Horoscope 05 Oct: ದಿನಭವಿಷ್ಯ, ವಿವಾಹದ ವಿಚಾರಕ್ಕೆ ಮನೆಯಲ್ಲಿ ಶಾಂತಿ ಕದಡಬಹುದು-ಎಚ್ಚರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 12:15 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಅಕ್ಟೋಬರ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 05 Oct: ದಿನಭವಿಷ್ಯ, ವಿವಾಹದ ವಿಚಾರಕ್ಕೆ ಮನೆಯಲ್ಲಿ ಶಾಂತಿ ಕದಡಬಹುದು-ಎಚ್ಚರ
ರಾಶಿ ಭವಿಷ್ಯ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ಮೇಷ ರಾಶಿ : ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ಮಕ್ಕಳ ಬಗ್ಗೆ ಕಾಳಜಿ ಇರಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಆಪ್ತರ ಮಾತು ನಿಮ್ಮ ಮನಸ್ಸಿಗೆ ಬಾರದು. ಸರ್ಕಾರದ ಉದ್ಯೋಗದಲ್ಲಿ ನಿಮಗೆ ಅಸಮಾಧಾನ ಉಂಟಾಗಬಹುದು. ಸಂಗಾತಿಯ ಮಾತಿಗೆ ಎದುರು ಮಾತನಾಡಬೇಡಿ. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ಸ್ತ್ರೀಯರ ಜೊತೆ ಹೆಚ್ಚು ಸಮಯ ಇರುವಿರಿ. ಕೃಷಿಯಲ್ಲಿ ಆಸಕ್ತಿಯು ಹೆಚ್ಚಾಗಬಹುದು. ಸಾಕಷ್ಟು ಪ್ರಯತ್ನದ ಫಲವಾಗಿ ಉದ್ಯಮದ ದಾರಿಯು ಸುಗಮವಾಗುವುದು. ಪ್ರೇಮವಿವಾಹವು ತೀರ್ಮಾನವಾಗುವುದು.

ವೃಷಭ ರಾಶಿ : ಯಾರಿಗಾದರೂ ದಾನವನ್ನು ಮಾಡುವಿರಿ. ವಾಹನ ಚಾಲನೆ ಮಾಡುವಾಗ ಸ್ವಲ್ಪ ಹಿಂಜರಿಕೆ ಇರುವುದು. ಮನಶ್ಚಾಂಚಲ್ಯದಿಂದ ಕೆಲಸದಲ್ಲಿ ತೊಂದರೆ ಆಗುವುದು. ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಗಳಿಗೆ ತಂದೆಯಿಂದ ಬೇಕಾದ ಸಹಾಯವು ಸಿಗಬಹುದು. ಆರ್ಥಿಕ ಬೆಳವಣಿಗೆಗೆ ಹೆಚ್ಚು ಸಮಯವನ್ನು ಕೊಡುವಿರಿ. ಅನಾರೋಗ್ಯದಿಂದ ನೀವು ಗುಣಮುಖರಾದರೂ ಪೂರ್ಣ ಹೊರ ಬರಲು ಆಗದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಇಂದಿನ ಪ್ರಯಾಣವನ್ನು ಅನಿವಾರ್ಯವಾದರೆ ಮಾತ್ರ ಮಾಡಿ.‌ ಅನಾರೋಗ್ಯವನ್ನು ಮನೆಮದ್ಸಿನಿಂದ ಕಡಿಮೆ ಮಾಡಿಕೊಳ್ಳಿ. ಗುರುಚರಿತ್ರೆಯನ್ನು ಪಠಿಸಿ.

