Horoscope 04 Nov: ದಿನಭವಿಷ್ಯ, ಈ ರಾಶಿಯವರಿಗೆ ಸಾರ್ವಜನಿಕವಾಗಿ ಇರಲು ಭಯವಾಗಬಹುದು
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುನರ್ವಸೂ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:50 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:30 ರಿಂದ 07:56ರ ವರೆಗೆ.
ಮೇಷ ರಾಶಿ: ಸಾರ್ವಜನಿಕವಾಗಿ ಇರಲು ನಿಮಗೆ ಭಯವಾಗಬಹುದು. ಸ್ತ್ರೀಯರ ಜೊತೆ ವೈರವನ್ನು ಕಟ್ಟಿಕೊಳ್ಳಬೇಕಾದೀತು. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ಧಾರ್ಮಿಕ ಮುಖಂಡರ ಭೇಟಿಯಾಗುವುದು. ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು. ಏನಾದರೂ ಕೃಷಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ.
ವೃಷಭ ರಾಶಿ: ಸತ್ಪಾತ್ರರಿಗೆ ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸೃಷ್ಟಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ. ಯಾರದೋ ಮಾತಿನಿಂದ ಹೂಡಿಕೆ ಮಾಡಿ. ಆಧಿಕಾರದ ಆಮಿಷಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ನೀವು ನಂಬಿಕೆ ಇರುವಲ್ಲಿ ಅಪನಂಬಿಕೆ ತೋರುವುದು ಉಚಿತವಲ್ಲ.
ಮಿಥುನ ರಾಶಿ: ಸರ್ಕಾದ ಕೆಲಸವನ್ನು ಆಪ್ತ ಪ್ರಭಾವೀ ವ್ಯಕ್ತಿಗಳಿಂದ ಮಾಡಿಸಿಕೊಳ್ಳುವಿರಿ. ಅಧ್ಯಾತ್ಮದ ವಿಚಾರದಲ್ಲಿ ಆಸಕ್ತಿಯು ಹೆಚ್ ಅಗುವುದು. ಸುಮ್ಮನೇ ದೇಹಾಯಾಸವನ್ನು ಮಾಡಿಕೊಳ್ಳುವಿರಿ. ನೆರೆಯವರ ಜೊತೆ ಕಲಹವು ಬೇಡ. ನಂಬಿಕೆಯನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಇರುವುದು. ನಿಮ್ಮ ಅಸಹಾಯಕತೆಯು ಸಿಟ್ಟಾಗಿ ಪರಿಣಮಿಸಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ನಿಮಗೆ ನೆಮ್ಮದಿ. ಒಂಟಿಯಾಗಿ ಪ್ರಯಾಣ ಮಾಡುವುದು ಬೇಡ. ಸ್ವಂತ ಕೆಲಸಕ್ಕೆ ನೀವು ಸಮಯವನ್ನು ಕೊಡುವಿರಿ.
ಕಟಕ ರಾಶಿ: ನೂತನ ವೃತ್ತಿಪರರಿಗೆ ಉತ್ಸಾಹವು ಅಧಿಕವಾಗಿ ಇರಲಿದೆ. ಲೆಕ್ಕಾಚಾರದ ವಿಚಾರದಲ್ಲಿ ನಿಮಗೆ ಅಚ್ಚರಿ ಇರುವುದು. ಸತ್ಯವನ್ನು ನೋವಾಗದಂತೆ ತಿಳಿಸಿ. ಉಪಕಾರದ ವಿಚಾರದಲ್ಲಿ ನೀವು ಹಿಂದಿರುವಿರಿ. ವೃತ್ತಿಯು ಬೇಸರ ತರಿಸಬಹುದು. ಇಂದು ಸರ್ಕಾರಿ ನೌಕರರು ಅಧಿಕ ಕಾರ್ಯಗಳ ಕಡೆ ಗಮನ ಹರಿಸಬೇಕಾದೀತು. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ ಮಾಡಿ. ಹೊಸ ಉದ್ಯಮಕ್ಕೆ ನಿಮಗೆ ಧೈರ್ಯ ಸಾಲದು. ನಿಮ್ಮ ತಿಳಿವಳಿಕೆಯಿಂದ ಬರುವ ತೊಂದರೆಯನ್ನು ಪರಿಹರಿಸಿಕೊಳ್ಳುವಿರಿ. ಈ ದಿನದ ಕೊನೆಯಲ್ಲಿ ನಿಮ್ಮ ಆರೋಗ್ಯವು ಹದ ತಪ್ಪಬಹುದು. ವಾಹನ ಚಲಾವಣೆಯಲ್ಲಿ ನಿಯಂತ್ರಣ ತಪ್ಪಬಹುದು.
