Nithya Bhavishya: ಎಲ್ಲರಿಗೂ ನೂತನ‌ಸಂವತ್ಸರದ ಶುಭಾಶಯ, ನಿಮ್ಮ ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Nithya Bhavishya: ಎಲ್ಲರಿಗೂ ನೂತನ‌ಸಂವತ್ಸರದ ಶುಭಾಶಯ, ನಿಮ್ಮ ಇಂದಿನ ರಾಶಿ ಭವಿಷ್ಯ ಹೀಗಿದೆ
ಇಂದಿ ರಾಶಿ ಭವಿಷ್ಯImage Credit source: freepik
Follow us
Rakesh Nayak Manchi
|

Updated on: Mar 22, 2023 | 5:00 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮಾರ್ಚ್ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಕ್ಲ, ಕರಣ : ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:40 ರಿಂದ 02:10ರವರೆಗೆ, ಯಮಘಂಡ ಕಾಲ ಬೆಳಗ್ಗೆ 08:08 ರಿಂದ 09:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:09 ರಿಂದ ಮಧ್ಯಾಹ್ನ 12:40ರ ವರೆಗೆ.

ಶೋಭಕೃತ್ ಸಂವತ್ಸರವು ಎಲ್ಲ ರಾಶಿಯವರಿಗೂ ಶುಭವನ್ನು ತರಲಿ. ಇಷ್ಟಾರ್ಥಗಳು ಸಿದ್ಧಿಸಲಿ. ಅಮಂಗಲವು ದೂರವಾಗಿ, ಮಂಗಲಮಯ ವಾತಾವರಣ ಇಡೀ ವರ್ಷ ತುಂಬಿರಲಿ. ಹೊಸತನವು ಬರಲಿ, ಹೊಸ ಮನವು ಇರಲಿ, ಎಲ್ಲರಿಗೂ ನೂತನ‌ಸಂವತ್ಸರಕ್ಕೆ ಶುಭಾಶಯ.

ಮೇಷ: ಇಂದು ನೀವು ಅಕಾರಣವಾಗಿ ಸಂಕಟ ಪಡುವಿರಿ. ಸಣ್ಣದನ್ನು ದೊಡ್ಡದಾಗಿ ಮಾಡಿಕೊಳ್ಳಲು ಹೋಗದೇ ಅಲ್ಲಿಯೇ ಮುಗಿಸಿ. ಭವಿಷ್ಯದ ತುಂಬಾ ಆಲೋಚನೆಗಳನ್ನು ಮಾಡುವಿರಿ. ಎಲ್ಲವನ್ನೂ ತಿಳಿದಿದ್ದರೂ ವಾದದಲ್ಲಿ ಸೋಲಬೇಕಾದ ಸ್ಥಿತಿ ಇದೆ. ವಿವಾದವನ್ನು ಕಡಿಮೆ ಮಾಡಿಕೊಳ್ಳಿ. ನಿಮ್ಮ ಗುರಿಯ ಸಾಧನೆಯವರೆಗೆ ಮೌನವಿದ್ದಷ್ಟೂ ಒಳ್ಳೆಯದೇ. ವಿವಾಹದ ಸಂಭ್ರಮ ಮನೆಯಲ್ಲಿ ಇರುವುದು. ದೀರ್ಘಕಾಲದ ಅನಂತರದ ಭೇಟಿ ನಿಮಗೆ ಸಂತಸ ಕೊಡಲಿದೆ. ಗೌರವವನ್ನು ನಿರೀಕ್ಷಿಸದಿದ್ದರೂ ನಿಮಗೆ ಇಂದು ಲಭ್ಯವಾಗಲಿದೆ. ತಂದೆ-ತಾಯಿಯರ ಆಶೀರ್ವಾದ ಪಡೆಯಿರಿ.

