Horoscope 09 Nov: ದಿನಭವಿಷ್ಯ, ವಾಹನ ಖರೀದಿಸುವ ಆಲೋಚನೆ ಸದ್ಯಕ್ಕೆ ಕೈ ಬಿಡುವಿರಿ, ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:42 ರಿಂದ 03:09 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 07:58 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:24 ರಿಂದ 10:50ರ ವರೆಗೆ.
ಮೇಷ ರಾಶಿ: ತಮ್ಮ ಕಾರ್ಯಕ್ಕೆ ಯಾರನ್ನಾದರೂ ಬಳಸಿಕೊಳ್ಳಬಹುದು. ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ಮಾತನಾಡುವಾಗ ಪೂರ್ಣ ಮಾಹಿತಿ ಇರಲಿ. ಯಾರನ್ನೂ ಸುಮ್ಮನೇ ದೂಷಿಸುವುದು ಬೇಡ.
ವೃಷಭ ರಾಶಿ: ಅನ್ಯ ಸ್ಥಳದಲ್ಲಿ ನಿಮ್ಮ ವಾಸವು ಇರುವುದು. ಅನಾರೋಗ್ಯವನ್ನು ನಿರ್ಲಕ್ಷಿಸುವುದು ಬೇಡ. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ನೀವು ಹಾಳುಮಾಡಿಕೊಳ್ಳುವಿರಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ವ್ಯಕ್ತಿಯ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ. ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಬೇಡದ ವಿಚಾರದ ಕಡೆ ಮನಸ್ಸು ಹೋಗುವುದು. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗುವುದು.
ಮಿಥುನ ರಾಶಿ: ಸಲ್ಲದ ಅಪವಾದವು ಬರಬಹುದು. ಬೇಸರಿಸದೇ ಮುನ್ನಡೆಯಿರಿ. ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ನೇರ ಮಾತಿನಿಂದ ಬೇಸರವನ್ನು ಉಂಟುಮಾಡುವಿರಿ. ಸರಳವಾಗಿ ಇರಲು ಇಷ್ಟವಾಗದು. ಶತ್ರುಗಳ ಬಗ್ಗೆ ನಿರಂತರ ಯೋಚನೆ ಮಾಡುವಿರಿ.
ಕಟಕ ರಾಶಿ: ಖರ್ಚು ಮಾಡುವ ಸಂದರ್ಭ ಬಂದರೂ ಅದು ತಪ್ಪಿ ಹೋಗುವುದು. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ದೇಹದ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳದೇ ಗೌಪ್ಯವಾಗಿ ಇಟ್ಟಕೊಳ್ಳುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಉದ್ಯಮಿಗಳು ನೌಕರರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಳ್ಳುವಿರಿ.
ಸಿಂಹ ರಾಶಿ: ಅನಿರೀಕ್ಷಿತ ಹಣದ ಆಗಮನದಿಂದ ಕೊಡಬೇಕಾದವರಿಗೆ ಕೊಟ್ಟು ಮುಗಿಸುವಿರಿ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಸಂಗಾತಿಯ ಮೌನದಿಂದ ನಿಮಗೆ ಆತಂಕ ಹುಟ್ಟಬಹುದು. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಪ್ರೇಮವು ಬಿಟ್ಟರೂ ಬಿಡದೀ ಮಾಯೆ ಎನ್ನುವಂತೆ ಆಗುವುದು.
ಕನ್ಯಾ ರಾಶಿ: ದೇಹಾಲಸ್ಯವು ನಿಮ್ಮ ಕಾರ್ಯದಲ್ಲಿ ಹಿನ್ನಡೆಯಾಗಲಿದೆ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ವೈದ್ಯ ವೃತ್ತಿಯಲ್ಲಿ ಒತ್ತಡವು ಅಧಿಕವಾಗಿ ಬರಬಹುದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಸಣ್ಣ ತಪ್ಪಿಗೆ ಸಿಕ್ಕಿಕೊಳ್ಳುವಿರಿ.
