Horoscope Today 08 June : ಇಂದು ಈ ರಾಶಿಯವರು ಹಿತಶತ್ರುಗಳ ಪಾಲಾಗುವ ಸಾಧ್ಯತೆ ಇದೆ
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಸೋಮವಾರದಂದು ಯೋಗ್ಯತೆಗೆ ಕಳಂಕ, ಅಪಕ್ವ ತೀರ್ಮಾನ, ದೂರ ಪ್ರಯಾಣ, ಧರ್ಮ ಕಾರ್ಯ, ಮಾನಸಿಕ ಆರೋಗ್ಯದಲ್ಲಿ ವ್ಯತ್ಯಾಸ, ಅಶುಚಿತ್ವ ಇವೆಲ್ಲ ಈ ದಿನದಲ್ಲಿ ಇರಲಿದೆ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವೈಧೃತಿ, ಕರಣ : ಕೌಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:33 – 09:10, ಯಮಗಂಡ ಕಾಲ 10:47 – 12:24, ಗುಳಿಕ ಕಾಲ 14:00 – 16:37
ಮೇಷ ರಾಶಿ :
ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವ ಸಂದರ್ಭ ಪ್ರಾಪ್ತಿ. ನೀವು ಕಾಯವನ್ನು ದಂಡಿಸಲು ಒಪ್ಪಲಾರಿರಿ. ವಿದ್ಯಾರ್ಥಿಗಳು ಯಂತ್ರೋಪಕರಣಗಳನ್ನು ಪಡೆದು ಆನಂದಿಸುವರು. ನಿಮ್ಮ ಸಂಕಷ್ಟಕ್ಕೆ ಇತರರ ಸಹಾಯವನ್ನು ಪಡೆದುಕೊಳ್ಳುವಿರಿ. ಸಮಾಜಮುಖೀ ಕಾರ್ಯಗಳ ಕಡೆ ಗಮನಹರಿಸುವಿರಿ. ಹಿರಿಯರ ಮಾತು ನಿಮ್ಮ ಸ್ವಭಾವವನ್ನು ಪರಿವರ್ತಿಸಬಹುದು. ರಾಜಕಾರಣದ ಸ್ಪರ್ಶದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು. ಹಳೆಯ ಯಂತ್ರಗಳು ದುರಸ್ತಿಗೆ ಬರುವ ಸಾಧ್ಯತೆ ಇದೆ.
ವೃಷಭ ರಾಶಿ :
ಬರಬೇಕಾದ ಹಳೆಯ ಬಾಕಿಗಳು ಇಂದು ಬಂದು ಸೇರಲಿದೆ, ಕಾರ್ಯ ಚಟುವಟಿಕೆಗಳು ಚುರುಕು. ನಿಮ್ಮ ಕೆಲಸಗಳಿಗೆ ಇಂದು ಹೆಚ್ಚು ಪ್ರಾಮುಖ್ಯ ನೀಡಿ. ಆಸ್ತಿಯ ಹಂಚಿಕೆಯಿಂದ ನಿಮಗೆ ಸಂತೋಷವಾಗಲಿದೆ. ಸಾಹಸ ಮಾಡಲು ಹೋಗಿ ಮುಖಭಂಗವಾದೀತು. ಆಪ್ತರಿಂದ ಏನಾನ್ನಾದರೂ ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ಕೆಲವು ರೀತಿಯ ಹಾನಿಯ ಬಗ್ಗೆಯೂ ಚಿಂತಿಸುವುದು ಅಗತ್ಯ.
ಮಿಥುನ ರಾಶಿ :
ಮನೆಯ ಕಾರ್ಯಗಳಲ್ಲಿ ಮಗ್ನರಾಗಿ ಆಯಾಸವನ್ನು ತರಿಸಿಕೊಳ್ಳುವಿರಿ. ಅಧಿಕಾರಿಗಳ ಭೇಟಿಯಿಂದ ನಿಮ್ಮ ಉದ್ಯೋಗದಲ್ಲಿ ಆದಾಯ, ಪ್ರಭಾವಗಳು ಹೆಚ್ಚಾಗಲಿದೆ. ಯಾರಾದರೂ ತಟಸ್ಥರಾದರೆ ಶಾಂತವಾಗಲಿದೆ. ತಲೆ ಮುಂತಾದ ಕೆಲವು ಭಾಗಗಳಲ್ಲಿ ನೋವುಗಳು ಕಾಣಿಸಬಹುದು. ಬೆಂಗಾವಲು ಪಡೆಯನ್ನು ಇಟ್ಟುಕೊಂಡು ಓಡಾಡಿ. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿಕೊಳ್ಳಿ. ಇನ್ನೊಬ್ಬರು ಹೇಳುವ ತನಕ ಕಾಯುವುದು ಬೇಡ.
