AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ

ನರಸಿಂಹ ದೇವರಿಗೆ ಅಭಿಷೇಕ ಅಥವಾ ಬೇರೆ ಯಾವುದಾದರೂ ಸೇವೆ ಮಾಡಿಸಲು ಸಾಧ್ಯವಿದ್ದಲ್ಲಿ ಮಾಡಿಸಿಕೊಳ್ಳಿ. ಪದೇಪದೇ ಅನಾರೋಗ್ಯ ಕಾಡುತ್ತಿರುವುದು, ಶತ್ರುಗಳ ಕಾಟ ಇತ್ಯಾದಿ ಸಮಸ್ಯೆಗಳು ದೂರವಾಗಲಿದೆ. ಮಾನಸಿಕ ಸ್ಥೈರ್ಯ ಹೆಚ್ಚಾಗುತ್ತದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ
ದಿನಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 24, 2026 | 2:13 AM

Share

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ರೀ ಸೇಲ್ ದೃಷ್ಟಿಯಿಂದ ಸೈಟು ಒಂದಕ್ಕೆ ಅಡ್ವಾನ್ಸ್ ನೀಡುವ ಬಗ್ಗೆ ಸ್ನೇಹಿತರ ಜೊತೆಗೂಡಿ ನಿಮ್ಮಲ್ಲಿ ಕೆಲವರು ಮಾತುಕತೆ ನಡೆಸಲಿದ್ದೀರಿ. ನಿಮ್ಮ ಸಲಹೆಗೆ ಇತರರು ಸಹ ಒಪ್ಪಿಗೆ ಸೂಚಿಸಲಿದ್ದಾರೆ. ನಿಮ್ಮ ಮನೆ ಹತ್ತಿರ ಇರುವಂಥ ಗಣಪತಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಳ್ಳಿ ಅಥವಾ ಗಣಪತಿ ಅಥರ್ವಶೀರ್ಷವನ್ನು ಕೇಳಿಸಿಕೊಳ್ಳಿ. ಇದರಿಂದ ನಿಮಗೆ ಕಾಡುವ ಅಡೆತಡೆಗಳು ದೂರವಾಗಲಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಅತಿ ಬುದ್ಧಿವಂತಿಕೆ ನಿರ್ಧಾರಗಳನ್ನು ಈ ದಿನ ತೆಗೆದುಕೊಳ್ಳಲು ಹೋಗಬೇಡಿ. ಅದರಲ್ಲೂ ನೀವೇನಾದರೂ ದೂರ ಪ್ರಯಾಣ ಮಾಡಬೇಕಿದೆ, ಅದಕ್ಕೆ ಸಂಬಂಧಿಸಿದ ಹೋಟೆಲ್ ಬುಕ್ಕಿಂಗ್, ವಿಮಾನದ ಸೀಟ್ ಬುಕ್ಕಿಂಗ್ ಮಾಡಿಸಬೇಕಿದೆ ಎಂದಾದಲ್ಲಿ ಬೇರೆಯವರಿಗೆ ಆ ಜವಾಬ್ದಾರಿಯನ್ನು ನೀಡುವುದು ಉತ್ತಮ ನಿರ್ಧಾರ ಎನಿಸಿಕೊಳ್ಳಲಿದೆ. ಸೆಕೆಂಡ್ ಹ್ಯಾಂಡ್ ಕಾರು- ಸ್ಕೂಟರ್- ಬೈಕ್ ಗಳ ಖರೀದಿ, ಮಾರಾಟ ಮಾಡುವಂಥ ವ್ಯವಹಾರ ನಡೆಸುತ್ತಿರುವವರಿಗೆ ಆದಾಯದಲ್ಲಿ ಏರಿಕೆ ಆಗುವಂಥ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸೋದರ- ಸೋದರಿಯರ ಜತೆಗೆ ಆಸ್ತಿಗೆ ಸಂಬಂಧಿಸಿದ ವ್ಯಾಜ್ಯಗಳು ಅಥವಾ ಅಭಿಪ್ರಾಯ ಭೇದ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳಲು ಸೂಕ್ತ ವೇದಿಕೆ ದೊರೆಯಲಿದೆ. ನಿಮ್ಮಲ್ಲಿ ಕೆಲವರು ಪಿಎಫ್ ಸೇರಿದಂತೆ ಮತ್ಯಾವುದಾದರೂ ಉಳಿತಾಯದ ಹಣವನ್ನು ವಿಥ್ ಡ್ರಾ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮಗೆ ಬರಬೇಕಾದ ಹಣದ ಬಾಕಿ ವಸೂಲಿಗೆ ಸೂಕ್ತವಾದ ದಿನ ಇದಾಗಲಿದ್ದು, ಈ ದಿನ ಒಂದು ಕಾಲ್ ಮಾಡಿಯಾದರೂ ವಿಚಾರಿಸಿ.

ಲೇಖನ- ಸ್ವಾತಿ ಎನ್.ಕೆ.

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!