Horoscope 19 September: ದಿನಭವಿಷ್ಯ, ಯಾವ ರಾಶಿಗೆ ಏನು ಫಲ? ಯಾವ ರಾಶಿಗೆ ನಷ್ಟ?

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ಇಂದಿನ (ಸೆಪ್ಟೆಂಬರ್ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope 19 September: ದಿನಭವಿಷ್ಯ, ಯಾವ ರಾಶಿಗೆ ಏನು ಫಲ? ಯಾವ ರಾಶಿಗೆ ನಷ್ಟ?
ನಿತ್ಯಭವಿಷ್ಯ
Follow us
| Edited By: ರಮೇಶ್ ಬಿ. ಜವಳಗೇರಾ

Updated on: Sep 19, 2023 | 12:02 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಸೆಪ್ಟೆಂಬರ್ 19) ರಾಶಿ ಭವಿಷ್ಯದಲ್ಲಿ(horoscope) ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಆಯುಷ್ಮಾನ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 3:28 ರಿಂದ 04:59 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:25 ರಿಂದ 10:56ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:27 ರಿಂದ 1:57ರ ವರೆಗೆ.

ಮೇಷ ರಾಶಿ : ವಿದ್ಯಾರ್ಥಿಗಳು ಪರೀಕ್ಷೆಯ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ಬಂಧುಗಳ ಆರೋಗ್ಯದ ಆರೈಕೆಯಲ್ಲಿ ನೀವು ತೊಡಗುವಿರಿ. ಅವಾಚ್ಯ ಮಾತುಗಳಿಂದ ನಿಂದನೆಗೆ ಒಳಗಾಗಬಹುದು.‌ ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ನಾಯಕತ್ವವನ್ನು ನೀವು ಸ್ವತಂತ್ರದ ಕಾರಣ ನಿರಾಕರಿಸುವಿರಿ. ಹುಡುಗಾಟಿಕೆಯಿಂದ ಏನಾದರೂ ಅವಗಡವಾದೀತು. ನಿಮ್ಮ ನೋವಿಗೆ ಸ್ಪಂದಿಸಿದವರ ಜೊತೆ ಸಮಯ ಕಳೆಯುವಿರಿ. ಹೊಸತನ್ನು ಕಲಿಯಲು ಹಿಂದೇಟು ಹಾಕುವುದಿಲ್ಲ.

ವೃಷಭ ರಾಶಿ : ಆರ್ಥಿಕ‌ ಸಂಕಷ್ಟವನ್ನು ಎದುರಿಸುತ್ತಿದ್ದು ಸ್ಥಿರಾಸ್ತಿಯನ್ನು ಮಾರಾಟ ಮಾಡಲೂ ನಿಮಗೆ ಕಷ್ಟವಾದೀತು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ಇಂದು ಏನಾದರೂ ಆಗುತ್ತದೆ ಎಂಬ ಅಪಾಯವು ಇರಲಿದೆ. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ನೀವು ನಿಜವನ್ನು ಅಷ್ಟು ಸುಲಭವಾಗಿ ನಂಬಲಾರಿರಿ. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿಕೊಳ್ಳುವಿರಿ. ಯಾರನ್ನೂ ಮೆಚ್ಚುವ ನಿಮ್ಮ ಗುಣವು ಪ್ರಶಂಸನೀಯವೇ. ಬಂಧುಗಳ ಮನೆಯಲ್ಲಿ ನೀವು ಇಂದು ಭೋಜನ ಮಾಡುವಿರಿ. ಪ್ರಾರಂಭಿಸಿದ ಕೆಲಸದಲ್ಲಿ ಉತ್ಸಾಹ ಹೆಚ್ಚಿದ್ದರೂ ಮಾರ್ಗದಲ್ಲಿ ಗೊಂದಲವೂ ಇರುವುದು.‌ ಗಣಪತಿಯ ಆರಾಧನೆಯಿಂದ ನಿಮಗೆ ಪರಿಹಾರವು ಗೋಚರಿಸುವುದು.