ವೃಷಭ: ನಿಮ್ಮ ಸಮಸ್ಯೆಗಳನ್ನು ತಾಳ್ಮೆಯಿಂದ ಪರಿಹರಿಸಿಕೊಳ್ಳಿ. ಕೆಟ್ಟ ಸಮಯವು ಬರಬಾರದೆಂದು ಇಷ್ಟದೇವರನ್ನು ಪಾರ್ಥಿಸಿ. ನೂತನ ಗೃಹಾರಂಭದ ಕನಸು‌ ಕಾಣಲಿದ್ದೀರಿ. ನಿಮ್ಮ ಮನಃಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ಇಂದು ಉತ್ಸಾಹದಿಂದ ನೀವು ಕೆಲಸವನ್ನು ಮಾಡಲು ಬಯಸುವುದಿಲ್ಲ. ಪ್ರೇಮಕ್ಕೆ ಸಂಬಂಧಿಸದಂತೆ ಉತ್ತಮವಾಗಿರಲಿದೆ. ನೀವು ಹೊಸ ಸಂಬಂಧವನ್ನು ಪ್ರಾರಂಭಿಸಲು ಹೋದರೆ ಅದರಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಬೇರೆಯವರ‌‌ ನಕಾರಾತ್ಮಕ ಮಾತುಗಳಿಗೆ ಕಿವಿಗೊಡದೇ ನಿಮ್ಮ ಯೋಚನೆ ತಕ್ಕಂತೆ ಹೆಜ್ಜೆ ಹಾಕಿ. ಆರಂಭವು ಸ್ವಲ್ಪ ಕಷ್ಟವೆನಿಸುವುದು.

ಮಿಥುನ: ನಿಮ್ಮವರನ್ನು ಹಾಸ್ಯ ಮಾಡಲು ಹೋಗಿ ಅವರಿಗೆ ನೋವನ್ನುಂಟು‌ಮಾಡುವಿರಿ. ಬಹಳ ಒತ್ತಡದಲ್ಲಿ ಕೆಲಸವನ್ನು ಮಾಡಿ ಮುಗಿಸಲಿದ್ದೀರಿ. ದೇಹವು ಹೆಚ್ಚು ವಿಶ್ರಾಂತಿಯನ್ನು ಕೇಳಬಹುದು. ಪ್ರವಾಸವನ್ನು ಮಾಡಿ ಆನಂದಿಸುವಿರಿ. ವಿದ್ಯಾರ್ಥಿಗಳು ಅಧ್ಯಯನ ಪರರಾಗಿ ಇರುವವರು. ಪರೀಕ್ಷೆಯ ಭಯವೂ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸದಂತೆ ಸಂದರ್ಶನವಾಗಿ ಕೈತಪ್ಪುವ ಸಾಧ್ಯತೆ ಇದೆ. ಪ್ರೇಮದಲ್ಲಿ ಸಿಲುಕಿ ಒದ್ದಾಡಲಿದ್ದೀರಿ. ನೀವು ಅನ್ಯ ಆದಾಯದ ಮಾರ್ಗಗಳನ್ನು ಹೊಂದಿದ್ದರೆ, ಕಷ್ಟವಾದೀತು. ಸಮೀಪದಲ್ಲಿರುವ ಕುಮಾರಸ್ವಾಮಿಯ ದೇಗುಲಕ್ಕೆ ಹೋಗಿ ಪೂಜೆ ಮಾಡಿಸಿ.

ಕಟಕ: ಇಂದು ನೀವು ನಿಮ್ಮ ಮನಸ್ಸನ್ನು ನಿಯಂತ್ರಿಸಬೇಕಾಗಿದೆ. ಅಧಿಕ ಕೋಪದಿಂದ ಮಿತ್ರರನ್ನು ಕಳೆದುಕೊಳ್ಳಬೇಕಾಗಬಹುದು. ಇಂದು ನೀವು ಮೋಜಿನಿಂದ ಸಮಯವನ್ನು ಕಳೆಯಲು ಬಯಸುವಿರೊ. ಹಣದ ವಿಷಯದಲ್ಲಿ ನಷ್ಟವು ಆಗಬಹುದು. ಏರಿಳಿತಗಳಿರಬಹುದು. ನಿಮ್ಮ ಮತ್ತು ಸಂಗಾತಿಯ ನಡುವೆ ಅಹಂ ನ ಘರ್ಷಣೆ ಉಂಟಾಗಲಿದೆ. ನಿಮ್ಮ ಹೆತ್ತವರ ಮಾತಿಗೆ ಬೆಲೆ ಕೊಡದೇ ಕಷ್ಟಪಡಬೇಕಾಗಬಹುದು. ವಿದ್ಯಾರ್ಥಿಗಳು ಪರೀಕ್ಷೆಯ ಗೊಂದಲದಲ್ಲಿ ಸಿಕ್ಕಿಹಾಕಿಕೊಳ್ಳುವಿರಿ. ಮಕ್ಕಳು ನಿಮ್ಮ ಪರವಾಗಿ ಇರಲಿದ್ದಾರೆ. ಕುಲದೇವರಿಗೆ ದೀಪ ಬೆಳಗಿ.

