿಸಿ. ಬಾಕಿ ಹಣ ವಾಪಸ್ ಬರಲು ಇದು ಸಹಕಾರಿ ಆಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಇನ್ನು ಸಾಕು ಎಂದು ನಿರ್ಧಾರ ಮಾಡಿ ನೀವಾಗಿಯೇ ಕೆಲವು ಸಂಬಂಧ, ಸ್ನೇಹದಿಂದ ದೂರವಾಗುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಅದರಲ್ಲೂ ನಿಮ್ಮಲ್ಲಿ ಕೆಲವರು ಸಂಬಂಧಪಟ್ಟವರಿಗೆ ನೇರವಾಗಿ ಈ ಬಗ್ಗೆ ಹೇಳಿಯೇ ದೂರವಾಗಲಿದ್ದೀರಿ. ಮುಖ್ಯವಾಗಿ ನಿಮಗೆ ಹಳೇ ಸಂಗತಿಗಳು ವಿಪರೀತ ಕಾಡಲಿವೆ. ಎಷ್ಟೇ ಪ್ರೀತಿ- ವಿಶ್ವಾಸ ತೋರಿದರೂ ಯಾಕೆ ಕೆಲವರಲ್ಲಿ ನಂಬಿಕೆ ಮೂಡಿಸುವುದಕ್ಕೆ ಸಾಧ್ಯವೇ ಆಗುವುದಿಲ್ಲ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಹೊಸದಾಗಿ ಹಣ ಹೂಡಿಕೆ ಮಾಡಿ, ಷೇರು- ಮ್ಯೂಚುವಲ್ ಫಂಡ್ ಗಳ ಮೂಲಕವಾಗಿ ಅಥವಾ ಕಮಾಡಿಟಿ ಮಾರ್ಕೆಟ್ ನಲ್ಲಿ ಟ್ರೇಡಿಂಗ್ ಮಾಡಬೇಕು ಎಂದುಕೊಂಡಿರುವವರಿಗೆ ತುಂಬ ಸಹಾಯ ಆಗುವಂಥ ವ್ಯಕ್ತಿಯೊಬ್ಬರ ಪರಿಚಯ ಆಗಲಿದೆ. ಅವರ ಸಲಹೆ- ಸೂಚನೆಗಳಿಂದ ನಿಮಗೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗಲಿದೆ. ಖಾಸಗಿ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ನಿಮಗೆ ಇಷ್ಟದ ಡಿಪಾರ್ಟ್ ಮೆಂಟ್ ಗೆ ವರ್ಗಾವಣೆ ಆಗಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಂಗಾತಿ ಜತೆಗಿನ ಬಾಂಧವ್ಯ ಗಟ್ಟಿಯಾಗಲಿದೆ. ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ತುಂಬ ಸಂತೋಷವಾಗಿ ದಿನ ಕಳೆಯುವಂಥ ಯೋಗ ಇದೆ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ದೊಡ್ಡ ಮಟ್ಟದ ಅವಕಾಶಗಳು ಹುಡುಕಿಕೊಂಡು ಬರಲಿವೆ. ಈ ತನಕ ಗಂಭೀರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯೋಪಚಾರ ದೊರೆಯಲಿದ್ದು, ಮನಸ್ಸಿಗೆ ಸಮಾಧಾನ ದೊರೆಯಲಿದೆ.

ಲೇಖನ- ಸ್ವಾತಿ ಎನ್.ಕೆ.

Swathi NK

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

Follow Us