Horoscope 10 Nov: ದಿನಭವಿಷ್ಯ, ಈ ರಾಶಿಯವರು ತಮ್ಮ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯುವರು
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:24ರ ವರೆಗೆ.
ಮೇಷ ರಾಶಿ: ನೀವು ಸದಾ ಸಂತೋಷದಿಂದ ಇರುವ ಕಾರಣ ಜನರು ನಿಮ್ಮೊಂದಿಗೆ ಸಂಬಂಧ ಹೊಂದಲು ಪ್ರಯತ್ನಿಸುತ್ತಾರೆ. ಸಾಮಾಜಿಕ ಗೌರವವನ್ನು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸಂಗಾತಿಗೆ ಉಡುಗೊರೆಯನ್ನು ನೀಡಿ ಕೋಪವು ಕಡಿಮೆ ಮಾಡುವಿರಿ. ಇಷ್ಟಪಟ್ಟರ ಜೊತೆ ಸಮಯವನ್ನು ಕಳೆಯಲು ಆಗದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಯಸುವಿರಿ.
ವೃಷಭ ರಾಶಿ: ತಿಳುವಳಿಕೆಯಿಂದ ಹೊಸ ಮಾರ್ಗಗಳನ್ನು ಹುಡೂಕಲು ಇಂದು ಖರ್ಚು ಮಾಡುವಿರಿ. ನೀವು ಸೀಮಿತವಾಗಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಖರ್ಚು ಮಾಡುತ್ತೀರಿ. ನಿಮ್ಮ ಕುಟುಂಬ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ.
ಮಿಥುನ ರಾಶಿ: ಇಂದು ಅಮೂಲ್ಯವಾದ ವಸ್ತುವು ನಿಮ್ಮ ಪಾಲಾಗಬಹುದು. ಆದರೆ ಅನಗತ್ಯ ವೆಚ್ಚಗಳು ಸಹ ಬರಲಿವೆ. ನಿಮ್ಮ ವ್ಯವಹಾರದಲ್ಲಿಯೂ ಸಹ ನೀವು ಭಾಗವಹಿಸುವಿರಿ ಮತ್ತು ಕೆಲಸ ಪೂರ್ಣಗೊಳ್ಳುತ್ತದೆ. ನೀವು ಯಾವುದೇ ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ಖಂಡಿತವಾಗಿಯೂ ಮಾಡಿ, ಭವಿಷ್ಯದಲ್ಲಿ ಪ್ರಯೋಜನವಿದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು.
ಕಟಕ ರಾಶಿ: ನಿಮ್ಮಲ್ಲಿ ಇಂದು ದಾನ, ಧರ್ಮದ ಪ್ರಜ್ಞೆ ವರ್ಧಿಸಬಹುದು. ಧಾರ್ಮಿಕ ಆಚರಣೆಗಳಲ್ಲಿ ಶ್ರದ್ಧೆಯಿಂದ ಪಾಲ್ಗೊಳ್ಳುವಿರಿ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಜಾಗರೂಕರಾಗಿರಿ ಮತ್ತು ಆಹಾರದ ಮೇಲೆ ಸಂಯಮವಿರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ. ನಿಮ್ಮದು ನಿಮಗೇ ಸಿಕ್ಕರೂ ಸಂತೃಪ್ತಿ ಇರದು. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ.
ಸಿಂಹ ರಾಶಿ: ಈ ಕಾರಣಾಂತರಗಳಿಂದ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವ್ಯವಹಾರದ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಇಂದು ಫಲಪ್ರದವಾಗದು. ತಾಳ್ಮೆ ಮತ್ತು ಪ್ರತಿಭೆಯಿಂದ ಶತ್ರು ಗೆಲ್ಲುವಲ್ಲಿ ನೀವು ಯಶಸ್ಸನ್ನು ಗಳಿಸುವಿರಿ. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು. ಸಣ್ಣ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಯೋಗ್ಯ ಚಿಕಿತ್ಸೆಯನ್ನು ಕೊಡುವಿರಿ. ವಿವಾಹೇತರ ಸಂಬಂಧದಿಂದ ನಿಮಗೆ ಬೇಸರವಾಗುವುದು. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ಇಂದು ತಿಳಿಯುವುದು. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು.