ಮಿಥುನ ರಾಶಿ : ಮಕ್ಕಳ ಕುರಿತು ನಿಮಗೆ ಅಭಿಮಾನ ಮೂಡಬಹುದು. ಪ್ರಯಾಣವು ಅಹಿತವೆನಿಸಬಹುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮನ್ನು ಗುರುತಿಸುವರು. ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮುಗಿಸುವಿರಿ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯವಾಗುವುದು. ನಿಮ್ಮ ಸಾಮಾಜಿಕ ಕಾರ್ಯಕ್ಕೆ ಬೆಂಬಲವನ್ನು ಅಪೇಕ್ಷಿಸುವಿರಿ. ಖುಷಿಯಾಗಿರಲು ನಾನಾ ಮಾರ್ಗಗಳನ್ನು ಹುಡುಕುವಿರಿ. ಪ್ರಾಮಾಣಿಕತೆಯು ನಿಮಗೆ ಇಷ್ಟವಾದರೂ ಇದರಿಂದ ಪ್ರಯೋಜನವಿಲ್ಲ ಎಂದು ಅನ್ನಿಸಬಹುದು. ತಾಳ್ಮೆಯಲ್ಲಿ ಇಂದು ನೀವು ಉತ್ತೀರ್ಣರಾಗುವುದು ಕಷ್ಟ.

ಕಟಕ ರಾಶಿ : ಗೌಪ್ಯವಾಗಿ ಅಧಿಕಾರಿಗಳನ್ನು ಭೇಟಿ ಮಾಡುವಿರಿ. ಕೆಲವು ವಿಚಾರಕ್ಕೆ ಬುದ್ಧಿಯು ಸೂಚಿಸದೇ ಇರಬಹುದು. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನಿಮಗೆ ಇಂದು ವಾದದಲ್ಲಿ ಸೋಲಾಗಬಹುದು. ನಿಮ್ಮ ಸಾಮರ್ಥ್ಯವನ್ನು ಎಲ್ಲಿಯೋ ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ಇಂದು ಮೋಸದ ಕರೆಗಳಿಂದ ವಂಚನೆಯ ಜಾಲಕ್ಕೆ ಸಿಕ್ಕಿಕೊಳ್ಳಬಹುದು. ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳು ತಿರಸ್ಕರಿಸಬಹುದು.

ಸಿಂಹ ರಾಶಿ : ರಾಜಕೀಯ ವ್ಯಕ್ತಿಗಳ ವಿರುದ್ಧ ಸುಳ್ಳು ಸುದ್ದಿಗಳು ಬರಬಹುದು. ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಏಕಾಂಗಿ ಎಂಬ ಭಾವವು ನಿಮ್ಮನ್ನು ಅತಿಯಾಗಿ ಕಾಡಬಹುದು.‌ ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಮಹಾತ್ಮರ ಸೇವೆಗೆ ಅನಿರೀಕ್ಷಿತ ಅವಕಾಶವು ಸಿಗಲಿದೆ. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು. ಪರರ ವಸ್ತುವನ್ನು ಅವರಿಗೆ ಹಿಂತಿರುಗಿಸಲು ನಿಮಗೆ ಆಗದೇ ಹೋಗುವುದು. ನಿದ್ರೆ ಇಲ್ಲದೇ ಎಲ್ಲವೂ ಅಸ್ತವ್ಯಸ್ತದಂತೆ ಕಾಣುವುದು. ದಾಂಪತ್ಯದಲ್ಲಿ ಹೊಂದಾಣಿಕೆಗೆ ಇಬ್ಬರೂ ಪ್ರಯತ್ನಶೀಲರಾಗುವುದು ಉತ್ತಮ. ವಿದೇಶದಲ್ಲಿರುವ ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮಿಂದ ಆಗದ ಕೆಲಸವನ್ನು ಬೇರೆಯವರು ಮಾಡಿ ಮುಗಿಸುವರು. ಸುಬ್ರಹ್ಮಣ್ಯನ ಆರಾಧನೆಯನ್ನು ಮಾಡಿ.

