Horoscope: ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ

| Updated By: ವಿವೇಕ ಬಿರಾದಾರ

Updated on: Apr 08, 2024 | 12:15 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 08 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ
ರಾಶಿಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶಿ, ನಿತ್ಯನಕ್ಷತ್ರ: ಉತ್ತರಭಾದ್ರ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:57ರಿಂದ 09:29ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:02 ರಿಂದ ಮಧ್ಯಾಹ್ನ 12:34 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:07 ರಿಂದ ಮಧ್ಯಾಹ್ನ 03:40ರ ವರೆಗೆ.

ಸಿಂಹ ರಾಶಿ: ಇಂದು ಸಂಗಾತಿಯಿಲ್ಲದೇ ಚಟಪಡಿಸುವ ಸ್ಥಿತಿ ಬಂದೀತು. ಬಹಳ ದಿನಗಳ ಅನಂತರ ಮನೆಯ ಕಡೆ ಹೋಗುವಿರಿ. ಎಷ್ಟೋ ದಿನದ ಅನಂತರ ಇಂತಹ ಅಪರೂಪದ ಉಲ್ಲಾಸದ ಕ್ಷಣ ನಿಮ್ಮ ಪಾಲಿಗಿ ಇರಲಿದೆ. ವ್ಯಾಪಾರಸ್ಥರು ಗ್ರಾಹಕರ ಜೊತೆಗೆ ಸಮಾಧಾನದಿಂದ‌ ಮಾತನಾಡಿ ಆದಾಯವನ್ನು ಹೆಚ್ಚು ಮಾಡಿಕೊಳ್ಳಬೇಕಿದೆ. ಎಂದೋ ಉಳಿಸಿಟ್ಟ ಕಾಸು ಇಂದು ತುರ್ತು ಕಾಲಕ್ಕೆ ಬಳಕೆಗೆ ಬರುತ್ತದೆ. ಇಂದು ನಿಮ್ಮ ಮನಸ್ಸಿಗೆ ಹಿತವಾದ ಯಾವುದಾರೂ ಒಂದು ಕೆಲಸವನ್ನು ಮಾಡಿ. ಸಮಯವು ನಿಮಗಾಗಿ ಅವಕಾಶವನ್ನು ಕೊಡಬಹುದು. ಮಗುವಿನ ಬಗ್ಗೆ ಸ್ವಲ್ಪ ಕಾಳಜಿ ಇರುತ್ತದೆ. ಋಣಾತ್ಮಕ ಚಿಂತನೆಯನ್ನು ಬಿಡುವುದು ಉತ್ತಮ. ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ. ಈ ಸಮಯದಲ್ಲಿ ಯಾವುದೇ ಹೊಸ ಕೆಲಸ ಅಥವಾ ಯೋಜನೆಯನ್ನು ಪ್ರಾರಂಭಿಸಬೇಡಿ. ಪ್ರಸ್ತುತ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸಿ.

ಕನ್ಯಾ ರಾಶಿ: ಇಂದು ಕಾರ್ಯದಲ್ಲಿನ ಬದ್ಧತೆಯಿಂದ ಎಲ್ಲರೂ ಅಚ್ಚರಿಪಡುತ್ತಾರೆ. ಹಣದ ಹೂಡಿಕೆಯ ಮಾರ್ಗಗಳನ್ನು ಅನ್ಯರ ಮೂಲಕ ಪಡೆದುಕೊಳ್ಳುವಿರಿ. ಯಾರಿಗೂ ಮಾತನ್ನು ಕೊಡಲು ಹೋಗಬೇಡಿ. ನಿಮ್ಮ ನೋವನ್ನು ಆಲಿಸುವ ಕಿವಿಗಳ ಕೊರತೆ ಇದೆ. ನೀವು ನೀಡುವ ಅಭಿಪ್ರಾಯಗಳು ಬಾಲಿಶ ಎಂದು ಮನೆಯವರಿಗೆ ಅನ್ನಿಸಬಹುದು. ದೇಹ ಹಾಗೂ ಮಾನಸಿಕ ನೋವುಗಳನ್ನು ನನೆನೆನೆದು ಸಂಕಟಪಡುವಿರಿ. ನಿಮ್ಮ ಭವಿಷ್ಯದ ಯೋಜನೆಯ ಸರಿಯಾದ ಚಿತ್ರಣವು ನಿಮ್ಮಲ್ಲಿ ಇರಲಿ. ತಪ್ಪುಗಳೇ ಇಂದು ಹೆಚ್ಚು ಕಾಣಿಸುವುದು. ನಿಮ್ಮ ಕೆಲಸದ ಸಾಮರ್ಥ್ಯದ ಮೂಲಕ ಸಕಾರಾತ್ಮಕ ಫಲಿತಾಂಶಗಳನ್ನು ಸಾಧಿಸುವಿರಿ. ನಿಮ್ಮ ಆಲೋಚನೆಗಳ ಬಗ್ಗೆ ಯೋಚಿಸುವುದು ಕೆಲವು ಪರಿಣಾಮಗಳನ್ನು ಉಂಟುಮಾಡಬಹುದು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳು ಹೆಚ್ಚು ಸಮಯ ಕಳೆದು, ಅಧ್ಯಯನವನ್ನು ನಿರ್ಲಕ್ಷಿಸಬಹುದು. ನೌಕರರಿಂದ ಕೆಲವು ಅಡಚಣೆಗಳೂ ಇರಬಹುದು. ಉತ್ಪಾದನೆಯಿಂದ ಅಧಿಕ ಲಾಭವನ್ನು ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಅಧಿಕೃತ ಕೆಲಸದಲ್ಲಿ ಕೆಲವು ಸಮಸ್ಯೆಗಳು ಕಂಡುಬರುತ್ತವೆ.