ಕನ್ಯಾ ರಾಶಿ: ನೀವು ಇತರರ ಒಳ್ಳೆಯದನ್ನು ಯೋಚಿಸುವಿರಿ ಹಾಗೂ ಒಳ್ಲೆಯ ಮನಸ್ಸಿನಿಂದ ಸೇವೆ ಮಾಡುತ್ತೀರಿ. ಇಂದು ನಿಮ್ಮ ಗುರುಗಳ ಬಗ್ಗೆ ಭಕ್ತಿ ಮತ್ತು ನಿಷ್ಠೆಯನ್ನು ತೋರಿಸುವಿರಿ. ನೀವು ಹೊಸ ಹೂಡಿಕೆ ಮಾಡಬೇಕಾದರೆ ಅದು ಶುಭವಾಗುತ್ತದೆ. ಕುಟುಂಬದಲ್ಲಿಯೂ ಶಾಂತಿ ಮತ್ತು ಸಂತೋಷ ಇರುತ್ತದೆ. ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ದಾನದಿಂದ ಪುಣ್ಯವನ್ನು ಗಳಿಸುವಿರಿ. ನಿಮ್ಮ ಮಕ್ಕಳ ಮನೋಭಾವವನ್ನು ಅವರಿಗೆ ಇಷ್ಟವಾದುದನ್ನು ಮಾಡುವಿರಿ. ಇಂದಿನ ವ್ಯಾಪಾರದಿಂದ ಆರ್ಥಿಕತೆಯು ಬಲವಾಗುವುದು. ಮಕ್ಕಳು ಆರ್ಥಿಕತೆಯ ದುರ್ಬಲತೆಯಿಂದ ವಿದ್ಯಾಭ್ಹ್ಯಾಸವನ್ನು ನಿಲ್ಲಿಸಬೇಕಾದೀತು. ಸ್ತ್ರೀಯರಿಂದ ಸಹಾಯ ಪಡೆದರೂ ನೋಡುಗರು ಅದನ್ನು ಅಪಾರ್ಥ ಮಾಡಿಕೊಳ್ಳಬಹುದು.
ತುಲಾ ರಾಶಿ: ಇಂದು ಧೈರ್ಯದಿಂದ ಕಷ್ಟದ ಕಾರ್ಯಗಳನ್ನು ನಿರ್ವಹಿಸುವಿರಿ. ದೇಹದ ನೋವಿಗೆ ಸಂಗಾತಿಯ ಉಪಚಾರವು ಸಿಗುವುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ವ್ಯವಹಾರದಲ್ಲಿ ಹಣದ ಲಾಭವಾಗಲಿದೆ. ತಂದೆ ತಾಯಿಯರ ಸೇವೆಯನ್ನು ಮಾಡುವ ಅವಕಾಶ ಸಿಗುವುದು. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ಉದ್ಯೋಗವನ್ನು ಕೊಡಿಸಲು ನಿಮಗೆ ಹಣವನ್ನು ಕೇಳಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ಬೇರೆಯವರ ಒತ್ತಡದಿಂದಾಗಿ ಹೇಳದೇ ಮುಚ್ಚಿಡುವಿರಿ. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು.
ವೃಶ್ಚಿಕ ರಾಶಿ: ಮಾನಸಿಕ ತೊಂದರೆ, ಆತಂಕ ಮತ್ತು ನಿರಾಸಕ್ತಿಯಿಂದ ನಿಮ್ಮ ಮೇಲೆ ನಿಮಗೆ ಹಿಡಿತ ಸಾಲದು. ಪೋಷಕರ ಬೆಂಬಲವು ಆತಂಕವನ್ನು ಕಡಿಮೆ ಮಾಡಬಹುದು. ಮಾತಿನಲ್ಲಿ ಮಾಧುರ್ಯ ಇಲ್ಲದಿದ್ದರೆ ಸಂಬಂಧದಲ್ಲಿ ಕಹಿಯಾದೀತು. ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಕೆಯ ಕಡೆ ನಿಮ್ಮ ಗಮನ ಇರುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತರಗಳಿಂದ ನಿಲ್ಲಿಸುವಿರಿ. ಇಂದು ನಿಮಗೆ ಏಕಾಂತವೇ ಹೆಚ್ಚು ಸುಖವನ್ನು ಕೊಡುವುದು.
ಧನು ರಾಶಿ: ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲಿತಾಂಶವನ್ನು ಪಡೆಯುವಿರಿ. ಇಂದು ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲದ ಸಾಧ್ಯತೆಯಿದೆ. ಮೋಜಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ. ಇದು ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಸಿದ್ಧತೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗಬಹುದು. ಬಂಧುಗಳ ವಿಯೋಗವೂ ಆಗಬಹುದು. ಸ್ನೇಹಿತರು ಕೇಳಿದರೂ ಸಹಾಯ ಮಾಡದೇ ಇರುವುದು ನಿಮಗೆ ಸಂದೇಹ ಬರುವುದು. ಪ್ರೇಮವು ನೀವಂದುಕೊಂಡಂತೆ ಮುಕ್ತಾಯವಾದುದ್ದು ನಿಮಗೆ ಖುಷಿಕೊಡುವುದು. ಅಂದುಕೊಂಡಂತೆ ಆಗಿದ್ದಕ್ಕೆ ಸಂತೋಷವು ಇರಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವಿರಿ. ಗೌಪ್ಯವಾಗಿ ವ್ಯವಹಾರವನ್ನು ನಡೆಸುವಿರಿ.
