Horoscope 02 Oct: ದಿನಭವಿಷ್ಯ, ವಿನಾಕಾರಣ ನಿಮ್ಮ ಮೇಲೆ ಆರೋಪ ಬರಬಹುದು ಎಚ್ಚರ! ಪಕ್ಷಪಾತ ಬೇಡ
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಅಕ್ಟೋಬರ್ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತೃತೀಯಾ / ಚತುರ್ಥೀ, ನಿತ್ಯನಕ್ಷತ್ರ: ಭರಣೀ, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 20ಕ್ಕೆ, ರಾಹು ಕಾಲ ಬೆಳಿಗ್ಗೆ 07:53 – 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:52 – 12:22ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:52 – 03:21ರ ವರೆಗೆ.
ಮೇಷ ರಾಶಿ: ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ತ್ರೀಯರು ನಿಮ್ಮ ಮೇಲೆ ಏನಾದರೂ ಆರೋಪ ಮಾಡಿಯಾರು. ಪಕ್ಷಪಾತ ಮಾಡುವುದು ಬೇಡ. ಸಂಬಂಧಿಸಿದ ವಿಚಾರಕ್ಕೆ ನಿಮ್ಮ ಸಮರ್ಥನೆ ಇರಲಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ. ನಿಮ್ಮ ಮನಸ್ಸು ಬಹಳ ದುರ್ಬಲವಾಗಿದ್ದು ಬಲಮಾಡಿಕೊಳ್ಳು ಮಾರ್ಗವನ್ನು ಕಂಡುಕೊಳ್ಳಿ. ವ್ಯಾಪಾರದಲ್ಲಿ ಲಾಭವನ್ನೇ ಗಮನದಲ್ಲಿಟ್ಟು ಉಳಿದುದನ್ನು ಮರೆಯುವಿರಿ. ನಿಮ್ಮ ಬಗ್ಗೆ ಅನುಕಂಪ ಬರುವುದು. ಪ್ರೀತಿಸಿದವರು ನಿಮಗೆ ಸಮಯ ಕೊಡದೇ ಬೇಸರಿಸಿಕೊಳ್ಳುವಿರಿ. ಆಪ್ತರನ್ನು ಬಿಟ್ಟುಕೊಡಲು ಮನಸ್ಸು ಒಪ್ಪದು. ಕುಟುಂಬದ ಭಿನ್ನಾಭಿಪ್ರಾಯವು ಸರಿಯಾಗುವುದು. ತಾಯಿಯು ನಿಮ್ಮ ಪರವಾಗಿ ನಿಲ್ಲುವಳು. ವಾಹನ ಖರೀದಿಸುವ ಯೋಚನೆ ಮಾಡವಿರಿ. ಸುಮ್ಮನೇ ಕುಳಿತರೆ ನಕಾರಾತ್ಮಕ ಯೋಚನೆಯು ಬರುವುದು.
ವೃಷಭ ರಾಶಿ: ಸ್ತ್ರೀಯರಿಂದ ಲಾಭವನ್ನು ಪಡೆಯುವಿರಿ. ಇಂದಿನ ಸ್ನೇಹಿತರ ಭೇಟಿಯಿಂದ ನಿಮ್ಮಲ್ಲಿ ಉತ್ಸಾಹವನ್ನು ಜಾಗರೂಕಗೊಳಿಸುವುದು. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ ಸಮಯವನ್ನು ವ್ಯರ್ಥ ಮಾಡುವಿರಿ. ಮಾತಿನಲ್ಲಿ ಮಾರ್ದವವು ಇಲ್ಲವಾಗುವುದು. ಅತಿಯಾದ ಭಾರದ ವಸ್ತುಗಳನ್ನು ಒಯ್ಯುವಿರಿ. ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸುವುದು ಬೇಡ. ಅಸಾಮಾನ್ಯ ವಿಚಾರವನ್ನು ಸರಳೀಕರಿಸುವಿರಿ. ಇಂದು ಕೆಲವು ವಿಚಾರಕ್ಕೆ ನಿಮ್ಮ ಆಲಸ್ಯವು ವರವಾಗುವುದು. ಉದ್ಯೋಗದ ಸ್ಥಳದಲ್ಲಿ ಯಾರ ಜೊತೆಯೂ ಕಲಹ ಮಾಡಿಕೊಳ್ಳುವುದು ಬೇಡ. ನಿಮ್ಮ ಪರಿಸ್ಥಿತಿಯನ್ನು ಆಪ್ತರಿಗೆ ಹೇಳಿ ಸಮಾಧಾನ ಪಡುವಿರಿ. ಯಾವ ಕಾರ್ಯಕ್ಕೂ ಧೈರ್ಯದಿಂದ ಮುನ್ನುಗ್ಗುವುದು ಬೇಡ.