ಮಿಥುನ ರಾಶಿ : ಬೇಕೆಂದೇ ಕಲಹವನ್ನು ತಂದುಕೊಳ್ಳುವಿರಿ. ಜೀವನದ ಬಗ್ಗೆ ಒಂಟಿಯಾಗಿ ಕುಳಿತು ಗಂಭೀರ ಚಿಂತನೆಯನ್ನು ಮಾಡುವಿರಿ. ಬಂಧುಗಳು ನಿಮ್ಮ ಬಗ್ಗೆ ಔದಾರ್ಯ ತೋರಿಸುವರು. ಸಹಾಯವೂ ಸಿಗಬಹುದು. ನಿಮ್ಮ ಸರಳತೆಯನ್ನು ಆಡಿಕೊಳ್ಳುವರು. ಯಾರನ್ನೂ ದೂಷಿಸುತ್ತ ಇರಬೇಡಿ.‌ ನಿಮ್ಮ ತಪ್ಪನ್ನು ತಿದ್ದಿಕೊಳ್ಳುವ ಸ್ವಭಾವವು ಉತ್ತಮವಾದುದು. ಲಾಭಕ್ಕಾಗಿ ದೇಹವನ್ನು ದಂಡಿಸಬೇಕಾದೀತು. ಪಾಲುದಾರಿಕೆಯಲ್ಲಿ ನಿಮ್ಮ ಮಾತೇ ಅಂತಿಮವಾಗುವುದು. ಇನ್ನೊಬ್ಬರಿಗೆ ಹಣವನ್ನು ಕೊಡುವಾಗ ವ್ಯಕ್ತಿತ್ವದ‌ ಬಗ್ಗೆ ಗಮನವಿರಲಿ. ಎಲ್ಲವೂ ನಿಮ್ಮ ಮೂಗಿನ‌ ನೇರಕ್ಕೆ ನಡೆಯದು. ಪ್ರೇಮ ಸಂಬಂಧದಿಂದ ನಿಮಗೆ ಇಂದು ಹಾಯೆನಿಸುವುದು. ಒತ್ತಡದ ನಡುವೆಯೂ ನಿಮ್ಮ ಕೆಲಸವನ್ನು ಸರಳ ಮಾಡಿಕೊಳ್ಳುವಿರಿ. ನಿಮ್ಮ ಸಾಮರ್ಥ್ಯಕ್ಕೆ ಸರಿಯಾದ ಕೆಲಸವನ್ನು ಮಾಡಿ.

ಕಟಕ ರಾಶಿ : ಮೇಲಧಿಕಾರಿಗಳ ಮಾತಿಗೆ ನೀವು ಅನಾದರ ತೋರಿಸುವಿರಿ. ಮಾತನ್ನು ಮಿತವಾಗಿ ಆಡಬೇಕಾದೀತು. ಯಾರ ಸಹವಾಸವೂ ಬೇಡವೆನಿಸಬಹುದು. ಮೋಹದಲ್ಲಿ ನೀವು ಬೀಳುವಿರಿ. ಖರ್ಚಿನಿಂದ ನೀವು ಆತಂಕಗೊಳ್ಳುವಿರಿ. ನಿಮ್ಮ ಸಮಯವನ್ನು ಸಹೋದ್ಯೋಗಿಗಳು ಹಾಳು ಮಾಡುವರು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ತಂತ್ರವನ್ನು ಕಂಡುಕೊಳ್ಳಿ. ನಿಮ್ಮ ಬಗ್ಗೆ ನಿಮ್ಮೆದುರೇ ಆಡಿಕೊಳ್ಳುವರು. ಸಿಟ್ಟು ಬಂದರೂ ನಿಯಂತ್ರಣ ಮಾಡಿಕೊಳ್ಳುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಸಹೋದರನಿಂದ ಅರ್ಥಿಕ ಸಹಾಯವನ್ನು ಪಡೆಯುವಿರಿ. ತಂದೆಯ ಆರೋಗ್ಯದ ಬಗ್ಗೆ ಗಮನವಿರಲಿ. ನಿಜವನ್ನು ಹೇಳಲು ಕಷ್ಟವಾಗಬಹುದು. ದುರ್ಗಾದೇವಿಯ ಉಪಾಸನೆಯನ್ನು ಮಾಡಿ.

