AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 24 ಮೇ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ದಿನಭವಿಷ್ಯ: ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ
ದಿನಭವಿಷ್ಯ: ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ
Follow us
ಗಂಗಾಧರ​ ಬ. ಸಾಬೋಜಿ
|

Updated on: May 24, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 24ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಜ್ಯೇಷ್ಠ, ಯೋಗ: ಶಿವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:30ರ ವರೆಗೆ, ಯಮಘಂಡ ಕಾಲ 15:42ರಿಂದ 17:19ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:17ರ ವರೆಗೆ.

ಮೇಷ ರಾಶಿ: ಇಂದು ನೀವು ಪ್ರತಿಕೂಲಸ್ಥಿತಿಯನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಿರಬೇಕಾಗುವುದು. ಹಿತಶತ್ರಗಳು ಸೋಲನ್ನು ಒಪ್ಪಿದರೂ ಇನ್ನೊಂದು ರೀತಿಯಲ್ಲಿ ಗೆಲ್ಲುವ ಯೋಜನೆ ಮಾಡುವರು. ನಿಮ್ಮ ಸಂಕೀರ್ಣವಾದ ಕಾರ್ಯವು ಮುಕ್ತಾಗೊಳ್ಳುವುದು. ದಿನದ ಆರಂಭದಲ್ಲಿ ಉತ್ಸಾಹದಿಂದ ಮಾಡುವ ಪ್ರಯತ್ನಗಳು ಫಲವನ್ನು ಕೊಡುವುವು. ಆಯ್ಕೆಗಳು ಇಂದು ತಪ್ಪಾಗುವುದು. ಸರಿಯಾದುದನ್ನು ಬೇರೆಯವರಿಂದ ಕೇಳಿ ಪಡೆಯಿರಿ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರಲಿದೆ. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ನಿಮ್ಮ ಮನಸ್ಸಿಗೆ ಬಾರದೇ ಯಾವುದನ್ನೂ ಒಪ್ಪಿಕೊಳ್ಳಲಾರಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಾಗುವುದು.

ವೃಷಭ ರಾಶಿ: ಇಂದು ನೀವು ಸಂಸಾರದ ಸುಖವನ್ನು ಆನಂದಿಸುವಿರಿ. ನಿಮ್ಮ ಜ್ಞಾನವನ್ನು ಪ್ರದರ್ಶಿಸುವ ಅವಕಾಶ ಸಿಗಬಹುದು. ಹೆಚ್ಚಿನ ಶ್ರದ್ಧೆ ಮತ್ತು ತಿಳುವಳಿಕೆಯಿಂದ ನೀವು ಪ್ರಯೋಜನ ಪಡೆಯುತ್ತೀರಿ. ಇಂದು ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕಲಿಕೆಯ ವಿಚಾರದಲ್ಲಿ ನೀವು ಎಂದಿಗಿಂತ ಹೆಚ್ಚು ಪ್ರಯತ್ನಶೀಲರು. ವಿವೇಚನೆ ಹೆಚ್ಚಲಿದೆ. ಯಾರೊಬ್ಬರ ಸಲಹೆ ಫಲ ನೀಡಲಿದೆ. ಕಾಲುಗಳು ಮತ್ತು ಸ್ನಾಯುಗಳಲ್ಲಿ ನೋವು ಇರುತ್ತದೆ. ಅವಶ್ಯಕ ಇರುವಷ್ಟೇ ಮಾತನಾಡಿ. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ಭವಿಷ್ಯವು ಅನಿಶ್ಚಿತ ಎನಿಸಬಹುದು. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು. ಯಾರ ಜೊತೆಯೂ ಕೆಟ್ಟವರಾಗಲು ಇಷ್ಟವಾಗದು.

ಮಿಥುನ ರಾಶಿ: ಇಂದು ಮಹತ್ವದ ಕಾಮಗಾರಿಗಳು ನಿಮ್ಮ ಪಾಲಿಗೆ ಸಿಗಲಿದೆ. ಆರ್ಥಿಕವಾಗಿ ಅನೇಕ ಲಾಭಗಳು ಆಗಲಿವೆ. ಜನರೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರಿ. ಹಿರಿಯರೊಂದಿಗೆ ಆತ್ಮೀಯತೆ ಬೆಳೆಯಲಿದೆ. ವ್ಯಾಪಾರವನ್ನು ಬೆಳಗಿಸಲು ಅನೇಕ ಅವಕಾಶಗಳಿವೆ. ಆದರೆ ನಿಮ್ಮ ನಿರ್ಲಕ್ಷ್ಯವು ಕೆಲಸವನ್ನು ಹಾಳು ಮಾಡಬಹುದು. ಸತ್ಯವನ್ನು ಮಾತನಾಡುವುದು ಬಹಳಷ್ಟು ಮಾಡುತ್ತದೆ. ಮನಸ್ಸಿನ ಚಂಚಲತೆಯನ್ನು ನಿಯಂತ್ರಿಸುವುದು ಅವಶ್ಯಕ. ಧಾರ್ಮಿಕ ಕಾರ್ಯವನ್ನು ಮಾಡುವ ಮನಸ್ಸಾಗುವುದು. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಸಮಯಕ್ಕೆ ಸರಿಯಾದ ಸಲಹೆಯನ್ನು ಯಾರಿಂದಲಾದರೂ ಪಡೆಯುವಿರಿ. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ಹಳೆಯ ರೋಗಗಳಿಂದ ನೀವು ಮುಕ್ತರಾದಂತೆ ತೋರುವುದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ.

ಕಟಕ ರಾಶಿ: ನಿಮ್ಮ ಹಳೆಯ ಸಂಬಂಧಗಳು ಪುನಃ ಹತ್ತಿರವಾಗಲು ಕಾರಣವಿರುವುದು. ನೀವು ತಕ್ಷಣ ಪ್ರತಿಕ್ರಿಯಿಸದಿರುವುದು ಒಳ್ಳೆಯದು.‌ ಅನಗತ್ಯ ಧೈರ್ಯವನ್ನು ತೋರಿಸುವುದನ್ನು ತಪ್ಪಿಸುವುದು ಸೂಕ್ತ. ನೀವು ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ. ಅನುಭವಿ ಜನರನ್ನು ಸಂಪರ್ಕಿಸಲಾಗುವುದು. ಅಕ್ರಮ ವಿಚಾರಗಳಿಂದ ನಿಮಗೆ ತೊಂದರೆಯಾಗುವುದು. ಆಸ್ತಿಯ ವಿಚಾರ ಪುನಃ ಬೆಳಕಿಗೆ ಬಂದು ಸಣ್ಣ ಕಲಹದಲ್ಲಿ ಮುಕ್ತಾಯವಾದೀತು. ವಂಚನೆಗೆ ಗೊತ್ತಾಗದಂತೆ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸ್ಥಾನಕ್ಕೆ ಯೋಗ್ಯವಾದ ಮಾತು ಇರಲಿ.‌ ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಯಾರ ಸಲಹೆ ಪಡೆಯದೇ ಮನಸ್ಸಿಗೆ ಬಂದಂತೆ ವ್ಯವಹರಿಸುವುದನ್ನು ಬಿಡಿ. ಸಂಗಾತಿಯ ಆರೋಗ್ಯವು ಹದ ತಪ್ಪುವುದು. ಬಹಳ ದಿನಗಳ ಅನಂತರ ತಪ್ಪಿನ ಅರಿವಾಗಬಹುದು.

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್