Horoscope 05 Oct: ದಿನಭವಿಷ್ಯ, ಈ ರಾಶಿಯವರು ಹೊಸ ಕೆಲಸದಲ್ಲಿ ಕೆಲವು ಅಡೆತಡೆ ಎದುರಿಸಬೇಕಾಗಬಹುದು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 06, 2023 | 12:02 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಅಕ್ಟೋಬರ್ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 05 Oct: ದಿನಭವಿಷ್ಯ, ಈ ರಾಶಿಯವರು ಹೊಸ ಕೆಲಸದಲ್ಲಿ ಕೆಲವು ಅಡೆತಡೆ ಎದುರಿಸಬೇಕಾಗಬಹುದು
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವರೀಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 17ಕ್ಕೆ, ರಾಹು ಕಾಲ ಬೆಳಿಗ್ಗೆ 10:51 – 12:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:19 – 04:49ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 – 09:22ರ ವರೆಗೆ.

ಮೇಷ ರಾಶಿ: ನಿಮ್ಮ ಆರೋಗ್ಯ ವೃದ್ಧಿಗೆ ಬೇಕಾದ ವಿಧಾನವನ್ನು ಅನುಸರಿಸಿ. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಮಹಿಳೆಯರು ಯಾವುದೇ ದೇಶೀಯ ವ್ಯವಹಾರವನ್ನು ಆರಂಭಿಸಲು ಬಯಸುವಿರಿ. ಸಹೋದರರಿಂದ ನಿಮಗೆ ಧನಸಹಾಯವು ಸಿಗಲಿದೆ. ನಿಮ್ಮ ಅಲ್ಪ ಮಾತಿನಿಂದ ಎಲ್ಲರಿಗೂ ಸಂತೋಷವಾಗಲಿದೆ.

ವೃಷಭ ರಾಶಿ: ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಉತ್ತಮ ಆರೋಗ್ಯದಿಂದ ಆನಂದಿಸುವಿರಿ. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ. ಕುಟುಂಬದ ಯುವ ಸದಸ್ಯರ ಯಶಸ್ಸಿನಲ್ಲಿ ಹೆಮ್ಮೆ ಪಡುವಿರಿ. ಉದ್ಯಮಿಗಳಿಗೆ ಲಾಭದ ದಿನ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಜೊತೆ, ನೀವು ಖರ್ಚು ಮಾಡುವ ಪರಿಸ್ಥಿತಿಯೂ ಬರಬಹುದು. ಹೊಸ ಕೆಲಸದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು.

ಮಿಥುನ ರಾಶಿ: ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಹಾರದ ಬಗ್ಗೆ ನಿಮ್ಮ ಶಿಸ್ತು ದೈಹಿಕ ಸ್ಥಿತಿಯಲ್ಲಿರಿವುದು. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ನೀವು ಎಲ್ಲರೊಂದಿಗೆ ಸಭ್ಯವಾಗಿ ಮಾತನಾಡಬೇಕು. ನಿಮ್ಮದೇ ಆದ ಒತ್ತಡಗಳು ನಿಮಗೆ ಇರಲಿದೆ. ಓಡಾಟವು ಹೆಚ್ಚಾಗಿರುವುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ.

ಕಟಕ ರಾಶಿ: ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯಲ್ಲಿ ಉತ್ಸಾಹವು ಹೆಚ್ಚಿರುವುದು. ಮಾತು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು. ಆರ್ಥಿ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣದ ವಿಷಯಗಳಲ್ಲಿ ಆಸಕ್ತಿದಾಯಕ ಕೊಡುಗೆಗಳನ್ನು ಕಾಣಬಹುದು. ನಿಮ್ಮ ವಿಚಾರವನ್ನು ಇತರರ ಮುಂದೆ ಬಹಿರಂಗವಾಗಿ ಇರಿಸಿ.

ಸಿಂಹ ರಾಶಿ: ಇಂದು ಕೆಲಸದ ಸ್ಥಳದ ಸಮಸ್ಯೆಗಳಿಗೆ ನಿಮ್ಮ ನಿಷ್ಪಕ್ಷಪಾತ ವಿಧಾನವು ನಿಮ್ಮನ್ನು ಜನಪ್ರಿಯಗೊಳಿಸುವುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ. ಉತ್ತಮ ಕೆಲಸದಿಂದಾಗಿ, ಉದ್ಯೋಗದಲ್ಲಿ ಬಡ್ತಿ ಮತ್ತು ಉನ್ನತ ಸ್ಥಾನ ಪಡೆಯುವ ಲಕ್ಷಣವಿದೆ.

ಕನ್ಯಾ ರಾಶಿ: ವೃತ್ತಿಪರರು ಇಂದು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಬಹುದು. ಹಳೆಯ ಬಂಧುಗಳನ್ನು ಭೇಟಿ ಮಾಡುವುದು ಇಂದಿನ ಉತ್ಸಾಹಕ್ಕೆ ಕಾರಣವಾಗುವುದು. ನೀವು ಹೊಸ ಗುರಿಗಳನ್ನು ಹೊಂದಿದ್ದು ನಿಮ್ಮ ಪ್ರಯತ್ನಗಳನ್ನು ಪ್ರಾರಂಭಿಸುವಿರಿ. ನೀವು ಕೆಲವು ವ್ಯವಹಾರ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸುವಿರಿ. ಸಂಪತ್ತಿನ ಹೆಚ್ಚಳವಾಗಬಹುದು. ಇಂದು ಯಾವುದೇ ಕೆಲಸ ಮಾಡುವಾಗ, ನಿಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬೇಕು. ದಾಂಪತ್ಯ ಜೀವನದಲ್ಲಿ ಕೆಲವು ಹೊಸತನವನ್ನು ಅನುಭವಿಸುವಿರಿ.

