Nithya Bhavishya: ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ, ಹಣದ ವ್ಯವಹಾರದಿಂದ ದೂರವಿರಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 14, 2023 | 6:40 AM

ಇಂದಿನ(2023 ಮಾರ್ಚ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Nithya Bhavishya: ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ, ಹಣದ ವ್ಯವಹಾರದಿಂದ ದೂರವಿರಿ
ಪ್ರಾತಿನಿಧಿಕ ಚಿತ್ರ
Image Credit source: deathbattle.fandom.com
Follow us on

ಶುಭೋದಯ ಓದುಗರೇ….ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ(2023 ಮಾರ್ಚ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಮಂಗಳವಾರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಜ್ರ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ ಸಾಯಂಕಾಲ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03: 42ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:42 ರಿಂದ ಬೆಳಗ್ಗೆ 11:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 12:42 ರಿಂದ 02:12ರ ವರೆಗೆ.

ಮೇಷ: ನಿಮ್ಮ ಸ್ನೇಹಿತರೊಂದಿಗೆ ಇಂದು ಹೆಚ್ಚು ಸಮಯವನ್ನು ಕಳೆಯುವಿರಿ. ಯಾವುದೇ ಮಹತ್ವದ ಹಣಕಾಸಿನ ವಹಿವಾಟುಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ. ನೀವು ಸಣ್ಣ ವಿಷಯಗಳ ಬಗ್ಗೆಯೂ ಗಾಢವಾಗಿ ಇಂದು ಚಿಂತಿಸುವಿರಿ. ಅಂತಹವುಗಳನ್ನು ಮರೆತು ಮುನ್ನಡೆಯಿರಿ. ಮನಸ್ಸ ಯಾವ ಸಂದರ್ಭದಲ್ಲಿಯೂ ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ದೊಡ್ಡ ನಿರ್ಧಾರಗಳನ್ನು ನೀವೊಬ್ಬರೇ ತೆಗೆದುಕೊಳ್ಳಬೇಡಿ. ಸಣ್ಣ ಅನಾರೋಗ್ಯ ಸಮಸ್ಯೆಯು ಇಂದು ಬಗೆಹರಿಯುತ್ತವೆ. ಧನ್ವಂತರಿಯ ಜಪ ಮಾಡಿ.

ವೃಷಭ: ಪೋಷಕರಿಂದ ನಿಮ್ಮ ಕಾರ್ಯಕ್ಕೆ ಬೆಂಬಲ ಸಿಗಲಿದೆ. ಕಾರ್ಯದ ಸ್ಥಳದಲ್ಲಿ ಒಳ್ಳೆಯ ಸುದ್ದಿಗಳು ಬರಲಿವೆ. ಇಂದು ಭೂಮಿಗೆ ಸಂಬಂಧಿಸಿದಂತೆ ಲಾಭ ಪಡೆಯುವಿರಿ. ವಿದ್ಯಾರ್ಥಿಗಳು ಸಾಧನೆಗಳನ್ನು ಮಾಡಲು ಇಚ್ಛಿಸುವರು. ಸಂಗಾತಿಯ ಜೊತೆ ನೀವು ಪ್ರವಾಸಕ್ಕೆ ತೆರಳಲು ಯೋಚಿಸುವಿರಿ. ದೂರದ ಸ್ಥಳಗಳಿಗೆ ಹೋಗುವು ಬೇಡ. ನಿಮ್ಮ ಪ್ರೀತಿಯನ್ನು ಯಾರೊಂದಿಗೂ ಹಂಚಿಕೋಳ್ಳಲಾರಿರಿ. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಹಣದ ವ್ಯವಹಾರವನ್ನು ಸಂಬಂಧದವರಲ್ಲಿ ಮಾಡಿ ಸಂಬಂಧವು ಕೆಡಬಹುದು. ಐಕಮತ್ಯ ಮಂತ್ರವನ್ನು ಪಠಿಸಿ.

