ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಮಂಗಳವಾರ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ವಜ್ರ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06-22ಕ್ಕೆ, ಸೂರ್ಯಾಸ್ತ ಸಂಜೆ 06 – 19ಕ್ಕೆ, ರಾಹು ಕಾಲ ಮಧ್ಯಾಹ್ನ 03:21 – 4:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:23 – 10:52ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:22 – 13:51ರ ವರೆಗೆ.
ಮೇಷ ರಾಶಿ: ವಾಹನ ಖರೀದಿಗೆ ಹೆಚ್ಚು ಒತ್ತು ಕೊಡಲಿದ್ದೀರಿ. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ಅಧಿಕ ವೇತನದ ಉದ್ಯೋಗಕ್ಕೆ ಅವಕಾಶವು ಬರಬಹುದು. ಯೋಚಿಸಿ ತೀರ್ಮಾನ ಮಾಡಿ. ಸ್ನೇಹಕ್ಕೆ ಒತ್ತಾಯ ಮಾಡುವುದು ಬೇಡ. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಆಗುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ಮೃಷ್ಟಾನ್ನ ಭೋಜನವು ಸಿಗಲಿದೆ. ಅಭ್ಯಾಸ ಇಲ್ಲದ ಆಹಾರವನ್ನು ಸೇವಿಸುವುದು ಬೇಡ. ಕೆಲವು ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ ಎನಿಸಬಹುದು. ಉತ್ಸಾಹದಿಂದ ನಿಮಗೆ ಕೆಲವು ಕಾರ್ಯಗಳು ಸಾಧ್ಯವಾಗುವುದು. ಕಾರ್ತಿಕೇಯನ ಸ್ಮರಣೆಯನ್ನು ಮಾಡಿ.
ವೃಷಭ ರಾಶಿ: ಶತ್ರುಗಳಿಂದ ಏನಾದರೂ ತೊಂದರೆ ಆಗಬಹುದು. ಹಣವನ್ನು ಕೊಡಲು ಯಾರಾದರೂ ಪೀಡಿಸಬಹುದು. ಮಕ್ಕಳಿಗೆ ಧೈರ್ಯವನ್ನು ಹೇಳುವಿರಿ. ಜ್ವರವು ಕಾಣಿಸಿಕೊಂಡೀತು. ಸ್ನೇಹಿತರನ್ನು ಕಳೆದುಕೊಳ್ಳುವಿರಿ. ಇಷ್ಟಪಡುವವರಿಗೆ ಸಮಯವನ್ನು ಕೊಡಲಾಗದು. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಹೊಗಳುವರು. ಪುಣ್ಯಸ್ಥಳಕ್ಕೆ ಹೋಗಲು ಇಚ್ಛಿಸುವಿರಿ. ನಿಮ್ಮ ದಾರಿಯನ್ನು ಸುಗಮ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ನೀವು ಯಾರ ಸಹಕಾರವನ್ನೂ ಅನಪೇಕ್ಷಿತವಾದೀತು. ವೈದ್ಯ ವೃತ್ತಿಯಲ್ಲಿ ಇರುವವರು ಯಶಸ್ಸನ್ನು ಗಳಿಸುವರು. ನಿಮಗೆ ಅನೇಕ ವಿಚಾರಗಳನ್ನು ತಿಳಿಯಬೇಕು ಎಂಬ ಆಸೆಯು ಅತಿಯಾಗುವುದು. ಹೊಸ ಉದ್ಯೋಗಕ್ಕೆ ಪ್ರವೇಶ ಪಡೆಯುವಿರಿ. ನಿಮ್ಮ ಅನುಕೂಲವನ್ನು ನೋಡಿ ಖರ್ಚು ಮಾಡಿ. ನಿಮ್ಮ ವರ್ತನೆಯು ಸಂಗಾತಿಗೆ ಇಷ್ಟವಾಗದು.
