AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿಯವರು ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ-ಎಚ್ಚರ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 02 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಈ ರಾಶಿಯವರು ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ-ಎಚ್ಚರ
ರಾಶಿ ಭವಿಷ್ಯ
TV9 Web
| Edited By: |

Updated on: Mar 02, 2024 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:47 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:50 ರಿಂದ 08:19ರ ವರೆಗೆ.

ಮೇಷ ರಾಶಿ : ಇಂದು ಆರೋಗ್ಯದ ವಿಚಾರಕ್ಕೆ ಹಣವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಬಗ್ಗೆ ನಕಾರಾತ್ಮಕ ಮನೋಭಾವವು ದೂರಾಗುವುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಎಲ್ಲ ಸಂದರ್ಭವೂ ನಿಮಗೆ ಹಿತವಾಗಿರುತ್ತದೆ ಎಂಬ ಮಾನಸಿಕ‌ಸ್ಥಿತಿ ಬದಲಾಗುವುದು.

ವೃಷಭ ರಾಶಿ : ಇಂದು ನೀವು ಎಲ್ಲ ಕಾರ್ಯಗಳನ್ನು ಶಿಸ್ತುಬದ್ಧವಾಗಿ ಮಾಡಲು ಪ್ರಯತ್ನಿಸುವಿರಿ. ಹಣಕಾಸಿನ ವ್ಯವಹಾರವು ಪೂರ್ಣಪ್ರಮಾಣದಲ್ಲಿ ನಿಮ್ಮದಾಗದು. ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇರುವುದು. ಮನೋರಂಜನೆಗೆ ಭಾಗವಹಿಸುವುದು ಇಷ್ಟವಾಗುವುದು. ಉನ್ನತ ವಿದ್ಯಾಭ್ಯಾಸದ ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನಿಸುವಿರಿ.

ಮಿಥುನ ರಾಶಿ : ಇಂದು ನಿಮ್ಮ ಆತ್ಮವಿಶ್ವಾಸವೇ ಎಲ್ಲದಕ್ಕೂ ಪೂರಕವಾಗಿ ಇರುವುದಾಗಿದೆ. ಎಲ್ಲದಕ್ಕೂ ಯಶಸ್ಸು ಸಿಗಬೇಕು ಎಂಬ ಮನೋಭಾವವು ಬದಲಾದರೆ ಒಳ್ಳೆಯದು. ಉದ್ಯಮದ ವಿಸ್ತಾರದ ಕುರಿತು ನಿಮ್ಮ ಆಲೋಚನೆ ವಿಭಿನ್ನವಾಗಿ ಇರುವುದು. ಹಿತಶತ್ರುಗಳು ನಿಮ್ಮ ಅವನತಿಯನ್ನು ನಿರೀಕ್ಷಿಸಬಹುದು. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಭವಿಷ್ಯವನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ಮುಂದುವರಿಯಿರಿ. ವಾಹನ ಚಾಲನೆಯಿಂದ ನಿಮಗೆ ಸಂತೋಷವಾಗಲಿದೆ.

ಕಟಕ ರಾಶಿ : ಇಂದಿನ‌ ನಿಮ್ಮ ಸಂತೋಷಕ್ಕೆ ಬೇರೆ ಬೇರೆ ಕಾರಣಗಳು ಇರುವುದು.‌ ಮನೆಯವರನ್ನು ದೂಷಿಸುವುದು ನಿಮಗೆ ಸ್ವಭಾವದಂತೆ ಆಗಬಹುದು. ದೂರಾಲೋಚನೆಯು ಕ್ರಮಬದ್ಧವಾಗಿ ಇರಲಿ. ದಾಂಪತ್ಯದ ಕಲಹವು ಬೇರೆ ದಾರಿಯಲ್ಲಿ ನಡೆಯುವುದು. ಪ್ರೇಮಿಗಳು ಎಲ್ಲಿಯಾದರೂ ಭೇಟಿಯಾಗಲು ಯೋಚಿಸುವರು. ಯಾರ ಜೊತೆ ಸ್ಪರ್ಧಿಸಲೂ ನೀವು ತಯಾರಿರುವಿರಿ. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದೇಹೋಗಬಹುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗಬಹುದು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