ಸಿಂಹ ರಾಶಿ: ಮಿತಿ ಮೀರಿದ ಕಾರ್ಯದ ಒತ್ತಡದಿಂದ ನಿಮಗೆ ಕಷ್ಟವಾದೀತು. ಸಲ್ಲದ ಅಪವಾದವು ಬರಲಿದ್ದು ಬೆಂಬಲವನ್ನು ನಿರೀಕ್ಷಿಸಬಹುದು. ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ವಿದೇಶದ ಸಂಪರ್ಕವು ವ್ಯಾಪಾರಕ್ಕಾಗಿ ಇರಲಿದೆ. ಅಪಮಾನವನ್ನು ಸಹಿಸಲಾಗದೇ ಎದುರಿಸಲೂ ಆಗದೇ ಹತಾಶೆಗೊಳ್ಳುವಿರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳು ಬಳಸಿಕೊಳ್ಳುವರು. ಎಂದೋ ಬಯಸಿದ ವಸ್ತುವುದು ಇಂದು ನಿಮಗೆ ಅನಿರೀಕ್ಷಿತವಾಗಿ ಸಿಗುವುದು. ಸಂಗಾತಿಯ ಆಯ್ಕೆಯಲ್ಲಿ ಗೊಂದಲ ಇರುವುದು. ಸಹೋದರಿಯ ನಡುವೆ ಆಪ್ತತೆಯು ಅಧಿಕವಾಗಬಹುದು.
ಕನ್ಯಾ ರಾಶಿ: ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಳಲು ನೋಡಬಹುದು. ಆಸ್ತಿಯ ದಾಖಲೆಗಳು ಕಾಣದೇ ಆತಂಕ ಉಂಟಾಗಬಹುದು. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ಸತ್ಯವನ್ನು ಮರೆಮಾಚಲು ತಂತ್ರವನ್ನು ಹೆಣೆಯಬಹುದು. ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ. ನಿಮ್ಮ ಅಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳುವಿರಿ. ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು. ನಿಮ್ಮ ಆದಾಯಕ್ಕೆ ತಕ್ಕಂತೆ ಜೀವನವಿರಲಿ. ಆಕರ್ಷಕವಾಗಿ ನೀವು ಇಂದು ಕಾಣಲಿದ್ದೀರಿ. ಮನೆಯ ನಿರ್ಮಣಾದ ಕನಸನ್ನು ಕಾಣುವಿರಿ. ಮಕ್ಕಳಿಂದ ಆರ್ಥಿಕ ಸಹಕಾರವು ಸಿಗುವುದು. ಒಂದೇ ದೃಷ್ಟಿಕೋನದಿಂದ ಉದ್ಯಮವನ್ನು ಚಿಂತಿಸುವುದು ಬೇಡ.
ತುಲಾ ರಾಶಿ: ಯಾವುದೇ ಏರಿಳಿತಗಳಿಲ್ಲದೇ ಒಂದೇ ಹದದಲ್ಲಿ ವ್ಯಾಪಾರವು ಇರುವುದು. ಮಕ್ಕಳ ವಿದ್ಯಾಭ್ಯಾಸವು ಪೂರ್ಣ ಸಮಾಧಾನ ಕೊಡದು. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ. ಮನೋವಿಕಾರವನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಮುಂದುವರಿಯುವಿರಿ. ಎಲ್ಲ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಕಾಣಬೇಕಾಗಬಹುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡುವುದಿಲ್ಲ. ಕುಟುಂಬ ಜೊತೆ ಸಮಯ ಕಳೆಯಲು ಆಗದು.
ವೃಶ್ಚಿಕ ರಾಶಿ: ಹೊಸ ಉದ್ಯಮದ ಬಗ್ಗೆ ನಿಮ್ಮ ತಲೆಯಲ್ಲಿ ಓಡುತ್ತಿರುವ ವಿಚಾರವನ್ನು ಹೇಳಿಕೊಳ್ಳಿ. ನಿಮ್ಮ ಮಾತಿನಿಂದ ಶತ್ರುಗಳು ಹುಟ್ಟಿಕೊಳ್ಳಬಹುದು. ಮೇಲಿಂದ ಮೇಲೆ ಬರುತ್ತಿರುವ ಆರೋಗ್ಯದ ತೊಂದರೆಯು ನಿಮಗೆ ಅಸತಂಕವನ್ನು ಉಂಟುಮಾಡಬಹುದು. ನಿಮ್ಮ ಕಾರ್ಯದಲ್ಲಿ ತಾಳ್ಮೆಯು ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು. ವಿದ್ಯಾರ್ಥಿಗಳು ತಮಗೆ ಬರುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಅಮೂಲ್ಯ ವಸ್ತುಗಳು ಕಣ್ಮರೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಆಗಮನದಿಂದ ಸಂತೋಷವು ಇರಲಿದೆ. ಆರೋಗ್ಯವು ಚೆನ್ನಾಗಿದ್ದು ಆಲಸ್ಯವನ್ನು ಬಿಡಬೇಕಾಗುವುದು.
