Horoscope 16 Oct: ದಿನಭವಿಷ್ಯ, ಈ ರಾಶಿಯವರ ಅತಿಯಾದ ನಂಬುಗೆ ಇಂದು ಹುಸಿಯಾಗಬಹುದು
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಅಕ್ಟೋಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:50 ರಿಂದ 12:18ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:46 ರಿಂದ 03:15ರ ವರೆಗೆ.
ಮೇಷ ರಾಶಿ: ನೌಕರರ ತಪ್ಪಿನಿಂದ ನೀವು ಹಣವನ್ನು ಖರ್ಚು ಮಾಡಬೇಕಾದೀತು. ಕೃಷಿಯಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುವುದು. ಮಕ್ಕಳ ವಿಚಾರದಲ್ಲಿ ಮಾನಸಿಕ ಹಿಂಸೆಯು ಆಗಲಿದೆ. ಒಂದೇ ಕಾರ್ಯವನ್ನು ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳುವಿರಿ. ಒತ್ತಡ ನಿವಾರಣೆಗೆ ಧ್ಯಾನ ಹಾಗೂ ಯೋಗಾಭ್ಯಾಸವು ಬೇಕಾಗುವುದು. ಅಪರಿಚಿತರು ಆಪ್ತರಾಗುವ ಸಾಧ್ಯತೆ ಇದೆ. ದುರಭ್ಯಾಸಕ್ಕೆ ಅವಕಾಶಗಳು ಬರಲಿದ್ದು ಆಲೋಚಿಸಿ ಮುಂದುವರಿಯಿರಿ. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ನಕ್ಕಾರು. ನಿಮ್ಮ ವೇಷಭೂಷಣದ ಬಗ್ಗೆ ಟೀಕಿಸುವರು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ನಿಶ್ಚಿಂತೆಯಿಂದ ಇರುವಿರಿ. ಆರ್ಥಿಕತೆಯನ್ನು ಬಲಪಡಿಸಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ. ಸಂಗಾತಿಯು ನಿಮ್ಮಿಂದ ಪ್ರೀತಿಯನ್ನು ನಿರೀಕ್ಷಿಸುವರು.
ವೃಷಭ ರಾಶಿ: ನೀವು ಯಶಸ್ಸನ್ನು ಗಳಿಸದಂತೆ ಹಿತಶತ್ರುಗಳು ಅಡ್ಡಗಾಲು ಹಾಕುವಿರಿ. ಆಭರಣದ ವಿಚಾರದಲ್ಲಿ ಜಾಗರೂಕತೆ ಇರಲಿ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಮನಸ್ಸಿನ ಚಾಂಚಲ್ಯವನ್ನು ನಿಲ್ಲಿಸಲಾಗದು. ಇಂದು ಹೆಚ್ಚು ಮಾನಸಿಕ ಒತ್ತಡವು ಇರದಿದ್ದರೂ ಅಧಿಕ ಕಾರ್ಯವು ಇರಲಿದೆ. ಇಷ್ಟವಿಲ್ಲದ ಕೆಲಸವನ್ನು ಮಾಡಲು ಯಾರು ಒತ್ತಾಯಿಸಿದರೂ ಮಾಡುವುದಿಲ್ಲ. ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಸ್ವತಂತ್ರವಾಗಿರಲು ನೀವು ಹೆಚ್ಚು ಇಷ್ಟಪಡುವಿರಿ. ಯಾರ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ವೃತ್ತಿಯಲ್ಲಿ ಬದಲಾವಣೆ ಬೇಕು ಎನಿಸುವುದು. ಅಪರಿಚಿತರು ನಿಮಗೆ ಕೆಲವು ತೊಂದರೆಯನ್ನು ಕೊಡಬಹುದು. ಸೌಂದರ್ಯದ ಕಡೆ ನಿಮ್ಮ ಗಮನವಿರುವುದು. ನಿಮ್ಮ ಉದ್ದೇಶವನ್ನು ಸಾಕಾರಗೊಳಿಸುವತ್ತ ಸಾಗುವಿರಿ.