ಮಕರ ರಾಶಿ: ಇಂದು ವ್ಯರ್ಥವಾಗಿ ಖರ್ಚು ಮಾಡುವುದನ್ನು ತಪ್ಪಿಸಬೇಕು. ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ಆತುರದ ಪ್ರಯಾಣವನ್ನು ಮಾಡುವುದು ಬೇಡ. ಯಂತ್ರೋಪಕರಣಗಳ ಮಾರಾಟದಿಂದ ನಷ್ಟವಾಗುವ ಸಾಧ್ಯತೆ ಇದೆ. ಬಂದ ಅವಕಾಶಗಳನ್ನು ಕೈ ಬಿಡುವಿರಿ. ನಿಮ್ಮ ಮಾತಿಗೆ ಯಾರೂ ಬೆಲೆ ಕೊಡದೇ ಇರುವುದು ಬೇಸರವಾದೀತು. ಇಂದು ಯಾವ ಕಾರ್ಯಕ್ಕೂ ನಿಮಗೆ ಶ್ರದ್ಧೆಯು ಇಲ್ಲವಾಗುವುದು.
ಕುಂಭ ರಾಶಿ: ಇಂದು ಕಾರ್ಯದಲ್ಲಿ ನಿರತರಾಗುತ್ತಾರೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ಇಂದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ. ಇಂದು ನಿಮ್ಮ ಕೆಲಸವನ್ನು ಬದಲು ಮಾಡಿಕೊಳ್ಳಲಿದ್ದೀರಿ. ಶುಭ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ. ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು. ಕಳೆದುದ್ದು ಸಣ್ಣ ವಸ್ತುವೇ ಆದರೂ ಬಹಳ ಬೇಸರಗೊಳ್ಳುವಿರಿ. ಮನೆಯ ಕೆಲಸದಲ್ಲಿ ಸಮಯವನ್ನು ಕಳೆಯುವಿರಿ. ಮಕ್ಕಳಿಗೆ ಉದ್ಯೋಗವನ್ನು ಕೊಡಿಸಲು ಕೆಲವರನ್ನು ಭೇಟಿಯಾಗುವಿರಿ. ಕಣ್ಣಿನ ತೊಂದರೆಯಿಂದ ಕಷ್ಟವಾದೀತು. ನಿರುದ್ಯೋಗದಿಂದ ಮನೆಯಲ್ಲಿಯೇ ಕುಳಿತು ಬೇಸರವಾಗುವುದು. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳನ್ನು ಆಡುವರು.
ಮೀನ ರಾಶಿ: ಇಂದು ಯಾವುದೋ ಸಂಸ್ಥೆಯಿಂದ ಸಾಲ ತೆಗೆದುಕೊಳ್ಳಲು ಬಯಸುತ್ತಾರೆ. ಇಂದು ನೀವು ಸರ್ಕಾರದಿಂದ ಗೌರವ ಸಿಗಬಹುದು. ಹಳೆಯ ಸ್ನೇಹಿತರು ಬೆಂಬಲಕ್ಕೆ ನಿಲ್ಲುವರು. ನಿಮ್ಮ ಸಂಗಾತಿಯಿಂದ ಕೆಲವು ಕಾರ್ಯಗಳಿಗೆ ಬೆಂಬಲವನ್ನು ಪಡೆಯಬಹುದು. ಇಂದಿನ ಕಾರ್ಯವನ್ನು ಸಾಧನೆ ಮಾಡಲು ಹೆಚ್ಚಿನ ಓಡಾಟವು ಬರಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಗೌರವವೂ ಸಿಗಲಿದೆ. ಸರ್ಕಾರದ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ. ಆರೋಗ್ಯವೂ ಕೆಡಬಹುದು. ನಿಮಗೆ ಬರುವ ಆಸ್ತಿಯಲ್ಲಿ ಹೆಚ್ಚಿನ ಲಾಭವನ್ನು ಅಪೇಕ್ಷಿಸುವಿರಿ. ಮಾತಿನಿಂದ ನಿಮಗೆ ಕಷ್ಟವಾದೀತು. ಖರ್ಚಿನ ವಿಚಾರದಲ್ಲಿ ಗೊಂದಲವಾಗಬಹುದು.
-ಲೋಹಿತಶರ್ಮಾ 8762924271 (what’s app only)
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