ಸಿಂಹ: ಇಂದು ನಿಮ್ಮ ಯಶಸ್ಸಿನ ಕ್ಷಣವಾಗಲಿದೆ. ನೀವು ನಿಮ್ಮ ಸ್ನೇಹಿತರಿಗೆ ಸಹಾಯ ಮಾಡುವ ಸ್ಥಿತಿ ಬರಲಿದೆ. ನೀವು ಏನನ್ನಾದರೂ ಸಾಧಿಸುವ ಛಲವನ್ನು ಇಟ್ಟುಕೊಳ್ಳುವಿರಿ. ಇಂದು ನಕಾರಾತ್ಮಕತೆಯ ವಿರುದ್ಧ ತೀವ್ರವಾದ ಹೋರಾಟ ಮಾಡುವಿರಿ. ಇದಕ್ಕಾಗಿ ಮನೆಯವರ ಜೊತೆ ಕಲಹವಾಗಬಹುದು. ಇಷ್ಟು ಬಹಳ ಸಹನೆಯಿಂದ ಇದ್ದ ನೀವು ಇಂದು ಸಹನೆಯ ಕಟ್ಟೆ ಒಡೆದುಹೋಗಲಿದೆ. ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ. ಕೆಲಸವನ್ನು ಬದಲಾಯಿಸಲು ನೀವು ಯೋಚಿಸುತ್ತಿದ್ದರೆ ಒಳ್ಳೆಯ ಸ್ಥಾನ ಲಭ್ಯವಾಗಲಿದೆ. ಸೂರ್ಯೋಪಾಸನೆ ಅಗತ್ಯತೆ ಬಹಳ ಇರಲಿದೆ‌.

ಕನ್ಯಾ: ನಿಮ್ಮ ಕುಟುಂಬಜೀವನವು ಉತ್ತಮವಾಗಿರಲಿದೆ. ಇಂದು ಕೌಟುಂಬಿಕಜೀವನದಲ್ಲಿ ನೀವು ತೃಪ್ತರಾಗಿರುವಿರಿ. ಹೊಸ ಮನೆಯ ನಿರ್ಮಾಣದ ಬಗ್ಗೆ ಯೋಜನೆಯನ್ನು ಸಿದ್ಧಗೊಳಿಸಿಕೊಳ್ಳುವಿರಿ. ಅನಿರೀಕ್ಷಿತ ಶುಭ ಸುದ್ದಿಗಳು ಮನೆಯಲ್ಲಿ ಸಂತೋಷವನ್ನು ಉಂಟುಮಾಡಲಿದೆ. ಪೂರ್ವಜರ ಆಸ್ತಿಯನ್ನು ಪಡೆಯುವ ಬಗ್ಗೆ ಮಾತುಕತೆಗಳು ನಡೆಯಲಿವೆ. ಸ್ಥಳೀಯರ ಪ್ರೀತಿಯ ಜೀವನವು ಮಿಶ್ರವಾಗಿರಬಹುದು. ನಿಮ್ಮ ಪ್ರೀತಿಯಲ್ಲಿ ನೀವು ಯಾವುದೇ ಮಹತ್ವದ ಬದಲಾವಣೆ ಇಲ್ಲದೇ ಸಪ್ಪೆ ಎನಿಸಬಹುದು. ಈ ಸಮಯದಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ಏನಾದರೂ ವಿವಾದವನ್ನು ಮಾಡುವಿರಿ. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಪಹಾಸ್ಯದ ಮಾತುಗಳನ್ನಾಡಬಹದು. ಲಕ್ಷ್ಮೀನಾರಾಯಣ ಸ್ತೋತ್ರವನ್ನು ಮಾಡಿ. ಶುಭವಾರ್ತೆ ಕೇಳಿ ಬರುವುದು.