ಮಿಥುನ ರಾಶಿ: ಸಂಗಾತಿಯ ಮೇಲೆ ಅನುಮಾನವನ್ನು ವ್ಯಕ್ತಪಡಿಸುವಿರಿ. ಅಭಿನಯ ಕ್ಷೇತ್ರದಲ್ಲಿ ನಿಮಗೆ ಅವಕಾಶಗಳು ಸಿಗಲಿವೆ. ನ್ಯಾಯಾಲಯದ ವಿಚಾರವನ್ನು ಬೇಗ ಮುಗಿಸಿಕೊಳ್ಳಲು ಪ್ರಯತ್ನಿಸುವಿರಿ. ಭೋಗವಸ್ತುಗಳ ಖರೀದಿಯನ್ನು ಹೆಚ್ಚು ಮಾಡುವಿರಿ. ಕಛೇರಿಯಲ್ಲಿ ಅನಿರೀಕ್ಷಿತ ಒತ್ತಡವು ಬಂದು ಮುತ್ತಿಕೊಂಡು ದಿಕ್ಕು ತೋಚದಂತೆ ಆಗುವುದು. ನಿಮ್ಮ ಮಾತಿನ ಹಾಸ್ಯವು ಇನ್ನೊಬ್ಬರಿಗೆ ಬೇಸರವಾಗುವುದು. ನೀವು ಇನ್ನೊಬ್ಬರ ಮೇಲಿಟ್ಟ ವಿಶ್ವಾಸಕ್ಕೆ ಧಕ್ಕೆಯಾಗುವುದು. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ ದುಷ್ಪರಿಣಾಮವಾಗಲಿದೆ. ಉದ್ಯೋಗದ ಕಾರಣ ಪ್ರಯಾಣ ಮಾಡುವ ಸನ್ನಿವೇಶವು ಬರಲಿದೆ. ನಿಷ್ಠುರ ಮಾತುಗಳನ್ನು ಆಡುವುದು ಬೇಡ. ನಿಮ್ಮ ವೈಯಕ್ತಿಕ ಕೆಲಸಗಳನ್ನು ಬಿಡುವಿಲ್ಲದ ಸಮಯದಲ್ಲಿಯೂ ಮಾಡುವಿರಿ. ಮಕ್ಕಳ ವಿದ್ಯಾಭ್ಯಾಸದ ಆಲೋಚನೆಯಲ್ಲಿ ಮಗ್ನರಾಗುವಿರಿ.
ಕರ್ಕ ರಾಶಿ: ಎಷ್ಟೋ ದಿನಗಳ ಹಿಂದೆಯೇ ಆಲೋಚಿಸಿದ್ದ ಕಾರ್ಯಗಳನ್ನು ನೀವು ಮತ್ತೆ ಆರಂಭಿಸಲು ಮನಸ್ಸು ಮಾಡುವಿರಿ. ನಿಮ್ಮ ಮಾತಿನಿಂದ ಇತರರಿಗೆ ನೋವಾಗುವುದು. ನೀವು ಅಶಿಸ್ತಿನ ಸ್ವಭಾವವನ್ನು ಬದಲಾಯಿಸಿಕೊಳ್ಳಬೇಕು. ವೇತನವನ್ನು ಹೆಚ್ಚಿಸಲು ಅಧಿಕಾರಿಗಳನ್ನು ಕೇಳಿಕೊಳ್ಳುವಿರಿ. ದೂರದ ಬಂಧುಗಳ ಭೇಟಿಯಿಂಸ ನಿಮಗೆ ಸಂತೋಷವಾಗುವುದು. ಸಹೋದ್ಯೋಗಿಗಳ ಜೊತೆ ವಾದವನ್ನು ಮಾಡುವಿರಿ. ಶತ್ರುಗಳನ್ನು ತಿಳಿದುಕೊಳ್ಳುವ ಅಸಕ್ತಿಯು ಇರಲಿದೆ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳುವಿರಿ. ಇಂದಿನ ನಿಮ್ಮ ಕಾರ್ಯಕ್ಕೆ ಸಮಯದ ಮಿತಿಯನ್ನು ಅವಶ್ಯಕ. ಅಹಂಕಾರದಿಂದ ಬೀಗುವುದು ಬೇಡ. ನಿಮ್ಮ ಸಮಾಧಾನದ ಚಿತ್ತವನ್ನು ಯಾರಾದರೂ ಕೆಡಿಸಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಸಿಂಹ ರಾಶಿ: ನಿಮ್ಮ ಅತಿಯಾದ ನಂಬುಗೆಯು ಇಂದು ಹುಸಿಯಾಗಬಹುದು. ಸಂತಾನಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಟೀಕೆಗಳು ನಡೆಯುವುದು. ನಿಮ್ಮ ಇಷ್ಟದವರನ್ನು ಭೇಟಿಯಾಗಿ ಕೆಲವು ಸಮಯ ಸಂತೋಷದಿಂದ ಕಳೆಯುವಿರಿ. ಯಾರಂದಲೋ ಪ್ರೇರಿತರಾದ ನಿಮಗೆ ಸಾಮಾಜಿಕ ಕಾರ್ಯವು ಹಿಡಿಸುವುದು. ಸಂಪತ್ತಿನ ಮೇಲೆ ನಿಮಗೆ ಮೋಹವು ಕಡಿಮೆ ಇರುವುದು. ವಂಚಿಸಿದವರಿಗೆ ಪ್ರತಿವಂಚನೆಯನ್ನು ಮಾಡಲು ಸಮಯವನ್ನು ನಿರೀಕ್ಷಿಸುತ್ತಿರುವಿರಿ. ಆಶಿಸ್ತಿನ ಕೆಲಸಕ್ಕೆ ಹಿರಿಯರು ನಿಂದಿಸಬಹುದು. ಅಪರಿಚಿತ ವ್ಯಕ್ತಿಗಳು ದೂರವಾಣಿಯ ಮೂಲಕ ಪದೆ ಪದೆ ಪೀಡಿಸಬಹುದು. ಭವಿಷ್ಯದ ಬಗ್ಗೆ ಸ್ಪಷ್ಟತೆಯು ನಿಮಗೆ ಸಿಗದು. ಆಪ್ತರ ಜೊತೆ ನಿಮ್ಮ ಸಮಸ್ಯೆಯನ್ನು ಹಂಚಿಕೊಂಡು ಸಮಾಧಾನಿಗಳಾಗುವಿರಿ.
