Horoscope 08 Nov: ದಿನಭವಿಷ್ಯ, ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ, ಮರಣಭೀತಿ ಕಾಡಬಹುದು
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಐಂದ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:16 ರಿಂದ 01:42 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:58 ರಿಂದ 09:24 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:50 ರಿಂದ 12:16ರ ವರೆಗೆ.
ಮೇಷ ರಾಶಿ: ಅನಿರೀಕ್ಷಿತ ತಿರುವುಗಳು ನಿಮ್ಮನ್ನು ಉದ್ವಿಗ್ನಗೊಳಿಸಬಹುದು. ಹೋರಾಟದ ಮನೋಭಾವವು ಇಂದು ಎದ್ದು ತೋರುವುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ಕೆಲವು ಸಮಸ್ಯೆಯನ್ನು ಸುಮ್ನೇ ಬಿಡುವುದು ಯೋಗ್ಯ. ಕಾಲಕ್ರಮೇಣ ಸರಿಯಾಗುವುದು.
ವೃಷಭ ರಾಶಿ: ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ನಿಮ್ಮ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ನೀವು ಸ್ವತಂತ್ರವಾಗಿ ನಿರ್ಧಾರವನ್ನು ತೆಗದುಕೊಳ್ಳಬೇಕಾಗಬಹುದು.
ಮಿಥುನ ರಾಶಿ: ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಉದ್ಯೋಗದಲ್ಲಿ ದೂರದೃಷ್ಟಿ ಇರಲಿ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯು ಅಧಿಕವಾಗಬಹುದು. ಧನ್ವಂತರಿಯ ಉಪಾಸನೆಯಿಂದ ಅನಾರೋಗ್ಯದ ಬಾಧೆಯು ಕಡಿಮೆ ಆದೀತು.
ಕಟಕ ರಾಶಿ: ಪ್ರೇಮವು ಸಾಕೆನಿಸಬಹುದು. ಸುಮ್ಮನೇ ಕುಳಿತುಕೊಳ್ಳುವುದು ಇಷ್ಟವಾಗದು. ಸಂತಾನ ಯೋಗದಿಂದ ನಿಮಗೆ ಖುಷಿ ಸಿಗಲಿದೆ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಾನಸಿಕ ಅಸ್ಥಿರತೆಯಿಂದ ಕಷ್ಟವಾದೀತು.
ಸಿಂಹ ರಾಶಿ: ಉದ್ಯಮವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಅಕ್ರಮ ವ್ಯವಹಾರಗಳು ಎಲ್ಲರಿಗೂ ಗೊತ್ತಾದೀತು. ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು. ಪ್ರತಿಷ್ಠಿತ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳುವರು. ನಿಮಗೆ ಗೊತ್ತಿಲ್ಲದೇ ಇರುವ ವಿಚಾರಗಳನ್ನು ಕೇಳಿ ಪಡೆಯಿರಿ. ಎಲ್ಲವೂ ಇದ್ದರೂ ಒಂಟಿಯಂತೆ ಅನ್ನಿಸಬಹುದು.
ಕನ್ಯಾ ರಾಶಿ: ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ಆರೋಗ್ಯದಲ್ಲಿ ಸುಧಾರಣೆ ಇರಲಿದ್ದು ಕಾರ್ಯಕ್ಕೆ ತಯಾರಾಗುವಿರಿ. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ವಿತಂಡ ವಾದವನ್ನು ಮಾಡಿ ಎಲ್ಲರಿಂದ ದೂರಾಗುವಿರಿ. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು. ಆಲಸ್ಯದ ಕಾರಣ ನಿಮ್ಮ ಕಾರ್ಯವು ಪೂರ್ಣವಾಗದು. ಸಂಗಾತಿಯ ಮಾತನ್ನು ನೀವು ಗಂಭೀರವಾಗಿ ಪರಿಗಣಿಸುವುದಿಲ್ಲ. ಕಛೇರಿಯ ಸ್ಥಳದಲ್ಲಿ ಬಹಳ ಎಚ್ಚರಿಕೆಯಿಂದ ಇರಿ. ಮಿತವಾದ ಮಾತಿರಲಿ.
