AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 22, 2026 | 12:35 AM

Share

ಈ ದಿನ ಯಾವುದೇ ಮುಖ್ಯ ಕೆಲಸ- ಕಾರ್ಯ, ಹಣಕಾಸಿನ ಮಾತುಕತೆ ಮಾಡಬೇಕು ಎಂದಿದ್ದಲ್ಲಿ ರಾಘವೇಂದ್ರ ಸ್ವಾಮಿಗಳು ಅಥವಾ ಸಾಯಿಬಾಬಾರವರನ್ನು ಸ್ಮರಿಸಿ ಮುಂದುವರಿಯಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು ಪೂರ್ಣ ಮಾಡುವ ಕುರಿತು ತೀರ್ಮಾನ ಮಾಡಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಉದ್ಯೋಗ ಬದಲಾವಣೆ ಮಾಡಬೇಕು ಎಂದೇನಾದರೂ ಪ್ರಯತ್ನ ಮಾಡುತ್ತಾ ಇರುವವರಿಗೆ ನಿರೀಕ್ಷೆ ಕೂಡ ಮಾಡಿರದಂಥ ವ್ಯಕ್ತಿಗಳಿಂದ ನೆರವು ದೊರೆಯಲಿದೆ. ಈ ಹಿಂದೆ ಹೂಡಿಕೆ ಮಾಡಿದಂಥ ಹಣದ ಪೈಕಿ ಸ್ವಲ್ಪ ಮೊತ್ತವನ್ನು ಹಿಂತೆಗೆದುಕೊಳ್ಳಬೇಕು ಎಂದು ಆಲೋಚನೆ ಶುರು ಆಗಲಿದೆ. ನಿಮ್ಮಲ್ಲಿ ಕೆಲವರು ದ್ವಿಚಕ್ರ ವಾಹನ ಅಥವಾ ಕಾರು ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ, ಇದಕ್ಕಾಗಿ ಹಣವನ್ನು ಅಡ್ವಾನ್ಸ್ ನೀಡುವ ಸಾಧ್ಯತೆ ಸಹ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಗೆಳೆತನದಲ್ಲಿ ಯಾವುದೆಲ್ಲ ಸಹಜ ಎಂದು ಭಾವಿಸಿದ್ದಿರೋ ಅದು ಹಾಗಲ್ಲ ಎಂದೆನಿಸಲಿದೆ. ಅಂತರಂಗದ ವಿಚಾರಗಳನ್ನು ಸಲುಗೆಯ ಕಾರಣಕ್ಕೆ ಹಂಚಿಕೊಳ್ಳಬಾರದು ಎಂಬ ಸಲಹೆಯನ್ನು ಕುಟುಂಬ ಸದಸ್ಯರು ನೀಡಲಿದ್ದು, ಇದು ನಿಮಗೂ ಸರಿ ಎನಿಸಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಿರುವವರು ಆದಾಯದ ಮೂಲಗಳನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್