Horoscope 18 Oct: ರಾಶಿಭವಿಷ್ಯ, ಈ ರಾಶಿಯವರು ಸಕಾರಾತ್ಮಕ ಚಿಂತನೆ ರೂಢಿಸಿಕೊಳ್ಳುವುದು ಉತ್ತಮ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಅಕ್ಟೋಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 18 Oct: ರಾಶಿಭವಿಷ್ಯ, ಈ ರಾಶಿಯವರು ಸಕಾರಾತ್ಮಕ ಚಿಂತನೆ ರೂಢಿಸಿಕೊಳ್ಳುವುದು ಉತ್ತಮ
ಇಂದಿನ ದಿನಭವಿಷ್ಯImage Credit source: iStock Photo
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Oct 18, 2023 | 12:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 18 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:18ರ ವರೆಗೆ.

ನವರಾತ್ರಿಯ ನಾಲ್ಕನೆಯ ದಿನ ಕೂಷ್ಮಾಂಡಾದೇವಿಯ ಆರಾಧನೆ. ಈಕೆ‌ ಮಹಾಲಕ್ಷ್ಮಿಯ ಸ್ವರೂಪಳಾಗಿ ಪೂಜೆಗೊಳ್ಳುವಳು.‌ ಸಕಲ ಸಂಕಷ್ಟವನ್ನು ದೂರ ಮಾಡುವವಳು.

ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ |

ದಧಾನಾ ಹಸ್ತಪದ್ಮಾಭ್ಯಾಂ ಕುಷ್ಮಾಂಡಾ ಶುಭದಾಸ್ತು ಮೇ ||

ಎನ್ನುವ ಮಂತ್ರವನ್ನು ಸಂಜೆಯ ಹೊತ್ತಿನಲ್ಲಿ ಶುದ್ಧರಾಗಿ ಪಠಿಸಿ.

ಮೇಷ ರಾಶಿ: ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ಹಳೆಯ ಘಟನೆಗಳು ನಿಮಗೆ ಮತ್ತೆ ಮತ್ತೆ ಪ್ರಚೋದನೆಯನ್ನು ಕೊಡುವುವು. ನಿಮ್ಮ ಮನೋಬಲವನ್ನು ಕುಗ್ಗಿಸುಲು ಸಹೋದ್ಯೋಗಿಗಳ ಪ್ರಯತ್ನ‌ ಇರಲಿದೆ. ನಿಮ್ಮ ಬಗ್ಗೆ‌ ನಿಮಗೇ ಬೇಕೆಂದು ಏನಾದರೂ ಹೇಳಿಯಾರು. ಉನ್ನತ ಹುದ್ದೆಗೆ ಅವಕಾಶವು ಸಿಗಲಿದ್ದು ಸ್ಥಳ ಬದಲಾವಣೆಯ ಚಿಂತೆ‌ ಕಾಡಬಹುದು. ಮಹಾಲಕ್ಷ್ಮಿಯ ಸ್ವರೂಪವಾದ ಕೂಷ್ಮಾಂಡಾ ದುರ್ಗೆಯನ್ನು ಸಂಪ್ರಾರ್ಥಿಸಿ.

ವೃಷಭ ರಾಶಿ: ಇನ್ನೊಬ್ಬರ ಜೊತೆ ಕಾಲಹರಣ ಮಾಡುವುದನ್ನು ಬಿಟ್ಟು ಸದುಪಯೋಗವಾಗುವಂತಹ ಕೆಲಸದ ಕಡೆ ನಿಮ್ಮ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತೆ ಪಡುವುದು ಬೇಡ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ. ಕಾರಣಾಂತರಗಳಿಂದ ಬೇರೆ ಕಡೆ ವಾಸ ಮಾಡುವ ಸಂದರ್ಭವು ಬರಬಹುದು. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ಎಲ್ಲರ ಜೊತೆ ಬೆರೆಯುವ ಅವಕಾಶಗಳು ಇಂದು ಕಡಿಮೆ‌ ಇರಲಿದೆ. ಸ್ವತಂತ್ರವಾಗಿ ಬದುಕಬೇಕು ಎಂಬ ಇಚ್ಛೆಯು ಜಾಗರೂಕವಾಗಲಿದೆ. ನಿಮ್ಮ ಬಗ್ಗೆ ಮಾತನಾಡುವವರನ್ನು ನೀವು ಲಕ್ಷ್ಯಕ್ಕೆ ತೆಗೆದುಕೊಳ್ಳುವುದಿಲ್ಲ. ಕೆಟ್ಟ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು.

