AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ

Daily Numerology March 14: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ
Daily Numerology (16)Image Credit source: Pinterest
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on:Mar 14, 2026 | 10:43 AM

Share

ಈ ದಿನ ಧರ್ಮ ಗ್ರಂಥಗಳನ್ನು ಓದಿ. ರಾಮಾಯಣ ಅಥವಾ ಭಗವದ್ಗೀತೆಯ ಯಾವುದಾದರೂ ಒಂದು ಅಧ್ಯಾಯವನ್ನು ಓದುವುದು ಮನಸ್ಸಿಗೆ ಸ್ಥಿರತೆ ನೀಡುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಹಪ್ಪಳ, ಸಂಡಿಗೆ, ಚಟ್ನಿಪುಡಿ, ಹುಳಿಪುಡಿ- ಸಾರಿನಪುಡಿ ಇಂಥದ್ದನ್ನು ಮಾರಾಟ ಮಾಡುವಂಥವರಿಗೆ ಆದಾಯದಲ್ಲಿ ಹಾಗೂ ಲಾಭದಲ್ಲಿ ದೊಡ್ಡ ಏರಿಕೆ ಆಗುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರಿಗೆ ದೊಡ್ಡ ಮಟ್ಟದ ಆರ್ಡರ್ ದೊರೆಯಲಿದೆ. ರಾಜಕಾರಣದಲ್ಲಿ ಇರುವಂಥವರಿಗೆ ಪದೋನ್ನತಿ ದೊರೆಯಲಿದೆ. ಅದರ ಬಗ್ಗೆ ಸುಳಿವು ಸಿಗಬಹುದು. ಮನೆಯ ನವೀಕರಣಕ್ಕೆ, ಹೊಸದಾಗಿ ಕೋಣೆ ನಿರ್ಮಾಣಕ್ಕೆ, ವಾರ್ಡ್ ರೋಬ್ ಇಂಥದ್ದನ್ನು ಮಾಡಿಸುವುದಕ್ಕೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಇತರರು ತಮ್ಮಿಂದ ಆದ ತಪ್ಪನ್ನು ಹೇಳಿಕೊಂಡು, ಅದರಿಂದ ಆಗಬಹುದಾದ ಸಮಸ್ಯೆಗಳಿಂದ ಕಾಪಾಡುವಂತೆ ನಿಮ್ಮನ್ನು ಕೇಳಿಕೊಂಡು ಬರಬಹುದು. ತಾಯಿಯ ಕಡೆ ಸಂಬಂಧಿಕರು ಹಣಕಾಸಿನ ನೆರವನ್ನು ಕೇಳಿಕೊಂಡು ಬರಬಹುದು. ಒಟ್ಟಿನಲ್ಲಿ ನಿಮ್ಮ ಕೈ ಅಳತೆಯ ವ್ಯಾಪ್ತಿಯಲ್ಲಿ ಇತರರಿಗೆ ಸಹಾಯ ಮಾಡಲೇಬೇಕಾದ ಪರಿಸ್ಥಿತಿ ಉದ್ಭವಿಸಲಿದೆ. ನಿಮ್ಮ ಪದ ಬಳಕೆಯಿಂದ ಎದುರಿಗೆ ಇರುವಂಥ ವ್ಯಕ್ತಿಯ ಮನಸ್ಸಿನಲ್ಲಿ ಉದ್ಭವಿಸಬಹುದಾದ ಭಾವನೆ ಏನು ಎಂಬುದರ ಅಂದಾಜು ಇರಲಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಈ ದಿನ ಸಾಧ್ಯವಾದಷ್ಟೂ ಬೇಕರಿ ಪದಾರ್ಥಗಳಿಂದ ದೂರ ಇದ್ದುಬಿಡಿ. ಮೈದಾ ಹಿಟ್ಟಿನಿಂದ ಮಾಡಿದ ಖಾದ್ಯಗಳನ್ನು ಸೇವನೆ ಮಾಡಿದರೂ ಅದರಿಂದಲೂ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ನಿಮ್ಮಲ್ಲಿ ಯಾರಿಗೆ ಈಗಾಗಲೇ ಗ್ಯಾಸ್ಟ್ರಿಕ್ ಸಮಸ್ಯೆ ಇದೆಯೋ ಅಂಥವರಿಗೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆಗಳಿವೆ. ಇನ್ನು ದೊಡ್ಡಪ್ಪ- ಚಿಕ್ಕಪ್ಪನ ಮಕ್ಕಳ ವರ್ತನೆಯಿಂದ ಅವಮಾನಕ್ಕೆ ಗುರಿ ಆಗಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Published On - 12:25 am, Sat, 14 March 26

Follow Us
Swathi NK
Swathi NK

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​