ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಹಸ್ತಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:57 ರಿಂದ 12:28 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:31 ರಿಂದ ಸಂಜೆ 05:02ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:54 ರಿಂದ 09:25ರ ವರೆಗೆ.
ಮೇಷ ರಾಶಿ: ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಹೆಚ್ಚಿನ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ರಿಸ್ಕ್ ಗಳು ಹೆಚ್ಚಿರಬಹುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ನೀವು ಇರುವಿರಿ. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಯಾರ ಮಾತನ್ನೂ ಕೇಳದ ಚಿತ್ತಚಾಂಚಲ್ಯವು ಇರಲಿದೆ. ಶರೀರ ಪೀಡೆಯು ಕಾಣಿಸಿಕೊಂಡೀತು.
ವೃಷಭ ರಾಶಿ: ನಿಮ್ಮ ಜನಪ್ರಿಯತೆಯು ನಿಮಗೆ ಖುಷಿ ಕೊಟ್ಟೀತು. ನಿಮ್ಮ ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುತ್ತಿರುವಿರಿ. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ನಿಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿರಲಿ. ಸ್ನೇಹಿತರಿಂದ ಉಡುಗೊರೆ ಸಿಗಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಅತಿಯಾದ ಕೋಪವನ್ನು ಮಾಡಿಕೊಳ್ಳುವುದು ಬೇಡ. ಆಲಸ್ಯದಿಂದ ಉತ್ತಮ ವಿಚಾರಗಳನ್ನು ಕಳೆದುಕೊಳ್ಳಬೇಕಾದೀತು. ಅಸಂಬದ್ಧ ಚರ್ಚೆಗಳಿಂದ ದೂರ ಇರುವಿರಿ. ಅಧಿಕಾರಿಗಳ ನಿಕಟ ಸಂಪರ್ಕವೇ ನಿಮಗೆ ಮುಳುವಾಗಬಹುದು.
ಮಿಥುನ ರಾಶಿ: ಜನರ ಜೊತೆ ಬೆರೆಯಲು ಹಿಂದೇಟು ಹಾಕುವಿರಿ. ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಿಸಬಹುದು. ಉದ್ಯೋಗ ವೃದ್ಧಿಯ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ. ಆರೋಗ್ಯವನ್ನು ಸರಿಮಾಡಿಕೊಳ್ಳುವುದು ಪ್ರಾಮುಖ್ಯವಾಗಿರಲಿ. ಸಂಗಾತಿಗೆ ನಿಮ್ಮ ಪ್ರೀತಿಯು ಕಡಿಮೆಯಾಗಿರುವುದು. ಪ್ರಶಂಸೆಯಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಮನೆಯವರಿಗೆ ಹೆಚ್ಚು ಸಮಯವನ್ನು ಕೊಡುವಿರಿ. ನಂಬಿಕೆಯನ್ನು ಕಳೆದುಕೊಂಡವರ ಜೊತೆ ಪುನಃ ವ್ಯವಹಾರವು ಕಷ್ಟವಾದೀತು.
ಕಟಕ ರಾಶಿ: ವಿವಾಹ ಜೀವನವು ಕಷ್ಟ ಎನಿಸಬಹುದು. ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ನಿಮ್ಮ ಅಂತಸ್ತು ಕಡಿಮೆ ಆದಂತೆ ಎಂಬ ಭಾವನೆಯು ಬರುವ ಸಾಧ್ಯತೆ ಇದೆ. ಗುಣಾತ್ಮಕ ಚಿಂತನೆಯನ್ನು ಮಾಡಿ. ಏನೇ ಬಂದರೂ ಎಲ್ಲವೂ ವಿಧಿ ನಿಯಮ ಎಂಬ ನಿರ್ಧಾರಕ್ಕೆ ಬರುವಿರಿ. ಅಧಿಕ ಚಿತ್ತಚಾಂಚ್ಯಲ್ಯವು ಜೊತೆಗಾರರಿಗೆ ಕಷ್ಟವಾದೀತು. ಇನ್ನೊಬ್ಬರ ವಸ್ತುವಿನ ಬಗ್ಗೆ ಮೋಹವು ಇರುವುದು. ಆತ್ಮಪ್ರಶಂಸೆಯು ಅಧಿಕಾವಾಗಿ ತೋರುವುದು. ಸಾಧಿಸಬೇಕು ಎಂಬ ಮಹದಾಸೆ ಇದ್ದರೂ ಅದು ಕ್ಷಣಿಕವಾಗುವುದು. ನಿಮ್ಮದೇ ಆದ ಕಾರ್ಯದಲ್ಲಿ ಮಗ್ನರಾಗುವಿರಿ.