ಮಿಥುನ ರಾಶಿ: ನಿರೀಕ್ಷಿತ ಸುದ್ದಿಯಿಂದ ನಿಮ್ಮಲ್ಲಿ ಖುಷಿಯು ಹೆಚ್ಚಾಗುವುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ಕೋಪವು ಹೆಚ್ಚಾಗಿರುವುದು. ದೇಹಾರೋಗ್ಯವು ಸರಿಯಾಗಿ ಇಲ್ಲದ ಕಾರಣ ಮನಸ್ಸು ಸರಿಯಾಗಿ ಕೆಲಸ ಮಾಡದು. ಉದ್ಯೋಗದ ಕಾರಣದಿಂದ ಬೇರೆ ಕಡೆ ಇದ್ದರೂ ಮನೆಯ ನೆನಪು ಕಾಡುವುದು. ಉದ್ಯೋಗವು ಸಾಕು ಎನಿಸಬಹುದು. ಅತಿಯಾದ ಒತ್ತಡದಿಂದ ಹೊರಬರಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಓದು ಹೆಚ್ಚು ಫಲಿಸುವುದು. ಅನಗತ್ಯ ಓಡಾಟದಿಂದ ನಿಮಗೆ ಬೇಸರವಾಗಲಿದೆ. ಸಂಗಾತಿಯನ್ನು ನೀವು ಇಂದು ದೂರ ಮಾಡಿಕೊಳ್ಳುವಿರಿ. ಒಂಟಿಯಾಗಿ ಇರಲು ನಿಮಗೆ ಆಗದು.
ಕಟಕ ರಾಶಿ: ಸಮಯೋಚಿತ ನಿರ್ಧಾರಕ್ಕೆ ಎಲ್ಲರೂ ತಲೆದೂಗುವರು. ಪ್ರಭಾವೀ ವ್ಯಕ್ತಿಗಳಿಂದ ಇಂದಿನ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೆಟ್ಟವರ ಸಹವಾಸ ಸಿಗುವ ಸಾಧ್ಯತೆ ಇದೆ. ನಂಬಿಕೆಯನ್ನು ಕಳೆದುಕೊಳ್ಳಬಹುದು. ನಿಮಗೆ ಸಂಬಂಧಿಸದ ವಿಚಾರದಲದಲಿ ಹೆಚ್ಚು ಮಾತನಾಡುವಿರಿ. ಸಿಕ್ಕಿದ್ದನ್ನು ಜೋಪಾನವಾಗಿ ಇಟ್ಟುಕೊಳ್ಳುವ ಬಗ್ಗೆ ಚಿಂತಿಸುವುದು ಉತ್ತಮ. ನಿಮಗೆ ಅನೇಕ ವಿಚಾರಗಳಿಗೆ ಸಾಂತ್ವನ ಸಿಗಬಹುದು. ಸ್ತ್ರೀಯರು ಹೆಚ್ಚಿನ ಸಮಯವನ್ನು ಸೌಂದರ್ಯ ವರ್ಧನೆಗೆ ಮೀಸಲಿಡುವಿರಿ. ಹೆಚ್ಚು ಆಡಂಬರವನ್ನು ನೀವು ಇಷ್ಟಪಡುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಅಧಿಕವಾಗಿ ಖರೀದಿಸುವಿರಿ. ಸ್ವೇಚ್ಛೆಯಿಂದ ಇಂದಿನ ವ್ಯವಹಾರವು ಇರುವುದು.