ಮಿಥುನ ರಾಶಿ: ನಿಮ್ಮ ಕೆಲಸದ ಸ್ಥಾನವೂ ಹುದ್ದೆಯೂ ಎರಡೂ ಬದಲಾದೀತು. ನಿಮ್ಮ ಮನಸ್ಸು ಕೆಲವು ಮಾತಿನಿಂದ ದುರ್ಬಲವಾಗಬಹುದು. ಕಾಲಹರಣಕ್ಕೆ ಯಾರ ಜೊತೆಗಾದರೂ ಮಾತನಾಡುತ್ತಾ ಇರುವಿರಿ. ನೀವು ವಿರಾಮವನ್ನು ಆನಂದದಿಂದ ಕಳೆಯುವಿರಿ. ಸ್ನೇಹಿತರ ಮೇಲೆ ಸಂದೇಹ ಉಂಟಾಗಬಹುದು. ಹಣಕಾಸಿನ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದಿಲ್ಲ. ಕಚೇರಿಯಲ್ಲಿ ನಿಮ್ಮನ್ನು ನೋಡುವ ದೃಷ್ಟಿಯು ಬದಲಾಗುವುದು. ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಸಹಾಯ ಪಡೆಯಿರಿ. ಒಂದಿಷ್ಟು ಕಾರ್ಯದಲ್ಲಿ ಒತ್ತಡವಿರಲಿದೆ. ನಿಮ್ಮದೇ ಬಳಗವನ್ನು ಮಾಡಿಕೊಂಡು ಸಮಯವನ್ನು ಕಳೆಯುವಿರಿ. ಯಾರ ಒತ್ತಾಯಕ್ಕೂ ಮಣಿಯದೇ ನಿರ್ಧಾರವನ್ನು ಬದಲಿಸಿಕೊಳ್ಳಲು ಹೋಗುವುದಿಲ್ಲ. ಆರೋಗ್ಯವು ಸರಿಯಾಗಲು ಸಮಯ ಬೇಕು.
ಕಟಕ ರಾಶಿ: ವ್ಯಾಪಾರವು ಸ್ವಲ್ಪ ಲಾಭವನ್ನು ಕೊಡಬಹುದು. ಇಷ್ಟವಾದುದನ್ನು ಪಡೆದುಕೊಳ್ಳಲು ನಿಮಗೆ ಆಸಕ್ತಿ ಇರುವುದು. ಸಂಗಾತಿಯ ಮಾನಸಿಕ ಸ್ಥಿತಿಯು ಬದಲಾಗಬಹುದು. ಹತ್ತಾರು ವಿಚಾರಗಳನ್ನು ನೀವು ಏಕಕಾಲದಲ್ಲಿ ಚಿಂತಿಸಿ ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖಿಸುವಿರಿ. ನಿಮ್ಮರನ್ನು ನೀವು ದೂರ ಮಾಡಿಕೊಳ್ಳುವಿರಿ. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನಿರಾಕರಿಸುವಿರಿ. ಪ್ರೇಮ ವ್ಯವಹಾರವನ್ನು ಮನೆಯಲ್ಲಿ ತಿಳಿಸಲು ನೀವು ಭಯಪಡುವಿರಿ. ವಾಹನ ಚಾಲನೆಯಲ್ಲಿ ನುರಿತವರಾದರೂ ಎಚ್ಚರಿಕೆಯಿಂದ ಓಡಿಸಿ. ನಿಮ್ಮ ನೇರ ನುಡಿಯಿಂದ ಇನ್ನೊಬ್ಬರಿಗೆ ನೋವಾದೀತು ಎಂಬ ಆಲೋಚನೆ ಇರಲಿ. ಒಂದೇ ಕಾರ್ಯವನ್ನು ಬಹಳ ದಿನಗಳ ವರೆಗೆ ಮಾಡುವಿರಿ.
ಸಿಂಹ ರಾಶಿ: ಉದ್ಯೋಗದಲ್ಲಿ ನಿಮ್ಮ ಬದಲಾವಣೆ ಆಗಲಿದ್ದು ಆಶ್ಚರ್ಯದ ಸಂಗತಿಯಾದೀತು. ಆದಾಯಕ್ಕಾಗಿ ಅನ್ಯ ಮಾರ್ಗವನ್ನೂ ನೀವು ಅವಲಂಬಿಸಬಹುದು. ದೇವತಾಕಾರ್ಯದಿಂದ ನಿಮಗೆ ಇಂದಿನ ಎಲ್ಲ ಕಾರ್ಯಗಳೂ ಸುಗಮವಾಗುವುದು. ಆರ್ಥಿಕವಾಗಿ ವಂಚನೆಗೆ ಸಿಲುಕಿದ್ದು ಎಷ್ಟೋ ದಿನದ ಮೇಲೆ ಗೊತ್ತಾಗುವುದು. ಎಂದೋ ನಿರೀಕ್ಷಿಸಿದ್ದ ಬಡ್ತಿಯು ಇಂದು ಸಿಗುವುದು. ಯಾರಾದರೂ ಸಂಬಂಧದ ನಡುವೆ ಹುಳಿ ಹಿಂಡುವ ಕೆಲಸಕ್ಕೆ ಬರಬಹುದು. ಮಾತಿನ ನಿಯಂತ್ರಣವು ತಪ್ಪಬಹುದು. ವಿಳಂಬದ ಕಾರ್ಯದಿಂದ ನೀವು ವ್ಯಥೆ ಪಡುವಿರಿ. ನಿಮಗೆ ಧೈರ್ಯವನ್ನು ತುಂಬಲು ಸಂಗಾತಿಯ ಸಹಾಯವು ಸಿಗುವುದು. ನಿದ್ರಾಹೀನತೆಯಿಂದ ನಿಮಗೆ ಕೆಲವು ತೊಂದರೆಗಳು ಆಗಬಹುದು. ಅನಪೇಕ್ಷಿತ ಖರ್ಚನ್ನು ಮಾಡುವುದು ಬೇಡ.
