Daily Horoscope 16 July: ಉದ್ಯೋಗ ಬದಲಾವಣೆ ವಿಚಾರ ಸದ್ಯಕ್ಕೆ ಕೈಬಿಡುವುದು ಉತ್ತಮ, ಆರ್ಥಿಕ ಸ್ಥಿತಿ ಬಗ್ಗೆ ಜಾಗೃತರಾಗಿರಿ
ಇಂದಿನ (2023 ಜುಲೈ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:28 ರಿಂದ 07:04ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ.
ಮೇಷ: ಕೆಟ್ಟ ಆಹಾರ ಸೇವನೆಯಿಂದ ನಿಮಗೆ ತೊಂದರೆಯಾಗಲಿದೆ. ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಮಾಡಬಹುದು. ಸಣ್ಣಮಟ್ಟಿನ ಗೌರವವು ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿಯು ಇರಲಿದ್ದು, ನೀವು ತೊಡಗಿಕೊಳ್ಳುವಿರಿ. ನೀವು ಸ್ಪರ್ಧೆಯಲ್ಲಿ ಜಯಗಳಿಸಲು ಬಹಳ ಪ್ರಯತ್ನವನ್ನು ಮಾಡುವಿರಿ. ಕಾನೂನುಸಮರಕ್ಕೆ ನಿಮಗೆ ಹೊಸ ಆಯಾಮ ಸಿಗಲಿದೆ. ಲಾಭವನ್ನು ಪಡೆಯಲು ಹೋಗಿ ಇರುವ ಸಂಪತ್ತನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ. ಭವಿಷ್ಯದ ಕುರಿತಂತೆ ನಿಮ್ಮ ಉದ್ದೇಶವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ.
ವೃಷಭ: ವಿದೇಶ ಪ್ರಯಾಣದ ಮನಃಸ್ಥಿತಿಯಲ್ಲಿ ನೀವು ಇರುವಿರಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಲಿದೆ. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ. ಶೈಕ್ಷಣಿಕವಾಗಿ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ. ಉದ್ಯಮವು ಸಕ್ರಿಯವಾಗಿದ್ದು ಇದನ್ನು ವಿಸ್ತರಿಸುವಿರಿ. ನಿಮ್ಮನ್ನು ಇಷ್ಟಪಟ್ಟವರು ನಿಮ್ಮನ್ನು ಕಡೆಗಣಿಸಬಹುದು. ಇದು ನಿಮಗೆ ಸಂತೋಷವೂ ಆಗಲಿದೆ.
ಮಿಥುನ: ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಅಧಿಕವಾಗಿ ಇರಲಿದೆ. ಮಿತ್ರರು ನಿಮ್ಮ ಸಹಾಯಕ್ಕೆ ಬರುವರು. ಅನನುಕೂಲತೆಯನ್ನು ನೀವು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ. ಇಂದಿನ ದಿನವನ್ನು ಆನಂದಿಸಲು, ನಿಮ್ಮ ಜವಾಬ್ದಾರಿಗಳನ್ನು ಪೂರೈಸುವತ್ತ ಗಮನವಿರಲಿ. ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ. ನೀವು ಎಲ್ಲವನ್ನೂ ಪ್ರಾಯೋಗಿಕ ಹಿನ್ನೆಲೆಯಲ್ಲಿ ನೋಡುವಿರಿ. ನಿಮ್ಮ ಚಿಂತೆನೆಗಳು ಉತ್ತಮವಾಗಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು.
ಕಟಕ: ಬಂಧುಗಳು ಪ್ರಶಂಸಿಸಿ ತಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಾಯಿಸುವಿರಿ. ನೀವು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕಾದೀತು. ಹಿಂದಿನ ಹಣಕಾಸಿನ ಸಮಸ್ಯೆಯು ಇಂದೂ ಕಾಣಿಸಿಕೊಳ್ಳಬಹುದು. ನಿಮ್ಮ ಸಾಧನೆಯನ್ನು ನೀವು ಎಲ್ಲರ ಬಳಿ ಹೇಳಿಕೊಳ್ಳುವಿರಿ. ಮಹತ್ತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸೂಕ್ಷ್ಮ ವಿವೇಕದ ಅಗತ್ಯತೆ ಇದೆ. ತಂತ್ರವನ್ನು ಹೂಡಿ ನಿಮ್ಮ ಹಿತಶತ್ರುವನ್ನು ಕಂಡುಕೊಳ್ಳುವಿರಿ. ನಿಮ್ಮ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು.