ಮಿಥುನ: ಹೊಸತನ್ನು ಕಲಿಯಲು ಸಿದ್ಧರಾಗುವಿರಿ. ನಿಮ್ಮ ಕಡೆಯಿಂದ ಸ್ವಲ್ಪ ಕೆಲಸದಿಂದ ನೀವು ಗಣನೀಯ ಪ್ರಮಾಣದ ಹಣ ಪಡೆಯಬಹುದು. ನೀವು ಯುವಕರೊಂದಿಗೆ ಸಮಯ ಕಳೆಯುವಿರಿ. ನಿಮಗೆ ವಹಿಸಿದಷ್ಟು ಕೆಲಸವನ್ನು ಏಕಾಗ್ರತೆಯಿಂದ ಮಾಡಿ. ನೀವು ಸಾಲವನ್ನು ಪಡೆಯಲು ಆರ್ಥಿಕಸಂಸ್ಥೆಗಳಿಂದ ಆಹ್ವಾನ ಬರಬಹುದು. ದಾಂಪತ್ಯದಲ್ಲಿ ಮನಸ್ತಾಪಗಳು ಎದ್ದು ಶಾಂತವಾಗುವುದು. ನಿಮ್ಮ ಆರೋಗ್ಯವು ಇಂದು ಚೆನ್ನಾಗಿರಲಿದೆ. ಪ್ರಯಾಣವನ್ನು ಮಾಡಬೇಡಿ. ವಿಷ್ಣುಸಹಸ್ರನಾಮದ ಶ್ರವಣ ಮಾಡಿ, ಇಲ್ಲವೇ ಪಠಿಸಿ.

ಕಟಕ: ಇಂದು ನೀವು ಸಂತೋಷಕೂಟದಲ್ಲಿ ಭಾಗವಹಿಸುವಿರಿ. ಮನೆಯಲ್ಲಿಯೇ ಇದ್ದು ಮನೆಯಲ್ಲಿಯೇ ಆನಂದವನ್ನು ಪಡೆಯುವಿರಿ. ನಿಮ್ಮ ಹಣದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಿರಿ. ಸ್ನೇಹಿತರು ನಿಮಗೆ ಸಹಾಯ ಮಾಡಲಿದ್ದಾರೆ. ಕೆಲವು ಮಾತುಗಳಿಂದ ನೀವು ಚಂಚಲರಾಗುತ್ತೀರಿ. ಮಾತನಾಡಲು ಯಾರಿಲ್ಲದೇ ನಿಮ್ಮ ಸ್ನೇಹಿತರೊಂದಿಗೆ ಸಮಯ ಕಳೆಯಿರಿ. ನಿಮ್ಮನ್ನು ಸಂತೋಷದಿಂದ ಇಟ್ಟುಕೊಳ್ಳಲು ಬೇಕಾದ ಮಾರ್ಗವನ್ನು ಕಂಡುಕೊಳ್ಳಿ. ನಿಮ್ಮ ಪೋಷಕರ ಸಲಹೆಯನ್ನು ಅನುಸರಿಸಿ, ನಿಮ್ಮ ಸಂಬಂಧವನ್ನು ಉತ್ತಮವಾಗಿಸಿಕೊಳ್ಳಿ. ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಿ.

ಸಿಂಹ: ನೀವು ಇಂದು ರಾಜಕೀಯ ಜನರನ್ನು ಭೇಟಿಯಾಗಲಿದ್ದೀರಿ. ನಿಮಗೆ ಉದ್ಯೋಗಕ್ಕೆ ಬೇಕಾದ ಉಪಯುಕ್ತ ಮಾಹಿತಿಯನ್ನು ಪಡೆಯುವಿರಿ. ಈ ದಿನ ನೀವು ಎಂದಿನಂತೆ ಇರದೇ ಶಾಂತಿಯುತವಾಗಿ ನಡೆದುಕೊಳ್ಳುವಿರಿ. ತಮ್ಮ ಜೀವನದಲ್ಲಿ ಬಹಳಷ್ಟು ಸಾಧಿಸಿದ ಜನರನ್ನು ಕಂಡು ನೀವು ಅಸೂಯೆ ಪಡಬಹುದು. ನೀವು ಗುರಿಯ ಸಾಧನೆಗೆ ಬೇಕಾದ ಮಾರ್ಗವನ್ನು ಅನುಸರಿಸಿ. ಏಕಾಗ್ರವಾಗಿ ನಿಮ್ಮ ಕಾರ್ಯಗಳು ಮುಂದುವರಿಯಲಿ. ಅನಿರೀಕ್ಷತ ಅನಾರೋಗ್ಯದಿಂದ ಹಣವು ಖರ್ಚಾಗಬಹುದು. ಮಕ್ಕಳ ಆರೋಗ್ಯದ ಹೆಚ್ಚಿನ ಕಾಳಜಿ ಅಗತ್ಯ. ಸೂರ್ಯೋಪಾಸನೆಯನ್ನು ಮಾಡಿ.