ಮಿಥುನ ರಾಶಿ: ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷವು ಇಂದು ನೆಲೆಸುವುದು. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣ ಇರಲಿದೆ. ಸಮಾರಂಭಗಳಿಗೆ ಆಹ್ವಾನ ಬರಬಹುದು. ಕಣ್ಣಿನ ತೊಂದರೆಯು ಪುನಃ ಕಾಣಿಸಿಕೊಳ್ಳಬಹುದು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಸಂಗಾತಿಯ ಸ್ವಭಾವವು ಇಂದು ಸ್ಪಷ್ಟವಾಗಿ ತಿಳಿಯಿತು ಎಂದು ಅಂದುಕೊಂಡಿರುವಿರಿ. ನಿಮ್ಮ ಗುರಿಯನ್ನು ಬದಲಿಸುವುದು ಬೇಡ. ಸಮಯವನ್ನು ಹೆಚ್ಚು ತೆಗೆದುಕೊಳ್ಳಿ. ಪ್ರಾಮಾಣಿಕತೆಗೆ ಪ್ರಶಂಸೆಯು ಎಲ್ಲರಿಂದ‌ ಸಿಗುವುದು. ಬಣ್ಣದ ಮಾತಿಗೆ ಮರುಳಾಗುವುದು ಬೇಡ. ಮಕ್ಕಳ‌ ಮಾತುಗಳು‌ ನಿಮಗೆ ಅಚ್ಚರಿಯನ್ನು ಉಂಟುಮಾಡೀತು.

ಕರ್ಕ ರಾಶಿ: ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ಪ್ರಭಾವೀ ವ್ಯಕ್ತಿಗಳ ಸಂಪರ್ಕವನ್ನೂ ಮಾಡುವಿರಿ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ಉದ್ಯೋಗದಲ್ಲಿ ನೀವು ಜಾಣತನವನ್ನು ತೋರಿಸುವ ಅವಶ್ಯಕತೆ ಇಲ್ಲ. ಪ್ರಯಾಣದಲ್ಲಿ ಜಾಗರೂಕತೆ ಮುಖ್ಯವಾಗಿರಲಿ. ಮನೆಯಲ್ಲಿ ಬದಲಾಯಿಸುವ ಸಂದರ್ಭವು ಬರಬಹುದು. ದೈಹಿಕ ಶ್ರಮವನ್ನು ನೀವು ಹೆಚ್ಚು ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಭಾವವು ತೋರುವುದು. ಕೋಪದಲ್ಲಿ ಹಿಡಿತವನ್ನು ಕಳೆದುಕೊಂಡು ಏನನ್ನಾದರೂ ಹೇಳಿಬಿಡುವಿರಿ.

