Horoscope 07 August: ನಿಮ್ಮ ಮಾತಿಗೆ ಇಂದು ವಿರೋಧಿಸಬಹುದು, ಬೇಸರ ಉಂಟಾಗಬಹುದು

ಇಂದಿನ (2023 ಆಗಸ್ಟ್ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 07 August: ನಿಮ್ಮ ಮಾತಿಗೆ ಇಂದು ವಿರೋಧಿಸಬಹುದು, ಬೇಸರ ಉಂಟಾಗಬಹುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2023 | 12:02 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶೂಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:53 ರಿಂದ 09:28ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:38ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:13 ರಿಂದ 03:48ರ ವರೆಗೆ.

ಮೇಷ ರಾಶಿ: ಆಲಸ್ಯದಿಂದ ನಿಮ್ಮ ಕೆಲಸದಲ್ಲಿ ಹಿನ್ನಡೆಯಾಗಬಹುದು. ಕೃಷಿಯಲ್ಲಿ ನೀವು ಹೆಚ್ಚಿನ ಪ್ರಗತಿಯನ್ನು ಸಾಧಿಸುವ ಮನಸ್ಸನ್ನು ಇಟ್ಟುಕೊಳ್ಳುವಿರಿ. ನೀವು ಇಂದು ಅತಿಥಿಯಾಗಿ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ನಡವಳಿಕೆಯನ್ನು ಬದಲಿಸಿಕೊಳ್ಳುವಿರಿ. ನಿಮ್ಮಿಂದಾಗಿ ಮನೆಯಲ್ಲಿ‌ ಇಂದು ಸಂತೋಷವು ಇರಲಿದೆ. ಕೋಪವು ಇದ್ದಕ್ಕಿದ್ದಂತೆ ಕಡಿಮೆ ಆಗಿರುವುದು ಆಶ್ಚರ್ಯ ಎನಿಸಬಹುದು. ‌ಕಳೆದ ದಿಮಗಳನ್ನು ಒಂದೊಂದಾಗಿಯೇ ಮೆಲುಕು ಹಾಕಿಕೊಂಡು ಸಂತೋಷಪಡುವಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿಯು ಕಡಿಮೆ ಆಗಿದೆ ಎಂದು ಅನ್ನಿಸಬಹುದು.

ವೃಷಭ ರಾಶಿ: ಸಹೋದ್ಯೋಗಿಗಳನ್ನು ಕೆಲಸದಲ್ಲಿ ಸಹಾಯಕ್ಕಾಗಿ ಕೇಳುವಿರಿ. ನಿಮ್ಮದಾದ ಚಿಂತನೆಯನ್ನು ಬಿಟ್ಟು ಬೇರೆ ಕಡೆ ಯೋಚನೆಯನ್ನು ಮಾಡಲಾರಿರಿ. ಆನಂದದಿಂದ ಈ ದಿನವನ್ನು ಕಳೆಯಲು ಬಯಸುವಿರಿ.‌ ಅನಿರೀಕ್ಷಿತ ಪ್ರಯಾಣವು ಬರಬಹುದು.‌ ನಿಮ್ಮ ವಿವಾಹದ ಮಾತುಕತೆ ವಿಳಂಬವಾಗಿ‌ದೆ ಬೇಸರವು ಆಗಬಹುದು. ದಾಖಲೆಗಳನ್ನು ಸರಿಯಾದ ಕಡೆಗಳಲ್ಲಿ ಇಟ್ಟುಕೊಳ್ಳಿ. ನಿಮಗೆ ಸರಿಯಾದ ಸಮಯದಲ್ಲಿ ಹಣವು ಸಿಕ್ಕಿರುವುದು ಸಂತೋಷದ ವಿಚಾರವಾಗಲಿದೆ. ಮನೆಯವರ ಜೊತೆ ಹೆಚ್ಚು ಆನಂದದಿಂದ ಇರುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ತೊಡಗುವಿರಿ.

