Horoscope: ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಮಾರ್ಚ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು
ರಾಶಿ ಭವಿಷ್ಯ
Edited By:

Updated on: Mar 04, 2024 | 6:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಸಾಯಂಕಾಲ 05:11 ರಿಂದ 06:40ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:45 ರಿಂದ 02:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ.

ಸಿಂಹ ರಾಶಿ: ಯಾವುದಾದರೂ ವಿಚಾರಕ್ಕೆ ಇಂದು ಮಕ್ಕಳ ಜೊತೆ ಕಲಹವಾಗಬಹುದು. ಕೆಲವು ತಿರುವುಗಳು ಅನಿರೀಕ್ಷಿತವಾಗಿ ಬರಬಹುದು. ವಾಹನ ಚಾಲನೆಯು ನಿಮಗೆ ಇಷ್ಟವಾಗುವುದು. ಶ್ರಮಕ್ಕೆ ಯೋಗ್ಯವಾದ ಆದಾಯವನ್ನು ನೀವು ಮಾತ್ರ ಪಡೆಯುವಿರಿ. ಆಕಸ್ಮಿಕ ಧನಲಾಭಕ್ಕೆ ಹಿಂದೇಟು ಹಾಕುವಿರಿ. ಮೋಜಿನಲ್ಲಿ ನಿಮ್ಮ ಸಮಯವು ಕಳೆಯುವುದು. ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ವಿದೇಶದ ಸಂಪರ್ಕವು ವ್ಯಾಪಾರಕ್ಕಾಗಿ ಇರಲಿದೆ. ಅಪಮಾನವನ್ನು ಸಹಿಸಲಾಗದೇ ಎದುರಿಸಲೂ ಆಗದೇ ಹತಾಶೆಗೊಳ್ಳುವಿರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿಕೊಡುವುದು. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು. ಯಾರ ನೋವನ್ನಾದರೂ ಅಲೈಸುವ ಮನಸ್ಸು ಇರುವುದು.

ಕನ್ಯಾ ರಾಶಿ: ಇಂದು ನಕಾರಾತ್ಮಕವಾಗಿ ನಿಮ್ಮ ಮನಸ್ಸು ಹರಿಯುವುದು. ಸಂಗಾತಿಯ ಮನೋಭಾವಕ್ಕೆ ಹೊಂದಿಕೊಳ್ಳಲು ಕಷ್ಟವಾದೀತು. ಪರಿಚಿತರನ್ನು ಅಪರಿಚಿತರಂತೆ ಕಾಣುವಿರಿ. ಆಸ್ತಿಯ ದಾಖಲೆಗಳು ಕಾಣದೇ ಆತಂಕ ಉಂಟಾಗಬಹುದು. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ಸತ್ಯವನ್ನು ಮರೆಮಾಚಲು ತಂತ್ರವನ್ನು ಹೆಣೆಯಬಹುದು. ಮಕ್ಕಳು ನಿಮ್ಮ ಪ್ರತಿ ಬದಲಾವಣೆಯನ್ನೂ ಗಮನಿಸುವರು. ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ. ಕಲಾವಿದರಿಗೆ ಮನ್ನಣೆ ಸಿಗಲಿದೆ. ವಿದೇಶೀಯ ವಸ್ತುಗಳ ಬಳಕೆಯನ್ನು ಮಾಡುವುದು ಕಾರಣಾಂತರಗಳಿಂದ ಇಷ್ಟವಾಗದು. ನಿಮ್ಮ ಅಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳುವಿರಿ. ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು. ನಿಮ್ಮ ಆದಾಯಕ್ಕೆ ತಕ್ಕಂತೆ ಜೀವನವಿರಲಿ.

ತುಲಾ ರಾಶಿ: ಇಂದು ನಿಮ್ಮ ಕೆಲವು ವಿಚಾರಕ್ಕೆ ಗೊಂದಲದ ಸ್ಥಿತಿ ಇರುವುದು. ಯಾವ ತಪ್ಪಿಗೂ ಯಾರನ್ನೂ ದೂಷಿಸಲಾರಿರಿ. ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿದರೂ ಅವಘಡಗಳು ಮತ್ತೆಲ್ಲಿಂದಲೋ ಬರಬಹುದು‌. ದೇವರ ಇಚ್ಛೆಯಂತೆ ಎಲ್ಲವೂ ಆಗುತ್ತದೆ ಎಂಬ ದಾರ್ಢ್ಯತೆಯು ನಿಮ್ಮ ಎಲ್ಲ ಕೆಲಸಕ್ಕೂ ಬಲವನ್ನು ಕೊಡುವುದು. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ. ಮನೋವಿಕಾರವನ್ನು ಕಡಿಮೆ‌ ಮಾಡಿಕೊಳ್ಳಿ. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಕೃಷಿಯ ಉತ್ಪನ್ನಗಳನ್ನು ಸೂಕ್ತ ಸ್ಥಳದಲ್ಲಿ ಸಮಯದಲ್ಲಿ ಮಾರಾಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಮುಂದುವರಿಯುವಿರಿ.

ವೃಶ್ಚಿಕ ರಾಶಿ: ಇಂದು ಕಛೇರಿಯಲ್ಲಿ ನಿಮ್ಮ ವ್ಯಕ್ತಿತ್ವವು ಬದಲಾದಂತೆ ತೋರುವುದು. ಸಾಮಾಜಿಕ ಗೌರವದ ಅಪೇಕ್ಷೆಯು ಅಧಿಕವಾಗಿ ಇರುವುದು. ಹೇಳಿಕೊಳ್ಳುವಷ್ಟು ಆದಾಯವಿಲ್ಲದಿದ್ದರೂ ಅಹಂಕಾರಕ್ಕೇನು ಕೊರತೆ ಇರದು. ನಿಮ್ಮ ಮಾತಿನಿಂದ‌ ಶತ್ರುಗಳು ಹುಟ್ಟಿಕೊಳ್ಳಬಹುದು. ಮೇಲಿಂದ‌ ಮೇಲೆ‌ ಬರುತ್ತಿರುವ ಆರೋಗ್ಯದ ತೊಂದರೆಯು ನಿಮಗೆ ಅಸತಂಕವನ್ನು ಉಂಟುಮಾಡಬಹುದು. ಸಹೋದರರ ನಡುವಿನ ಭಿನ್ನಾಭಿಪ್ರಾಯಕ್ಕೆ ನೀವು ತೆರೆ ಎಳೆಯುವಿರಿ. ನಿಮ್ಮ ಕಾರ್ಯದಲ್ಲಿ ತಾಳ್ಮೆಯು ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ಅಳತೆಯನ್ನು ಅರಿತು ವ್ಯವಹರಿಸುವುದು ಎಲ್ಲ ದೃಷ್ಟಿಯಿಂದ ಉತ್ತಮ. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು. ಬರುವ ಸನ್ನಿವೇಶವನ್ನು ಎದುರಿಸಲು ನಿಮಗೆ ಗೊತ್ತಾಗುವುದು.

Published On - 6:28 am, Mon, 4 March 24