ಸಿಂಹ ರಾಶಿ: ಮನೆಯಲ್ಲಿ ಬಂಧುಗಳ ಸಮಾಗಮವು ಇರುವುದು. ಮದಿನ ಮಾನಸಿಕ ಒತ್ತಡದಿಂದ ನೀವು ಹೊರಬರಲು ಕಷ್ಟವಾದೀತು. ಮನೋರಂಜನೆಯಲ್ಲಿ ನೀವು ಪಾಲ್ಗೊಳ್ಳುವಿರಿ. ಖರ್ಚಿನ ಮೇಲೆ ನಿಯಂತ್ರಣ ಸಾಧಿಸಬೇಕೆಂದಿದ್ದರೂ ಮತ್ತೆಲ್ಲೋ ಹರಿದು ಹೋಗುವುದು. ವೈವಾಹಿಕ ಜೀವನದ ಸುಖವು ಸಪ್ಪೆ ಎನಿಸಬಹುದು. ಭೂಮಿಯ ವ್ಯವಹಾರಕ್ಕೆ ಯಾರ ಜೊತೆಗಾದರೂ ಸೇರಿಕೊಳ್ಳುವಿರಿ. ಮಕ್ಕಳನ್ನು ಪಡೆಯುವ ಬಯಕೆ ಇರುವುದು. ಆರೋಗ್ಯದಲ್ಲಿ ವ್ಯತ್ಯಾಸವಾಗಿ ವೈದ್ಯರ ಸಲಹೆಯನ್ನು ಪಡೆದುಕೊಳ್ಳುವಿರಿ. ನೂತನ ವಸ್ತುಗಳ ಖರೀದಿಯನ್ನು ನೀವು ಮಾಡುವಿರಿ. ಗ್ರಾಹಕರನ್ನು ಹಿಡಿದಿಟ್ಟುಕೊಳ್ಳುವ ಕಲೆ ಗೊತ್ತಿದೆ. ನಿಮ್ಮನ್ನು ಗುರುತಿಸಬೇಕು ಎನ್ನುವ ಆಸೆ ಇರುವುದು. ನಿಮ್ಮ ಗುಣವು ದುರುಪಯೋಗವಾಗುವುದು.
ಕನ್ಯಾ ರಾಶಿ: ಇಷ್ಟದ ವಸ್ತುವನ್ನು ಖರೀದಿಸಿ ಅದನ್ನು ಸರಿಯಾಗಿ ಉಳಿಸಿಕೊಳ್ಳಾಲಾಗದು. ಜಾಣ್ಮೆಯು ಇಂದು ನಿಮ್ಮ ಉಪಯೋಗಕ್ಕೆ ಬರುವುದು. ಸ್ತ್ರೀಯರು ಅವರಿಗೆ ಬೇಕಾದ ಕಾರ್ಯವನ್ನು ಬಹಳ ನಾಜೂಕಿನಿಂದ ಮಾಡಿಸಿಕೊಳ್ಳುವರು. ಸಾರ್ವಜನಿಕ ಕ್ಷೇತ್ರದಲ್ಲಿ ಇಂದು ಹೆಚ್ಚು ಕಾಣಿಸಿಕೊಳ್ಳುವಿರಿ. ಅತಿಯಾದ ಪ್ರೀತಿಯಿಂದ ನಿಮಗೇ ತೊಂದರೆಯಾಗುವುದು. ಹಣದ ಸಂಪಾದನೆಗೆ ವಿವಿಧ ಮಾರ್ಗಗಳು ಇದ್ದರೂ ಅದಾವುದೂ ನಿಮಗೆ ಸರಿ ಕಾಣಿಸದು. ಇಡೀ ದಿನದ ನಿಮ್ಮ ಶ್ರಮವು ವ್ಯರ್ಥವಾಗಬಹುದು. ಸ್ನೇಹ ಬಳಗವನ್ನು ದೊಡ್ಡದಾಗಿಸಿಕೊಳ್ಳುವಿರಿ. ನಿರ್ಮಾಣದ ಕಾರ್ಯವು ಬಹಳ ನಿಧಾನವಾಗುವುದು. ಯಾರೋ ಮಾಡಿದ ತಪ್ಪಿಗೆ ನಿಮ್ಮ ಕುತ್ತಿಗೆಗೆ ಬರುವುದು. ಅನಿರೀಕ್ಷಿತ ಗೆಲುವು ನಿಮಗೆ ಖುಷಿಕೊಡುವುದು. ಅಧಿಕಾರಿಗಳಿಗೆ ನಿಮ್ಮ ಬಗ್ಗೆ ತಪ್ಪು ಗ್ರಹಿಕೆ ಇರುವುದು.