ಕರ್ಕಾಟಕ ರಾಶಿ :
ನ್ಯಾಯಾಲಯಕ್ಕೆ ಸಂಬಂಧಿಸಿದ್ದನ್ನು ತುರ್ತಾಗಿ ಮಾಡುವಿರಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮಲ್ಲಿಗೆ ಬರುವರು. ಕಾರ್ಯದ ಒತ್ತಡದ ನಡುವೆಯೂ ಕುಟುಂಬದಲ್ಲಿನ ಆಗು ಹೋಗುಗಳತ್ತ ಗಮನಹರಿಸುವಿರಿ. ಹೂಡಿಕೆಯ ವ್ಯವಹಾರಗಳಲ್ಲಿ ಏಳಿಗೆಯು ಅಷ್ಟಾಗಿ ಇರುವುದಿಲ್ಲ. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ.
ಸಿಂಹ ರಾಶಿ :
ಎಷ್ಟೋ ದಿನದ ಅನಂತರ ಇಂತಹ ಅಪರೂಪದ ಉಲ್ಲಾಸದ ಕ್ಷಣ ನಿಮ್ಮ ಪಾಲಿಗಿ ಇರಲಿದೆ. ಉತ್ತಮವಾದುದನ್ನು ಆಯ್ಕೆ ಮಾಡಿಕೊಳ್ಳಲಾಗದು. ಇದೆ ಎಂದ ಮಾತ್ರಕ್ಕೆ ಏನನ್ನೋ ಮಾಡುವುದು ಔಚಿತ್ಯವಲ್ಲ. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡುವುದು. ಋಣಾತ್ಮಕ ಚಿಂತನೆಯನ್ನು ಬಿಡುವುದು ಉತ್ತಮ. ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ.
ಕನ್ಯಾ ರಾಶಿ :
ಯಾರಿಗೂ ಮಾತನ್ನು ಕೊಡಲು ಹೋಗಬೇಡಿ. ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ, ಮನಸ್ಸಿನ ಮೇಲೆ ಪ್ರಭಾವವನ್ನು ಬೀರುತ್ತವೆ. ನಿಮ್ಮ ಯೋಜನೆಗೆ ನಕಾರಾತ್ಮಕತೆ ಬರಬಹುದು. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಕೂಡಿರಲಿ. ವಿದ್ಯಾರ್ಥಿಗಳಿಗೆ ಅಪೇಕ್ಷಿತ ಫಲಿತಾಂಶಗಳನ್ನು ಸಾಧಿಸಲು ತಾಳ್ಮೆಯೇ ಅತ್ಯವಶ್ಯ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳು ಹೆಚ್ಚು ಸಮಯ ಕಳೆದು, ಅಧ್ಯಯನವನ್ನು ನಿರ್ಲಕ್ಷಿಸಬಹುದು.
ತುಲಾ ರಾಶಿ :
ಮಕ್ಕಳಿಂದಾಗಿ ಆರ್ಥಿಕನಷ್ಟವನ್ನು ನಿರೀಕ್ಷಿಸಲಾರಿರಿ. ಹಣವು ದೀರ್ಘಕಾಲದವರೆಗೆ ಬಾರದೇ ಇರುವುದರಿಂದ ಇದನ್ನು ಶಾಂತವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಗಳಿಸಲು ಹೋಗಿ ಪರಿಸ್ಥಿತಿಯಲ್ಲಿ ನೀವು ಸಿಲುಕಿಕೊಳ್ಳುವಿರಿ. ಕೃತಕವಾದ ಸಂತೋಷದಲ್ಲಿ ಮೈಮರೆಯುವಿರಿ. ಸೌಹಾರ್ದತೆಯ ಚರ್ಚೆಯಿಂದ ಒಳ್ಳೆಯದಾಗುವುದು. ವೈಯಕ್ತಿಕ ಸಮಸ್ಯೆಗಳನ್ನು ವ್ಯವಹಾರಕ್ಕೆ ತಂದುಕೊಳ್ಳುವುದು ಬೇಡ.
ವೃಶ್ಚಿಕ ರಾಶಿ :
ನಿಮ್ಮ ಸಂಗಾತಿಯನ್ನು ತಪ್ಪಾಗಿ ಗ್ರಹಿಸುವಿರಿ. ಇಷ್ಟಾರ್ಥಗಳು ಸಿದ್ಧಿಸುವ ಬಗ್ಗೆ ಅಸಮಾಧಾನ ಕಾಣಿಸುವುದು. ಇದೇ ನಿಮ್ಮ ನಡುವಿನ ಅಂತರಕ್ಕೆ ಕಾರಣವಾಗಲಿದೆ. ನಿಮ್ಮ ಸಂಬಂಧವನ್ನು ಸುಧಾರಿಸಲು ಬಯಸಿದರೆ ಸಂಗಾತಿಯನ್ನು ಅನುಮಾನಿಸುವುದನ್ನು ತಪ್ಪಿಸಿ. ನೀವು ಅಮೂಲ್ಯ ವಸ್ತುವನ್ನು ಖರೀದಿಸಲು ಆಲೋಚಿಸಿದರೆ ಒಳ್ಳೆಯದೇ. ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಲಾರು. ಖರೀದಿಸುವಾಗ ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳಲು ಮರೆಯದಿರಿ.
