Horoscope 16 August: ದಿನಭವಿಷ್ಯ, ಈ ರಾಶಿಯವರು ಆಭರಣಗಳನ್ನು ಖರೀದಿಸುವ ಇಚ್ಛೆ ಹೊಂದಿದ್ದರೆ ಖರೀದಿಸಿ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಆಗಸ್ಟ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 16 August: ದಿನಭವಿಷ್ಯ, ಈ ರಾಶಿಯವರು ಆಭರಣಗಳನ್ನು ಖರೀದಿಸುವ ಇಚ್ಛೆ ಹೊಂದಿದ್ದರೆ ಖರೀದಿಸಿ
ಸಂಗ್ರಹ ಚಿತ್ರImage Credit source: iStock Photo
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Aug 16, 2023 | 12:01 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವರೀಯಾನ್, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:37ರ ವರೆಗೆ.

ಮೇಷ ರಾಶಿ:

ಒಂದೇ ಕೆಲಸವನ್ನು ಹೆಚ್ಚು ಸಮಯ ಮಾಡಲು ತೆಗೆದುಕೊಳ್ಳುವಿರಿ. ಒತ್ತಡ ನಿವಾರಣೆಗೆ ಧ್ಯಾನ ಹಾಗೂ ಯೋಗಾಭ್ಯಾಸವನ್ನು ಮಾಡಬೇಕಾದೀತು. ಅಪರಿಚಿತರು ಆಪ್ತರಾಗಬಹುದು ಮಾತುಕತೆಯಿಂದ.‌ ದುರಭ್ಯಾಸಕ್ಕೆ ಅವಕಾಶಗಳು ಬರಬಹುದು. ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ. ನಿಮ್ಮ ವರ್ತನೆಯನ್ನು ಯಾರಾದರೂ ಕಂಡು ನಕ್ಕಾರು. ನಿಮ್ಮ‌ವೇಷಭೂಷಣದ ಬಗ್ಗೆ ಟೀಕೆಗಳನ್ನು ಮಾಡಬಹುದು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ಇರುವಿರಿ. ಆರ್ಥಿಕತೆಯು ಬಲವನ್ನು ಪಡೆದುಕೊಂಡಿದ್ದು ನಿಮಗೆ ಸಂತೋಷವನ್ನು ತರುವುದು. ವಿವಿಧ ಮೂಲಗಳಿಂದ ಧನಾಗಮನವಾಗುವುದು. ಸಾರ್ವಜನಿಕ ಕ್ಷೇತ್ರಕ್ಕೆ ಬರಲು ಸಲಹೆಯನ್ನು ಪಡೆಯುವಿರಿ.

ವೃಷಭ ರಾಶಿ:

ಇಂದು ಹೆಚ್ಚು ಮಾನಸಿಕ ಒತ್ತಡವು ಇರದಿದ್ದರೂ ಕೆಲಸವು ಬಹಳ ಇರಲಿದೆ. ಒಂದು ಕ್ಷಣವೂ ವಿರಾವಿಲ್ಲದಂತೆ ಕಾರ್ಯವನ್ನು ಮಾಡುವಿರಿ. ಇಷ್ಟವಿಲ್ಲದ ಕಾರ್ಯಕ್ಕೆ ಎಷ್ಟೇ ಒತ್ತಾಯ ಮಾಡಿದರೂ ನೀವು ಒಪ್ಪುವುದಿಲ್ಲ. ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಸ್ವತಂತ್ರವಾಗಲು ನೀವು ಬಯಸುವಿರಿ. ವೃತ್ತಿಯಲ್ಲಿ ಬದಲಾವಣೆಯನ್ನು ಬಯಸುವಿರಿ. ಅಪರಿಚಿತರ ನಿಮಗೆ ಕೆಲವು ತೊಂದರೆಗಳು ಬರಬಹುದು. ಸೌಂದರ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ನಿಮ್ಮ ಉದ್ದೇಶವನ್ನು ಸಾಕಾರಗೊಳಿಸಲು ಪ್ರಯತ್ನಿಸುವಿರಿ. ಉನ್ನತ ವಿದ್ಯಾಭ್ಯಾಸವನ್ನು ಮಾಡುವ ಇಚ್ಛೆಯನ್ನು ಉಳಿಸಿಕೊಳ್ಳುವಿರಿ.