ತುಲಾ ರಾಶಿ: ಇಂದು ಆರೋಗ್ಯಕಾವಾದ ಆಹಾರದ ಬಗ್ಗೆ ಆಸಕ್ತಿ ಮೂಡುವ ಸಾಧ್ಯತೆ ಇದೆ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ದೂರದೂರಿಗೆ ಪ್ರಯಾಣ ಸಾಧ್ಯತೆ ಇದೆ. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇಟ್ಟುಕೊಳ್ಳಿ. ವ್ಯವಹಾರದ ದೃಷ್ಟಿಯಿಂದ ಎಲ್ಲವೂ ಚೆನ್ನಾಗಿರುತ್ತದೆ. ನಿಮ್ಮ ಆದಾಯ ಚೆನ್ನಾಗಿರುತ್ತದೆ. ಕೆಲವರಿಗೆ ವಿದೇಶಕ್ಕೆ ಹೋಗುವ ಶುಭ ಸುದ್ದಿ ಸಿಗಬಹುದು.

ವೃಶ್ಚಿಕ ರಾಶಿ: ಕೆಲಸದಲ್ಲಿನ ಪ್ರಗತಿಯು ತೃಪ್ತಿಕರವಾಗಿರುತ್ತದೆ. ವೃತ್ತಿಪರ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಸರಿಯಾದ ಆಹಾರ ಮತ್ತು ಶಿಸ್ತುಬದ್ಧ ಜೀವನವು ನಿಮ್ಮ ಉತ್ತಮ ಆರೋಗ್ಯಕ್ಕೆ ಪ್ರಮುಖವಾಗಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಸಂಜೆಯ ವೇಳೆಗೆ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ಸಮಯಕ್ಕೆ ಸರಿಯಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುವುದು. ವ್ಯಾಪಾರದಲ್ಲಿ ಲಾಭದ ಅವಕಾಶಗಳಿರುತ್ತವೆ. ಕೆಲವು ಸ್ಥಳದಿಂದ ಹಣ ಪಡೆಯುವಿರಿ.

ಧನು ರಾಶಿ: ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಪ್ರಾಪ್ತಿಯಾಗಲಿದೆ. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಸ್ಥಗಿತಗೊಂಡ ಕೆಲಸದಲ್ಲಿ ವೇಗವನ್ನು ಪಡೆಯುವುದು ಪ್ರಯೋಜನಕಾರಿಯಾಗಿದೆ. ಕುಟುಂಬದ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳ ಮನಸ್ಸು ಅಧ್ಯಯನದಲ್ಲಿ ತೊಡಗಿಕೊಳ್ಳುವುದು.

ಮಕರ ರಾಶಿ: ಇಂದು ನಿಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಇರಿಸಿ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಮಹತ್ವದ ಕೆಲಸವು ಹಲವು ದಿನಗಳವರೆಗೆ ಬಾಕಿಯಿದ್ದರೆ, ಅವುಗಳನ್ನು ಮುಗಿಸಿ. ನೀವು ಉತ್ತಮ ಆರ್ಥಿಕ ಯೋಜನೆಯನ್ನು ಮಾಡಬಹುದು. ಯುವಕರು ಹೊಸ ಉದ್ಯೋಗಗಳನ್ನು ಪಡೆಯುವ ಸಾಧ್ಯತೆಯಿದೆ. ಮನೆಯ ವೆಚ್ಚದಲ್ಲಿ ಇಳಿಕೆಯಾಗುವುದು.

ಕುಂಭ ರಾಶಿ: ಸ್ವಂತ ಉದ್ಯಮ ಮಾಡುವವರಿಗೆ ಒಳ್ಳೆಯ ಸಮಯ. ಕಟ್ಟುಪಾಡುಗಳನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ನಿಮ್ಮ ದಿನದ ಆರಂಭವು ಸಾಮಾನ್ಯವಾಗಿರುತ್ತದೆ. ಹಣವನ್ನು ಬಹಳ ನೈಪುಣ್ಯದಿಂದ ಖರ್ಚು ಮಾಡುವಿರಿ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ. ಕೆಲಸದ ಪರಿಸ್ಥಿತಿಗಳು ಸುಧಾರಿಸುವ ಸಾಧ್ಯತೆಯಿದೆ. ಇಂದು ಸಂಘರ್ಷವು ನಿಮಗೆ ಪ್ರಯೋಜನಕಾರಿ ಆಗಿರುವುದಿಲ್ಲ.

ಮೀನ ರಾಶಿ: ಇಂದು ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಎಲ್ಲೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ಹೊಸ ಉದ್ಯೋಗದಿಂದ ನೀವು ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ.

-ಲೋಹಿತಶರ್ಮಾ – 8762924271 (what’s app only)