ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ

Daily Horoscope Mach 18: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 18ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 18ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಭವಿಷ್ಯ
Image Credit source: Pinterest
Edited By:

Updated on: Mar 18, 2026 | 12:25 AM

ಈ ದಿನ ಯಾವುದೇ ಮುಖ್ಯ ಕೆಲಸಕ್ಕಾಗಿ ತೆರಳುವ ಮುನ್ನ ಮನೆಯ ದೇವತೆಗೆ ಕುಂಕುಮಾರ್ಚನೆ ಮಾಡುವುದು ಸೌಭಾಗ್ಯ ತರುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸಂಕೋಚ ಪಟ್ಟು ಸುಮ್ಮನಿರುವುದರಲ್ಲಿ ಅರ್ಥವಿಲ್ಲ ಎಂದೆನಿಸಲಿದೆ. ನಿಮ್ಮ ಎಲ್ಲ ವಿಚಾರಗಳಿಗೆ, ಸಂಗತಿಗಳಿಗೆ ಮೂಗು ತೂರಿಸಿಕೊಂಡು ಬರುತ್ತಿದ್ದ ಅಥವಾ ಬರುತ್ತಿರುವ ವ್ಯಕ್ತಿಯೊಬ್ಬರಿಗೆ ಮುಲಾಜಿಲ್ಲದೆ ಎಚ್ಚರಿಕೆಯನ್ನು ನೀಡುವ ಸಾಧ್ಯತೆಗಳಿವೆ. ಇಷ್ಟು ಸಮಯ ಯಾವುದೋ ಸಂಕೋಚದಿಂದ ಹೇಳದೇ ಉಳಿದ ಸಂಗತಿಗಳನ್ನು ಏಕಾಏಕಿ ಹೇಳಿ ಮುಗಿಸಲಿದ್ದೀರಿ. ನಿಮ್ಮಲ್ಲಿ ಯಾರು ಪ್ರೀತಿ- ಪ್ರೇಮ ವಿಚಾರಗಳನ್ನು ಹೇಳಬೇಕು ಎಂದುಕೊಳ್ಳಲೇ ಬೇಕು

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಎಲ್ಲ ಜವಾಬ್ದಾರಿಗಳು ಒಂದೇ ಸಮನೆ ಬರುವುದರಿಂದ ಈ ದಿನ ಬಿಡುವೇ ಸಿಗದಷ್ಟರ ಮಟ್ಟಿಗೆ ಕೆಲಸಗಳು ಮೈ ಮೇಲೆ ಬೀಳಲಿವೆ. ಅದರ ಜತೆಗೆ ನೀವು ಪಡುವಂಥ ಶ್ರಮಕ್ಕೆ ತಕ್ಕ ಪ್ರತಿಫಲವೂ ದೊರೆಯಲಿದೆ. ಬಹಳ ಸಮಯದಿಂದ ಖರೀದಿ ಮಾಡಬೇಕು ಎಂದುಕೊಳ್ಳುತ್ತಿದ್ದ ಫೋನ್, ಲ್ಯಾಪ್ ಟಾಪ್, ಟ್ಯಾಬ್ ಲೆಟ್ ಅಥವಾ ಇಂಥ ಯಾವುದಾದರೂ ವಸ್ತುವನ್ನು ಈ ದಿನ ಕೊಳ್ಳುವ ಯೋಗ ನಿಮ್ಮ ಪಾಲಿಗೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕ್ರೆಡಿಟ್ ಕಾರ್ಡ್ ಬಳಸಿಯೋ ಅಥವಾ ಇಎಂಐ ಆಗಿ ಕನ್ವರ್ಟ್ ಮಾಡಿಸಿಯೋ ಕೆಲವು ಖರೀದಿ ಮಾಡುವಂಥ ಸಾಧ್ಯತೆಗಳಿವೆ. ನೆನಪಿನಲ್ಲಿಡಿ, ಸಾಲ ದೊರೆಯುತ್ತದೆ ಅಥವಾ ಕಡಿಮೆ ಬಡ್ಡಿಗೆ ಅಥವಾ ಬಡ್ಡಿಯೇ ಇಲ್ಲದೆ ಹಣ ಸಿಗುತ್ತದೆ ಎಂಬ ಕಾರಣಕ್ಕೆ ಅಗತ್ಯವನ್ನು ಮೀರಿ, ಖರೀದಿ ಮಾಡುವುದಕ್ಕೆ ಹೋಗಬೇಡಿ. ಮಕ್ಕಳ ಅಥವಾ ಕುಟುಂಬದಲ್ಲಿನ ಕಿರಿಯರ ಶಿಕ್ಷಣದ ವಿಚಾರ ವಿಪರೀತ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ಇದೇ ಕಾರಣಕ್ಕೆ ನೀವೇ ಸಾಲ ಮಾಡಬೇಕಾಗಬಹುದು.

ಲೇಖನ- ಸ್ವಾತಿ ಎನ್.ಕೆ.

Follow Us