ಧನು ರಾಶಿ :
ಹಣವನ್ನು ಸಂಪೂರ್ಣವಾಗಿ ಇತರೇತರ ಕಾರ್ಯಗಳಿಗೆ ಖರ್ಚು ಮಾಡಿ ತುರ್ತಿಗೆ ಹಣವಿಲ್ಲದಂತೆ ಮಾಡಿಕೊಂಡಂತಾಗುತ್ತದೆ. ಅತಿಯಾದ ಸಂತೋಷದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಇಲ್ಲವಾದರೆ ನೀವು ನಷ್ಟವನ್ನು ಅನುಭವಿಸುವಿರಿ. ಇಲ್ಲದವರನ್ನು ಇಂದು ಬಹುವಾಗಿ ನೆನೆಸುವಿರಿ. ಮನೆಯ ವಾತಾವರಣವು ಪ್ರಿಯವಾಗುವುದು. ಸಂಬಂಧಿಕರಿಂದ ನಿಮ್ಮ ಬಗ್ಗೆ ದೂರುಗಳು ಬರಬಹುದು. ಆದರೆ ಉತ್ತಮ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪ್ರಯತ್ನವೂ ಅಗತ್ಯ.
ಮಕರ ರಾಶಿ :
ಬೇಡದ್ದನ್ನೂ ಮನಸ್ಸಿನಲ್ಲಿ ಹಾಕಿಕೊಂಡು ಸಂಕಟಪಡುವಿರಿ. ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯವನ್ನು ಸಾಧಿಸವಹುದು. ಅದಕ್ಕೆ ಅವಕಾಶವನ್ನು ಕೊಡಬೇಡಿ. ದ್ರವವ್ಯಾಪಾರದಿಂದ ಲಾಭದ ಕಡೆಗೆ ಪಯಣ. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗದು ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗಲಿದೆ. ಇಂದಿನ ನಿಮ್ಮ ಪ್ರಯಾಣದಿಂದ ಕಷ್ಟವಾಗಬಹುದು.
ಕುಂಭ ರಾಶಿ :
ನಿಮ್ಮ ಅಂತಸ್ಸತ್ತ್ವವೇ ಎಲ್ಲ ಕಾರ್ಯಗಳನ್ನು ಖುಷಿಯಿಂದ ಮಾಡಲು ಸಹಕಾರಿಯಾಗುವುದು. ಅದು ನಿಮ್ಮ ಆತಂಕವನ್ನು ಹೆಚ್ಚಿಸುತ್ತದೆ. ಸಾಕುಗುವಷ್ಟನ್ನು ಮಾತ್ರ ಗಳಿಸಿ. ಅತಿಯಾದ ಆಸೆ ಬೇಡ. ಎಲ್ಲವನ್ನೂ ನಿರ್ವಹಿಸುವ ಸಾಮರ್ಥ್ಯ ನಿಮ್ಮಲ್ಲಿ ಇದೆ. ಆದರೆ ಅದನ್ನು ನಿಮಗೆ ಪರಿಚಯಿಸುವ ಕೆಲಸವಾಗಬೇಕು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲವಾಗಿರುವುದು. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡಿ.
ಮೀನ ರಾಶಿ :
ವಿದ್ಯಾರ್ಥಿಯಾಗಿದ್ದರೆ ಶಿಕ್ಷಣದಲ್ಲಿನ ಅಡೆತಡೆಗಳು ಸರಿಯಾಗಬಹುದು. ಇರುವುದನ್ನು ಇರುವಂತೆ ಹೇಳಲಾಗದು. ದಾಂಪತ್ಯಜೀವನದಲ್ಲಿ ನೀವು ಪ್ರೀತಿಯನ್ನು ಅನುಭವಿಸುವಿರಿ. ಕೆಲವು ದಿನಗಳ ಕಾಲ ಮನೆಯಿಂದ ಹೊರಗೆ ಸುತ್ತಾಡಲು ಯೋಜಿಸಬಹುದು. ಉದ್ಯೋಗಿಗಳಿಗೆ ಇಂದು ಶುಭ ಸೂಚನೆಗಳು ಸಿಗಲಿದೆ. ದೂರಪ್ರಯಾಣಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ನಿಮ್ಮ ವಿವಾಹವು ಮುಂದೆ ಹೋಗಲು ಅನ್ಯಾನ್ಯ ಕಾರಣಗಳಿವೆ.
ಲೋಹಿತ್ ಹೆಬ್ಬಾರ್ – 8762924271 (what’s app only)