ಧನು ರಾಶಿ: ನಂಬಿಕೆಯನ್ನು ಉಳಿಸಿಕೊಳ್ಳಲು ಬಹಳ ಶ್ರಮಪಡುವಿರಿ. ಧಾರ್ಮಿಕ ಆಚಣೆಯು ತೋರಿಕೆಗೆಂದು ಮಾಡುವಿರಿ. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ. ಒಪ್ಪಿಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವುದು ಆಗದು. ಸಂಗಾತಿಯ ಬೆಂಬಲವು ನಿಮ್ಮ ಕಾರ್ಯಗಳಿಗೆ ಸಿಗಲಿದೆ. ಅಗತ್ಯವಿದ್ದಾಗ ಮಾತ್ರ ಸಾಲದ ಬಗ್ಗೆ ಆಲೋಚಿಸಿ. ಸರ್ಕಾರಿ ಉದ್ಯೋಗದವರು ವರ್ಗಾವಣೆಯಿಂದ ದೂರವಿರಬೇಕಾಗಬಹುದು. ಗೃಹ ನಿರ್ಮಾಣದ ಕಾರ್ಯವನ್ನು ಕೆಲವು ದಿನ ಮುಂದೂಡುವುದು ಉತ್ತಮ. ನಿಮ್ಮ ಮನೆಯಲ್ಲಿ ಮಂಗಳ ಕಾರ್ಯಕ್ಕೆ ತಯಾರಿ ಆಗಬಹುದು. ಹಳೆಯ ರೋಗಗಳು ಮರುಕಳಿಸದಂತೆ ಎಚ್ಚರಿಕೆ ಬೇಕಾದೀತು. ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ, ಈ ದಿನ ನಿಮಗೆ ಉತ್ತಮ ಅವಕಾಶಗಳು ಸಿಗಬಹುದು.
ಮಕರ ರಾಶಿ: ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯರ ಪ್ರವೇಶದಿಂದ ಕೋಪಗೊಳ್ಳುವಿರಿ. ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಶಿಕ್ಷಕರು ವೇತನವನ್ನು ಹೆಚ್ಚಿಸಿಕೊಳ್ಳುವರು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ನಿಮ್ಮ ಮಕ್ಕಳ ವರ್ತನೆಯಿಂದ ಬೇಸರ ಆಗುವುದು. ಬೇರೆಯವರಿಂದ ದೂರನ್ನೂ ಕೇಳಬೇಕಾದೀತು. ವಿಚಲಿತವಾಗದೇ ತಾಳ್ಮೆಯಿಂದ ವ್ಯವಹರಿಸಿ. ನೀವು ಮಿತ್ರರ ಜೊತೆ ಪ್ರವಾಸಕ್ಕೆ ಹೋಗುವಿರಿ. ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರುವುದಿಲ್ಲ. ಕಲಾವಿದರಿಗೆ ಅವಕಾಶಗಳು ಕಡಿಮೆ ಸಿಗಬಹುದು.
ಕುಂಭ ರಾಶಿ: ಶ್ರಮಕ್ಕೆ ತಕ್ಕ ಫಲಿತಾಂಶವು ದೊರೆಯದಿದ್ದರೂ ನೆಮ್ಮದಿ ಇರಲಿದೆ. ಜಾಣ್ಮೆಯ ಮಾತಿಗೆ ಯಾರೂ ಮರುಳಾಗರು. ನಿಮಗೆ ಬೇರೆಯವರಿಂದ ಹಣವು ಸಹಾಯದ ರೂಪದಲ್ಲಿ ಬರಬಹುದು. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ. ನಿಮ್ಮ ಮೇಲಿನ ಪ್ರೀತಿ ಕಡಿಮೆ ಆಗುವುದು. ಉದ್ಯಮದ ತೊಂದರೆಯನ್ನು ಇಲ್ಲ ವಾಗಿಸುವುದು ನಿಮಗೆ ಸವಾಲಾದೀತು.
ಮೀನ ರಾಶಿ: ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ವ್ಯವಹಾರದಲ್ಲಿ ಹೆಚ್ಚಿನ ಲಾಭವು ಬರಬಹುದು. ಪ್ರಸಾರ ಮಾಧ್ಯಮದವರು ದೂರ ಹೀಗಬೇಕಾಗಬಹುದು. ಸಾಹಿತ್ಯ ಕ್ಷೇತ್ರದಲ್ಲಿ ಇರುವವರಿಗೆ ಸಮ್ಮಾನ ಸಿಗುವುದು. ಅವಿವಾಹಿತರು ಕಂಕಣಬಲವನ್ನು ನಿರೀಕ್ಷಿಸಬಹುದು. ಪ್ರಸಿದ್ಧ ಸಂಸ್ಥೆಗೆ ಹೂಡಿಕೆ ಮಾಡಲಿದ್ದೀರಿ. ಯಾರ ಜೊತೆಗಾದರೂ ವಿವಾದವಾಗುವ ಸಾಧ್ಯತೆ ಇದೆ. ಬುದ್ಧಿವಂತಿಕೆಯಿಂದ ನಡೆದುಕೊಂಡರೆ ಸಮಸ್ಯೆಗಳನ್ನು ನಿವಾರಿಸಬಹುದು.
ಲೋಹಿತಶರ್ಮಾ 8762924271 (what’s app only)