ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ
ದಿನ ಭವಿಷ್ಯ
Image Credit source: Pinterest
ಸ್ವಾತಿ ಎನ್​ಕೆ Edited By:

Updated on: Mar 22, 2026 | 12:45 AM

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು, ಅದರ ಬದಲಾವಣೆಗಾಗಿ ಪ್ರಯತ್ನಿಸುತ್ತಾ ಇರುವವರಿಗೆ ಮನಸ್ಸಿಗೆ ಹಿಡಿಸುವಂಥ ಮನೆ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿತ್ಯವೂ ಕಾಣುವ ವಿಚಾರಗಳಲ್ಲಿಯೇ ಏನೋ ಬದಲಾವಣೆಗಳು ಆಗುತ್ತಿವೆ ಎಂಬುದು ಗಟ್ಟಿಯಾಗಿ ನಿಮ್ಮ ಮನಸ್ಸಿನಲ್ಲಿ ಬೇರೂರಲಿದೆ. ಮದುವೆಗೆ ಪ್ರಯತ್ನ ಮಾಡುತ್ತಿರುವ ವಿವಾಹ ವಯಸ್ಕರಿಗೆ ಸೂಕ್ತ ಸಂಬಂಧ ದೊರೆಯುವ ಸಾಧ್ಯತೆಗಳು ಇವೆ. ದೂರದ ಊರುಗಳಲ್ಲಿ ಇರುವ ಸಂಬಂಧಿಕರು ಕೆಲವು ವಿಚಾರಗಳಲ್ಲಿ ಸಹಾಯ ಮಾಡುವಂತೆ ನಿಮ್ಮನ್ನು ಕೇಳಿಕೊಳ್ಳಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮಿಂದ ಅದು ಮಾಡಲಿಕ್ಕೆ ಸಾಧ್ಯವೇ ಎಂಬುದರ ಬಗ್ಗೆ ಆಲೋಚಿಸಿದ ನಂತರವಷ್ಟೇ ಉತ್ತರವನ್ನು ಹೇಳಿ. ಸರ್ಕಾರಿ ಕೆಲಸ ಮಾಡುತ್ತಿರುವವರಿಗೆ ನಿಯೋಜನೆ ಮೇಲೆ ಹೆಚ್ಚುವರಿಯಾಗಿ ಜವಾಬ್ದಾರಿಗಳನ್ನು ವಹಿಸುವ ಬಗ್ಗೆ ನಿಮಗೆ ಸೂಚನೆ ಬರಬಹುದು. ಆಹಾರ ಪಥ್ಯವನ್ನು ಪಾಲನೆ ಮಾಡುವ ವಿಚಾರದಲ್ಲಿ ಯಾವುದೇ ರಾಜೀ ಮಾಡಿಕೊಳ್ಳಬೇಡಿ. ಮನೆಗೆ ಪೀಠೋಪಕರಣಗಳನ್ನು ಖರೀದಿಸಿ ತರುವುದಕ್ಕೆ ನಿಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ ಬಳಸುವ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.

Swathi NK

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

Follow Us