ತುಲಾ ರಾಶಿ: ಇಂದು ಕಿರಿಯರು ನಿಮ್ಮ ಸೇವೆಯನ್ನು ಮಾಡುವರು. ನಿಮಗೆ ಸಂಬಂಧವಿಲ್ಲದ ವಿಚಾರದಲ್ಲಿ ನೀವು ಹಣವನ್ನು ಕಳೆದುಕೊಳ್ಳುವಿರಿ. ದುರಭ್ಯಾಸವು ಅತಿಯಾಗಿ ಮನೆಯಲ್ಲಿ, ಬಂಧುಗಳಿಂದ ನಿಮಗೆ ನಿಂದನೆಯಾಗಲಿದೆ. ಯಾರದೋ ಮಾತನ್ನು ಕೇಳಿ ಇಂದು ಕುಟುಂಬದವರ ಜೊತೆ ಕಲಹವಾಡುವಿರಿ. ನಿಮ್ಮ ತಿಳಿವಳಿಕೆಯನ್ನೇ ಪೂರ್ಣ ಸತ್ಯ ಎಂದು ತಿಳಿಯುವುದು ಬೇಡ. ಇಂದು ನಿಮಗೆ ಕಛೇರಿಯ ಕಾರ್ಯಗಳು ಅತಿಯಾಗುವುದು. ಸಂಗಾತಿಗೆ ನಿಮ್ಮ ನಡವಳಿಕೆಯಲ್ಲಿ ವ್ಯತ್ಯಾಸವು ಕಾಣಿಸುವುದು. ನಿಮ್ಮ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ದಾರಿ ಹುಡುಕಿ. ನಿಮ್ಮ ಪ್ರತಿಭೆಯಿಂದ ಉನ್ನತ ಹುದ್ದೆಗೆ ಏರುವಿರಿ. ಚಂಚಲವಾದ ಮನಸ್ಸಿನಿಂದ ನಿಮಗೆ ಅನೇಕ ಒಳ್ಳೆಯ ಆಯ್ಕೆಗಳು ತಪ್ಪಿಹೋಗುವುದು.
ವೃಶ್ಚಿಕ ರಾಶಿ: ಪ್ರಾಣಿಗಳಿಂದ ನಿಮಗೆ ಇಂದು ಭೀತಿ ಎದುರಾಗಬಹುದು. ವಾಹನದ ಕಾರಣಕ್ಕೆ ಮನೆಯಲ್ಲಿ ಕಲಹವಾಗಬಹುದು. ಹೂಡಿಕೆಯಿಂದ ನಿಮಗೆ ಲಾಭಾಂಶವು ಸಿಗುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಆಸಕ್ತಿ ಇದ್ದರೂ ಓದಿ ಜೀರ್ಣಿಸಿಕೊಳ್ಳಲು ಆಗದು. ಯಾರನ್ನೋ ಸಂಶಯಿಸುತ್ತ ಕುಳಿತುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಬೇಕಾದಲ್ಲಿ ಮಾತ್ರ ಹೇಳಿ. ಇಂದಿನ ನಿಮ್ಮ ವ್ಯವಹಾರವು ಅಧಿಕವಾದ ಯಾವ ಲಾಭವನ್ನೂ ತಂದುಕೊಡದು. ಶಿಸ್ತನ್ನು ರೂಢಿಸಿಕೊಳ್ಳುವ ಅನಿವಾರ್ಯತೆ ಎದುರಾದೀತು. ಧಾರ್ಮಿಕ ವಿಚಾರದಲ್ಲಿ ನೀವು ನಂಬಿಕೆಯನ್ನು ಕಳೆದುಕೊಳ್ಳುವಿರಿ. ನೀವು ಹೋಗುವ ಪ್ರಯಾಣವು ಸ್ಥಗಿತಗೊಂಡಿದ್ದು ನಿಮಗೆ ಒಳ್ಳೆಯದೇ. ಆಡಳಿತಾತ್ಮಕ ವಿಚಾರದಲ್ಲಿ ನಿಮಗೆ ಹಿನ್ನಡೆ ಇರುವುದು.
