ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ 12:27ರವರೆಗೆ, ಗುಳಿಕ ಕಾಲ ಸಂಜೆ 01:58 ರಿಂದ 03:29ರ ವರೆಗೆ.
ಮೇಷ ರಾಶಿ: ನೋವನ್ನು ಮನಸ್ಸಿನೊಳಗೇ ಇಟ್ಟುಕೊಂಡು ಸಂಕಟಪಡುವಿರಿ. ಸಣ್ಣ ವಿಚಾರಕ್ಕೂ ಕೋಪಗೊಳ್ಳುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಆಸಕ್ತಿಯು ಕಡಿಮೆ ಇರುವುದು. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃತ್ತಿಯಲ್ಲಿ ನಿಮ್ಮ ಸೇವೆಯು ಗಣನೀಯವಾಗಿರುವುದು. ನಿಮ್ಮನ್ನು ನಂಬಿಸಿ ಕೆಲಸವನ್ನು ಮಾಡಿಸಿಕೊಳ್ಳುವರು.
ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುವರು. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನಿಮಗೆ ಮುಜುಗರವಾದೀತು. ಆಸ್ತಿಯ ವಿಚಾರವಾಗಿ ಮನೆಯಲ್ಲಿ ವಾಗ್ವಾದ ಆಗಬಹುದು.
ಮಿಥುನ ರಾಶಿ: ಹಿರಿಯರಿಗೆ ಅಗೌರವದ ಮಾತುಗಳನ್ನು ಆಡುವಿರಿ. ನಿಮ್ಮ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ನಿಮ್ಮ ನಿರ್ಧಾರಕ್ಕೆ ನಿಮಗೆ ಸಂಪೂರ್ಣ ಬೆಂಬಲವಿರುವುದು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು. ಭವಿಷ್ಯದ ಬಗ್ಗೆ ಚಿಂತೆ ಇದ್ದರೂ ಬಂದಂತೆ ಸ್ವೀಕರಿಸಬೇಕು ಎಂದು ನಿರ್ಧರಿಸುವಿರಿ. ಸಂಗಾತಿಯ ಮಾತಿನಿಂದ ಸಿಟ್ಟಾಗುವಿರಿ. ಇಂದು ಕಛೇರಿಯಲ್ಲಿ ನಿಮಗೆ ಸ್ವಲ್ಪ ಬಿಡುವುದು ಸಿಗಬಹುದು. ಆಟದತ್ತ ನಿಮಗೆ ಗಮನ ಇರಲಿದೆ.
ಕಟಕ ರಾಶಿ: ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ಕಣ್ಣಿಗೆ ಪರಮಸ್ವಾರ್ಥಿ ಎನಿಸಿಕೊಳ್ಳುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದು ನಿಮಗೆ ಇಷ್ಟವಾಗದು. ಆರೋಗ್ಯವು ಸ್ಥಿರವಾಗಿರುವಂತೆ ನೋಡಿಕೊಳ್ಳಿ.
ಸಿಂಹ ರಾಶಿ: ಉದ್ಯೋಗಕ್ಕೆ ಅನೇಕ ಮಾರ್ಗಗಳು ತೆರೆದುಕೊಳ್ಳಲಿವೆ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನು ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಇಂದು ನಿಮ್ಮ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ. ನಿಮ್ಮ ಮೇಲೆ ಬಂದ ಅಪವಾದವನ್ನು ನೀವು ಇನ್ನೊಬ್ಬರ ಮೇಲೆ ಹಾಕುವುದು ಬೇಡ. ಸತ್ಯಾಸತ್ಯತೆಯನ್ನು ಸಾಬೀತು ಮಾಡಿ. ಪ್ರಾಣಿಗಳ ಜೊತೆ ಒಡನಾಡಲಿದ್ದೀರಿ. ಅನುಮಾನವನ್ನು ಬಿಟ್ಟು ನೇರವಾಗಿ ಇರಲು ಪ್ರಯತ್ನಿಸಿ.