ಸಿಂಹ ರಾಶಿ: ಭೂಮಿಯ ಮಾರಾಟ ಮಾಡಿದ ಕಾರಣ ನಿಮ್ಮ ಜೀವನಕ್ಕೆ ಬೇಕಾದ ಸಂಪತ್ತು ಸಿಗಲಿದೆ. ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ಅಪರಿಚಿತರ ಜೊತೆ ಮಾತನಾಡಲು ನೀವು ಹಿಂಜರಿಯಬಹುದು. ಸ್ಮರಣಶಕ್ತಿಯ ದೋಷವು ಸ್ವಲ್ಪವೇ ಬರಲಿದೆ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ನಿಮ್ಮ ವ್ಯಕ್ತಿತ್ವವು ಇತರರಿಗೆ ಉದಾಹರಣೆಯಾಗಬಹುದು. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಗಾತ್ರ ಇಲ್ಲ ಕಾರ್ಯವನ್ನು ಮಾಡಲು ಉತ್ಸಾಹ ಇರಲಿದೆ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು. ನಿಮ್ಮ ನಿಲುವಲ್ಲಿ ನೀವಿರುವಿರಿ.
ಕನ್ಯಾ ರಾಶಿ: ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಧಿಕ ಸಾಲವು ನಿಮ್ಮ ಮಾನಸಿಕಸ್ಥಿತಿಯನ್ನೇ ಬದಲಿಸೀತು. ಬಂಧುಗಳು ನಿಮ್ಮನ್ನು ಬಹಳವಾಗಿ ದೂರುವರು. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ಆಡಿಕೊಳ್ಳುವವರ ಮುಂದೆ ಮುಗ್ಗರಿಸಿ ಬೀಳಬಹುದು. ನಿಮ್ಮ ಚಿಂತನೆಯನ್ನು ವಿಸ್ತರಿಸಿಕೊಳ್ಳುವುದು ಉತ್ತಮ. ವಿವಾಹ ಸಮಾರಂಭಗಳಿಗೆ ಭೇಟಿ ಕೊಡುವಿರಿ.
ತುಲಾ ರಾಶಿ: ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ವಿದ್ಯಾರ್ಥಿಗಳು ಓದುವ ವಿಚಾರದಲ್ಲಿ ಹಿಂಜರಿದರೂ ಅನ್ಯರ ಪ್ರೋತ್ಸಾಹದಿಂದ ಮತ್ತೆ ಮುಂದುವರಿಯುವರು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು. ಮಕ್ಕಳ ವಿಚಾರವಾಗಿ ನಿಮಗೆ ದೂರಬರಬಹುದು. ನಿಮ್ಮ ಸ್ವಂತ ಕೆಲಸಕ್ಕೆ ಉದ್ಯೋಗಿಗಳನ್ನು ಬಳಸಿಕೊಳ್ಳುವಿರಿ.
ವೃಶ್ಚಿಕ ರಾಶಿ: ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸಣ್ಣ ಸಮಸ್ಯೆಗಳು ಹುಟ್ಟಿಕೊಳ್ಳಬಹುದು. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು. ಮಕ್ಕಳ ವಿವಾಹದ ಬಗ್ಗೆ ಬಂಧುಗಳ ಜೊತೆ ಗಂಭೀರವಾಗಿ ಚರ್ಚಿಸುವಿರಿ. ಸಂಗಾತಿಯ ಕಡೆಯಿಂದ ನಿಮಗೆ ಶುಭಸಮಾಚಾರವು ಗೊತ್ತಾಗುವುದು. ಇಂದಿನ ನಿಮ್ಮ ಪ್ರಯಾಣವು ನಿಮಗೆ ಹಿತಕರವಾದ ಅನುಭವವನ್ನು ನೀಡಬಹುದು. ಇಂದು ನೀವು ಮನೋರಂಜನೆಯ ಜೊತೆ ಕಾಲ ಕಳೆಯುವಿರಿ. ಕಡಿಮೆ ಬೆಲೆಯ ವಸ್ತುವನ್ನು ಅಧಿಕ ಮೌಲ್ಯವನ್ನು ಕೊಟ್ಟು ಖರೀದಿಸುವಿರಿ.