ಧನು ರಾಶಿ: ತಮಾಷೆಗೆ ಆಡಿದ ಮಾತು ಕಲಹವಾಗಿ ಪರಿವರ್ತಿತವಾದೀತು. ಸರ್ಕಾರದ ಅಧಿಕಾರಗಳ ಭಯವು ಇರಲಿದೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ. ಆಹಾರ ವ್ಯತ್ಯಾಸದಿಂದ ಹೊಟ್ಟೆಯಲ್ಲಿ ಶೂಲೆ ಕಾಣಿಸಿಕೊಳ್ಳಬಹುದು. ಮನೆಯ ಔಷಧಿಯಿಂದ ಅದನ್ನು ಸರಿ ಮಾಡಿಕೊಳ್ಳಿ. ನಿಮಗೆ ಯಾವುದಾದರೂ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಕರೆ ಬರಬಹುದು. ಇಂದು ಸಾಲದಿಂದ ನೀವು ಮುಕ್ತರಾಗಿ ಸ್ವಲ್ಪ ನೆಮ್ಮದಿ ಪಡುವಿರಿ. ಕೃಷಿಕರು ತಮ್ಮ ಉತ್ಪನ್ನದಿಂದ ಅಲ್ಪ ಲಾಭ ಪಡೆವರು. ವಿನಾಕಾರಣ ಇನ್ನೊಬ್ಬರ ಮೇಲೆ ಸಿಟ್ಟಾಗುವುದು ಬೇಡ. ಇನ್ನೊಬ್ಬರ ಮಾತನ್ನು ಕೇಳುವ ಸಹನೆ ಇರಲಿ. ನಿಮ್ಮ ಪ್ರೇಮ ಪ್ರಕರಣವು ಹೊಸ ರೂಪವನ್ನು ಪಡೆದುಕೊಳ್ಳಬಹುದು. ದೂರ ಪ್ರಯಾಣವನ್ನು ಇಂದು ಮಾಡಬೇಡಿ. ಧಾರ್ಮಿಕ ಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ. ಕೆಲಸದಲ್ಲಿ ನಿಮಗೆ ಗೊಂದಲ ಇರುವುದು. ಸಭೆಯಲ್ಲಿ ನಿಮ್ಮ ಹೆಸರನ್ನು ಪ್ರಸ್ತಾಪಿಸಬಹುದು.
ಮಕರ ರಾಶಿ: ಸಂಗಾತಿಗೆ ವಾಹನ ಖರೀದಿಗೆ ಒತ್ತಾಯಿಸುವಿರಿ. ಆಪ್ತರಿಂದ ನಿಮಗೆ ಇಷ್ಟವಾದ ವಸ್ತುವು ಪ್ರಾಪ್ತವಾಗುವುದು. ಆಕಸ್ಮಿಕವಾಗಿ ಅನಾರೋಗ್ಯವು ಕಾಣಿಸಿಕೊಳ್ಳಬಹುದು. ಸಾಲಪಡೆದವರು ನಿಮ್ಮನ್ನು ಪೀಡಿಸಬಹುದು. ಪಾಲುದಾರಿಕೆಯಲ್ಲಿ ಇಂದು ಸಣ್ಣ ವಿಚಾರಕಗಕೇ ಕಲಹವಾಗುವುದು. ಇಂದು ಅಗತ್ಯವಿರುವಷ್ಟು ಮಾತ್ರವೇ ಮಾತನಾಡಿ. ನಿಮ್ಮದಲ್ಲದ ವಸ್ತುಗಳನ್ನು ಯಾರಿಗಾದರೂ ಕೊಡುವ ಮೊದಲು ಯೋಚಿಸಿ. ಗೊತ್ತಿಲ್ಲ ಕೆಲಸಕ್ಕೆ ಹುಂಬುತನ ಬೇಡ. ನಿಮ್ಮ ಮಾತುಗಳು ಹಾಸ್ಯಾಸ್ಪದವಾಗುವುದು. ಹೊಸ ಯೋಜನೆಗಳನ್ನು ಶುರು ಮಾಡಲು ಆಪ್ತರ ಜೊತೆ ಚರ್ಚಿಸಿ. ಹಣಕಾಸಿನ ವ್ಯವಹಾರದಲ್ಲಿ ನೀವು ಸಹೋದರರ ಜೊತೆ ಕುಳಿತು ಮಾತನಾಡಿ. ಕುಟುಂಬದವರ ಎಲ್ಲರ ಭೇಟಿಯಾಗಿ ಅವರ ಜೊತೆ ಸಮಯವನ್ನು ಕಳೆಯುವಿರಿ. ಇಂದು ಮುಗಿಯಬೇಕಾದ ಕೆಲಸಗಳು ಉಳಿದುಕೊಳ್ಳುವುದು.