ಸಿಂಹ ರಾಶಿ : ವೈದ್ಯ ವೃತ್ತಿಯವರು ಇಂದು ಒತ್ತಡದಲ್ಲಿ ಇರುವರು. ನಿಮ್ಮನ್ನು ಅನಾದರ ಮಾಡಿದಂತೆ ಕಂಡುಬಂದೀತು. ಸುಮ್ಮನೇ ವಾದಕ್ಕೆ ಇಳಿಯುವುದು ಬೇಡ. ಕಲಾವಿದರು ಹೆಚ್ಚಿನ ಅವಕಾಶಕ್ಕೆ ಪ್ರಯತ್ನ ಮಾಡುವರು. ಹೊಸ ಮನೆಯ ಖರೀದಿಯ ಯೋಚನೆ ಮಾಡುವಿರಿ. ಸಹೋದ್ಯೋಗಿಗಳ ಜೊತೆ ನಿಮ್ಮ ವರ್ತನೆಯು ದಿನದಂತೆ ಇರದು. ನಿಮ್ಮದಾದ ಕಾರ್ಯದಲ್ಲಿ ನೀವು ಮಗ್ನರಾಗುವುದು ಉತ್ತಮ. ಯಾರ ಬಗ್ಗೆಯೂ ಸುಮ್ಮನೇ ಮಾತನಾಡುವುದು ಬೇಡ. ಹೊಸ ವಸ್ತುವಿನ ಬಳಕೆಯಿಂದ ನಿಮಗೆ ಸಂತೋಷವು ಸಿಗುವುದು. ನಿಮಗೆ ಹೂಡಿಕೆಯ ಬಗ್ಗೆ ಹೇಳಿ ಆಪ್ತರು ನಿಮ್ಮ ತಲೆಯನ್ನು ಕೆಡಿಸಬಹುದು. ಮರಣದ ಭೀತಿಯು ನಿಮ್ಮನ್ನು ಕಾಡುವುದು. ಮಕ್ಕಳನ್ನು ಪಡೆಯುವ ಬಯಕೆ ಉಂಟಾಗುವುದು. ಆದಿತ್ಯಹೃದಯವನ್ನು ಪಠಿಸಿ.

ಕನ್ಯಾ ರಾಶಿ : ವಿವಾಹದ ವಿಚಾರಕ್ಕೆ ಮನೆಯಲ್ಲಿ ಶಾಂತಿಯು ಕದಡಬಹುದು. ಎಲ್ಲ ಚರಾಸ್ತಿಯನ್ನೂ ನೀವೇ ಪಡೆಯುವ ಹುನ್ನಾರ ನಡೆಸಬಹುದು. ಧಾರ್ಮಿಕ ಆಚರಣೆಯನ್ನು ವಿವೇಚನಾರಹಿತವಾಗಿ ಮಾಡುವಿರಿ. ನಿಮ್ಮ ಆದಾಯವನ್ನು ಎಲ್ಲಿಯಾದರೂ ಹೇಳಿಕೊಳ್ಳುವಿರಿ. ಕಛೇರಿಯಲ್ಲಿ ಆದ ತಪ್ಪಿನಿಂದ ಮೇಲಧಿಕಾರಿಗಳು ಎಚ್ಚರಿಕೆ ಕೊಡುವರು. ಸರ್ಕಾರಿ ಕಾರ್ಯವು ವಿಳಂಬವಾಗಬಹುದು. ‌ಒರಟು ಸ್ವಭಾವವನ್ನು ನೀವು ಕಡಿಮೆ ಮಾಡಿಕೊಳ್ಳಿ. ಬೇಡವೆಂದು ಬಿಟ್ಟರೂ ಕೆಲಸವು ಮಾತ್ರ ನಿಮ್ಮನ್ನು ಬಿಡದು. ಪ್ರೀತಿಯನ್ನು ಗೌಪ್ಯವಾಗಿ ಇಡುವಿರಿ. ಆಲಸ್ಯದಿಂದ ಹಿರಿಯರು ನಿಮ್ಮ ಬಗ್ಗೆ ಹೇಳಿಯಾರು. ಮಹಾವಿಷ್ಣುವಿನ ಸ್ತೋತ್ರವನ್ನು ಮಾಡಿ.