ಕನ್ಯಾ ರಾಶಿ: ನಿಮ್ಮನ್ನು ಇಂದು ಸ್ನೇಹಿತರು ವಿಡಂಬನೆ ಮಾಡುವರು. ಮನಸ್ಸನ್ನು ನಿಯಂತ್ರಿಸಲು ದುಶ್ಚಟಕ್ಕೆ ಬೀಳುವಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣವು ಹಾಳಾಗಬಹುದು. ಕಲಿಕೆಯ ವಿಚಾರದಲ್ಲಿ ನೀವು ಹಿಂದುಳಿಯುವಿರಿ. ಪ್ರೀತಿಯಿಂದ ನಿಮಗೆ ದುಃಖವಾಗುವ ಸಂದರ್ಭವಿದೆ. ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪ ಮಾಡಿಕೊಳ್ಳುವಿರಿ. ಶತ್ರುಗಳೂ ನಿಮಗೆ ಪರೋಕ್ಷವಾಗಿ ಉಪದೇಶ ಕೊಡಬಹುದು. ಮಕ್ಕಳಿಗಾಗಿ ನಿಮ್ಮನ್ನು ಬದಲಾವಣೆ ಮಾಡಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅನಾದರ ಬೇಡ. ನಿಮ್ಮ ವಿದ್ಯಾರ್ಥಿಗಳಿಂದ ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಳ್ಳುವಿರಿ. ನಿಮ್ಮ ಸಮಸ್ಯೆಯು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡಿಕೊಳ್ಳುವಿರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಕೆಲವು ಸಮಯ ತೊಂದರೆ ಕೊಡುವುದು. ನಿಮ್ಮವರನ್ನು ನೀವು ಸಂಪೂರ್ಣವಾಗಿ ಮರೆಯುವಿರಿ. ಧನ್ವಂತರಿಯ ಉಪಾಸನೆ ಅಗತ್ಯ.
ತುಲಾ ರಾಶಿ: ಉದ್ಯೋಗದಿಂದ ತೆಗೆದುಹಾಕುವ ಭೀತಿಯು ನಿಮ್ಮನ್ನು ಕಾಡಬಹುದು. ಭೂಮಿಯ ಖರೀದಿಯನ್ನು ಮುಂದೂಡಿ. ವಿನಾಕಾರಣ ಸಾಲದಲ್ಲಿ ಸಿಕ್ಕಿಕೊಳ್ಳುವುದು ಬೇಡ. ಅಪರಿಚಿತರ ಜೊತೆ ಸ್ವಲ್ಪ ಹದವಾಗಿ ವರ್ತಿಸಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ನಿಮಗೆ ಕಷ್ಟವಾದೀತು. ಸ್ನೇಹಿತರು ಪ್ರೀತಿಯಿಂದ ನಿಮಗೆ ಉಡುಗೊರೆ ಕೊಡುವರು. ತಾಯಿಯ ಪ್ರೀತಿಯು ಇಂದು ನಿಮಗೆ ಹೆಚ್ಚು ಸಿಗಲಿದೆ. ನಿಮ್ಮ ಮನಸ್ತಾಪವನ್ನು ಕೋಪದ ಮೂಲಕ ಹೊರಹಾಕುವಿರಿ. ನಿಮ್ಮ ನಡವಳಿಕೆಯ ಬಗ್ಗೆ ಹಿರಿಯರು ಮಾತನಾಡಿಕೊಳ್ಳುವರು. ಸಂಗಾತಿಯ ಜೊತೆ ಕಲಹವಾಡಿ ಪಶ್ಚಾತ್ತಾಪಪಡಬೇಕಾದೀತು. ನಿಮ್ಮ ಯೋಜನೆಯನ್ನು ಪೂರ್ಣವಾಗಿ ನಿರ್ವಹಿಸಲು ಸಾಧ್ಯವಾಗದು. ನಿಮ್ಮನ್ನು ಸಮ್ಮಾನಿಸಬಹುದು. ಸಣ್ಣ ವಿಚಾರದಲ್ಲಿ ಇನ್ನೊಬ್ಬರ ಜೊತೆ ಕಲಹ ಬೇಡ. ಮರೆತು ಮುನ್ನಡೆಯುವುದು ಉತ್ತಮ. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ.