ಮಿಥುನ ರಾಶಿ:

ಮನಸ್ಸು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಅಗತ್ಯ. ನಿಮ್ಮ ಮಾತಿನ ಹಾಸ್ಯವು ಇನ್ನೊಬ್ಬರಿಗೆ ನೋವನ್ನು ಮಾಡೀತು. ಆಕಸ್ಮಿಕ ಧನಲಾಭದ ನಿರೀಕ್ಷೆಯಲ್ಲಿ ಇರುವಿರಿ. ಇನ್ನೊಬ್ಬರ ಮೇಲಿಟ್ಟ ನಂಬಿಕಯು ಕಳೆದುಹೋಗಬಹುದು. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ‌ದುಷ್ಪರಿಣಾಮವನ್ನು ಉಂಟುಮಾಡಬಹುದು. ಉದ್ಯೋಗದ ಕಾರಣ ಹೊರಗಡೆ ಹೋಗಬೇಕಾಗಬಹುದು. ನಿಷ್ಠುರ ನಡತೆಯ ಕಾರಣ ನೀವು ಎಲ್ಲರಿಂದ ದೂರವಿರಬೇಕಾಗಬಹುದು. ನಿಮ್ಮದೇ ಕೆಲಸಗಳನ್ನು ಮಾಡುತ್ತ ಆರಾಮಾಗಿ ದಿನವನ್ನು ಕಳೆಯುವಿರಿ. ವ್ಯಾಪಾರಸ್ಥರು ಬಹುಮಟ್ಟಿಗೆ ಲಾಭವನ್ನೇ ಪಡೆಯುವರು.

ಕರ್ಕ ರಾಶಿ:

ನಿಮ್ಮ ಕಾರ್ಯಕ್ಕೆ ಹೆಚ್ಚಿನ ವೇತನವು ಸಿಗಬಹುದು. ಅನಗತ್ಯ ಖರ್ಚನ್ನು ಮಾಡಬೇಕಾಗಬಹುದು. ದೂರದ ಬಂಧುಗಳ ಭೇಟಿಯು ಸಂತಸವನ್ನು ಕೊಡಬಹುದು. ಎದುರಿನವರ ಜೊತೆ ನಿಮ್ಮದೇ ಸರಿ ಎಂಬಂತೆ ತಪ್ಪಿದ್ದರೂ ವಾದಿಸುವಿರಿ. ಶತ್ರುಗಳನ್ನು ತಿಳಿದುಕೊಳ್ಳುವ ಅಶಕ್ತಿಯು ನಿಮಗೆ ಇರುವುದು. ಆತುರದಿಂದ ಯಾವ ವ್ಯವಹಾರವನ್ನೂ ಮಾಡುವುದು ಬೇಡ. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಹಾಕಿಕೊಳ್ಳಿ. ಅಹಂಕಾರದಿಂದ ಬೀಗುವ ಅವಶ್ಯಕತೆ ಇಲ್ಲ. ಸಮಾಧಾನದಿಂದ ನೀವು ಮುಂದುವರಿಯುವುದು ಸೂಕ್ತ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮನೋವ್ಯಥೆಯ ಕಾರಣ ಎಲ್ಲರ ಮೇಲೂ ಸಿಟ್ಟಾಗುವಿರಿ.

ಸಿಂಹ ರಾಶಿ:

ಇನ್ನೊಬ್ಬರಿಂದ ಪ್ರೇರಿತರಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗುವಿರಿ. ಆರ್ಥಿಕತೆಯ ಮೇಲೆ ನಿಮಗೆ ಮೋಹವು ಕಡಿಮೆ ಆಗಬಹುದು. ವಂಚನೆಗೆ ಪ್ರತಿವಂಚನೆಯನ್ನು ಮಾಡುವ ಬುದ್ಧಿಯು ಬರಬಹುದು. ಆಶಿಸ್ತಿನ ಕೆಲಸಕ್ಕೆ ಹಿರಿಯರಿಂದ ಬೈಸಿಕೊಳ್ಳುವಿರಿ. ಅಪರಿಚಿತ ವ್ಯಕ್ತಿಯಿಂದ ತೊಂದರೆಗಳು ಎದುರಾಗಬಹುದು. ಭವಿಷ್ಯದ ಬಗ್ಗೆ ಅಸ್ಪಷ್ಟ ಆಲೋಚನೆಗಳು ನಿಮಗೆ ಸಮಾಧಾನವನ್ನು ತರದು. ಆಪ್ತರ ಜೊತೆ ನಿಮ್ಮ ಸಮಸ್ಯೆಯನ್ನು ಹಂಚಿಕೊಂಡು ನಿಶ್ಚಿಂತರಾಗಿ. ಆರೋಗ್ಯದ ಬಗ್ಗೆ ಗಮನವು ಅವಶ್ಯಕ. ತಂದೆಯ ಕಡೆಯಿಂದ ನಿಮಗೆ ಉದ್ಯೋಗಕ್ಕೆ ಸಹಕಾರವನ್ನು ಕೊಡಬಹುದು.