ತುಲಾ ರಾಶಿ : ಭೂಮಿಯ ಖರೀದಿಯಲ್ಲಿ ಗೊಂದಲವು ಹೆಚ್ಚಿರಬಹುದು. ನಿಮ್ಮ ಭಾವನೆಗಳನ್ನು ನೀವೇ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುವಿರಿ. ಹಳೆಯ ನೋವುಗಳು ಮತ್ತೆ ಕಾಣಿಸಿಕೊಳ್ಳುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವ ಇಚ್ಛೆ ಇರುವುದು. ಇಂದಿನ ನಿಮ್ಮ ಕಾರ್ಯದಿಂದ ಮೆಚ್ಚುಗೆ ಸಿಗುವುದು. ಸಾಕಷ್ಟು ಕಿರಿಕಿರಿ ಇದ್ದರೂ ಅದನ್ನು ಲೆಕ್ಕಿಸದೇ ನಿಮ್ಮ ಕರ್ತವ್ಯದಲ್ಲಿ ನೀವು ನಿರತರಾಗುವಿರಿ. ಪ್ರಭಾವೀ ವ್ಯಕ್ತಿಗಳ ಸಹಕಾರದಿಂದ ನಿಮಗೆ ಜೀವನದ ಉತ್ತಮ‌ ಮಾರ್ಗವು ಕಾಣಿಸುವುದು. ಇಂದು ಯಾರನ್ನೂ ನೋಯಿಸಲು ಮನಸ್ಸಾಗದು. ಭವಿಷ್ಯದ ಕನಸು ಕಾಣುವಿರಿ. ಭೋಗವಸ್ತುಗಳ ಮಾರಾಟದಿಂದ ನಿಮಗೆ ಲಾಭವಾಗುವುದು. ಮಕ್ಕಳ ಆರೋಗ್ಯದ ಚಿಂತೆ ಇರಲಿದೆ.

ವೃಶ್ಚಿಕ ರಾಶಿ : ಉದ್ಯಮದಲ್ಲಿ ನೀವು ದಂಡವನ್ನು ತುಂಬಬೇಕಾದ ಸ್ಥಿತಿಯು ಬರಬಹುದು. ಇಂದು ವಿವಾಹದ ಮಾತುಕತೆಯನ್ನು ಮನೆಯಲ್ಲಿ ಆಡುವಿರಿ. ನಿಮ್ಮ ಪ್ರೇಮದ ವಿಚಾರವನ್ನು ತಾಯಿಯ ಬಳಿ ಹೇಳಿಕೊಳ್ಳುವಿರಿ. ನಿಮಗೆ ಇಂದು ಸಮಯವು ವ್ಯರ್ಥವಾದಂತೆ ತೋರುವುದು. ಆಸ್ತಿಯನ್ನು ಮಾರಾಟ ಮಾಡಿ ಸಾಲವನ್ನು ತೀರಿಸಬೇಕಾಗಬಹುದು. ಹಿಂದೆ ಮುಂದೆ ಆಲೋಚಿಸದೇ ಧೈರ್ಯವನ್ನು ಮಾಡುವುದು ಬೇಡ. ಪ್ರಯಾಣದ ವಿಚಾರದಲ್ಲಿ ಇಂದು ಮನೆಯವರ ಮಾತಿನಂತೆ ನಡೆದುಕೊಳ್ಳಿ. ನಿಮ್ಮ ಜೊತೆ ವೃತ್ತಿಯನ್ನು ನಿರ್ವಹಿಸುವವರು ನಿಮ್ಮ ಮಾತನ್ನು ಸಹಿಸಲಾರರು. ಸಂಗಾತಿಯು ದೂರ ಪ್ರಯಾಣ ಹೋಗಲು ಆಹ್ವಾನಿಸಬಹುದು. ಮೊದಲು‌ ಮಾಡಿದ ತಪ್ಪನ್ನೇ ಪುನಃ ಮಾಡಲು ಹೋಗುವಿರಿ.‌ ನಿಮ್ಮ ವಸ್ತುಗಳನ್ನು ಯಾರಾದರೂ ಕಳ್ಳತನ ಮಾಡಬಹುದು. ದೇವಸೇನಾ ನಾಯಕನಾದ ಸುಬ್ರಹ್ಮಣ್ಯನ ಸಂಪ್ರಾರ್ಥನೆಯನ್ನು ಮಾಡಿ.