ವೃಶ್ಚಿಕ ರಾಶಿ: ಮಕ್ಕಳ ವಿಚಾರದಲ್ಲಿ ನಿಮಗೆ ಸಂತೋಷ ಕಾದಿದೆ. ಮನೆಯಲ್ಲಿ ಇಂದು ಸಂಭ್ರಮದ ವಾತಾವರಣ ಇರುವುದು. ಸಹೋದರಿಯರ ಭೇಟಿಯು ನಿಮಗೆ ಸಂತೋಷ ಕೊಡುವುದು. ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆ ಆಗುವ ಸಾಧ್ಯತೆ ಇದೆ. ನಿಮಗೆ ಯಾರಿಂದಲಾದರೂ ಸಹಾಯ ಕೇಳಲು ಸಂಕೋಚವಾದೀತು. ವ್ಯಾಪಾರದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ಇಂದು ನೀವು ಒತ್ತಡವನ್ನು ತಂದುಕೊಳ್ಳಬಾರದು ಎಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಸೃಷ್ಟಿಯಾಗಬಹುದು. ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಲು ನೀವು ಪ್ರಯತ್ನಿಸಬೇಕು. ಉದ್ಯಮದಲ್ಲಿ ಹೊಸ ಕ್ರಾಂತಿಯನ್ನು ಮಾಡುವ ಸಾಧ್ಯತೆ ಇದೆ. ನಿಮ್ಮ ಕಾರ್ಮಿಕರು ನಿಮ್ಮ ಕಾರ್ಯವನ್ನು ಸರಿಯಾಗಿ ಮಾಡದೇ ಇರಬಹುದು. ಸುಬ್ರಹ್ಮಣ್ಯನ ಆರಾಧನೆಯನ್ನು ನೀವು ಇಂದು ಮಾಡಿ.
ಧನು ರಾಶಿ: ಹೊಸ ಉದ್ಯೋಗಕ್ಕಾಗಿ ದೂರದ ಊರಿಗೆ ಹೋಗಬೇಕಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನೂ ಕೊಡುವರು. ಹಳೆಯ ರೋಗವೇ ಪುನಃ ಕಾಣಸಿಕೊಳ್ಳುವುದು. ಇಂದು ನೀವು ಸಮಾನ್ಯಾರಂತೆ ತೋರುವಿರಿ. ನಿಮ್ಮ ರಹಸ್ಯ ವಿಚಾರವನ್ನು ಆಪ್ತರಿಗೆ ಹೇಳುವಿರಿ. ಬಾಡಿಗೆ ಮನೆಯವರು ಮನೆಯನ್ನು ಬದಲಾಯಿಸುವರು. ಭೂವ್ಯವಹಾರವನ್ನು ಮಾಡುವವರಿಗೆ ಇಂದು ಅಧಿಕ ಲಾಭವು ಆಗುವುದು. ಕಡಿಮೆಯಾಗುತ್ತಿದ್ದ ಆರೋಗ್ಯದಿಂದ ಸಮಾಧಾನಸಿಗಲಿದೆ. ನಿಮ್ಮನ್ನು ತಿಳಿದವರೇ ನಿಮಗೆ ವಂಚನೆ ಮಾಡುವರು. ಮನೆಯ ಕೆಲಸದಲ್ಲಿ ಇಂದು ಆಸಕ್ತಿ ಕಡಿಮೆ ಆಗುವುದು. ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿಮೆ ಬೇಡ. ಇಂದಿನ ರಾತ್ರಿಯ ಕನಸು ನಿಮ್ಮ ನೆಮ್ಮದಿಯನ್ನು ಕೆಡಿಸೀತು.