ಕನ್ಯಾ ರಾಶಿ:

ನಿಮಗೆ ನಿರೀಕ್ಷಿತ ಉದ್ಯೋಗವು ಸಿಗದೇ ಇರುವುದು ನಿಮ್ಮನ್ನು ಖಿನ್ನಗೊಳಿಸೀತು. ಋಣ ಬಾಧೆಯು ಮುಕ್ತಾಯವಾಯಿತು ಎನ್ನುತ್ತಿದ್ದಂತೆ ಇನ್ನೊಂದು ಆರಂಭವಾಗುವುದು. ಬಂಧುಗಳಿಂದ, ಮನೆಯ ಹಿರಿಯರಿಂದ ನೀವು ಅಲಕ್ಷ್ಯಕ್ಕೆ ಒಳಗಾಗುವಿರಿ. ಇದು ನಿಮಗೆ ಬಹಳ ಬೇಸರವನ್ನು ತರಿಸುವುದು. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ನಿರ್ವಹಿಸಲಾಗಾದೇ ಕಷ್ಟಪಡುವಿರಿ. ಬಂಧುಗಳ ಕಡೆಯಿಂದ ನಿಮಗೆ ಶುಭವಲ್ಲದ ವಾರ್ತೆಯೊಂದು ಬರಬಹುದು. ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ.

ತುಲಾ ರಾಶಿ:

ಸಮಯ ಹಾಗೂ ಸಂದರ್ಭಗಳನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳ ಜೊತೆ ಹಂಚಿಕೊಳ್ಳಿ. ವ್ಯಾಪರದ ವಹಿವಾಟನ್ನು ಮಾಡುತ್ತಿದ್ದರೆ ನಿಮಗೆ ಹೆಚ್ಚು ಕೆಲಸವೂ ಪ್ರಶಂಸೆಯೂ ಆರ್ಥಿಕಬಲವೂ ಬರಲಿದೆ. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಿ. ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡುವುದು. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಅತಿಯಾದ ಶ್ರದ್ಧೆಯು ಬರುವುದು. ನಿಮ್ಮದಲ್ಲದ ವಸ್ತುಗಳನ್ನು ನೀವು ಇಟ್ಟುಕೊಳ್ಳದೇ ಹಿಂದಿರುಗಿಸಿ. ಆಲಸ್ಯವನ್ನು ಬಿಟ್ಟು ಇಂದು ಕಾರ್ಯದಲ್ಲಿ ಹೆಚ್ಚು ತೊಡಗುವಿರಿ.

ವೃಶ್ಚಿಕ ರಾಶಿ:

ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಆಡಳಿತಕ್ಕೆ ಸಂಬಂಧಿಸಿದಂತೆ ಲೋಪ ದೋಷಗಳು ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭವನ್ನು ಎದುರಿಸುವಾಗ ಗೊತ್ತಿದ್ದೂ ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಗೊಂದಲವು ಬರಬಹುದು. ಆಪ್ತರ ಜೊತೆಗಿನ ಒಡನಾಟವು ನಿಮ್ಮ ಭಾರವಾದ ಮನಸ್ಸನ್ನು ಹಗುರಗೊಳಿಸುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಕಡಿಮೆ ಇರಬಹುದು. ಸ್ನೇಹಿತರ ನಡುವಿನ ಬಾಂಧವ್ಯವು ವೃದ್ಧಿಯಾಗಲಿದೆ. ಸ್ತ್ರೀಸುಖವನ್ನು ನೀವು ಅನುಭವಿಸುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಿ ಆತಂಕವನ್ನು ಸೃಷ್ಟಿ ಮಾಡುವಿರಿ.

ಧನು ರಾಶಿ:

ನೀವು ಅಂದುಕೊಂಡ ಕೆಲಸವು ಆಗದೇಹೋದೀತು. ಸರ್ಕಾರಿ ದಾಖಲೆಗಳನ್ನು ಭದ್ರವಾಗಿ ಇರಿಕೊಳ್ಳಿ. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಚರ್ಚೆಯು ನಡೆಯಬಹುದು. ವಾಹನ ಚಲಾಯಿಸಲು ನಿಮಗೆ ಕಷ್ಟವಾದೀತು. ನಿಮ್ಮವರು ನಿಮ್ಮ ದೋಷವನ್ನೇ ಎತ್ತಿಹೇಳಬಹುದು. ಸಾಹಿತ್ಯದ ಆಸಕ್ತರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಎಲ್ಲವನ್ನೂ ಬಾಹುಬಲದಿಂದ ಸಾಧಿಸುತ್ತೇನೆ ಎಂಬ ಹುಂಬುತನ ವ್ಯರ್ಥ. ಬುದ್ಧಿಯನ್ನು ಬಳಸಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಯಾವುದೋ ಸಂದರ್ಭದಲ್ಲಿ ಹೊರಹಾಕುವಿರಿ.