ಮಿಥುನ ರಾಶಿ: ಅಧಿಕ ಆಲೋಚನೆಯನ್ನು ಮಾಡುವುದರಿಂದ ಮನಸ್ಸು ದುರ್ಬಕವಾಗಬಹುದು. ಕಾಲು ನೋವಿಗೆ ವೈದ್ಯರನ್ನು ಭೇಟಿ ಮಾಡಿ. ನಿಮಗಮ ಜೀವನ ಕ್ರಮವನ್ನು ಬದಲಿಸಿಕೊಳ್ಳಲು ಇಷ್ಟಪಡುವಿರಿ. ಸ್ವಂತ ಉದ್ಯೋಗದಲ್ಲಿ ನಿಮಗೆ ಕೆಲವು ಕಹಿ ವಿಚಾರವು ಗೊತ್ತಾಗಲಿದೆ. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ನಿಮಗೆ ಆಗದು. ಉದ್ಯೋಗಕ್ಕೆ ಸಂಬಂಧಿಸಿದಂತೆ ಮನೆಯಿಂದ ದೂರ ಹೋಗಬೇಕಾಗುವುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗಲಿದೆ. ನೂತನ ವಸ್ತುಗಳ ಖರೀದಿಗೆ ಹೆಚ್ಚು ಮನಸ್ಸು ಮಾಡುವಿರಿ.

ಕರ್ಕಾಟಕ ರಾಶಿ: ನಿಮ್ಮ ಮಾತಿಗೆ ಇಂದು ವಿರೋಧವು ಬರಬಹುದು. ‌ಆದಷ್ಟು ಇಂತಹ ಸಂದರ್ಭವು ಬಾರದಂತೆ ನೋಡಿಕೊಳ್ಳುವುದು ಉತ್ತಮ. ತಂದೆಯ ಮೇಲೆ‌ ನಿಮಗೆ ಬೇಸರ ಉಂಟಾಗಬಹುದು. ಸಂಗಾತಿಯ ಮಾತುಗಳು ನಿಮಗೆ ನೋವನ್ನು ಕೊಡಬಹುದು. ಆಸ್ತಿಯ ವಿಚಾರದಲ್ಲಿ ನೀವು ನಿಮ್ಮರಿಗೆ ಸುಳ್ಳು ಹೇಳಿದ್ದು ಗೊತ್ತಾಗುವುದು. ಆರ್ಥಿಕ ನಷ್ಟವನ್ನು ತುಂಬಿಕೊಳ್ಳಲು ಅನ್ಯಮಾರ್ಗವನ್ನು ಹುಡುಕುವಿರಿ. ಮನೆಯ ವಾತಾವರಣವು ನಿಮಗೆ ಅಹಿತಕರ ಎನಿಸಬಹುದು. ವಿಶೇಷವಾದ ವಸ್ತುವನ್ನು ಕೊಳ್ಳುವ ಆಸಕ್ತಿಯು ಇರಲಿದೆ.

ಸಿಂಹ ರಾಶಿ: ಅತಿಯಾದ ನಂಬಿಕೆಯಿಂದ ಕೆಲವು ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವಿರಿ. ಮನೆಯಲ್ಲಿ ಅಶಾಂತಿಯ ವಾತಾವರಣವು ಇರಲುದೆ. ನಿಮ್ಮ ವ್ಯವಹಾರಕ್ಕೆ ಯಾರಾದರೂ ಹಸ್ತಕ್ಷೇಪ‌ ಮಾಡಲು ಬರಬಹುದು. ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಅದು ಸರಿಯಾಗುವುದು. ತಾಯಿಯಿಂದ ನಿಮಗೆ ಹಿತವಚನವು ಸಿಗಲಿದೆ. ಕೊರತೆಯಂತೆ ಕಾಣುವ ಆತ್ಮವಿಶ್ವಾಸವನ್ನು ಸ್ನೇಹಿತರು ತುಂಬುವರು. ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕಾದೀತು. ಬಾಲ್ಯದ ಸ್ನೇಹಿತರು ನಿಮ್ಮನ್ನು ಕಂಡು ಖುಷಿಪಡುವರು. ವೃತ್ತಿಜೀವನವು ಹೊಸ ದಿಕ್ಕಿನತ್ತ ಹೊರಳಬಹುದು.