ಧನು ರಾಶಿ : ಭೋಗ ವಸ್ತುಗಳನ್ನು ಅಧಿಕವಾಗಿ ಖರೀದಿಸುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಸಾಲವನ್ನು ಮಾಡಬೇಕಾಗುವುದು. ಕಾರಣಾಂತರದಿಂದ ನಿಮ್ಮ ಪ್ರಯಾಣವು ಸ್ಥಗಿತವಾಗಬಹುದು. ಯಂತ್ರಗಳ‌ ಮಾರಾಟದಿಂದ ನಿಮಗೆ ಆದಾಯವು ಹೆಚ್ಚಾಗುವುದು. ಮಕ್ಕಳನ್ನು ಖುಷಿಯಿಂದ ಇಡಲು ನಾನಾ ಪ್ರಯತ್ನವನ್ನು ಮಾಡುವಿರಿ. ಹಿರಿಯರ ಮಾತನ್ನು ಪಾಲಿಸುವಿರಿ. ನಿಮಗೆ ಇಂದು ಕೈ ಹಾಕಿದ ಕಾರ್ಯದಲ್ಲಿ ಜಯ ಸಿಗುವುದು. ಪೂರ್ವಜನ್ಮದ ಪುಣ್ಯವು ರಕ್ಷಿಸುವುದು. ಸ್ವಂತ ಉದ್ಯೋಗದಿಂದ ಒತ್ತಡವು ಅಧಿಕವಾಗಿ ಬರಬಹುದು. ಮನೆಯ ಕೆಲಸವನ್ನು ಮಾಡಿಕೊಳ್ಳಲು ನಿಮಗೆ ಸಮಯ ಸಾಕಾಗದು. ನಿಮ್ಮ ಮಾತುಗಳಿಂದ ಅನರ್ಥವಾಗಬಹುದು. ದೇಹದಲ್ಲಿ ಅತಿಯಾದ ಚಾಂಚಲ್ಯವು ಕಾಣಿಸುವುದು.

ಮಕರ ರಾಶಿ : ವಿವಿಧ ಕಡೆಗಳಿಂದ ಧನಾಗಮನವಾಗಬಹುದು. ನಿಮ್ಮ ಹಳೆಯ ವಾಹನವನ್ನು ಮಾರಾಟ ಮಾಡಿ ನೂತನ ವಾಹನವನ್ನು ಖರೀದಿ ಮಾಡುವಿರಿ. ದೇವರಲ್ಲಿ ಭಕ್ತಿಯು ಅಧಿಕವಾದೀತು. ಮಕ್ಕಳಿಗೆ ಶಿಸ್ತನ್ನು ಹೇಳುವಿರಿ. ನಿಮ್ಮ ಮನಸ್ಸನ್ನು ಬಹಳ ವಿಚಲಿತವಾಗಿದ್ದು ಸ್ಥಿರತ್ವವನ್ನು ತಂದುಕೊಳ್ಳುವುದು ಕಷ್ಟವಾದೀತು. ನಿಮ್ಮ‌ಅಲ್ಪ ಜ್ಞಾನವನ್ನು ಎಲ್ಲರೆದುರು ತೋರಿಸುವುದು ಬೇಡ. ನಿಮ್ಮ ಆಸ್ತಿಯನ್ನು ಇನ್ನೊಬ್ಬರು ಪಡೆಯಲು ಕಾನೂನು ರೀತಿಯಲ್ಲಿ ಹೋಗುವರು. ಮನೆಗೆ ದಂಪತಿಗಳನ್ನು ಕರೆದು ಸತ್ಕಾರ ಮಾಡಿ. ಸಹೋದರನ ಬೆಂಬಲವಿದ್ದರೂ ನಿಮಗೆ ನಿಮ್ಮ ಸ್ವಾಭಿಮಾನದಿಂದ ಹೊರಬರಲು ಆಗದು. ನೀವು ಇಂದು ಬಹಳ ಉಗ್ರವಾಗಿ ಕಾಣುವಿರಿ.