ತುಲಾ ರಾಶಿ: ಆಶಕ್ತರಿಗೆ ಸಹಕಾರ ನೀಡುವಿರಿ. ಸಭ್ಯರ ಸಹವಾಸವು ಸಿಗುವುದು. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು. ಪಾಲುದಾರಿಕೆಯಿಂದ ಹೊರಬರವುದು ಒಳ್ಳೆಯದು ಎಂದು ಅನ್ನಿಸಬಹುದು. ಎಲ್ಲರ ಜೊತೆ ಸ್ನೇಹಿಭಾವದಿಂದ ಬರೆಯುವಿರಿ.
ವೃಶ್ಚಿಕ ರಾಶಿ: ಸಹೋದ್ಯೋಗಿಗಳ ಬಗ್ಗೆ ನಿಮಗೆ ಅಸಮಾಧಾನ ಇರಲಿದೆ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಆಪ್ತರ ಜೊತೆ ಮಾಡಿದ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ಸ್ಥಳ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು. ಆಕಸ್ಮಿಕವಾದ ವಿಷಯದಿಂದ ನಿಮಗೆ ದುಃಖವಾಗುವುದು. ವಿದ್ಯಾಭ್ಯಾಸದ ಕಾರಣಕ್ಕೆ ಪ್ರಯಾಣ ಮಾಡು ಸನ್ನಿವೇಶವು ಬರಬಹುದು.
ಧನು ರಾಶಿ: ನೀವು ಇಂದು ಎಲ್ಲರಿಂದ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುಬುದು. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುಬಿರಿ. ಮಕ್ಕಳ ಬಗ್ಗೆ ನಿಮ್ಮ ಭಾವನೆ ತಪ್ಪಾಗಬಹುದು. ಯಥಾರ್ಥವಾಗಿ ಎಲ್ಲವನ್ನೂ ತಿಳಿದುಕೊಳ್ಳುವುದು ಒಳ್ಳೆಯದು. ಏಕಾಂತವು ಹೆಚ್ಚು ರುಚಿಸುವುದು.
ಮಕರ ರಾಶಿ: ಆದಾಯವು ಕಡಿಮೆ ಆಗಿ ಅನಿವಾರ್ಯದ ಖರ್ಚು ಹೆಚ್ಚಾಗಬಹುದು. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಬಹುದು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ. ಇಂದು ನಿಮಗೆ ಜೊತೆಗೆ ಯಾರೂ ಇಲ್ಲ ಎಂಬ ಅನಾಥಪ್ರಜ್ಞೆಯು ಕಾಡುವುದು. ಸ್ಥಿರಾಸ್ತಿಯನ್ನು ಮಾರಾಟ ಮಾಡಲು ಇಷ್ಟವಿಲ್ಲದಿದ್ದರೂ ಅನಿವಾರ್ಯವಾಗಬಹುದು.
ಕುಂಭ ರಾಶಿ: ಪ್ರವಾಸದಲ್ಲಿ ಇರುವ ನಿಮಗೆ ಮಾನಸಿಕ ಚಿಂತೆ ಕಾಡಬಹುದು. ಮನೆಯ ಬಗ್ಗೆಯೆರ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಗೌಪ್ಯವಾಗಿ ನಿಮ್ಮ ಅಂತರಂಗವನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಮನಸ್ಸಿನ ಚಾಂಚಲ್ಯವನ್ನು ನಿಶ್ಚಲ ಮಾಡಿಕೊಳ್ಳುವಿರಿ.
ಮೀನ ರಾಶಿ: ವ್ಯಾಪಾರದಲ್ಲಿ ಲಾಭ ಮಾಡಲು ಛಲ ಬಿಡದ ಪ್ರಯತ್ನವು ನಡೆಯುವುದು. ಧಾರ್ಮಿಕ ಕಾರ್ಯದಲ್ಲಿ ಅಧಿಕ ಆಸಕ್ತಿಯು ಇರಲಿದೆ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು. ಯಾರಿಂದಲಾದರೂ ಹಿತವಚನದ ಅವಶ್ಯಕತೆ ಇರುವುದು. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಬರಬೇಕಾದ ಹಣವನ್ನು ನೀವೇ ಖುದ್ದಾಗಿ ಹೋಗಿ ಪಡೆಯಬೇಕಾಗಬಹುದು. ಸುಮ್ಮನೇ ಯಾರ ಮೇಲೋ ಸಿಟ್ಟಾಗುವುದು ಬೇಡ.
-ಲೋಹಿತಶರ್ಮಾ 8762924271 (what’s app only)