ಕನ್ಯಾ ರಾಶಿ : ಸಹೋದ್ಯೋಗಿಗಳು ಸುಮ್ಮನೇ ಕಿರಿಕಿರಿ ಮಾಡುವರು. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ಕೆಲವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಅನಾರೋಗ್ಯವು ನೆಪವಾಗಬಹುದು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು. ನಿಮ್ಮ ದಿವಸದ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿಕೊಳ್ಳಿ. ಮಾತಿನಿಂದ ಅಳೆದ ನಿಮ್ಮ ಮಾಪನವು ಸರಿಯಾಗದೇ ಇರುವುದು. ನಿಮ್ಮದೇ ಆದ ಸಂಸ್ಥೆಯನ್ನು ಆರಂಭಿಸಲು ಕೆಲವರನ್ನು ಸೇರಿಸಿಕೊಳ್ಳುವಿರಿ. ಮಾನಸಿಕ ಆಯಾಸದಿಂದ ನೀವು ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕಾಗಬಹುದು. ನಿಮ್ಮವರ ಮೇಲೆ ಸಿಡಿಮಿಡಿಗೊಳ್ಳಲಿದ್ದು, ಸಂಗಾತಿಯು ಸಮಾಧಾನ ಮಾಡಬಹುದು.

ತುಲಾ ರಾಶಿ : ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿಯಾಗಿದ್ದು ನಿಮಗೆ ಅತಿಶಯ ಸಂತೋಷವಾಗಲಿದೆ. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ನಿಮ್ಮ ಸಮಯಪಾಲನೆಗೆ ಅಧಿಕಾರಿಗಳಿಂದ ಪ್ರಶಂಸೆಯು ಸಿಗುವುದು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸಿಕೊಳ್ಳುವುದು ಕ್ಷೇಮ.‌ ಇಲ್ಲವಾದರೆ ಎಲ್ಲವೂ ನಿಮ್ಮ ಬುಡಕ್ಕೇ ಬರುವುದು. ಸ್ನೇಹಿತರ ಜೊತೆ ಸುತ್ತಾಟವನ್ನು ಅನಿವಾರ್ಯವಾಗಿ ಮಾಡುವಿರಿ. ಪ್ರೀತಿಯನ್ನು ತಿಳಿಸುವುದು ವಿಳಂಬವಾಗುವುದು. ನಿಮ್ಮ ಸ್ಥಾನವನ್ನು ಬೇರೆಯವರು ಆಕ್ರಮಿಸಿಕೊಳ್ಳುವರು. ನಿಮ್ಮ‌ ಇಂದಿನ ಮಾತು ನಕಾರಾತ್ಮಕ ಅಂಶವನ್ನೇ ಹೆಚ್ಚು ಪಡೆದುಕೊಳ್ಳಲಿದೆ.

ವೃಶ್ಚಿಕ ರಾಶಿ : ಉದ್ಯೋಗದಲ್ಲಿ ಚಿಂತಿತ ಲಾಭ ಕಾಣದೇ ಮನಸ್ಸು ಕುಗ್ಗಬಹುದು. ಉತ್ಸಾಹದಿಂದ ಇರಲು ನಿಮಗೆ ಮಾರ್ಗಗಳೂ ಕಡಿಮೆ‌ ಇರಬಹುದು. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಮೇಲಧಿಕಾರಿಗಳ ಮಾತು ಕಿರಿಕಿರಿ ಎನಿಸಬಹುದು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು. ದೂರದಲ್ಲಿ ಇರುವ ನಿಮಗೆ ಕುಟುಂಬದ ವಾರ್ತೆಯು ಖಷಿಯನ್ನು ಕೊಡುವುದು. ಪ್ರೀತಿಯನ್ನು ನೀವು ಲಘುವಾಗಿ ಕಂಡು ಪ್ರಿಯಕರನಿಂದ ದೂರಾಗುವಿರಿ. ಬೇಗ ಮುಗಿಯುವ ಕೆಲಸವನ್ನು ಮೊದಲು ಮಾಡಿ. ಸಹೋದರನ ಆರೋಗ್ಯವು ಕೆಡಬಹುದು. ಗೋಸೇವೆಯ ಕಡೆ ಮನಸ್ಸು ತಿರುಗುವುದು.