ಕನ್ಯಾ ರಾಶಿ: ಕುಟುಂಬದವರ ಮಾತುಗಳು ಕಿರಿಕಿರಿ ಎನಿಸಬಹುದು. ನಿಮ್ಮ ತಾಳ್ಮೆಯು ಇಂದು ಕಡಿಮೆಯಾಗಿ ಏನಾದರೂ ಹೇಳುವಿರಿ. ರಾಜಕಾರಣಿಗಳು ಹೆಚ್ಚು ಓಡಾಟವನ್ನು ಮಾಡಬೇಕಾಗಬಹುದು. ಬೌದ್ಧಿಕ ಆಯಾಸದಿಂದ ವಿಶ್ರಾಂತಿಯನ್ನು ಮಾಡಬೇಕು ಎನಿಸುವುದು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಕ್ಕುವ ಸೂಚನೆ ಬರಲಿದೆ. ಸಾಲವು ಮುಗಿಯುತು ಎಂದುಕೊಳ್ಳುತ್ತಿದ್ದಂತೆ ಇನ್ನೊಂದು ಆರಂಭವಾಗಬಹುದು. ಬಂಧುಗಳಿಂದ ನೀವು ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇಂದು ನಿರ್ವಹಿಸಲು ಕಷ್ಟವಾದೀತು. ಬಂಧುಗಳ ಕಡೆಯಿಂದ ನಿಮಗೆ ಅಶುಭ ಸುದ್ದಿಯು ಬರಬಹುದು. ನಿಮಗೆ ಬೇಕಾದ ವಸ್ತುವೊಂದನ್ನು ನೀವು ಕಳೆದುಕೊಳ್ಳುವಿರಿ.
ತುಲಾ ರಾಶಿ: ನಿಮ್ಮ ಬಳಕೆಯಾಗದ ಭೂಮಿಯಿಂದ ಮಾರಾಟ ಮಾಡಿ ಆದಾಯವನ್ನು ಪಡೆಯುವಿರಿ. ಹೂಡಿಕೆಯ ಕಡೆ ಅಧಿಕ ಆಲೋಚನೆ ಮಾಡುವಿರಿ. ಗೌಪ್ಯವಾಗಿ ನಿಮಗೆ ಹಣವು ಸಿಗಲಿದೆ. ಅದನ್ನು ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಸಮಯವನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳಿಗೆ ಹೇಳಿ. ಮನೆಯಲ್ಲಿ ಇದ್ದು ಕೆಲಸ ಮಾಡುವವರಿಗೆ ಬಂಧನದಂತೆ ಅನ್ನಿಸಬಹುದು. ದಾನದಿಂದ ನಿಮಗೆ ಪ್ರಶಂಸೆಯು ಸಿಗುವುದು. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಬಹುದು. ನಿಮ್ಮ ವಿವಾಹದ ಮಾತುಕತೆಯಿಂದ ನಿಮಗೆ ಖುಷಿ ಸಿಗುವುದು. ಸಜ್ಜನರ ಸಹವಾಸವು ಆಕಸ್ಮಿಕವಾಗಿ ಸಿಗುವುದು. ನಿಮ್ಮದಲ್ಲದ ವಸ್ತುಗಳನ್ನು ಹಿಂದಿರುಗಿಸಿ. ಆಲಸ್ಯವನ್ನು ಬಿಡುವುದು ಉತ್ತಮ.
