Horoscope: ರಾಶಿಭವಿಷ್ಯ; ಮಹಿಳೆಯರಿಗೆ ಉದ್ಯೋಗದಲ್ಲಿ ಸಕಾರಾತ್ಮಕ ಬೆಳವಣಿಗೆ ಇರಲಿದೆ

 ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಫೆಬ್ರವರಿ​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಮಹಿಳೆಯರಿಗೆ ಉದ್ಯೋಗದಲ್ಲಿ ಸಕಾರಾತ್ಮಕ ಬೆಳವಣಿಗೆ ಇರಲಿದೆ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Feb 27, 2024 | 6:54 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಮಂಗಳ , ತಿಥಿ: ತೃತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶೂಲಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:49 ರಿಂದ 11:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:46 ರಿಂದ 03:14ರ ವರೆಗೆ.

ಸಿಂಹ ರಾಶಿ: ಇಂದು ಮಹಿಳೆಯರ ಉದ್ಯೋಗದಲ್ಲಿ ಸಕಾರಾತ್ಮಕ ಬೆಳವಣಿಗೆ ಇರಲಿದೆ. ತಂತ್ರಜ್ಞಾನವನ್ನು ನೀವು ಹಿಂದಿರುವಂತೆ ನಿಮಗೆ ಭಾಸವಾಗಬಹುದು. ನಿಮ್ಮ ಸಹಾಯದ ಮನೋಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ಧಾರ್ಮಿಕ ಕಾರ್ಯಗಳಿಗೆ ಹಣವನ್ನು ಕೊಡುವಿರಿ. ನಿಮ್ಮಿಂದಾಗದ ಕೆಲಸಕ್ಕೆ ಕೈಹಾಕಿ ತೊಂದರೆಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ರಾಜಕಾರಣವನ್ನು ವೃತ್ತಿಯಾಗಿ ನೀವು ಸ್ವೀಕರಿಸುವ ಸಾಧ್ಯತೆ ಇದೆ. ಹೊಸ ವಾಹನದ ಖರೀದಿಯಿಂದ ಸಂತೋಷವಾಗುವುದು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿಮ್ಮ ಮೌನವು ನಿಮ್ಮರಿಗೆ ಭಯವನ್ನುಂಟುಮಾಡೀತು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಮಾತಿನಲ್ಲಿ ಹಿತ, ಮಿತವಿರಲಿ.

ಕನ್ಯಾ ರಾಶಿ: ನಿಮಗೆ ಇಂದು ಮಕ್ಕಳ ಆರೋಗ್ಯದ ಚಿಂತೆಯಾಗಬಹುದು. ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಆ ಕಡೆಗೇ ಗಮನ ಇರುವುದು. ನಿಮ್ಮ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಲ್ಲಿ ಇರುವಿರಿ. ಈ ದಿನ ಪೂರ್ತಿ ಹಣಕಾಸಿನ ಚಿಂತೆಯಲ್ಲಿ ಇರುವಿರಿ. ನಿಮ್ಮ ನೇರ ನುಡಿಯಿಂದ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಸತ್ಯವನ್ನು ಹೇಳಲು ಅಪಹಾಸ್ಯವಾಗಬಹುದು. ಕೇವಲ‌ ಕೊರತೆಯನ್ನು ನೀವು ಹೆಚ್ಚು ಚಿಂತಿಸುವಿರಿ. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾತ್ರ ಮಾಡಿ.

ತುಲಾ ರಾಶಿ: ಸಂಬಂಧಗಳಿಗೆ ಕೊಡಬೇಕಾದ ಬೆಲೆಯನ್ನು ಕೊಡುವಿರಿ. ಸಮಾರಂಭದಲ್ಲಿ ಭಾಗವಹಿಸುವ ಅವಕಾಶವು ಅನಿರೀಕ್ಷಿತವಾಗಿ ದೊರೆಯುವುದು. ಯಾರ ಜೊತೆಗೂ ವೈರವನ್ನು ಕಟ್ಟಿಕೊಳ್ಳದೇ ಹೊಂದಾಣಿಕೆಯಿಂದ ವ್ಯವಹರಿಸಿ. ಸುಲಭದ ಕೆಲಸವನ್ನು ಆದಷ್ಟು ಇಂದು ಮಾಡಿಮುಗಿಸಿಕೊಳ್ಳಿ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ಹಣವನ್ನು ಬಹಳ ಗೌಪ್ಯವಾಗಿ ಇಟ್ಟುಕೊಳ್ಳುವಿರಿ. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸುವಿರಿ.

ವೃಶ್ಚಿಕ ರಾಶಿ: ಇಂದು ನಿಮಗೆ ವಾಹನ ಸೌಕರ್ಯದಿಂದ ಕಾರ್ಯಗಳು ಸುಲಭವಾಗಿ ಆಗುವುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಯೋಚನೆ ಸರಿಯಾಗಿರುವುದು. ಆತ್ಮೀಯ ಬಂಧುಗಳಿಗೆ ಸಮಯ ಕೊಡಲು ಆಗದೇ ವ್ಯಕ್ತಿಗಳನ್ನು ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ಮನಶ್ಚಾಂಚಲ್ಯದಿಂದ ಕೆಲವು ಕಹಿಯಾದ ಅನುಭವಗಳು ಆಗಬಹುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಎಲ್ಲ ಘಟನೆಗಳನ್ನೂ ಒಂದೇ ರೀತಿಯಲ್ಲಿ ತೂಕಮಾಡಲಾಗದು. ಸಮಯವನ್ನು ತಿಳಿದುಕೊಳ್ಳುವುದು ಉತ್ತಮ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಅಧಿಕ ಒತ್ತಡವನ್ನು ಅನುಭವಿಸಬೇಕಾದೀತು. ಸಂದರ್ಭವನ್ನು ನೋಡಿ ಮಾತನಾಡಿ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್