AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: Mar 26, 2023 | 6:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 26 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ಪಂಚಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಪ್ರೀತಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಸಂಜೆ 05:11 ರಿಂದ 06:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:11ರ ವರೆಗೆ.

ಧನು: ಸಹೋದರರ ನಡುವೆ ಸಣ್ಣ ಭಿನ್ನಾಭಿಪ್ರಾಯ ಬರಲಿದೆ‌. ಮನೆಯ ಹಿರಿಯರಿಂದ ಅದು ಸರಿಯಾಗುವುದು. ಉದ್ಯೋಗದ ಸ್ಥಳದಿಂದ ನಿಮ್ಮನ್ನು ಕೈ ಬಿಡವ ಸಾಧ್ಯತೆ ಇದೆ. ನಿರಾಸೆಯು ಮೂಡಲಿದೆ. ವ್ಯಾಪರವು ಅಧೋಗತಿಗೆ ಹೋಗಲಿದೆ. ಶತ್ರುಗಳ ಪಿತೂರಿಯ ಕುರಿತು ನಿಮಗೆ ಶಂಕೆ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಕುರಿತು ಆತಂಕವಿರಬಹುದು. ಬುದ್ಧಿಗೆ ಸದ್ವಿಚಾರಗಳನ್ನು ನೀಡಿ. ಸರ್ಕಾರದ ಹಿರಿಯ ಅಧಿಕಾರಿಗಳ ಭೇಟಿಯಾಗಲಿದೆ‌. ಅನ್ಯರ ಒತ್ತಾಯಕ್ಕೆ ನೀವು ನಿಮ್ಮನ್ನು ಬಿಟ್ಟುಕೊಡಲಿದ್ದೀರಿ. ಗುರುಸಮಾಧಿಗೆ ನಮಸ್ಕರಿಸಿ ಬನ್ನಿ.

ಮಕರ: ಸ್ನೇಹಿತರ ಬಳಗವು ನಿಮಗೆ ಒದಗುವ ಸಂಕಟದಲ್ಲಿ ಇರಲಿದೆ. ಅದನ್ನು ಪರಿಹರಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ ಅಥವಾ ಈಗಾಗಲೇ ಕೆಲಸ ಮಾಡುತ್ತಿದ್ದರೆ ಬಡ್ತಿ ಸಿಗಲಿದೆ. ಹೊಸದಾದ ವಾಹನವನ್ನು ಖರೀದಿ ಮಾಡಲಿದ್ದೀರಿ. ಸಾಲದ ಹೊರೆಯನ್ನು ಕಂಡು ಚಿಂತೆಗೆ ಒಳಗಾಗಬೇಕಾಗಬಹುದು. ಅವಸರವನ್ನು ಬಿಟ್ಟು ನಿಧಾನವಾಗಿ ಆಲೋಚಿಸಿ. ರಕ್ಷಣಪಡೆಗೆ ಸೇರುವವರಿಗೆ ಅವಕಾಶಗಳು ಸಿಗಲಿವೆ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿಯುಳ್ಳವರಾಗುವಿರಿ. ಒಂದೇ ಕೆಲಸ ನಿಮಗೆ ನಿರಾಸಕ್ತಿಯನ್ನು ಮೂಡಿಸೀತು. ಹನುಮಾನ್‌ ಚಾಲೀಸ್ ನಿಮ್ಮ ಜಾಡ್ಯವನ್ನು ದೂರಮಾಡೀತು.

ಕುಂಭ: ನಿಮ್ಮ ಮಾತನ್ನು ನಿಮ್ಮವರು ಹಾಗೂ ಇತರರು‌ ಒಪ್ಪುವರು. ಅಚಾತುರ್ಯದಿಂದ ಅನಾಹುವಾದೀತು. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ನಿಮ್ಮ ಪ್ರತಿಭೆಯ ಅನಾವರಣಕ್ಕೆ ಸಕಾಲವಾಗಿದೆ. ನಿಮ್ಮವರನ್ನು ಬಂಧಿಸಿಡುವ ಕೆಲಸಕ್ಕೆ ಹೋಗಬೇಡಿ. ಪ್ರೀತಿಯಿಂದ ಕೊಟ್ಟ ಉಡುಗೊರೆಯನ್ನು ಸ್ವೀಕರಿಸುವಿರಿ. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾಗುವುದು. ಕೆಲಸವನ್ನು ಒಂದಾದಮೇಲೊಂದರಂತೆ ಮಾಡಿಕೊಳ್ಳಿ. ನಿಮ್ಮ ಕೆಲಸಕ್ಕೆ ಸರಿಯಾಗಿ ಹಣವು ಹರಿದು ಬರುವುದು. ಎಲ್ಲವೂ ಸರಿಯಾಗಿ ಆಗುವುದು. ಅತಿಯಾದ ನಿರೀಕ್ಷೆ ಬೇಡ. ಶಿವಾಲಯಕ್ಕೆ ಹೋಗು ಬಿಲ್ವಾರ್ಚನೆ ಮಾಡಿ.

ಮೀನ: ಇಂದು ನೀವು ಆದಾಯದ ನಿರೀಕ್ಷೆಯಲ್ಲಿ ಇರಬಹುದು. ಬರಬೇಕಾದ ಹಣವೂ ಬಂದೀತು. ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸ್ನೇಹಿತರ ಸಹಾಯವೂ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಮನಸ್ತಾಪವೆದ್ದು ತಣ್ಣಗಾಗಲಿದೆ. ನಾಚಿಕೆಯನ್ನು ಬಿಟ್ಟು ಕೇಳಿದರೆ ನಿಮಗೆ ಬೇಕಾದ ವಸ್ತುಗಳು ಸಿಗಬಹುದು.‌ ಹೆದರಿಕೆಯ ವಾತಾವರವಿರಲಿದೆ. ಉದ್ವೇಗಕ್ಕೆ ನಾನಾ‌ ಕಾರಣಗಳಿದ್ದರೂ ಸಮಾಧನಾಚಿತ್ತದಿಂದ ಇರಲು ಪ್ರಯತ್ನಿಸಿ. ನಿಮಗೆ ನಿಮ್ಮ ಕೆಲಸದಿಂದ ಆದ ತಪ್ಪುಗಳು ಕಾಡಬಹುದು.‌ ಅಪ್ರಯೋಜನದ ಮಾತುಗಳಿಂದ ನೀವು ಅಪಹಾಸ್ಯಕ್ಕೆ ಒಳಗಾಗುವಿರಿ. ಯಾರ ಮೇಲಿರುವ ಬೇಸರವನ್ನು ಮತ್ಯಾರದೋ ಮೇಲೆ ತೋರಿಸಿ ನಿಮ್ಮವರ ದ್ವೇಷಕ್ಕೆ ಕಾರಣವಾಗಬೇಡಿ.

-ಲೋಹಿತಶರ್ಮಾ ಇಡುವಾಣಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!