ತುಲಾ ರಾಶಿ: ಮಾನಸಿಕ ಆಘಾತವು ಇಂದು ಅನಿರೀಕ್ಷಿತ ಆಗಬಹುದು. ಬಾಂಧವರ ನಡುವೆ ವ್ಯವಹಾರದ ಕಾರಣ ಭಿನ್ನಾಭಿಪ್ರಾಯ ಬರಬಹುದು. ಇಂದಿನ ಮನೆಯ ವಾತಾವರಣದುಮನದ ನಿಮ್ಮ ಅಧ್ಯಯನಕ್ಕೆ ತೊಡಬಲಕಾಗಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ವಿವಾಹದ ವಿಳಂಬದಿಂದ ನಿಮಗೆ ಬೇಸರವಾದೀತು. ನಿಮ್ಮ ತಪ್ಪಿನಿಂದ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ಉದ್ಯಮಕ್ಕೆ ಸೇರಲು ತಯಾರಿಯನ್ನು ಮಾಡಿಕೊಳ್ಳುವಿರಿ. ಇಷ್ಟದೇವರ ಸ್ಮರಣೆಯೊಂದಿಗೆ ಹೋಗಿ.
ವೃಶ್ಚಿಕ ರಾಶಿ: ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹವಿರುವುದು. ಗೆಲುವು ಕಷ್ಟಸಾಧ್ಯವಾದೀತು. ಅನಿರೀಕ್ಷಿತ ಪ್ರಯಾಣವಾದರೂ ಕಾರ್ಯದಲ್ಲಿ ಜಯ ಸಿಕ್ಕೀತು. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಭೂಸ್ವಾದೀನವನ್ನು ಮಾಡಿಕೊಳ್ಳುವ ಸಂದರ್ಭವು ಬರಬಹುದು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು. ಇಂದಿನ ವ್ಯವಹಾರವು ಎಚ್ಚರಿಕೆಯಿಂದ ಇರಲಿ. ಕೆಲವೊಮ್ಮೆ ನಿಮ್ಮ ಮಾತುಗಳೇ ನಿಮಗೆ ಮುಳುವಾಗಬಹುದು. ಬಹಳ ದಿನಗಳ ಅನಂತರ ಖುಷಿಯಿಂದ ಇರುವಿರಿ. ಜಂತುಗಳಿಂದ ತೊಂದರೆಯಗೆ ಸಿಕ್ಕಿಕೊಳ್ಳುವಿರಿ.
ಧನು ರಾಶಿ: ಹಿತಶತ್ರುಗಳ ಕಾರಣದಿಂದ ಅವಕಾಶದಿಂದ ವಂಚಿತರಾಗುವಿರಿ. ವಾಹನ ಸಂಚಾರದಲ್ಲಿ ವ್ಯತ್ಯಯವಾಗುವುದು. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ಇನ್ನೊಬ್ಬರನ್ನು ನಿಂದಿಸುವ ಮಾತು ವಿವಾದಕ್ಕೆ ಗುರಿಯಾಗಬಹುದು. ಮಕ್ಕಳಿಂದ ನೀರಿಕ್ಷಿಸುವುದನ್ನು ಕಡಿಮೆ ಮಾಡಿ. ನೆಮ್ಮದಿ ಸಿಗುವುದು.
ಮಕರ ರಾಶಿ: ನಂಬಿಕೆಯು ಭಗ್ನವಾಗಬಹುದು. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಸ್ಪಂದಿಸಬೇಕಾಗುವುದು. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನವುಮನಡಾಗುವುದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ. ಪಾಲುದಾರಿಕೆಯಲ್ಲಿ ವ್ಯತ್ಯಾಸವನ್ನು ಮಾಡಬೇಕಾದೀತು. ಶನೈಶ್ಚರನಿಗೆ ಪ್ರಿಯವಾದ ವಸ್ತುವನ್ನು ನೀಡಿ.
ಕುಂಭ ರಾಶಿ: ಅನಿರೀಕ್ಷಿತ ಪ್ರಯಾಣದಿಂದ ಆಯಾಸವು ಅಧಿಕವಾದೀತು. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಿಸಬೇಕಾಗುವುದು. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ದಾಂಪತ್ಯದಲ್ಲಿ ಮತ್ತೆ ಮತ್ತೆ ಇಂದೇ ಘಟನೆಯು ಮರುಕಳಿಸಬಹುದು.
ಮೀನ ರಾಶಿ: ಇಂದು ಅಂದುಕೊಂಡ ದೇವರ ಕಾರ್ಯವು ನಡೆಯದೇಹೋಗಬಹುದು. ಯಾವುದಾದರೂ ಸಮಾಜ ಬಾಹಿರ ಕೃತ್ಯಗಳಲ್ಲಿ ಸಿಕ್ಕಿಕೊಳ್ಳುವ ಸಂಭವವಿರಲಿದೆ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ.
ಲೋಹಿತಶರ್ಮಾ 8762924271 (what’s app only)