ಸಿಂಹ: ಸ್ವಂತ ಉದ್ಯೋಗವನ್ನು ನಡೆಸಲು ಚಿಂತನೆ ಆರಂಭವಾಗಲಿದೆ. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ವಸ್ತುಗಳು ಕಣ್ಮರೆಯಾದರೂ ನಿಮ್ಮ ತಿಳಿವಳಿಕೆಗೆ ಬರದು. ನಿಮ್ಮ ಸುತ್ತಮುತ್ತಲಿನವರು ನಿಮಗೆ ತೊಂದರೆ ಕೊಡಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆಯುವಿರಿ. ವಿದೇಶದ ನಿಮ್ಮ ಉದ್ಯಮವು ಕಷ್ಟ ಎನಿಸಬಹುದು. ಹೊಸದಾಗಿ ಕೆಲಸಕ್ಕೆ ಸೇರಿದವರು ಕಾರ್ಯದಲ್ಲಿ ಉತ್ಸಾಹವನ್ನು ತೋರಿಸುವರು. ನಿಮ್ಮ ಬಂಡವಾಳವು ಎಲ್ಲರಿಗೂ ಗೊತ್ತಾದೀತು. ಮಕ್ಕಳ ಜೊತೆ ಸಮಯವನ್ನು ಸಂತೋಷದಿಂದ ಕಳೆಯುವಿರಿ.
ಕನ್ಯಾ: ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವ ಮನಃಸ್ಥಿತಿಯನ್ನು ಹೊಂದುವಿರಿ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ಮನೆಯನ್ನು ಬಿಟ್ಟು ದೂರ ಹೋಗಲು ನಿಮಗೆ ಇಂದು ಮನಸ್ಸಾಗದು. ನಿಮ್ಮ ಇಂದಿನ ಆರ್ಥಿಕ ಸ್ಥಿತಿಯು ನಿಮಗೆ ಹೆಚ್ಚು ಸುಖ ಕೊಡುವುದು. ಸಂಗಾತಿಯಿಂದ ನೀವು ಬೇಸರವನ್ನು ಅನುಭವಿಸಬೇಕಸದೀತು. ನಿಮ್ಮ ಇಂದಿನ ಕೆಲಸಗಳು ಹೆಚ್ಚು ಸಮಾಧಾನವನ್ನು ತರುವುದು. ಇಂದು ನೀವು ಗಂಭೀರವಾದ ಆಲೋಚನೆಯಲ್ಲಿ ಮುಳುಗುವಿರಿ. ನಿಮ್ಮ ಗೊಂದಲಗಳಿಗೆ ಉತ್ತರವನ್ನು ನೀವೇ ಕಂಡುಕೊಳ್ಳುವಿರಿ.
ತುಲಾ: ಸ್ಥಿರಾಸ್ತಿಯಲ್ಲಿ ಹೆಚ್ಚು ಲಾಭವನ್ನು ಪಡೆಯಲು ನೀವು ಯೋಚಿಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದುವಾಗುವಿರಿ. ನಿಮ್ಮ ಮನಃಸ್ಥಿತಿಯನ್ನು ದುರುಪಯೋಗ ಮಾಡಿಕೊಳ್ಳಬಹುದು. ಸಹವಾಸದ ಅಪವಾದವು ನಿಮ್ಮ ಮೇಲೆ ಬರಲಿದೆ. ಹಣಕಾಸಿನ ವಿಚಾರದಲ್ಲಿ ಗಮನಾರ್ಹ ಬೆಳವಣಿಗೆ ಉಂಟಾಗಲಿದೆ ನಿಮ್ಮ ವೃತ್ತಿಜೀವನವು ಉತ್ತಮವಾದ ಆರಂಭಿಸಲು ನಿರ್ಧರಿಸುವಿರಿ. ಇಂದು ನೀವು ಲವಲವಿಕೆಯಿಂದ ಇದ್ದು ಇನ್ನೊಬ್ಬರನ್ನೂ ಹಾಗೆ ನೋಡಿಕೊಳ್ಳುವಿರಿ. ಶೈಕ್ಷಣಿಕ ಪ್ರಗತಿಯಿಂದ ನಿಮಗೆ ಉತ್ತಮ ಅವಕಾಶಗಳು ಲಭ್ಯವಾಗುವುವು.
ವೃಶ್ಚಿಕ: ಸಾಲವನ್ನು ನೆನೆಸಿಕೊಂಡು ನೀವು ಬಹಳ ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ. ಇನ್ನೊಬ್ಬರ ನೋವಿಗಿ ಸ್ಪಂದಿಸುವುದು ನಿಮ್ಮ ಕರ್ತವ್ಯವಾಗಲಿದೆ. ದಾಂಪತ್ಯದಲ್ಲಿ ಸಾಮರಸ್ಯದ ಅನಗತ್ಯವು ಬಹಳ ಇರಲಿದೆ. ನಿಮ್ಮ ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಕುಟುಂಬದಲ್ಲಿ ನೀವು ಗಂಭೀರವಾದ ವಿವಾದಗಳನ್ನು ಮಾಡುವಿರಿ. ನೀವು ಮತ್ತು ಸಂಗಾತಿ ನಡುವೆ ಹಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಲಿದೆ. ಒತ್ತಡವಿಲ್ಲದೆ ಇಂದು ನಿಮ್ಮ ದಿನವನ್ನು ಆನಂದಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯವು ಚೆನ್ನಾಗಿ ಇರಲಿದೆ.