ಕನ್ಯಾ ರಾಶಿ: ರಾಜಕೀಯವಾಗಿ ಇರುವವರು ಹಿನ್ನಡೆಯನ್ನು ಅನುಭವಿಸಬೇಕಾದೀತು. ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳುವಿರಿ. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ತೆಗೆದುಕೊಳ್ಳುವುದು ಉತ್ತಮ. ಹಳೆಯ ನೋವುಗಳು ನಿಮ್ಮನ್ನು ಕಾಡಬಹುದು. ಶುಭ ಸುದ್ದ ನಿರೀಕ್ಷೆಯು ಇಂದು ಕೇವಲ ನಿರೀಕ್ಷೆಯಾಗಿಯೇ ಇರಲಿದೆ. ಉದ್ಯಮಿಗಳು ಲಾಭಕ್ಕಾಗಿ ಬಹಳ ಶ್ರಮಪಡಬೇಕಾಗುವುದು. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡಲಾಗದು. ದಾಂಪತ್ಯದಲ್ಲಿ ಸಣ್ಣ ವಿರಸವು ಇರಲಿದೆ. ಮಕ್ಕಳ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾದುದು ಆಗಿರದು. ಅಧಿಕಾರಿಗಳನ್ನು ಮೆಚ್ಚಿಸಲು ನೀವು ಸಮಯವನ್ನು ಹಾಳುಮಾಡುವಿರಿ. ಸಮಾರಂಭದಲ್ಲಿ ನಿಮಗೆ ಉತ್ತಮ‌ ಭೋಜನವು ಸಿಗಲಿದೆ.

ತುಲಾ ರಾಶಿ: ಭೂಮಿಯ ವ್ಯವಹಾರವನ್ನು ಸರಿಯಾದ ಕ್ರಮದಲ್ಲಿ ಮಾಡಿ.‌ ನಕಾರಾತ್ಮಕ ಚಿಂತನೆಯನ್ನು ಹೆಚ್ಚಿಸಲು ಅಂತಹ ವಾತಾವರಣವು ಇರಲಿದೆ. ಅವುಗಳಿಗೆ ಕಿವಿಗೊಡದೇ ಕಾನೂನಾತ್ಮಕವಾದ ಪ್ರಕ್ರಿಯೆಯತ್ತ ಗಮನ ಕೊಡಿ. ಮಕ್ಕಳಿಗೆ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದೇ ಹೋಗಬಹುದು. ಮಹಿಳೆಯರು ಬಂಧುಗಳ ಮನೆಗೆ ಹೋಗುವ ಸಾಧ್ಯತೆ ಇದೆ. ಆಹಾರವನ್ನು ಸರಿಯಾಗಿ ಸಮಯಕ್ಕೆ ಸ್ವೀಕರಿಸಿ. ನಿಮ್ಮ ನಂಬಿಕೆಯನ್ನು ನೀವು ಸಮರ್ಥಿಸಿಕೊಳ್ಳುವಿರಿ. ಅಪರಿಚಿತರು ನಿಮ್ಮ ಎಲ್ಲ ವಿವರಗಳನ್ನು ಪಡೆಯಲು ಇಚ್ಛಿಸಬಹುದು.