ಕನ್ಯಾ ರಾಶಿ: ಸಹೋದರನ ಮಾತು ನಿಮಗೆ ಜೀರ್ಣಮಾಡಿಕೊಳ್ಳುವುದು ಕಷ್ಟವಾಗಿ ಸಿಟ್ಟಾಗುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಸ್ತ್ರೀಸಂಬಂಧವಾದ ಆರೋಪವು ಬರಲಿದೆ. ಹೊಸದಾಗಿ ಸಾರ್ವಜನಿಕ ಕೆಲಸದಲ್ಲಿ ಕಾರ್ಯ ಮಾಡುವವರಿಗೆ ಮುಜುಗರವಿರಲಿದೆ. ಆರೋಗ್ಯದ ವಿಚಾರವಾಗಿ ವೈದ್ಯರ ಜೊತೆ ಮಾತನಾಡಿ.
ತುಲಾ ರಾಶಿ: ಬಂಧುಗಳಿಗಾಗಿ ಇಂದಿನ ಸಮಯವನ್ನು ಕೊಡುವಿರಿ. ಅಶುಭ ವಾರ್ತಯಿಂದ ಏನೂ ಸೂಚಿಸದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧರಾಗುವಿರಿ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ.ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮ ವಿಚಾರವು ಮತ್ತೆ ಕಾರಣಾಂತರಗಳಿಂದ ನೆನಪಾಗುವುದು. ತಪ್ಪನ್ನು ಒಪ್ಪಿಕೊಳ್ಳದೇ ಅಹಂಕಾರವನ್ನು ತೋರಿಸುವಿರಿ. ನಿಮ್ಮ ಬಗ್ಗೆ ಬೇರೆಯವರಿಗೆ ಔದಾರ್ಯಭಾವವು ಇರಲಿದೆ. ನಿಮ್ಮ ಅಸಾಮಾನ್ಯ ಚಿಂತನೆಯು ನಿಮ್ಮನ್ನು ದೊಡ್ಡವರನ್ನಾಗಿ ಮಾಡಿದ್ದು. ಹೊಸ ಉದ್ಯೋಗದ ಬಗ್ಗೆ ಆಪ್ತರ ಜೊತೆ ಮಂಥನ ನಡೆಸುವಿರಿ. ನಿಮ್ಮ ಮಾತುಗಳು ನೇರವೂ ಕಠೋರವೂ ಅಗಿರಲಿದೆ. ಇದು ಎಲ್ಲರಿಗೂ ಪ್ರಿಯವಾಗದು.
ವೃಶ್ಚಿಕ ರಾಶಿ: ಇಂದಿನ ಸೋಲಿನಿಂದ ಪಾಠ ಕಲಿಯುವಿರಿ. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ ಮೇಲೆ ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ. ಒತ್ತಾಯದಿಂದ ಸ್ನೇಹಿತರ ಮನೆಗೆ ಹೋಗುವಿರಿ. ಆದಾಯದ ಬಗ್ಗೆ ಗಮನಹರಿಸಿ ಆರೋಗ್ಯವನ್ನು ನಿರ್ಲಕ್ಷ್ಯದಿಂದ ನೋಡುವಿರಿ. ಇಂದು ಉದ್ಯೋಗದ ಅನ್ವೇಷಣೆಯಲ್ಲಿ ಮಗ್ನರಾಗುವಿರಿ.
ಧನು ರಾಶಿ: ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಿ ಬೇಸರಿಸಿಕೊಳ್ಳುವಿರಿ. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ಅಧಿಕಾರದಿಂದ ಕೆಲವು ತೊಂದರೆಯನ್ನು ಎದುರಿಸಬೇಕಾದೀತು. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮನೆಯಿಂದ ದೂರವಿರಲಿದ್ದು ಆಹಾರದ ತೊಂದರೆಯನ್ನು ಅನುಭವಿಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ. ವಿದ್ಯಾಭ್ಯಾಸವನ್ನು ಯೋಗ್ಯರೀತಿಯಲ್ಲಿ ನಡೆಸಲು ಕಷ್ಟವಾದೀತು. ವರ್ಗಾವಣೆಯು ನಿಮಗೆ ಇಷ್ಟವಾಗದೇ ಪ್ರಭಾವೀ ವ್ಯಕ್ತಿಗಳ ಸಹಕಾರದಿಂದ ರದ್ದು ಮಾಡಿಸಿಕೊಳ್ಳುವಿರಿ.
