Horoscope: ದಿನಭವಿಷ್ಯ; ಅನಿರೀಕ್ಷಿತ ಮೂಲಗಳು ಈ ರಾಶಿಯವರಿಗೆ ಹಣಕಾಸಿನ ಲಾಭ ತರಬಹುದು
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಫೆಬ್ರವರಿ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಸುಕರ್ಮ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಸಂಜೆ 05:10 ರಿಂದ 06:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:46 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:10ರ ವರೆಗೆ.
ಸಿಂಹ ರಾಶಿ: ಇಂದು ವ್ಯವಹಾರಗಳಲ್ಲಿ ಆತುರ ಬೇಡ. ಯಾವುದೇ ವ್ಯಕ್ತಿಯಿಂದ ದಾರಿ ತಪ್ಪಬೇಡಿ. ವ್ಯಾಪಾರ ಚೆನ್ನಾಗಿ ನಡೆಯಲಿದೆ. ಕುಟುಂಬದ ಬೆಂಬಲವು ಕೇಳದೆಯೂ ಸಿಗುತ್ತದೆ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ವಿಶ್ರಾಂತಿ ದೊರೆಯುವುದು. ಹೊಸ ಹಣಕಾಸಿನ ಒಪ್ಪಂದವನ್ನು ಉತ್ಸಾಹದಿಂದ ಒಪ್ಪಿಕೊಳ್ಳುವಿರಿ. ಸಂಬಂಧಿಕರೊಂದಿಗೆ ಸಮಯ ಕಳೆಯುವುದು ಅನುಕೂಲಕರವಾಗಿದೆ. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಯಾರೊಂದಿಗಾದರೂ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಅದೃಷ್ಟವನ್ನು ತರಬಹುದು. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ. ನಿಮ್ಮ ಹಳೆಯ ಸಮಸ್ಯೆಯನ್ನು ಸರಿಮಾಡಿಕೊಳ್ಳುವಿರಿ. ವಾಹನ ವಿಚಾರವಾಗಿ ಮನೆಯಲ್ಲಿ ಕಲಹವಾಗುವುದು. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ.
ಕನ್ಯಾ ರಾಶಿ: ಸಮಾಜಸೇವೆಯಲ್ಲಿ ಆಸಕ್ತಿ ಇರುತ್ತದೆ ಮತ್ತು ಗೌರವ ಸಿಗಲಿದೆ. ಉದ್ಯೋಗದಲ್ಲಿ ಪ್ರಶಂಸೆ ಇರುತ್ತದೆ. ಕಾರ್ಯ ನೆರವೇರಿದ ಖುಷಿಯು ಹೆಚ್ಚಾಗುವುದು. ಉನ್ನತ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವಾಗ ಶಾಂತವಾಗಿರಿ ಮತ್ತು ನಿಮ್ಮ ವಿಶ್ವಾಸವನ್ನು ಕಾಪಾಡಿಕೊಳ್ಳಿ. ಹಿಂದಿನ ಹಣಕಾಸಿನ ನಿರ್ಧಾರಗಳು ಲಾಭದಾಯಕ ಆದಾಯವನ್ನು ನೀಡಬಹುದು. ಆರೋಗ್ಯದ ಬಗ್ಗೆ ಅತಿಯಾದ ಚಿಂತೆಯಿಂದ ಮತ್ತಷ್ಟು ಹಾಳುಮಾಡಿಕೊಳ್ಳುವಿರಿ. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ವಾಹನದ ಅಪಘಾತವನ್ನು ನಿಮ್ಮದೇ ತಪ್ಪಿನಿಂದ ಆಗಲಿದೆ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು. ಹಿರಿಯರ ಉಪದೇಶದಲ್ಲಿ ಆಸಕ್ತಿ ಕಡಿಮೆ ಆಗುವುದು. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ವಿದೇಶದ ವ್ಯಾಪಾರದಲ್ಲಿ ಏರಿಳಿತವಾಗಬಹುದು. ಜಾಗರೂಕತೆಯಿಂದ ನಿರ್ವಹಿಸಬೇಕಾಗುವುದು.
ತುಲಾ ರಾಶಿ: ನೀವು ಇಂದು ಬಹಳ ದಣಿಯಬೇಕಾಗುತ್ತದೆ. ಆದಾಯದಲ್ಲಿ ನಿಖರತೆ ಇರುತ್ತದೆ. ವ್ಯಾಪಾರ ಚೆನ್ನಾಗಿ ನಡೆಯಲಿದೆ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಇಂದು ನಿಮಗೆ ಹೆಚ್ಚಿನ ಶಕ್ತಿ ತುಂಬಿದ ದಿನವಾಗಿರದಿರಬಹುದು. ನಿಮ್ಮ ಮನೆಯ ಸೌಂದರ್ಯವನ್ನು ಹೆಚ್ಚಿಸಲು ನಿಮ್ಮ ಬಿಡುವಿನ ಸಮಯವನ್ನು ಬಳಸಿಕೊಳ್ಳಿ. ನಿಮ್ಮ ಕುಟುಂಬವು ನಿಜವಾಗಿಯೂ ಮೆಚ್ಚುವ ಒಂದು ಸೂಚಕವಾಗಿದೆ. ಕೆಲಸದಲ್ಲಿ ಧನಾತ್ಮಕ ಬದಲಾವಣೆಗಳು ನಿಮಗೆ ಪ್ರಯೋಜನಕಾರಿಯಾಗುತ್ತವೆ. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ಹೊಸ ವಿಧಾನದಲ್ಲಿ ಇರಲಿದೆ. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ.
ವೃಶ್ಚಿಕ ರಾಶಿ: ನಿಮ್ಮ ಮಾತನ್ನು ನಿಯಂತ್ರಿಸಿ. ದೈಹಿಕ ನೋವು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣದಲ್ಲಿ ಆತುರ ಬೇಡ. ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿ. ದುಃಖದ ಸುದ್ದಿಯನ್ನು ಸಹಿಸುವುದು ಕಷ್ಟವಾದೀತು. ಓಡಾಟ ಹೆಚ್ಚು ಇರುತ್ತದೆ. ಅನಿರೀಕ್ಷಿತ ಮೂಲಗಳು ನಿಮಗೆ ಹಣಕಾಸಿನ ಲಾಭವನ್ನು ತರಬಹುದು. ನಿಮ್ಮನ್ನು ನೋಡು ದೃಷ್ಟಿಯು ಇದರಿಂದ ಬದಲಾದೀತು. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಅನಿರೀಕ್ಷಿತವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕವು ಸಿಗುವುದು. ಕುಟುಂಬದಲ್ಲಿ ನಿಮ್ಮ ಪ್ರತಿ ಮಾತನ್ನು ಅನೇಕ ಅರ್ಥದಲ್ಲಿ ಗ್ರಹಿಸಬಹುದು. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವನ್ನು ಚೆನ್ನಾಗಿಟ್ಟುಕೊಳ್ಳಿ. ನಿಮ್ಮದೇ ಕಾರ್ಯವಾದರೂ ನಿಮಗೆ ಅದರ ಸಂಪೂರ್ಣ ಯಶಸ್ಸು ಸಿಗದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