ಮಕರ ರಾಶಿ: ಯಂತ್ರಗಳ ಮಾರಾಟದಿಂದ ಲಾಭವನ್ನು ಗಳಿಸಿಕೊಳ್ಳುವಿರಿ. ಉದ್ಯೋಗವನ್ನು ಬದಲಿಸುವ ಆಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಅನ್ಯೋನ್ಯತೆ ಕಂಡುಬರುವುದು. ನೀವು ಮಾಡಬೇಕಂದುಕೊಂಡ ಕಾರ್ಯದಲ್ಲಿ ಜಯವಿರುವುದು. ಸ್ತ್ರೀರಿಂದ ಕಛೇರಿಯಲ್ಲಿ ಸಹಕಾರವು ಸಿಗಲಿದೆ. ಭೂಮಿಯ ಬಗ್ಗೆ ಆಸೆ ಕಡಿಮೆ ಆಗಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ. ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ತಂದೆಯ ಆರೋಗ್ಯವನ್ನು ಸರಿಪಡಿಸಲು ಹೆಚ್ಚು ಜವಾಬ್ದಾರಿಯನ್ನು ಹೊರಬೇಕಾದೀತು. ಮನಸ್ಸಿಗೆ ನೆಮ್ಮದಿ ಸಿಗುವ ಜಾಗಕ್ಕೆ ಹೋಗುವಿರಿ. ನಿಮ್ಮ ಮಾತುಗಳು ಅಹಂಕಾರದಂತೆ ತೋರಬಹುದು. ನಿಮಗೆ ಇಂದು ವೇತನವು ಸಿಗುವುದು.
ಕುಂಭ ರಾಶಿ: ನಿಮಗೆ ಬರಬೇಕಾದ ಹಣವನ್ನು ನೀವು ಬಿಟ್ಟುಕೊಡುವಿರಿ. ನಿಮ್ಮ ಮಕ್ಕಳು ಮಾತನ್ನು ಕೇಳರು. ಅನಿರೀಕ್ಷಿತ ಬಂಧುಗಳ ಆಗಮನದಿಂದ ಕೊಂಚ ಗಲಿಬಿಲಿ ಆಗುವುದು. ಅಕಾಲದ ಆಹಾರ ಸೇವನೆಯಿಂದ ಆರೋಗ್ಯವು ಕೆಡುವುದು. ಚಂಚಲ ಮನಸ್ಸನ್ನು ನೀವು ನಿಯಂತ್ರಿಸಲು ಆಗದು. ಇದರಿಂದ ತೀರ್ಮಾನ ಸರಿಯಾಗಿ ತೆಗೆದುಕೊಳ್ಳಲಾಗದು. ಕಛೇರಿಯಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸ ಮಾಡಲು ಆಗದು. ಉನ್ನತ ಅಧಿಕಾರಿಗಳ ಜೊತೆ ಸೆಣೆಸಾಡುವ ಸ್ಥಿತಿಯು ಬರಬಹುದು. ಸರ್ಕಾರದ ಕೆಲಸಕ್ಕೆ ನೀವು ಹಣವನ್ನು ಖರ್ಚುಮಾಡುವಿರಿ. ಇಂದು ನೀವು ಬಹಳ ಒತ್ತಡದಲ್ಲಿ ಇರುವಂತೆ ತೋರುವಿರಿ. ಅರಿವಿಲ್ಲದೇ ನೀವು ತಪ್ಪು ದಾರಿಗೆ ಹೋಗುವಿರಿ. ನಿಮ್ಮ ಬಳಿ ಹಣವಿದ್ದರೂ ಸರಿಯಾದ ಸಮಯಕ್ಕೆ ಸಿಗದು.
ಮೀನ ರಾಶಿ: ದೇಹಾಯಾಸವು ಇಂದು ಇರುವುದು. ಆತ್ಮೀಯರ ಜೊತೆ ಇದ್ದು ಹಣವನ್ನು ಖರ್ಚು ಮಾಡುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಕೆಲವು ಸಮಸ್ಯೆಗಳು ಎದುರಾಗಬಹುದು. ಮಕ್ಕಳ ಮೇಲೆ ನಿಮಗೆ ಅತಿಯಾದ ಮೋಹ ಬೇಡ. ವಿದ್ಯಾಭ್ಯಾಸದ ವಿಚಾರದಲ್ಲಿ ಯಾವ ಸಡಿಲಿಕೆಯನ್ನೂ ಮಾಡಿಕೊಳ್ಳದಿರಿ. ದಾಂಪತ್ಯದಲ್ಲಿ ನೀವು ಸಂತೋಷವಾಗಿರುವಿರಿ. ಬಂಧುಗಳನ್ನು ಕಳೆದುಕೊಳ್ಳುವಿರಿ. ಉದ್ಯಮಕ್ಕೆ ಸಂಬಂಧಿಸಿದಂತೆ ಆಪ್ತ ಸಮಾಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಿ. ದೂರಪ್ರಯಾಣದಿಂದ ಆಯಾಸವಾಗಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಯಾರದೋ ತಪ್ಪು ನಿಮ್ಮ ತಲೆಯ ಮೇಲೆ ಬರಬಹುದು. ಶಿವಕವಚವನ್ನು ಪಠಿಸಿರಿ.
-ಲೋಹಿತಶರ್ಮಾ – 8762924271 (what’s app only)