ಕುಂಭ ರಾಶಿ: ಆಕಸ್ಮಿಕ ಧನಲಾಭದಿಂದ ಅಲ್ಪ ತೃಪ್ತಿ ಸಿಗುವುದು. ರಪ್ತು ಉದ್ಯಮದಲ್ಲಿ ನಿಮಗೆ ಲಾಭವಾಗುವುದು. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ಪರೀಕ್ಷೆಯಲ್ಲಿ ನೀವು ಅಂದುಕೊಂಡಷ್ಟು ಫಲಿತಾಂಶ ಸಿಗದು. ಸಂಗಾತಿಯು ನಿಮಗೆ ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ಬೇಸರ ತರಿಸುವರು. ಮೈ ಚಳಿಯನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ನಿಮಗಾದ ಸಹಾಯವನ್ನು ನೀವು ಸ್ಮರಿಸಿಕೊಳ್ಳುವಿರಿ. ಅಧಿಕಾರಿಗಳ ಪ್ರಶ್ನೆಗೆ ನಿಮ್ಮ ಉತ್ತರವು ಸರಿಯಾಗಿ ಇರಲಿ. ಸಿಟ್ಟನ್ನು ಬಿಟ್ಟು ಶಾಂತವಾಗಿ ಸಮಾಧಾನ ಚಿತ್ತದಿಂದ ಮಾತನಾಡಿ. ನೆರಹೊರೆಯರ ಸಂಕಷ್ಟಕ್ಕೆ ನೀವು ಇಂದು ನೆರವಾಗುವಿರಿ. ಕಛೇರಿಯಲ್ಲಿ ನೀವು ಎಲ್ಲ ಕೆಲಸಗಳನ್ನು ಮುಗಿಸಿಕೊಂಡು ಅರಾಮಾಗಿ ಇರುವಿರಿ.
ಮೀನ ರಾಶಿ: ಇಂದು ನಿಮ್ಮ ಜೀವನ ಸಂಗಾತಿಯನ್ನು ಆಶ್ಚರ್ಯಗೊಳಿಸುವಿರಿ. ನಿಮ್ಮ ಎಲ್ಲ ಕಾರ್ಯವನ್ನು ಬಿಟ್ಟು ಇಂದು ನೀವು ಅವರ ಜೊತೆ ಸಮಯವನ್ನು ಕಳೆಯುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಆರೋಗ್ಯವು ನಿನ್ನೆಗಿಂತ ಉತ್ತಮವಾಗಿದ್ದು, ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟಮಾಡುವ ಆಲೋಚನೆ ಇರಲಿದೆ. ನಿಮ್ಮ ಸ್ನೇಹಿತರಲ್ಲಿ ಇಂದು ದೊಡ್ಡ ಸಾಲವನ್ನು ಕೇಳುವಿರಿ. ಸ್ವೋದ್ಯೋಗವನ್ನು ಮಾಡುತ್ತಿದ್ದರೆ ಸ್ವಲ್ಪ ನಷ್ಟವಾಗಬಹುದು. ಕುಟುಂಬವು ನಿಮ್ಮ ಜೊತೆಗೆ ನಿಲ್ಲುವುದು. ಹಳೆಯ ವಿಚಾರಗಳನ್ನು ನೀವು ಮತ್ತೆ ಕೆದಕುವಿರಿ. ಬಾಯಿ ಮಾತಿನ ಯಾವುದನ್ನೂ ದಾಖಲೆಯಾಗಿ ಪಡೆಯದೇ ಬರಹದ ಮೂಲಕ ವ್ಯಕ್ತಪಡಿಸಿ.
ಲೋಹಿತಶರ್ಮಾ – 8762924271 (what’s app only)