ಮಕರ ರಾಶಿ: ಆಮದು ವ್ಯವಹಾರವು ಯಾವುದೇ ಅಡೆತಡೆಗಳಿಲ್ಲದೇ ಆಗುವುದು. ಸ್ನೇಹಿತರಿಂದ ಆಪತ್ತಿಗೆ ಸಹಾಯವು ಸಿಗುವುದು. ಚಿಕಿತ್ಸೆಯ ಕಾರಣದಿಂದ ಆರೋಗ್ಯದಲ್ಲಿ ಚೇತರಿಕೆ ಇರಲಿದೆ. ಹಿತಶತ್ರುಗಳು ಸಕಾಲಕ್ಕೆ ಕಾರ್ಯದಲ್ಲಿ ತೊಂದರೆಯನ್ನು ಕೊಡುವರು. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ. ಅನಿರೀಕ್ಷಿತ ರಾಜಕಾರಿಣಿಗಳ ಭೇಟಿಯಿಂದ ಕೆಲವು ಬದಲಾವಣೆಯನ್ನು ಕಾಣುವಿರಿ. ಇಂದು ದೂರ ಪ್ರವಾಸದಿಂದ ನಿಮಗೆ ತೊಂದರೆಯಾಗಲಿದೆ.
ಕುಂಭ ರಾಶಿ: ಸಂಗಾತಿಯ ಮಾತಿನಂತೆ ನಡೆದುಕೊಳ್ಳುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ಆತುರದ ಚಾಲನೆ ಬೇಡ. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಅನಾರೋಗ್ಯದಿಂದ ಕೆಲಸಗಳಿಗೆ ವಿಘ್ನವು ಬರುವುದು. ಯಾರದೋ ಮಾತನ್ನು ಕೇಳಿ ನಿಮ್ಮವರ ಬಗ್ಗೆ ತೀರ್ಮಾನ ಮಾಡಬೇಡಿ. ಸ್ವಂತಿಕೆಯೂ ಇರಲಿ.
ಮೀನ ರಾಶಿ: ಇಂದು ನಿಮಗೆ ದೇವತಾಕಾರ್ಯವನ್ನು ಮಾಡುವ ಉತ್ಸಾಹವಿದ್ದರೂ ತೊಂದರೆಯಿಂದಾಗಿ ಮಾಡಲಾಗದ ಸ್ಥಿತಿ ಬರಬಹುದು. ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ನೆಲೆಸುವುದು. ಆಸ್ತಿಯನ್ನು ಖರೀದಿಸುವ ಕುರಿತು ಚರ್ಚೋಪಚರ್ಚೆಗಳನ್ನು ಮಾಡುವಿರಿ. ಆರ್ಥಿಕ ಒತ್ತಡದಿಂದ ನೀವು ಹೊರಬರಲು ದಾರಿಯನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ. ನೀವೇ ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಉಚಿತವಲ್ಲ. ಇದು ನಿಮ್ಮವರಿಗೆ ಮುಜುಗರದ ಸಂದರ್ಭವಾಗುವುದು. ಉದ್ಯೋಗದಲ್ಲಿ ಆಲಸ್ಯದಿಂದ ಇರುವ ಕಾರಣ ಅಧಿಕಾರಿಗಳಿಂದ ಸೂಚನೆ ಬರಬಹುದು.
ಲೋಹಿತಶರ್ಮಾ – 8762924271 (what’s app only)