ಸಿಂಹ ರಾಶಿ: ಕಛೇರಿಯ ಕಿರಿಕಿರಿಯಿಂದ‌ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು. ಹಳೆಯ ಸ್ನೇಹಿತರನ್ನು ಭೇಟಿಯಾಗಿ ಸ್ವಲ್ಪ ಹೊಸ ವಾತಾವರಣವನ್ನು ಕಾಣುವಿರಿ. ಜವಾಬ್ದಾರಿಯ ಕಾರಣಕ್ಕೆ ನಿಮ್ಮ ವರ್ತನೆಯಲ್ಲಿ ಭಿನ್ನತೆ ಕಾಣುವುದು. ನಿಮಗೆ ಬರಬೇಕಾದ ಹಣವನ್ನು ಬೇರೆಯವರ ಮೂಲಕ ತೀರಿಸಿಕೊಳ್ಳುವಿರಿ. ನಿಮ್ಮ ನೌಕರರ ಬಗ್ಗೆ ನಿಮಗೆ ಸಮಾಧಾನ ಇರಲಿದೆ. ಕಾರ್ಯಗಳಿಗೆ ನಿಗದಿತ ಸಮಯವನ್ನು ಇಟ್ಟುಕೊಳ್ಳುವುದು ಮುಖ್ಯ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಯನ್ನು ಕೊಡಲಿದ್ದೀರಿ. ಪ್ರಸಿದ್ಧ ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯ ಕಳೆದುಬರುವಿರಿ. ದುರ್ಗಾ‌ ಮಾತೆಯನ್ನು ಪೂಜಿಸಿ.

ಕನ್ಯಾ ರಾಶಿ: ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು. ಅಮೂಲ್ಯವಾದ ವಸ್ತುಗಳನ್ನು ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು ವೈದ್ಯರನ್ನು ಭೇಟಿಯಾಗುವುದು ಸೂಕ್ತ. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ದುರಭ್ಯಾಸವನ್ನು ಹಿಡಿಸಿಕೊಳ್ಳುವ ಸಂದರ್ಭವು ಬರಬಹುದು. ಆಸ್ತಿಯ ವಿಚಾರದಲ್ಲಿ ಜಗಳವು ತಾರಕಕ್ಕೆ ಹೋಗಬಹುದು. ನಿಮಗೆ ಗೊತ್ತಿಲ್ಲದ ಕಾರ್ಯವನ್ನು ಕಛೇರಿಯಲ್ಲಿ ನಿಭಾಯಿಸಬೇಕಾಗುವುದು. ಮನೋರಂಜನೆಯ ಕೊರತೆಯು ಅಧಿಕವಾಗಿ ಕಾಡುವುದು. ವಿರಾಮವನ್ನು ತೆಗದುಕೊಳ್ಳುವ ಮನಸ್ಸಾದೀತು.

ತುಲಾ ರಾಶಿ: ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಕಛೇರಿಯಲ್ಲಿ ಕೆಲಸವು ತುರ್ತು ಸಭೆಗಳ ಕಾರಣ ಹಿಂದುಳಿಯುವುದು. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ಸ್ವಂತ ಉದ್ಯಮವನ್ನು ಮಾಡುತ್ತಿದ್ದರೆ ನಿರೀಕ್ಷಿತ ಲಾಭವನ್ನು ತಲುಪುವುದು ಕಷ್ಟವಾದೀತು. ಸ್ತ್ರೀಯರ ಜೊತೆ ಇಂದು ನಿಮ್ಮ ವ್ಯವಹಾರವು ಬೇಡ. ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸರ್ಕಾರದ ಕಾರ್ಯದಲ್ಲಿ ಹಿನ್ನಡೆ ಅಧಿಕವಾಗಿ ಕಾಣಿಸುವುದು. ಪ್ರಭಾವೀ ವ್ಯಕ್ತಿಗಳನ್ನು ನೀವು ಬಳಸಿಕೊಳ್ಳುವಿರಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಸೂಕ್ತ.