ವೃಶ್ಚಿಕ ರಾಶಿ: ಇಂದು ಬಹು ದಿನಗಳ ಚಿಂತಿತ ಕಾರ್ಯವು ಸಫಲವಾಗುವುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿದರೂ ವಿರೋಧ ಬರುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ವಿವಾದ ಮಾಡಿಕೊಳ್ಳದೇ ಮಾಡಿಕೊಳ್ಳಿ. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಬಹುದು. ಸಂಗಾತಿಯ ಪ್ರೀತಿಯನ್ನು ನೀವು ಅನುಭವಿಸುವಿರಿ. ನಿಮ್ಮ ಕಂಡು ಅಸೂಯೆ ಪಡುವವರಿಗೆ ನೀವು ಇನ್ನಷ್ಟು ತುಪ್ಪವನ್ನು ಹಾಕುವುದು ಬೇಡ. ಎಲ್ಲ ಸಮಯದಲ್ಲಿಯೂ ವಾತಾವರಣವು ನಿಮ್ಮ ಪರವಾಗಿಯೇ ಇರುತ್ತದೆ ಎಂಬುದನ್ನು ಮರೆತುಬಿಡಿ. ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವುದು ಹೊಸತಾಗದು.‌ ಇದಕ್ಕಾಗಿ ನೌಕರರು ತಿರುಗಿ ಬೀಳಬಹುದು.‌ ಅವರ ವಿರೋಧವನ್ನು ಎದುರಿಸುವುದು ನಿಮಗೆ ಕಷ್ಟವಾದೀತು.

ಧನು ರಾಶಿ: ಅನಗತ್ಯ ತಿರುಗಾಟದಿಂದ ಬೇಸರವಾಗಬಹುದು. ನಿಮ್ಮ ಕಾರ್ಯಗಳನ್ನು ಮುಂದೂಡುವಿರಿ. ಒತ್ತಡ ವಿಚಾರವು ಬಂದಾಗ ಅದರಿಂದ ದೂರ ಇರಲು ಪ್ರಯತ್ನಿಸುವಿರಿ. ಲಾಭವಿರುವ ಕೆಲಸಗಳನ್ನು ಮಾತ್ರ ಮಾಡಲು ಇಚ್ಛೆಯು ಇರಲಿದೆ‌. ಮನಸ್ಸಿನ ಚಾಂಚಲ್ಯವನ್ನು ಯೋಗದ ಮೂಲಕ ನಿಯಂತ್ರಿಸುವಿರಿ. ಬಂಧುಗಳು ನಿಮಗೆ ಆರ್ಥಿಕ ಸಹಾಯವನ್ನು ಮಾಡಲು ಬಂದರೂ ನೀವು ಅದನ್ನು ಸ್ವಾಭಿಮಾನದಿಂದ ನಿರಾಕರಿಸುವಿರಿ. ಸರ್ಕಾರದ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಕರೆಯು ಬರಬಹುದು. ನಿಮ್ಮವರ ಏಳಿಗೆಯನ್ನು ಸಹಿಸುವುದು ನಿಮಗೆ ಕಷ್ಟವಾದೀತು. ಕಲಾವಿದರು ಉತ್ತಮ ಅವಕಾಶಗಳನ್ನು ಪಡೆದು ಪ್ರಸಿದ್ಧರಾಗುವರು.

ಮಕರ ರಾಶಿ: ಇಂದು ಸ್ತ್ರೀಯರು ನಾನಾ ತೊಂದರೆಗಳನ್ನು ಅನುಭವಿಸಬೇಕಾಗಬಹುದು. ಅನಾರೋಗ್ಯವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡಬಹುದು. ನೆರೆಹೊರೆಯರ ನಡುವೆ ವಾಗ್ವಾದವು ಆಗಬಹುದು. ಬಾಡಿಗೆ ಮನೆಯ ಯಜಮಾನನು ನಿಮ್ಮ ಬಗ್ಗೆ ತಪ್ಪಾದ ಮಾತುಗಳನ್ನು ಆಡುವನು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗಬಹುದು. ಉದ್ಯೋಗದಲ್ಲಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇವೆ.‌ ಉದ್ಯೋಗದ ಮಿತ್ರನನ್ನು ಭೇಟಿಯಾಗುವಿರಿ. ಆದಾಯವು ನಿಮ್ಮ ಯೋಜನೆಯಷ್ಟು ಇದ್ದರೂ ಆದಾಯವು ಹೆಚ್ಚಿನ ಖರ್ಚಿಗೆ ಕಾರಣವಾಗಬಹುದು. ದಾಂಪತ್ಯದಲ್ಲಿ ಕಲಹವು ಸಾಮಾನ್ಯವಾದರೂ ಇಂದು ಇದು ಬೇರೆ ಪರಿಣಾಮವನ್ನು ಬೀರುವುದು.