ವೃಶ್ಚಿಕ ರಾಶಿ: ಅಂದುಕೊಂಡ ಕಾರ್ಯವು ಮುಗಿಯುತ್ತ ಇರುವಾಗಲೇ ಯಾರಾದರೂ ಅಡ್ಡಿ ಮಾಡುವರು. ಸ್ನೇಹಿತರ ಸಲಹೆಯ ಆಧಾರದ ಮೇಲೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಿರಿ. ಮನೆ ಹಾಗೂ ಕಛೇರಿಯ ಎಲ್ಲ ಕಡೆಯಿಂದ ಒತ್ತಡವು ಇರಲಿದೆ. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನೌಕರರು ಹಾಗೂ ಅಧಿಕಾರಿಗಳ ನಡುವೆ ವೈಮನಸ್ಸು ಉಂಟಾಗಬಹುದು. ಕೆಲವು ಸಂದರ್ಭದಲ್ಲಿ ಎಲ್ಲವೂ ಗೊತ್ತಿದೆ ಎಂದು ತೋರಿಸಿಕೊಳ್ಳುವುದು ನಿಮಗೆ ಕಷ್ಟವಾದೀತು. ಆಪ್ತರ ಜೊತೆಗಿನ ಬಿಚ್ಚು ಮನಸ್ಸಿನ ಮಾತುಕತೆಯಿಂದ ನಿಮ್ಮ ಭಾರವಾದ ಮನಸ್ಸು ಹಗುರಾಗುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಬಾರದು. ಇಂದು ಸ್ತ್ರೀಯಿಂದ ಸುಖವನ್ನು ಅನುಭವಿಸುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಿ ಸುತ್ತಾಡಿ ಬರುವಿರಿ.
ಧನು ರಾಶಿ: ಅವಿವಾಹಿತರು ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ನೂತನ ವಸ್ತುಗಳನ್ನು ಪಡೆದು ಸಂತೋಷಪಡುವಿರಿ. ಗೌರವಾದಿಗಳು ಸಿಕ್ಕಿ ಸಂತೋಪಡುವಿರಿ. ನೀವು ಅಂದುಕೊಂಡ ಹಾಗೆಯೇ ನಡೆಯದು. ನಿಮ್ಮ ಚರ ಹಾಗೂ ಸ್ಥಿರಾಸ್ತಿಗಳ ದಾಖಲೆಗಳನ್ನು ಜೋಪಾನವಾಗಿ ಇರಿಕೊಳ್ಳಿ. ಧಾರ್ಮಿಕ ಆಚರಣೆಗಳನ್ನು ಹೆಚ್ಚು ಮಾಡಲು ಮನಸ್ಸಾಗುವುದು. ನಿಮ್ಮ ವಾಹನವನ್ನು ಚಲಾಯಿಸಲು ಕಷ್ಟವಾದೀತು. ನಿಮ್ಮವರು ನಿಮ್ಮ ದೋಷವನ್ನೇ ಹೆಚ್ಚು ಹೇಳುವರು. ಸಾಹಿತ್ಯಸಲ್ಲಿ ಆಸಕ್ತಿ ಇರುವವರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಎಲ್ಲವನ್ನೂ ಬಾಹುಬಲದಿಂದ ಸಾಧಿಸುತ್ತೇನೆ ಎಂಬ ಹುಂಬುತನ ಬೇಡ. ಬುದ್ಧಿಯನ್ನು ಬಳಸಿ ಕೆಲಸವನ್ನು ಸರಳ ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಇಂದು ಅವರೆದುರು ಹೇಳುವಿರಿ.