ವೃಶ್ಚಿಕ ರಾಶಿ: ದಿನ ಪೂರ್ತಿ ಬೆವರು ಹರಿಸಿ ಮಾಡಿದ ಕೆಲಸಕ್ಕೆ ದಿನದ ಕೊನೆಗೆ ಶುಭ ಫಲವು ಸಿಗುವುದು. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ. ತಾಯಿಯ ವಿಚಾರದಲ್ಲಿ ಕೋಪಗೊಳ್ಳುವಿರಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ. ಯಾರ ಸಹಾಯವನ್ನೂ ಪಡೆಯದೆ ಕಾರ್ಯವು ನಿಧಾನವಾಗುವುದು. ಉದ್ಯೋಗಕ್ಕಾಗಿ ಖಾಸಗಿ ಸಂಸ್ಥೆಯನ್ನು ಅಲೆಯಬೇಕಾಗುವುದು. ನಿಮ್ಮ ಇಂದಿನ ವರ್ತನೆಯು ಅಸಹಜದಂತೆ ತೋರುವುದು. ಸಕಾರಾತ್ಮಕ ಚಿಂತನೆಯನ್ನು ರೂಢಿಸಿಕೊಳ್ಳುವುದು ಉತ್ತಮ.

ಧನು ರಾಶಿ: ಹಳೆಯ ಮನೆಯನ್ನು ಸುಂದರೀಕರಣ ಮಾಡುವ ಚಿಂತನೆ ನಡೆಸುವಿರಿ. ಧಾರ್ಮಿಕ ಆಸಕ್ತಿಯು ಇಂದು ಅಧಿಕವಾಗಿ ಇದ್ದು ಹೆಚ್ಚಿನ ಸಮಯವನ್ನು ದೇವರ ಸನ್ನಿಧಿಯಲ್ಲಿ ಕಳೆಯುವಿರಿ. ಮಿತ್ರರ ಕಾರಣದಿಂದ ನಿಮ್ಮ ಸಮಯವು ವ್ಯರ್ಥವಾಗಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಇನ್ನೊಬ್ಬರಿಗಾಗಿ ವಾಹನ ಚಲಾಯಿಸಬೇಕಾದೀತು. ತುರ್ತು ಕಾರ್ಯದ ನಿಮಿತ್ತ ಪ್ರಯಾಣ ಮಾಡಬೇಕಾದೀತು. ನಿಮ್ಮ ಮಾತಿನ ಮೇಲೆ ಪೂರ್ಣ ವಿಶ್ವಾಸವನ್ನು ಇಡುವುದು ಕಷ್ಟವಾಗಬಹುದು. ಬಂಧುಗಳ ಆಗಮನವನ್ನು ಇಂದು ನಿರೀಕ್ಷಿಸುವಿರಿ. ಸಂಗಾತಿಯ ಜೊತೆ ಖರೀದಿಗೆ ಹೋಗಬೇಕಾಗುವುದು.

ಮಕರ ರಾಶಿ: ನಿಮ್ಮ ಗುಣವನ್ನು ದುರುಪಯೋಗ ಮಾಡಿಕೊಂಡಾರು. ಇಷ್ಟಪಟ್ಟಿದ್ದನ್ನು ಪಡೆಯಲು ನೀವು ಏನಾದರೂ ಮಾತನಾಡಬೇಕಾಗುವುದು. ವಿವಾಹದ ಮಾತುಕತೆ ನಿಮಗೆ ಖುಷಿ ತಂದರೂ ಅದನ್ನು ಹೇಳಿಕೊಳ್ಳಲು ಸಂಕೋಚಪಡುವಿರಿ. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಇಂದು ಪರಿಶ್ರಮವಿದ್ದರೂ ಫಲವು ಅಲ್ಪವಿರಲಿದೆ. ನಿಮ್ಮ ಯೋಜನೆಯು ದೂರದೃಷ್ಟಿಯನ್ನು ಇಟ್ಟಕೊಳ್ಳಲಿ. ಇನ್ನೊಬ್ಬರ ದೋಷವನ್ನೇ ಗುರುತಿಸುವ ಸ್ವಭಾವವು ಬೇಡ. ನಿಮ್ಮ ಉತ್ಸಾಹದ ಕಾರಣ ಜವಾಬ್ದಾರಿಯೂ ಅಧಿಕವಾಗುವುದು. ಆಗಬೇಕಾದ ಕಾರ್ಯವು ಆಗದೇ ಹಣವು ವ್ಯರ್ಥವಾಗುವುದು. ಸಮಾರಂಭಗಳಿಗೆ ಹೋಗುವ ಅವಕಾಶವು ಸಿಗುವುದು. ಕಲಾವಿದರಿಗೆ ಹಿನ್ನಡೆಯ ಸಾಧ್ಯತೆ ಇದೆ.