ತುಲಾ: ನಿಮ್ಮ ವೃತ್ತಿಜೀವನದಲ್ಲಿ ಯಶಸ್ಸನ್ನು ಸಾಧಿಸಲು ಶ್ರಮವಹಿಸುವಿರಿ. ನಿಮ್ಮ ಉದ್ಯೋಗ ಅಭಿವೃದ್ಧಿಗೆ ಉತ್ತಮ ಆಲೋಚನೆಗಳನ್ನು ಮಾಡುತ್ತ ಮುಂದುವರಿಯಿರಿ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡಯುವಿರಿ. ಅವರಿಂದ‌ ಮೆಚ್ಚುಗೆ ಸಿಗಲಿದೆ. ಹಣಕಾಸಿನ ವಿಷಯಗಳಲ್ಲಿ ಸ್ವಲ್ಪ ಸಂಕಷ್ಟವಾಗಲಿದೆ. ಸಂಗಾತಿಯ ಜೊತೆ ಸಮಯ ಚೆನ್ನಾಗಿರಲಿದೆ ಉತ್ತಮವಾಗಿರುತ್ತದೆ. ಈ ವಾರದ ಆರಂಭದಲ್ಲಿ, ನಿಮ್ಮ ಪ್ರೀತಿಪಾತ್ರರ ಜೊತೆ ಕುಳಿತು ಕಾಲ ಕಳೆಯುವಿರಿ. ನಿಮ್ಮ ಸಂಬಂಧವು ಮತ್ತಷ್ಟು ಆಪ್ತವಾಗಲು ಯೋಚಿಸುವಿರಿ. ಕಷ್ಟಪಟ್ಟು ಕೆಲಸ ಮಾಡಬೇಕಾಗಿ ಬರಬಹುದು. ನಿಮ್ಮ ವೃತ್ತಿಜೀವನವು ಉತ್ತಮವಾಗಿರಲಿದೆ. ದುರ್ಗಾಮಾತೆಯ ಸ್ತುತಿ ಮಾಡಿ.

ವೃಶ್ಚಿಕ: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ದೂರಕ್ಕೆ ಹೋಗಲಿದ್ದಾರೆ. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ತರುವುದು. ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾರ್ತೆ ಇರಲಿದೆ. ಪ್ರೀತಿಪಾತ್ರರ ಜೊತೆ ಉದ್ವೇಗದಿಂದ ಮಾತನಾಡುವಿರಿ. ನಿಮ್ಮ ಹಾಸ್ಯ ಸ್ವಭಾವವು ಜನರಿಗೆ ಮೆಚ್ಚುಗೆ ಆಗಲಿದೆ. ಸಹೋದ್ಯೋಗಿಗಳ ಜೊತೆ ಸಣ್ಣ ವಿವಾದ ಆಗಬಹುದು. ಯಾರಿಂದಲಾದರೂ ಮೋಸ ಹೋಗುವ ಸಾಧ್ಯತೆ ಇದೆ. ಅಂತಹ ಜನರ ಬಗ್ಗೆ ಎಚ್ಚರವಿರಲಿ. ನೀವು ಕೆಲಸ ಮಾಡುತ್ತಿದ್ದರೆ, ನಿಮಗೆ ಬಹಳಷ್ಟು ಸಂತೋಷವಿರಲಿದೆ. ಗಣಪತಿಯ ಆರಾಧನೆ ಮಾಡಿ.

ಧನುಸ್ಸು: ಕುಟುಂಬ ಹಿರಿಯರ ಜೊತೆ ಕಲಹವಾಗುವ ಸಾಧ್ಯತೆ ಇದೆ. ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳಲು ಪ್ರಾಣಾಯಾಮ ಅಥವಾ ಧ್ಯಾನವನ್ನು ಮಾಡಿ. ನಿಮಗೆ ಪ್ರಿಯವಾದದ್ದನ್ನು ಪಡೆದುಕೊಳ್ಳಲಿದ್ದೀರಿ. ಬಹಳ ಕಾಲದಿಂದ ಮಾಡುತ್ತಿರುವ ಕೆಲಸಕ್ಕೆ ಉತ್ತಮ ಫಲಿತಾಂಶ ದೊರೆಯಲಿದೆ. ಪ್ರೀತಿಯನ್ನು ಮನೆಯಲ್ಲಿ ಒಪ್ಪಿಕೊಳ್ಳದೇ ಸಮಸ್ಯೆ ಆದೀತು. ವಿದೇಶದ ಜೊತೆ ವ್ಯವಹಾರವನ್ನು ಇಟ್ಟುಕೊಂಡಿದ್ದರೆ ಕಷ್ಟಪಡಬೇಕಾಗಿ ಬರಬಹುದು. ಆಪ್ತರ ಮಾತನ್ನು ಕೇಳಬೇಕೆಂದು ಅನ್ನಿಸಬಹುದು. ಸ್ವಾತಂತ್ರ್ಯವನ್ನು ಬಯಸುವಿರಿ. ನಾಗಾರಾಧ‌ನೆಯನ್ನು ಮಾಡಿ.