ಧನು ರಾಶಿ: ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು. ಪರಿಶ್ರಮದಿಂದ ಧನಾರ್ಜನೆ ಮಾಡಿದ್ದು ನಿಮಗೆ ಅಧಿಕ ಸಂತೋಷವಾಗುವುದು. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದಿನ ಸಂದರ್ಭವನ್ನು ನೋಡಿಕೊಂಡು ಮಾತನಾಡಿ. ನಿಮ್ಮ ಕೆಲಸದ ಸಮಯವು ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ನಿಯಮಗಳನ್ನು ನೀವೇ ದಾಟುವಿರಿ. ರಾಜಕೀಯ ಜೀವನವು ನಿಮಗೆ ಅತಂತ್ರ ಸ್ಥಿತಿಯನ್ನು ತರಬಹುದು. ಹಣಕಾಸಿನ ಕೊರತೆಯನ್ನು ನೀವು ಕುಟುಂಬಕ್ಕೆ ಗೊತ್ತಾಗದಂತೆ ನಿರ್ವಹಿಸುವಿರಿ.
ಮಕರ ರಾಶಿ: ನಮ್ರತೆಯು ನಿಮ್ಮನ್ನು ಎತ್ತರಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವ್ಯವಹಾರದಲ್ಲಿ ಚುರುಕು ಸಾಲದು. ಉದ್ಯೋಗದಲ್ಲಿ ದಿನದಿಂದ ದಿನಕ್ಕೆ ಉಂಟಾದ ಒತ್ತಡದಿಂದ ಉದ್ಯೋಗವನ್ನು ಬದಲಿಸಲು ಯೋವಿಸುವಿರಿ. ಯಂತ್ರೋಪಕರಣದ ಮಾರಾಟಗಾರರಿಗೆ ಅಧಿಕ ಲಾಭವಾಗುವುದು. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನೀವು ಇಂದು ನೋಡಲು ಪ್ರಶಾಂತವಾಗಿ ಕಂಡರೂ ನಿಮ್ಮಳಗೆ ಅಶಾಂತಿಯ ತರಂಗಗಳು ಒಂದೊಂದೊಗಿಯೇ ಮೇಲೆ ಬರುವುದು. ಹಣವನ್ನು ವ್ಯಯಿಸಿ ಉನ್ನತ ಅಧಿಕಾರವನ್ನು ಪಡೆಯುವಿರಿ.
ಕುಂಭ ರಾಶಿ: ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ನಿಮಗೆ ತೆರೆದಿರುವುದು. ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಮನೆಗೆ ಅತಿಥಿಗಳ ಆಗಮನವಾಗಬಹುದು. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ನಿರ್ಧಾರವಿರಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು. ಅಹಂಕಾರದಿಂದ ಸಾಧಿಸಲು ಶಕ್ಯವಾಗದ್ದನ್ನು ಪ್ರೀತಿಯಿಂದ ಸಾಧಿಸುವಿರಿ. ಸಂಗಾತಿಯಿಂದ ಪ್ರೀತಿಯು ಸಿಗಲಿದೆ. ವಿದೇಶಪ್ರಯಾಣದ ನಿರೀಕ್ಷೆಯಲ್ಲಿಯೇ ಇರುವಿರಿ.
ಮೀನ ರಾಶಿ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊರತೆಯು ಹೆಚ್ಚು ಕಂಡುಬರುವುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಆಂತರಿಕ ಕಲಹವನ್ನು ಜಗಜ್ಜಾಹಿರ ಮಾಡಿಕೊಳ್ಳುವಿರಿ. ಇಂದು ಬಂಧುಗಳ ಕಾರಣಕ್ಕಾಹಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು. ಉದ್ಯೋಗದಲ್ಲಿ ಆಯ್ಕೆ ಸಮಸ್ಯೆಯು ಬರಬಹುದು. ಶತ್ರುಗಳ ಸಂಚಿಗೆ ಬಲಿಯಾಗುವಿರಿ. ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಜವಾಬ್ದಾರಿಯುತ ಸ್ಥಾನವು ನಿಮಗೆ ಬೇಸರ ತರಿಸುವುದು.
ಲೋಹಿತಶರ್ಮಾ – 8762924271 (what’s app only)