ಕುಂಭ ರಾಶಿ: ಇಂದು ನಡೆದ ಅಹಿತಕರ‌ ಘಟನೆಯನ್ನು ಕೆಟ್ಟ ಗಳಿಗೆ ಎಂದು ಮರೆತುಬಿಡುವಿರಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಕಚ್ಚಬಹುದು. ಸಕಾಲಕ್ಕೆ ಬಂದ ಸ್ನೇಹಿತನ‌ ಸಹಕಾರವನ್ನು ಸದಾ ಸ್ಮರಿಸಿಕೊಳ್ಳುವುದು ಸೂಕ್ತ. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಉನ್ನತ ಮಟ್ಟದ ವಿದ್ಯಾಭ್ಯಾಸಕ್ಕೆ ತೊಂದರೆ ಎದುರಾಗಬಹುದು. ಮೊದಲು ಪ್ರಯಾಣವು ಸುಖಕರ ಎನಿಸದರೂ ದೇಹಪೀಡೆ ಅಧಿಕವಾದೀತು. ಇನ್ನೊಬ್ಬರನ್ನು ಅವಲಂಬಿಸಿರವುದು ನಿಮಗೆ ಇಷ್ಟವಾಗದು. ನೀವು ಇಂದು ಅಪರಿಚಿತ ವ್ಯಕ್ತಿಗಳ ನಡುವೆ ಇರುವ ಕಾರಣ ಮೌನವಾಗಿರುವಿರಿ. ಸಂಗಾತಿಯ ಮಾತುಗಳಿಗೆ ಸಿಟ್ಟಾಗುವುದು ಬೇಡ. ತಕ್ಷಣದ ಪ್ರತಿಕ್ರಿಯೆಯೂ ಬೇಡ. ಸಮಯದ ಸದುಪಯೋಗವಾಗುವಂತೆ ನೋಡಿಕೊಳ್ಳಿ.

ಮೀನ ರಾಶಿ: ಉದ್ಯಮಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ವರ್ಗಾವಣೆಯ ಭೀತಿ ಕಾಡಲಿದೆ. ನಿಮ್ಮ ಇತರ ಚಟುವಟಿಕೆಗಳು ಬೆಳಕಿಗೆ ಬರಬಹುದು. ಆಕಸ್ಮಿಕವಾಗಿ ಬರುವ ಅಲ್ಪ ಸಂಪತ್ತೂ ಕೈಯಲ್ಲಿ ನಿಲ್ಲದು. ದಂಪತಿಗಳ ನಡುವೆ ಪ್ರೀತಿಯು ಹೆಚ್ಚಾಗುವುದು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು. ಬಂಧುಗಳ ಜೊತೆ ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯೇ ಇರಲಿ. ಒಂದೇ ವಿಷಯವನ್ನು ಹಲವರಿಂದ ಕೇಳಿ ಬೇಸರವಾಗುವುದು‌ ನಿಮ್ಮ ಆರ್ಥಿಕ ದೌರ್ಬಲ್ಯವನ್ನು ಯಾರ ಜೊತೆಯೂ ಹಂಚಿಕೊಳ್ಳುವುದು ಬೇಡ. ಕೂಷ್ಮಾಂಡ ದೇವಿಯನ್ನು ಆರಾಧಿಸಿ.

-ಲೋಹಿತಶರ್ಮಾ – 8762924271 (what’s app only)

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!