ಮಕರ: ನಿಮ್ಮ ಸ್ನೇಹಿತರಿಗೆ ನಿಮ್ಮಿಂದ ಹೆಚ್ಚಿನ ಸಲಹೆ ಬೇಕಾಗಬಹುದು, ಕೊಡಿ. ಅದು ಅವರ ಸಾಮರ್ಥ್ಯಕ್ಕೆ ಸರಿಯಾಗಿರಲಿ. ನಿಮಗೆ ಅತೃಪ್ತಿಯ ಭಾವವು ಕಾಡಲಿದೆ. ಪಕ್ಕದರ ಪರಿಚಯವು ಸ್ನೇಹವಾಲಿದೆ. ಇಂದೇ ಶುಭದಿನವೆಂದು ನಿಮ್ಮ ದಿನಚರಿಯನ್ನು ಬದಲಾಯಿಸಿಕೊಳ್ಳುವಿರಿ. ವಸ್ತ್ರಗಳನ್ನು ಖರೀದಿ ಮಾಡುವ ಸಂಭ್ರಮದಲ್ಲಿ ಇರುವಿರಿ. ಅಲಂಕಾರಕ್ಕೆ ಹೆಚ್ಚಿನ ಸಮಯವು ಹೋಗಲಿದೆ. ಕಛೇರಿಯಲ್ಲಿ ಸಂತೋಷದ ವಾತಾವರಣ ಇರಲಿದೆ. ಇಷ್ಟು ದಿನ ಮಾತಮಾಡದೇ ಇರುವವರು ಇಂದು ಮಾತನಾಡುವರು. ಲಕ್ಷ್ಮೀಸಹಿತನಾದ ನಾರಾಯಣನಿಗೆ ಪಾಯಸ ನೈವೇದ್ಯ ಮಾಡಿ.

ಕುಂಭ: ಬಂದ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆ ಹರಿಸಿ. ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ ಆಲೋಚನೆ ಮಾಡುವಿರಿ. ಉನ್ನತ ಅಧಿಕಾರಿಗಳು ನಿಮಗೆ ಆಗಬೇಕಾದ ಕೆಲಸದಲ್ಲಿ ಸಹಾಯ ಮಾಡುವರು. ಭಿನ್ನಾಭಿಪ್ರಾಯಗಳನ್ನು ಮರೆತು ನಿಮ್ಮ ಸಂಬಂಧವನ್ನು ಕಾಪಾಡಿಕೊಳ್ಳುವುದು ಉತ್ತಮ‌ ಇಲ್ಲವಾದರೆ ಪರಿಸ್ಥಿತಿಯು ಅಂತ್ಯದಲ್ಲಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ನೀವು ಮನೆ ಖರೀದಿಸಲು ನಿರ್ಧರಿಸಬಹುದು. ಪ್ರಸ್ತುತ ಕೆಲಸದಲ್ಲಿ ನೀವು ಪ್ರಗತಿಯತ್ತ ನೋಡುತ್ತಿದ್ದರೆ ನಿಮ್ಮ ಆಸೆ ಈಡೇರಬಹುದು. ಕಚೇರಿಯಲ್ಲಿನ ಸೂಕ್ಷ್ಮ ಸಮಸ್ಯೆಗಳನ್ನು ಪರಿಹರಿಸಲು ನಿಮ್ಮ ಚಾತುರ್ಯ ಮತ್ತು ತಿಳುವಳಿಕೆಯನ್ನು ಬಳಸಿ. ಶಿವನಿಗೆ ರುದ್ರಾಭಿಷೇಕವನ್ನು ಮಾಡಿಸಿ.

ಮೀನ: ಇಂದಿನ ಎಲ್ಲ ವಿಚಾರದಲ್ಲಿಯೂ ಸಮಯ ಮೀರುವ ಅನುಭವವಾಗಲಿದೆ‌. ಅಷ್ಟಾದರೂ ನಿಮ್ಮ ಪಾಲಿನದ್ದು ಸಿಕ್ಕೆ ಸಿಗುವುದು. ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ನೀವು ಅನಾಯಾಸವಾಗಿ ಎದುರಿಸುವಿರಿ. ದೈವಾನುಕೂಲದ ಬಗ್ಗೆ ಖುಷಿಯಾಗುವುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಮನ್ನಣೆ ಮತ್ತು ಮೆಚ್ಚುಗೆ ಸಿಗಲಿದೆ. ನಿಮ್ಮ ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಶನಿಯು ನಿಮಗೆ ಕಿರಿಕಿರಿ ಕೊಟ್ಟಾನು. ದುಃಖಬೇಡ. ದುಃಖವನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಅನುಸರಿಸಿ.

-ಲೋಹಿತಶರ್ಮಾ ಇಡುವಾಣಿ

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