ಮಕರ ರಾಶಿ: ಸ್ತ್ರೀಯರು ತಮ್ಮ ಕಾರ್ಯದಲ್ಲಿ ಮುಳುಗುವರು. ತಮ್ಮ ಉದ್ಯಮವನ್ನು ಪ್ರಭಾವೀ ವ್ಯಕ್ತಿಗಳ ಸಹಾಯದಿಂದ ಜನಪ್ರಿಯ ಗೊಳಿಸಿಕೊಳ್ಳುವರು. ಎಲ್ಲವನ್ನೂ ನೀವೇ ಮಾಡಬೇಕು ಎನ್ನುವ ಮಾನಸಿಕತೆ ಬೇಡ. ಒಂಟಿತನವು ಇಷ್ಟವಾಗುವುದು. ಆರ್ಥಿಕ ವ್ಯವಹಾರದಲ್ಲಿ ನಿಮಗೆ ಕೆಲವು ಮಾತುಗಳು ಬರಬಹುದು. ದಂಪತಿಗಳ ನಡುವೆ ಅನವಶ್ಯಕ ವಿಚಾರಕ್ಕೆ ವಾಗ್ವಾದವು ಅಗಬಹುದು. ಕುಟುಂಬದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಗೌಪ್ಯವಾಗಿ ಇರುವುದು. ಸಿಟ್ಟನ್ನು ಯಾರದೋ ಮೇಲೆ ತೀರಿಸಿಕೊಂಡು ಸಮಾಧಾನಪಡುವಿರಿ. ಹಿತಶತ್ರುಗಳನ್ನು ಅವರಿಗೆ ಗೊತ್ತಾಗದಂತೆ ದೂರವಿರಿಸಿ. ಪಾಲುದಾರಿಕೆಯ ವ್ಯವಹಾರವು ನಿಮಗೆ ಸಾಕೆನಿಸುವುದು. ಬಿಟ್ಟು ಹೋದ ಪ್ರೇಮದ ಬಗ್ಗೆಯೇ ಹೆಚ್ಚು ಆಲೋಚನೆ ಮಾಡುತ್ತ ಇರುವಿರಿ.
ಕುಂಭ ರಾಶಿ: ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಭೂಮಿಯ ಉತ್ಪನ್ನದಿಂದ ಕೆಲವು ಅದಾಯವು ಸಿಗಬಹುದು. ಬಂಧುಗಳ ಅನಾರೋಗ್ಯದ ಕಾರಣ ನೀವು ಧನಸಹಾಯವನ್ನು ಮಾಡಬೇಕಾದೀತು. ನಿಮ್ಮ ಸ್ಥಾನವನ್ನು ಕಾಪಾಡಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವಿರಿ. ಸಣ್ಣ ಕೆಲಸಗಳನ್ನು ಮಾಡಲು ನೀವು ಇಷ್ಟಪಡುವುದಿಲ್ಲ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ಇಷ್ಟಪಡುವಿರಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯು ಇಲ್ಲವಾಗಬಹುದು. ನಕಾರಾತ್ಮಕ ಚಿಂತನೆಯನ್ನು ಕಡಿಮೆ ಮಾಡಿಕೊಳ್ಳಿ. ನೀವೇ ಆಯ್ಕೆ ಮಾಡಿಕೊಂಡ ಕೆಲಸದಲ್ಲಿ ಆಸಕ್ತಿಯು ಕಡಿಮೆ ಇರುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ಸಿಕ್ಕ ಅಧಿಕಾರವನ್ನು ಸದುಪಯೋಗಪಡಿಸಿಕೊಳ್ಳಿ. ಮುಂದಾಲೋಚನೆಗೂ ಸ್ವಲ್ಪ ಮಿತಿ ಇರಲಿ.
ಮೀನ ರಾಶಿ: ಉನ್ನತ ವಿದ್ಯಾಭ್ಯಾಸದ ಕಾರಣ ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ತಾಯಿಯ ಕಡೆಯಿಂದ ನಿಮಗೆ ಆಸ್ತಿಯು ಲಭಿಸುವುದು. ಆಹಾರ ಪದಾರ್ಥಗಳ ಉದ್ಯಮವನ್ನು ಇಟ್ಟುಕೊಂಡಿದ್ದರೆ ಶುಭವಿರಲಿದೆ. ಹಣಕಾಸಿನ ವಿಚಾರದಲ್ಲಿ ಯಾರನ್ನು ನಂಬಬೇಕು ಎಂಬುದು ಗೊತ್ತಾಗದು. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಆಸೆ ಇರುವುದು. ಪತ್ನಿಯ ಅನವಶ್ಯಕ ಖರ್ಚಿಗೆ ಕಡಿವಾಣವನ್ನು ಹಾಕಬೇಕಾದೀತು. ಇದಕ್ಕಾಗಿ ಕೂಗಾಡಿಕೊಳ್ಳಬಹುದು. ಮಕ್ಕಳ ಬಗ್ಗೆ ನಿಮ್ಮ ಲಕ್ಷ್ಯವು ಇರಲಿ. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಡಿ. ಒತ್ತಡವು ಹೆಚ್ಚಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳುವಿರಿ. ಹಳೆಯ ದೈಹಿಕ ಸಮಸ್ಯೆಯು ಪುನಃ ಕಾಣಿಸಿಕೊಳ್ಳುವುದು. ಉದ್ಯೋಗಸ್ಥ ಸ್ತ್ರೀಯರಿಗೆ ಸಮಾಧಾನವಿರದು.
ಲೋಹಿತಶರ್ಮಾ – 8762924271 (what’s app only)