ಧನು ರಾಶಿ : ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಪ್ರಶಂಸೆಯಿಂದ ಸಣ್ಣ ಅಹಂಕಾರವು ಬರಬಹುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ದೌರ್ಬಲ್ಯವನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಡವು ಸಾಧಿಸುವಿರಿ. ವಿದೇಶದ ಬಂಧುಗಳು ನಿಮ್ಮ ಉದ್ಯಮಕ್ಕೆ ಸಹಾಯ ಮಾಡುವರು. ಪೂರ್ವಯೋಜಿತ ಕಾರ್ಯಕ್ಕೂ ನೀವು ಸಮಯವನ್ನು ಹೊಂದಿಸಿಕೊಳ್ಳಲಾಗದು. ನಿಮ್ಮ ದುಂದು ವೆಚ್ಚಕ್ಕೆ ಸಂಗಾತಿಯೇ ಬ್ರೇಕ್ ಹಾಕಬೇಕಾಗಿಬರಬಹುದು. ಇಂದು ನಿಮಗೆ ಎಲ್ಲವನ್ನೂ ಪ್ರತಿಭಟಿಸುವ ಮನೋಭಾವ ಬರುವುದು.

ಮಕರ ರಾಶಿ : ಅನಿರೀಕ್ಷಿತವಾಗಿ ಧನವ್ಯಯವಾಗಿದ್ದು ಆತಂಕವು ಆಗಲಿದೆ. ರಾಜಕೀಯದಿಂದ ನೀವು ಪ್ರೇರಣೆ ಪಡೆಯುವಿರಿ. ಅನಾರೋಗ್ಯದ ಲಕ್ಷಣವು ಕಂಡಾಗಲೇ ಸರಿ ಮಾಡಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಲಾಭದಿಂದ ನೀವು ಸಂತೋಷವಾಗಿ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಅನೇಕ ಲಾಭವನ್ನು ಮಾಡಿಕೊಳ್ಳುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಸಣ್ಣ ಕೊಡುಗೆ ನೀಡುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯಿಂದ ಒತ್ತಡದ ಕಾರಣಕ್ಕೆ ನೀವು ಹಿಮ್ಮುಖರಾಗುವಿರಿ.

ಕುಂಭ ರಾಶಿ : ಮನೆಯಲ್ಲಿ ಸಣ್ಣ ವಿಚಾರಕ್ಕೆ ನೀವು ವಿವಾದ ಮಾಡಿಕೊಳ್ಳುವಿರಿ. ನಿಮ್ಮ ನೆಮ್ಮದಿಯನ್ನು ಸಂಗಾತಿಯು ಭಂಗ ಮಾಡಬಹುದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಸ್ಪಷ್ಟತೆ ಇರದು. ವಂಚನೆಯಲ್ಲಿ ಗೊತ್ತಾಗದಂತೆ ಸಿಕ್ಕಿಕೊಳ್ಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಭೇಟಿ ಅವಶ್ಯಕ. ಎಲ್ಲರ ಮೇಲೂ ಕೋಪವು ಕಾರಣವಿಲ್ಲದೇ ಬರುವುದು. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ದೂರದ ಬಂಧುಗಳು ಪರಿಚಿತರಾಗಿ ಅವರ ಜೊತೆ ಕಾಲ ಕಳೆಯುವಿರಿ. ನಿಮಗೆ ಕೃತಜ್ಞತೆ ಇರಲಿ. ಕುಲದೇವರ ಆರಾಧನೆಯನ್ನು ಮಾಡುವಿರಿ.

ಮೀನ ರಾಶಿ : ದಿನದ ಕಾರ್ಯದಲ್ಲಿ ಅಡೆತಡೆಯಾಗಲಿದೆ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಅನಾರೋಗ್ಯವನ್ನು ಸರಿ ಮಾಡಿಕೊಳ್ಳುವಲ್ಲಿ ನಿಮ್ಮ ಪ್ರಯತ್ನವೂ ಬೇಕು. ಇಂದು ನಿಮ್ಮ ವಿವಾಹದ ಮಾತುಕತೆಯನ್ನು ಆಡಲು ಹೋಗಲಿದ್ದೀರಿ. ನಿಮ್ಮ ಬಗ್ಗೆ ಕೆಲವು ಊಹಾಪೋಹಗಳು ಹರಡುವುದು.

ಇನ್ನಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಹಿತಶರ್ಮಾ – 8762924271 (what’s app only)

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!