AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 14ರ ದಿನಭವಿಷ್ಯ

Daily Numerology March 14: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 14ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 14, 2026 | 12:16 AM

Share

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಮನೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪ ಮಾಡಬೇಕು ಎಂದುಕೊಂಡಿರುವವರಿಗೆ ಅದಕ್ಕೆ ಪೂರಕವಾದ ವಾತಾವರಣ ದೊರೆಯಬಹುದು. ವಸ್ತ್ರಾಭರಣಗಳ ಖರೀದಿಗಾಗಿ ಹಣ ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ಆಂಟಿಕ್ ಆಭರಣಗಳನ್ನು ಖರೀದಿಸುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಇದೇ ಕಾರಣಕ್ಕೆ ಕ್ರೆಡಿಟ್ ಕಾರ್ಡ್ ಬಳಸುವಂಥ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಪೊಲೀಸ್, ಸಿಐಡಿ, ಸಿಬಿಐ, ಗುಪ್ತಚರ ಸಂಸ್ಥೆ ಇಂಥ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಮೇಲೆ ಕೆಲವು ಆರೋಪಗಳು ಬರಬಹುದು. ಅದರಲ್ಲೂ ಮುಖ್ಯವಾಗಿ ನಿಮ್ಮ ನಿರ್ಧಾರ- ತೀರ್ಮಾನಗಳು ಅಲಕ್ಷ್ಯದಿಂದ ಬಂದಿರುವಂಥವು ಎಂಬ ಆರೋಪ ಬರಬಹುದು. ಸಾಧ್ಯವಾದಷ್ಟೂ ನಿಮ್ಮ ಜವಾಬ್ದಾರಿಯನ್ನು ಇತರರ ಮೇಲೆ ವರ್ಗಾಯಿಸುವುದಕ್ಕೆ ಹೋಗಬೇಡಿ. ನಾನು ಮಾಡಿರುವುದೆಲ್ಲವೂ ಸರಿ ಎಂಬ ವಾದ ಸಹ ಮಾಡುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಆರೋಗ್ಯ ವಿಚಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ಈ ದಿನ ನೀಡಲಿದ್ದೀರಿ. ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಬಹುದು. ನಿಮ್ಮ ಜತೆಗೆ ಬಹಳ ಸ್ನೇಹದಿಂದ ಹಾಗೂ ಆತ್ಮೀಯತೆಯಿಂದ ಇರುವ ವ್ಯಕ್ತಿಗಳು ತಾತ್ಕಾಲಿಕವಾಗಿಯಾದರೂ ದೂರ ಹೋಗಬಹುದು. ಮನಸ್ತಾಪದ ಕಾರಣಕ್ಕಾದರೂ ಹೀಗಾಗಬಹುದು ಅಥವಾ ಔದ್ಯೋಗಿಕ ಅಥವಾ ವೈಯಕ್ತಿಕ ಕಾರಣಗಳಿಂದ ಇಬ್ಬರ ಮಧ್ಯೆ ಅಂತರ ಸೃಷ್ಟಿ ಆಗುವಂಥ ಸನ್ನಿವೇಶ ಎದುರಾಗಲಿದೆ.
ಲೇಖನ- ಸ್ವಾತಿ ಎನ್.ಕೆ.

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು