Horoscope 10 September: ದಿನಭವಿಷ್ಯ, ಈ ರಾಶಿಯವರಿಗೆ ಮನೆ ಬಿಟ್ಟು ಹೋಗಲು ಭಯ ಕಾಡಬಹುದು, ಆರ್ಥಿಕ ಭದ್ರತೆಗೆ ಶ್ರಮಪಡುವಿರಿ
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಸೆಪ್ಟೆಂಬರ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ವ್ಯತಿಪಾತ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಸಂಜೆ 05:05 ರಿಂದ 06:37 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:02ರ ವರೆಗೆ, ಗುಳಿಕ ಕಾಲ ಸಂಜೆ 03:33 ರಿಂದ 05:05ರ ವರೆಗೆ.
ಮೇಷ ರಾಶಿ: ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸಂಗಾತಿಗೆ ಉಡುಗೊರೆಯನ್ನು ನೀಡಿ ಕೋಪವು ಕಡಿಮೆ ಮಾಡುವಿರಿ. ಇಷ್ಟಪಟ್ಟರ ಜೊತೆ ಸಮಯವನ್ನು ಕಳೆಯಲು ಆಗದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಯಸುವಿರಿ. ಇಂದು ಮೌನವಾಗಿ ಇರುವುದು ಹಿತವೆನಿಸುವುದು. ಇಂದು ನಿಮ್ಮ ಉತ್ಸಾಹಕ್ಕೆ ಯಾರಿಂದಲಾದರೂ ತೊಂದರೆಯಾಗಬಹುದು.
ವೃಷಭ ರಾಶಿ: ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ಆಪ್ತರೂ ನಿಮ್ಮ ಸ್ವಭಾವವನ್ನು ಕಂಡು ದೂರವಾಗಬಹುದು. ಬಾಯಾರಿಕೆಯು ಹೆಚ್ಚಾದೀತು. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ. ಸಂಪತ್ತಿಗಾಗಿ ನೀವು ಬಹಳ ಶ್ರಮಪಡುವಿರಿ. ಆರ್ಥಿಕತೆಯ ಅಭಿವೃದ್ಧಿಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುವುದು.
ಮಿಥುನ ರಾಶಿ: ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಇಂದೂ ಕೂಡ ಮನೆಯಿಂದ ಕಛೇರಿಯ ಕೆಲಸವನ್ನು ಮಾಡುವಿರಿ. ವಿಷ್ಣುಸಹಸ್ರನಾಮವನ್ನು ಪಠಿಸಿ.
ಕಟಕ ರಾಶಿ: ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ. ನಿಮ್ಮದು ನಿಮಗೇ ಸಿಕ್ಕರೂ ಸಂತೃಪ್ತಿ ಇರದು. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ. ಸಂಗಾತಿಯ ಪ್ರೀತಿಯು ಕಡಿಮೆ ಆದೀತು.
ಸಿಂಹ ರಾಶಿ: ಆರ್ಥಿಕ ವಿಚಾರದಲ್ಲಿ ಸಲ್ಲದ ಅಪವಾದಗಳು ಬರಬಹುದು. ಸಣ್ಣ ಪುಟ್ಟ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಯೋಗ್ಯ ಚಿಕಿತ್ಸೆಯನ್ನು ಕೊಡುವಿರಿ. ವಿವಾಹೇತರ ಸಂಬಂಧದಿಂದ ನಿಮಗೆ ಬೇಸರವಾಗುವುದು. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ಇಂದು ತಿಳಿಯುವುದು. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು. ನಿಮ್ಮನ್ನೇ ಒಮ್ಮೆ ನೋಡಿಕೊಳ್ಳಿ.
ಕನ್ಯಾ ರಾಶಿ: ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ನೀವು ನಿರಂತರ ಕಾರ್ಯವನ್ನು ಬದಲಿಸುತ್ತಿರುವುದು ನಿಮ್ಮ ಅಭ್ಯಾಸವಾಗುವುದು. ದಾನದಿಂದ ಪುಣ್ಯವನ್ನು ಗಳಿಸುವಿರಿ. ನಿಮ್ಮ ಮಕ್ಕಳ ಮನೋಭಾವವನ್ನು ಅವರಿಗೆ ಇಷ್ಟವಾದುದನ್ನು ಮಾಡುವಿರಿ. ಇಂದಿನ ವ್ಯಾಪಾರದಿಂದ ಆರ್ಥಿಕತೆಯು ಬಲವಾಗುವುದು. ಮಕ್ಕಳು ಆರ್ಥಿಕತೆಯ ದುರ್ಬಲತೆಯಿಂದ ನಿಲ್ಲಿಸಬೇಕಾದೀತು. ಸ್ತ್ರೀಯರಿಂದ ಸಹಾಯ ಪಡೆದರೂ ನೋಡುಗರು ಅದನ್ನು ಅಪಾರ್ಥ ಮಾಡಿಕೊಳ್ಳಬಹುದು. ಭೇಟಿಯನ್ನು ಮಾಡಲು ಕಾದು ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ.
ತುಲಾ ರಾಶಿ: ತಂದೆ ತಾಯಿಯರ ಸೇವೆಯನ್ನು ಮಾಡುವಿರಿ. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ನಿಮ್ಮ ಹಿತಶತ್ರುಗಳಿಂದ ತೊಂದರೆ ಬರುವ ಸಾಧ್ಯತೆ ಇದ್ದು, ಅವರನ್ನು ಸರಿಮಾಡಿಕೊಳ್ಳಿ. ಉದ್ಯೋಗವನ್ನು ಕೊಡಿಸಲು ನಿಮಗೆ ಹಣವನ್ನು ಕೇಳಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ಬೇರೆಯವರ ಒತ್ತಡದಿಂದಾಗಿ ಹೇಳದೇ ಮುಚ್ಚಿಡುವಿರಿ. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು. ಸುಬ್ರಹ್ಮಣ್ಯನ ಆರಾಧನೆಯನ್ನು ಮಾಡಿ.
ವೃಶ್ಚಿಕ ರಾಶಿ: ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಯ ಕಡೆ ನಿಮ್ಮ ಗಮನ ಇರುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ನಿಮ್ಮ ಭಾವನೆಗಳನ್ನು ಇನ್ನೊಬ್ಬರ ಬಳಿ ಹೇಳುಕೊಳ್ಳುವಿರಿ. ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತೆಗಳಿಂದ ನಿಲ್ಲಿಸುವಿರಿ. ಇಂದು ನಿಮಗೆ ಏಕಾಂತವೇ ಹೆಚ್ಚು ಸುಖವನ್ನು ಕೊಡುವುದು.
ಧನು ರಾಶಿ: ಅಪರಿಚಿತರ ಮಾತನ್ನು ನೀವು ನಂಬುವಿರಿ. ವಿಕ್ರಯದಲ್ಲಿ ಲಾಭವಿರಲಿದೆ. ಪರೀಕ್ಷೆಯ ಸಿದ್ಧತೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗಬಹುದು. ಬಂಧುಗಳ ವಿಯೋಗವೂ ಆಗಬಹುದು. ಪಾಲುದಾರಿಕೆಯಲ್ಲಿ ನಿಮಗೆ ವಂಚನೆಯಾದಂತೆ ಅನ್ನಿಸಬಹುದು. ಸ್ನೇಹಿತರು ಕೇಳಿದರೂ ಸಹಾಯ ಮಾಡದೇ ಇರುವುದು ನಿಮಗೆ ಸಂದೇಹ ಬರುವುದು. ಪ್ರೇಮವು ನೀವಂದುಕೊಂಡಂತೆ ಮುಕ್ತಾಯವಾದುದ್ದು ನಿಮಗೆ ಖುಷಿಕೊಡುವುದು. ಅಂದುಕೊಂಡಂತೆ ಆಗಿದ್ದಕ್ಕೆ ಸಂತೋಷವು ಇರಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವಿರಿ. ಗೌಪ್ಯವಾಗಿ ವ್ಯವಹಾರವನ್ನು ನಡೆಸುವಿರಿ. ಲೋಭದಿಂದ ಇರುವ ಸಂಪತ್ತನ್ನೂ ಕಳೆದುಕೊಳ್ಳಬೇಕಾಗಬಹುದು.
ಮಕರ ರಾಶಿ: ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ತಾಯಿಯ ಕಡೆಯಿಂದ ನಿಮಗೆ ಬೇಕಾದ ಸಹಾಯವನ್ನು ನಿರೀಕ್ಷಿಸಬಹುದು. ಆತುರದ ಪ್ರಯಾಣವನ್ನು ಮಾಡುವುದು ಬೇಡ. ಯಂತ್ರೋಪಕರಣಗಳ ಮಾರಾಟದಿಂದ ನಷ್ಟವಾಗುವ ಸಾಧ್ಯತೆ ಇದೆ. ಬಂದ ಅವಕಾಶಗಳನ್ನು ಕೈ ಬಿಡುವಿರಿ. ನಿಮ್ಮ ಮಾತಿಗೆ ಯಾರೂ ಬೆಲೆ ಕೊಡದೇ ಇರುವುದು ಬೇಸರವಾದೀತು. ಇಂದು ಯಾವ ಕಾರ್ಯಕ್ಕೂ ನಿಮಗೆ ಶ್ರದ್ಧೆಯು ಇಲ್ಲವಾಗುವುದು. ಹನುಮಾನ್ ಚಾಲೀಸ್ ಪಠಣ ಮಾಡಿ.
ಕುಂಭ ರಾಶಿ: ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು. ಕಳೆದುದ್ದು ಸಣ್ಣ ವಸ್ತುವೇ ಆದರೂ ಬಹಳ ಬೇಸರಗೊಳ್ಳುವಿರಿ. ಮನೆಯ ಕೆಲಸದಲ್ಲಿ ಸಮಯವನ್ನು ಕಳೆಯುವಿರಿ. ಮಕ್ಕಳಿಗೆ ಉದ್ಯೋಗವನ್ನು ಕೊಡಿಸಲು ಕೆಲವರನ್ನು ಭೇಟಿಯಾಗುವಿರಿ. ಕಣ್ಣಿನ ತೊಂದರೆಯಿಂದ ಕಷ್ಟವಾದೀತು. ನಿರುದ್ಯೋಗದಿಂದ ಮನೆಯಲ್ಲಿಯೇ ಕುಳಿತು ಬೇಸರವಾಗುವುದು. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳನ್ನು ಆಡುವರು. ಹಣದ ಹರಿವು ಇಂದು ಸಾಮಾನ್ಯವಾಗಿರುವುದು. ಸಂಗಾತಿಯ ಜೊತೆ ಸಣ್ಣ ವಾಗ್ವಾದವು ನಡೆಯಬಹುದು. ಶಿವಕವಚದಿಂದ ನಿಮ್ಮ ದಿನದ ಕಾರ್ಯಗಳು ನಿರಾತಂಕವಾಗಿ ಆಗುವುದು.
ಮೀನ ರಾಶಿ: ಇಂದಿನ ಕಾರ್ಯಸಾಧನೆಗೆ ಹೆಚ್ಚಿನ ತಿರುಗಾಟವು ಬರಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಗೌರವವೂ ಸಿಗಲಿದೆ. ಸರ್ಕಾರದ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ. ಆರೋಗ್ಯವೂ ಕೆಡಬಹುದು. ನಿಮಗೆ ಬರುವ ಆಸ್ತಿಯಲ್ಲಿ ಹೆಚ್ಚಿನ ಲಾಭವನ್ನು ಅಪೇಕ್ಷಿಸುವಿರಿ. ಮಾತಿನಿಂದ ನಿಮಗೆ ಕಷ್ಟವಾದೀತು. ಖರ್ಚಿನ ವಿಚಾರದಲ್ಲಿ ಗೊಂದಲವಾಗಬಹುದು. ಇಂದು ಕೋಪವು ಹೆಚ್ಚಾಗಬಹುದು. ಸಂಗಾತಿಯನ್ನು ಪ್ರೀತಿಯಿಂದ ಗೆಲ್ಲಬೇಕಾದೀತು.
ಲೋಹಿತಶರ್ಮಾ 8762924271 (what’s app only)