ಕನ್ಯಾ: ನೀವು ನಿರೀಕ್ಷಿಸುತ್ತಿರುವ ನಿಮಗೆ ಸಿಗಲಿದೆ. ಇಂದು ನಿಮಗೆ ಆಶ್ಚರ್ಯಗಳಿಂದ ಕೂಡಿದ ಸಂಗತಿಗಳು ಸಿಗಬಹುದು. ನಿಮ್ಮನ್ನು ಭೇಟಿ ಮಾಡಲು ಆಪ್ತರು ಬರಬಹುದು. ಕೆಲಸದ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಆಗಲಿದೆ. ಈ ಮೊದಲೇ ನಿರ್ಧರಿಸಿದ ಗುರಿಯನ್ನು ತಲುಪುವಿರಿ. ಗುಡ್ಡ ಬೆಟ್ಟಗಳನ್ಬು ಏರುವ ಸಾಹಸವನ್ನು ಮಾಡಲಿದ್ದೀರಿ. ಕೃಷಿಕರು ಉತ್ತಮ ಲಾಭವನ್ನು ಪಡೆಯಲಿದ್ದಾರೆ. ಯಾರ ಮೇಲು ಆಪಾದನೆಯನ್ನು ಮಾಡಬೇಡಿ. ಲ ನಿಮ್ಮ ಮನಸ್ಸು ನಿಮ್ಮದೇ ನಿಯಂತ್ರದಲ್ಲಿರಲಿ.

ತುಲಾ: ತುಂಬಾ ದಿನದಿಂದ ಮಾಡುತ್ತಿದ್ದ ಕಾರ್ಯ ಯೋಜನೆಗಳು ಇಂದು ಪೂರ್ಣಗೊಳ್ಳುತ್ತವೆ. ಆರ್ಥಿಕಯಲ್ಲಿ ಸ್ಪಷ್ಟತೆ ದೊರೆಯಲಿದೆ. ನಿಮ್ಮ ಪ್ರಯತ್ನದ ಫಲವಾಗಿ ಇತರರು ನಿಮ್ಮನ್ನು ಗೌರವಿಸುತ್ತಾರೆ. ಅಸ್ಥಿರ ಮನಸ್ಸು ನಿಮ್ಮ ಸಂಬಂಧಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಿಂದ ನಿಮ್ಮ ಪ್ರೇಮ ಸಂಬಂಧಕ್ಕೆ ಸ್ವಲ್ಪ ತೊಂದರೆಯಾಗಲಿದೆ. ನಿಮ್ಮ ಸಂಗಾತಿಯ ಅನುಮಾನಗಳನ್ನು ಪರಿಹರಿಸುವಿರಿ. ಅಗತ್ಯವಿರುವುದರಿಂದ ನೀವು ಅವರಿಗೆ ಹೆಚ್ಚು ಭರವಸೆ ನೀಡಬೇಕು. ನಿಮ್ಮ ಆರೋಗ್ಯವು ನಿಮ್ಮ ದೇಹದ ದೃಷ್ಟಿಯಿಂದ ಉತ್ತಮವಾಗಿರುತ್ತದೆ.

ವೃಶ್ಚಿಕ: ನಿಮಗೆ ಪ್ರಮುಖ ಕೆಲಸವನ್ನು ನಿಭಾಯಿಸುವ ಜವಾಬ್ದಾರಿಯನ್ನು ಕೊಡಬಹುದು. ಇಂತಹ ವಿಷಯಗಳನ್ನು ನಿಭಾಯಿಸುವಲ್ಲಿ ನೀವು ನಿಜವಾಗಿಯೂ ಪ್ರವೀಣರಾಗಿರುತ್ತೀರಿ. ನಿಮ್ಮ ಸಂಗಾತಿಯು ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಾರೆ. ಇದು ನಿಮಗೆ ಸ್ವಲ್ಪ ಕಿರಿಕಿರಿಯನ್ನೂ ಉಂಟುಮಾಡುತ್ತದೆ. ಆದರೆ ಅವರ ಸಲಹೆಯನ್ನು ಅನುಸರಿಸುವುದು ನಿಮಗೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಕೆಲವು ಸಮಯ ಏಕಾಂತವನ್ನು ಬಯಸಿ ಒಂಟಿಯಾಗಿ ಕುಳಿತುಕೊಳ್ಳುವಿರಿ.