ಕುಂಭ ರಾಶಿ: ಇಂದು ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಅವಕಾಶಗಳು ಸಿಗಬಹುದು. ವಿದೇಶೀ ವ್ಯವಹಾರದಲ್ಲಿ ನಿಮಗೆ ಲಾಭವು ಬರಬಹುದು. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವು ಇರುವುದು. ಇಷ್ಟಮಿತ್ರರ ಭೇಟಿಯು ನಿಮ್ಮನ್ನು ಖುಷಿಯಾಗಿ ಇಡುವುದು. ಇನ್ನೊಬ್ಬರ ಕ್ಷೇಮ ಸಮಾಚಾರವನ್ನು ಕೇಳುವಿರಿ. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ ಮುಗಸುವಿರಿ. ಬಹಳ ದಿನಗಳ ಅನಂತರ ಸಂತಾನದ ಸುಖದ ನಿರೀಕ್ಷೆಯಲ್ಲಿ ಸಫಲರಾಗುವಿರಿ. ಸಾಹಸದ‌ ಕೆಲಸಗಳನ್ನು ಮಾಡುವಾಗ ಎಚರಚರ ಅಗತ್ಯ. ಆಪ್ತರಿಂದ ಸಂಪತ್ತನ್ನು ಪಡೆದುಕೊಳ್ಳುವಿರಿ. ಇನ್ನೊಬ್ಬರ ಒತ್ತಾಯದ ಹೊಸ ಕಲಿಕೆಯನ್ನು ಆರಂಭಿಸುವಿರಿ.

ಮೀನ ರಾಶಿ: ಹಣಕಾಸಿನ ವಿಷಯದಲ್ಲಿ ನೀವು ಎಷ್ಟೇ ಎಚ್ಚರದಿಂದ ಇದ್ದರೂ ವ್ಯಯವಾಗುವ ಸಾಧ್ಯತೆ ಹೆಚ್ಚು ಇರಲಿದೆ. ಆಸ್ತಿ ಹಂಚಿಕೆಯು ಇತ್ಯರ್ಥವಾಗಬಹುದು. ಉನ್ನತ ಅಧ್ಯಯನವನ್ನು ಬಯಸಿ ವಿದೇಶಕ್ಕೆ ತೆರಳುವ ಸಾಧ್ಯತೆ ಇರಲಿದೆ. ನಿಮ್ಮ ನಿರೀಕ್ಷೆಯ ಗುರಿಯನ್ನು ತಲುಪುವುದು ಕಷ್ಟವಾದೀತು. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಬಹುದು.‌ ಬಂಧುಗಳ ಮಾತು ನಿಮ್ಮನ್ನು ದಾರಿ ತಪ್ಪಿಸಬಹುದು. ಹಣಕಾಸಿನ ವ್ಯವಹಾರವನ್ನು ಈಗಲೇ ಸರಿಮಾಡಿಕೊಳ್ಳುವುದು ಉತ್ತಮ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಹೆಚ್ಚು ಶ್ರಮಪಡಬೇಕಾದೀತು.

-ಲೋಹಿತಶರ್ಮಾ – 8762924271 (what’s app only)

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!