ತುಲಾ ರಾಶಿ: ಇಂದು ಏನನ್ನೋ ಮಾಡಲು ಹೋಗಿ ಮತ್ತೇನೋ ಆಗಬಹುದು. ಮಕ್ಕಳಿಂದಾಗಿ ಆರ್ಥಿಕನಷ್ಟವನ್ನು ಕಾಣಬೇಕಾಗಬಹುದು. ಪ್ರೀತಿಸುವುದನ್ನು ಕಲಿತರೆ ನಿಮ್ಮ ಸುತ್ತಲು ಎಂತಹದೇ ನಕಾರಾತ್ಮಕ ಅಂಶಗಳಿರಲಿ ಅವುಗಳು ಸಕಾರಾತ್ಮಕವಾಗಿ ನಿಮಗೆ ತೋರುತ್ತವೆ. ವಾಹನ ಸೌಕರ್ಯವನ್ನು ಬಳಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ನಿಮ್ಮ ನೆಚ್ಚಿನ ಕೆಲಸಗಳು ತೃಪ್ತಿಕರ ರೀತಿಯಲ್ಲಿ ಪೂರ್ಣಗೊಳ್ಳುವುದು. ಸಂಬಂಧಿಕರ ಜೊತೆ ಸಂತೋಷದ ಸಮಯವನ್ನು ಕಳೆಯುವಿರಿ. ಇದರಿಂದ ನಿಮ್ಮ ಮನಸ್ಸು ಹಗುರಾಗುವುದು. ಕೆಲವು ಆರ್ಥಿಕ ಸಮಸ್ಯೆಗಳನ್ನು ಅನಿವಾರ್ಯವಾಗಿ ಎದುರಿಸಬೇಕಾಗಬಹುದು. ನಿಮಗೆ ಎದುರಾಗುವ ಸಂಕಟಗಳ ಬಗ್ಗೆ ಗಮನವಿರಲಿ. ವೈಯಕ್ತಿಕ ಸಮಸ್ಯೆಗಳನ್ನು ವ್ಯವಹಾರಕ್ಕೆ ತಂದುಕೊಳ್ಳುವುದು ಬೇಡ.‌ ಇಂದು ನೀವು ಉದ್ಯೋಗದ ವ್ಯವಸ್ಥೆಯನ್ನು ಸುಧಾರಿಸಲು ಹೆಚ್ಚಿನ ಸಮಯವನ್ನು ನೀಡಬೇಕಾಗಿದೆ.

ವೃಶ್ಚಿಕ ರಾಶಿ: ಇಂದು ಯಾವುದನ್ನೂ ಅತಿರೇಕ ಮಾಡಿಕೊಳ್ಳುವುದು ಬೇಡ. ಭವಿಷ್ಯದಲ್ಲಿ ಭರವಸೆಯನ್ನು ಇಟ್ಟು ಮುಂದಡಿ ಇಡುವುದು ಅನಿವಾರ್ಯ.‌ ಇಂದಿನ ಜೀವನ ಸಂತೋಷದಿಂದ ಕೂಡಿರುವುದು. ಅತ್ಯಾಪ್ತರಿಂದ ಅಪರೂಪದ ಬಹುಮಾನ ಸಿಗಲಿದೆ. ಪ್ರಭಾವೀ ವ್ಯಕ್ತಿಗಳ ಭೇಟಿಯಾಗುವುದು. ನಿಮ್ಮ ಜೀವನದ ದಿಕ್ಕಿಗೆ ಹೊಸ ಮಾರ್ಗವೂ ಸೇರ್ಪಡೆಯಾಗುವುದು. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಲಿ. ಮನೆಯಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಮಾಡಿಸುವಿರಿ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸುವುದು ಅವಶ್ಯಕ. ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಲಾರು. ಖರೀದಿಸುವಾಗ ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳಲು ಮರೆಯದಿರಿ. ಸರ್ಕಾರಿ ನೌಕರರು ಹೆಚ್ಚಿನ ಕೆಲಸದ ಕಾರಣದಿಂದ ಇಂದು ಹೆಚ್ಚಿನ ಸಮಯವನ್ನು ಮಾಡಬೇಕಾಗಬಹುದು. ಪ್ರೇಮ ಸಂಬಂಧದ ಕೋಪದಿಂದ ನೀವು ಭಾವನಾತ್ಮಕ ದೂರವಾಗುವಿರಿ.