ಧನುಸ್ಸು: ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸುವರು. ನಿಮ್ಮ ಅಸಮರ್ಪಕ ಉತ್ತರವು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು. ವ್ಯವಹಾರವನ್ನು ಮಾಡುವಾಗ ಯಾವ ರೀತಿಯಿಂದಲೂ ತಪ್ಪುಗಳು ಆಗದಂತೆ ನೋಡಿಕೊಳ್ಳಿ. ವ್ಯಾಪಾರದ ಉದ್ದೇಶಕ್ಕೆ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ. ನಿಮ್ಮ ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದೀತು. ಪಾಲುದಾರಿಕೆಯಲ್ಲಿ ನಿಮ್ಮ ಗಮನ ಅಗತ್ಯವಾಗಿ ಇರಲಿ. ಕಠಿಣ ವ್ಯಾಯಾಮವನ್ನು ಮಾಡುವ ಮುಂಚೆ ದೇಹದ ಸಾಮರ್ಥ್ಯವನ್ನು ತಿಳಿಯಲು ವೈದ್ಯರನ್ನು ಸಂಪರ್ಕಿಸಿ. ನಿಮ್ಮ ವೃತ್ತಿ, ಹಣಕಾಸಿನ ವಿಚಾರಕ್ಕೆ ಬಂದಾಗ ನೀವು ಬಹಳ ದುರ್ಬಲರಾಗುವಿರಿ.
ಮಕರ: ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವಾಗಬಹುದು. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗುವಿರಿ. ಪ್ರೇಯಸಿಯನ್ನು ದೂರಮಾಡಿಕೊಂಡು ಸಂಕಟಪಡುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಇಂದು ಒಂದು ಅವಕಾಶ ಸಿಗಲಿದೆ. ಯಾರಾದರೂ ನಿಮಗೆ ಉತ್ತಮ ಮಾರ್ಗದರ್ಶನವನ್ನು ಮಾಡಬಹುದು. ಹೂಡಿಕೆಯನ್ನು ತಪ್ಪಾಗಿ ಮಾಡುವಿರಿ. ನಿಮ್ಮ ಅನುಭವದ ಆಧಾರದ ಮೇಲೆ ಕೆಲಸವು ಇರಲಿದೆ. ಯಂತ್ರೋಪಕರಣಗಳ ವಿಚಾರದಲ್ಲಿ ನೀವು ಜಾಗರೂಕರಾಗಿರುವುದು ಮುಖ್ಯ.
ಕುಂಭ: ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಲಿದೆ. ಕುಟುಂಬದಲ್ಲಿ ನಿಮ್ಮ ಬಗ್ಗೆ ಆತಂಕ ಉಂಟಾಗಬಹುದು. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು. ನಿಮ್ಮ ಕಾರ್ಯದ ಬಗ್ಗೆ ಸಕಾರಾತ್ಮಕ ಭಾವನೆಯು ಕಡಿಮೆ ಆಗಬಹುದು. ಉದ್ವಿಗ್ನತೆಯು ಉಂಟಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು. ನವವಿವಾಹಿತರಿಗೆ ಸಂತಸದ ಸುದ್ದಿಯು ಇರಲಿದೆ. ಇಂದು ನಿಮ್ಮ ಪ್ರಯಾಣವನ್ನು ಸಣ್ಣ ಮಾಡುವುದು ಉತ್ತಮ. ನೀವು ಇಂದು ಕೆಲಸದಲ್ಲಿ ಬದಲಾವಣೆಯನ್ನು ಇಚ್ಛಿಸುವಿರಿ.
ಮೀನ: ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ವಾಹನದಿಂದ ನಿಮಗೆ ತೊಂದರೆಯಾಗಲಿದೆ. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಇಂದೇ ರೀತಿಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಪಾಲುದಾರಿಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ಆರ್ಥಿಕವಾಗಿ ಸಬಲತೆಗೆ ಕ್ರಮವನ್ನು ಕೈಗೊಳ್ಳುವುದು ಉತ್ತಮ. ನಿಮ್ಮ ಭಾವನೆಯನ್ನು ಕುಟುಂಬವು ಗೌರವಿಸುವುದು. ಇಂದಿನ ಹೆಚ್ಚಿನ ಸಮಯವನ್ನು ಧಾರ್ಮಿಕ ಕೆಲಸಕ್ಕೆ ಮೀಸಲಿಡಿ.