ಕುಂಭ ರಾಶಿ : ಜೂಜು ಮೊದಲಾದ ಲೇವಾದೇವಿಯ ವ್ಯವಹಾರದಲ್ಲಿ ನಿಮಗೆ ಹಿನ್ನಡೆ ಇರಲಿದೆ. ದೇವಾಲಯವು ನಿಮಗೆ ಇಂದು ನೆಮ್ಮದಿಯ ಸ್ಥಾನವಾಗುವುದು. ಆರೋಗ್ಯದಲ್ಲಿ ಅಸಮಾಧಾನವು ಇರಲಿದೆ. ಮಾತಾನಾಡುವ ಭರದಲ್ಲಿ ಏನಾದರೂ ಹೇಳಬಹುದು. ಕೇವಲ ಬಾಯಿ ಮಾತಿನಲ್ಲಿ ವ್ಯವಹಾರವನ್ನು ಮಾಡಿ ಮುಂದುವರಿಸುವುದು ಬೇಡ. ನಿಮ್ಮ ರಹಸ್ಯವನ್ನು ಯಾರಾದರೂ ತಿಳಿದುಕೊಳ್ಳಲು ಬಯಸುವರು. ಅವರಸದಲ್ಲಿ ಏನನ್ನೂ ಖರೀದಿ ಮಾಡುವುದು ಬೇಡ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಸ್ವೀಕರಿಸದೇ ಇರಬಹುದು. ನೀವು ಇಂದು ಎಲ್ಲರ ಜೊತೆ ಅಲ್ಪವಾಗಿ ಮಾತನಾಡುವಿರಿ. ಸ್ಮರಣಶಕ್ತಿಯ ಕೊರತೆಯು ಅಧಿಕವಾಗಿ ಕಾಡಡಬಹುದು. ಗೌರವವನ್ನು ಕಾಪಾಡಿಕೊಳ್ಳಲು ಗಂಭೀರವಾಗಿ ಇರುವಿರಿ. ಶನೈಶ್ಚರನ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆಯ ದೀಪ ಬೆಳಗಿ ನಮಸ್ಕರಿಸಿ ಬನ್ನಿ.

ಮೀನ ರಾಶಿ : ಮನಸ್ಸಿನ ಚಾಂಚಲ್ಯದಿಂದ ನಿಮ್ಮ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮ್ಮ ವಸ್ತುಗಳು ಕಾಣೆಯಾಗಬಹುದು. ಮಾತಿನ ಬಿರುಸು ಅಧಿಕವಾಗಿ ಇರುವುದು. ಇಂದಿನ ಖರ್ಚು ನಿಮ್ಮ ಜೇಬಿಗೆ ಭಾರವಾದೀತು. ಶತ್ರುಗಳ ತೊಂದರೆಯಿಂದ ನಿರ್ಮಾಣ ಕಾರ್ಯವು ನಿಧಾನವಾಗಲಿದೆ. ನೌಕರರ ವರ್ತನೆಯ ಮೇಲೆ ನಿಮ್ಮ ಕಣ್ಣಿಡಿ. ಬಂಧುಗಳ ಜೊತೆ ಕಲಹವಾಗುವುದು. ಸಂಗಾತಿಯ ನೆರವನ್ನು ನೀವು ನಿರೀಕ್ಷಿಸುವಿರಿ. ಆದ್ಯತೆಯ ಮೇಲೆ ನಿಮ್ಮ ಕಾರ್ಯಗಳು ಇರಬಹುದು. ಅಧಿಕಾರಿಗಳ ಮನವನ್ನು ಒಲಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಮಕ್ಕಳಿಂದ ಶುಭ ಸಮಾಚಾರವು ನಿಮಗೆ ಬರಲಿದೆ. ಆಯ್ಕೆಯನ್ನು ವಿಳಂಬವಾಗಿ ಮಾಡುವಿರಿ.

-ಲೋಹಿತಶರ್ಮಾ – 8762924271 (what’s app only)