ಧನುಸ್ಸು: ಮನೆಯಲ್ಲಿ ಬಹಳ ಕೆಲಸಗಳಿದ್ದು, ಅವುಗಳನ್ನು ಪೂರ್ಣಗೊಳಿಸಲು ನಿರತರಾಗುವಿರಿ. ಅದು ನಿಮ್ಮನ್ನು ನಿಮ್ಮ ಕುಟುಂಬಕ್ಕೆ ಹತ್ತಿರ ತರುತ್ತದೆ. ನಿಮ್ಮ ಸಹೋದ್ಯೋಗಿಗಳು ಸಹ ನಿಮಗೆ ಒಳ್ಳೆಯ ಸುದ್ದಿಯನ್ನು ನೀಡುತ್ತಾರೆ. ನಿಮ್ಮ ನಡವಳಿಕೆಯ ಬಗ್ಗೆ ನೀವು ಭಯಭೀತರಾಗಬಹುದು. ಮದುವೆಯಾದವರು ನೆಲೆಸಲು ಹೊಸ ಮನೆ ಅಥವಾ ಹೊಸ ಆಸ್ತಿಯನ್ನು ಹುಡಕಲಿದಗದೀರಿ. ನಿಮ್ಮ ಅಜಾಗರೂಕತೆಯ ಪರಿಣಾಮವಾಗಿ ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವುದರಿಂದ ನಿಮ್ಮ ಆರೋಗ್ಯಕ್ಕೆ ಗಮನಬೇಕು.

ಮಕರ: ನೀವು ಎಲ್ಲದಕ್ಕೂ ಆದ್ಯತೆಗಳು ಮತ್ತು ವೇಳಾಪಟ್ಟಿಗಳನ್ನು ಹೊಂದಿಸುತ್ತೀರಿ. ನೀವು ಮತ್ತು ನಿಮ್ಮ ಸಂಗಾತಿ ಉತ್ತಮ ಸಮಯವನ್ನು ಹೊಂದಿರುತ್ತೀರಿ. ವಿಶೇಷವಾಗಿ ನಿಮ್ಮ ಅಹಂಕಾರವನ್ನು ಬದಿಗಿಟ್ಟು ತಪ್ಪುಗಳಿಗೆ ಜವಾಬ್ದಾರರಾಗಿರುತ್ತೀರಿ. ನಿಮ್ಮ ನ್ಯೂನತೆಗಳನ್ನು ಒಪ್ಪಿಕೊಳ್ಳುವುದು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು ಇಂದು ಅತ್ಯುತ್ತಮ ದಿನವಾಗಲಿದೆ. ಸರ್ಕಾರಿ ಕೆಲಸವು ನಿಧಾನವಾಗಲಿದೆ.

ಕುಂಭ: ನೀವು ಏಕಾಂಗಿಯಾಗಿ ಕಳೆಯಲು ಸೂಕ್ತವಾಗಿದೆ. ಸಮಯವು ನಿಮಗೆ ಆತ್ಮವಿಶ್ವಾಸವನ್ನು ಪಡೆಯಲು ಮತ್ತು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಭವಿಷ್ಯಕ್ಕಾಗಿ ಯೋಜಿಸಬಹುದು. ನೀವು ಸಣ್ಣ ಪ್ರವಾಸವನ್ನು ಸಹ ತೆಗೆದುಕೊಳ್ಳಬಹುದು. ಜೀವನ ಸಂಗಾತಿಯನ್ನು ಹುಡುಕುತ್ತಿರುವ. ನಕಾರಾತ್ಮಕ ಪರಿಣಾಮಗಳನ್ನು ತರುತ್ತದೆ, ಆದ್ದರಿಂದ ನೀವು ವಾರದ ಕೊನೆಯ ಭಾಗದಲ್ಲಿ ಆರೋಗ್ಯದ ವಿಷಯದಲ್ಲಿ ಹೆಚ್ಚು ಬಳಲುತ್ತೀರಿ.

ಮೀನ: ನೀವು ಇಂದು ಅಪರೂಪದ ಸಂದರ್ಭಗಳು ಎದುರಾಗಬಹುದು. ಅಂತ್ಯದ ವೇಳೆಗೆ ನೀವು ಹೊಸ ಹಣದ ಮೂಲವನ್ನು ಹೊಂದಿರಬಹುದು. ನಿಮಗಾಗಿ ಅತ್ಯಂತ ಹೊಂದಾಣಿಕೆಯ ಪಾಲುದಾರ ಎಂದು ಸಾಬೀತುಪಡಿಸುವ ಯಾರಾದರೂ ಈ ನಿಮ್ಮ ಜೀವನವನ್ನು ಪ್ರವೇಶಿಸುತ್ತಾರೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಸಾಪ್ಟ್ ವೇರ್ ಉದ್ಯೋಗಗಳಿಗೆ ಉತ್ತಮ ಸ್ಥಾನ ಸಿಗಲಿದೆ.

ಲೋಹಿತಶರ್ಮಾ ಇಡುವಾಣಿ

Published On - 5:30 am, Tue, 14 March 23