ಮಕರ ರಾಶಿ:

ಹಣಕಾಸಿನ ವ್ಯವಹಾರದಿಂದ ನಿಮಗೆ ಅಪವಾದವು ಬರಬಹುದು. ದಾಂಪತ್ಯದಲ್ಲಿ ಅನಗತ್ಯ ವಾಗ್ವಾದಗಳು ನಡೆಯಬಹುದು. ಕುಟುಂಬದಲ್ಲಿ ಕೆಲವು ವಿಷಯಗಳನ್ನು ನಿಮಗೆ ಹೇಳದೇ ರಹಸ್ಯವಾಗಿ ಇಡುವರು. ಯಾರದೋ ಸಿಟ್ಟನ್ನು ಇನ್ನಾರದೋ ಮೇಲೆ ತೀರಿಸಿಕೊಳ್ಳುವಿರಿ. ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ನಿಮ್ಮ ಯಾವ ಉದ್ಯೋಗವೂ ಊರ್ಜಿತವಾಗದು. ಪಾಲುದಾರಿಕೆಯ ವ್ಯವಹಾರವು ನಿಮಗೆ ಸಾಕು ಎನಿಸಬಹುದು. ಹಳೆಯ ವಾಹನವನ್ನು ನೀವು ಮಾರಾಟ‌ಮಾಡುವಿರಿ. ನೀವು ಇಂದು ಹೆಚ್ಚು ಒಂದೇ ಚಿಂತೆಯಲ್ಲಿ ಮಗ್ನರಾಗಿ ಇರುವಿರಿ. ಮನಸ್ಸು ನಿರ್ಲಿಪ್ತವಾಗಿ ಇರುವುದು.

ಕುಂಭ ರಾಶಿ:

ನಿಮ್ಮ ಸ್ಥಾನದ ರಕ್ಷಣೆಗಾಗಿ ಇನ್ನೊಬ್ಬರ ಮೇಲೆ ಆರೋಪವನ್ನು ಮಾಡುವಿರಿ. ಕೆಲವು ಕೆಲಸಗಳಿಗೆ ನೀವು ಆಲಸ್ಯವನ್ನು ತೋರುವಿರಿ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ನೀವು ಗೌರವಿಸಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯ ಕೊರತೆ ಕಾಣಿಸುವುದು. ನಕಾರಾತ್ಮಕ ಆಲೋಚನೆಯನ್ನು ನೀವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಆಸಕ್ತಿಯ‌ ಕ್ಷೇತ್ರವೂ ನಿಮಗೆ ಇಷ್ಟವಾಗದೇ ಹೋಗುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ಸಿಕ್ಕ ಅಧಿಕಾರವನ್ನು ಸದುಪಯೋಗವಾಗುವಂತೆ ಮಾಡಿಕೊಳ್ಳಿ. ದೂರಾಲೋಚನೆಯನ್ನು ಅತಿಯಾಗಿ ಇಟ್ಟುಕೊಳ್ಳುವುದು ಬೇಡ.

ಮೀನ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರುವುದು. ಪತ್ನಿಯ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವಿರಿ. ಇದಕ್ಕಾಗಿ ವಾಗ್ವಾದವು ನಡೆಯಬಹುದು. ಮಕ್ಕಳನ್ನು ನಿರ್ಲಕ್ಷಿಸಿದರೆ ಕಷ್ಟವಾದೀತು. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಕಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳದೇ ಪರಿಚಿತರನ್ನು ಕೇಳಿ. ಎಂದೋ ಆದ ದೈಹಿಕ ಪೀಡೆಯು ಪುನಃ ಕಾಣಿಸಿಕೊಳ್ಳಬಹುದು. ವಿವಾಹ ಸಂಭ್ರಮದ ವಾತಾವರಣ ಮನೆಯಲ್ಲಿ ಇರಲಿದೆ. ಉದ್ಯೋಗಸ್ಥ ಸ್ತ್ರೀಯರು ಮಾನಸಿಕ ಕಿರಿಕಿರಿಯನ್ನು ಅನುಭವಿಸುವರು.

-ಲೋಹಿತಶರ್ಮಾ (ವಾಟ್ಸ್​ಆ್ಯಪ್ 8762924271)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