ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಪರಿಘ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಸಂಜೆ 05:27 ರಿಂದ 07:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:39 ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:27ರ ವರೆಗೆ.
ಮೇಷ: ನಿಮ್ಮ ಪ್ರಯತ್ನವು ಸಂಪೂರ್ವಾಗಿರಲಿ. ಯಶಸ್ಸನ್ನು ಪಡೆಯುವ ಹಂಬಲ ಬೇಡ. ಆರ್ಥಿಕತೆಯನ್ನು ಸುಧಾರಿಸಿಕೊಳ್ಳಲು ಆಪ್ತರ ಜೊತೆ ಮಾತನಾಡಿ. ಯಾವುದೇ ಹೂಡಿಕೆಯತ್ತ ಗಮನಹರಿಸುವುದು ಬೇಡ. ದುರ್ಬಲರಿಗೆ ಸಹಾಯವನ್ನು ಮಾಡಿ. ನಕಾರಾತ್ಮಕ ಆಲೋಚನೆಗಳಿಗೆ ಆಸ್ಪದವನ್ನು ಕೊಡುವುದು ಬೇಡ. ಪ್ರಯಾಣವನ್ನು ಮಾಡುವ ಅನಿವಾರ್ಯವಿದ್ದರೆ ಮಾಡಿ. ಅನಗತ್ಯ ಖರ್ಚನ್ನು ನಿಲ್ಲಿಸಿ. ಹೊರಗಡೆಯ ಆಹಾರಕ್ಕೆ ಮನೆಯಲ್ಲಿ ಕಡಿವಾಣ ಹಾಕಬಹುದು. ಕೆಲವು ಸಭೆಗಳಿಗೆ ಭೇಟಿ ನೀಡಬೇಕಾಗಬಹುದು. ಸಾಮಾಜಿಕ ಚಿಂತನೆಯನ್ನು ಬೆಳೆಸಿಕೊಳ್ಳುವುದು ಉತ್ತಮ.
ವೃಷಭ: ಮಾನಸಿಕ ಒತ್ತಡವು ಕಡಿಮೆ ಇದ್ದರೂ ನೆಮ್ಮದಿಯ ಕೊರತೆ ಕಾಣಿಸಿಕೊಳ್ಳಲಿದೆ. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಕ್ಷಮಿಸುವ ಸ್ವಭಾವವು ಇಷ್ಟವಾದೀತು. ಸ್ನೇಹಿತರು ನಿಮ್ಮ ಸಹಾಯವನ್ನು ಬಯಸುವರು. ಆಪದ್ಧನವನ್ನು ವಿನಿಯೋಗ ಮಾಡಬೇಕಾದೀತು. ದುರಾಲೋಚನೆಗಳು ಒಂದೊಂದಾಗಿಯೇ ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ನೂತನ ವಸ್ತುಗಳ ಖರೀದಿಯಿಂದ ನಿಮಗೆ ಸ್ವಲ್ಪ ಸಂತೋಷವೂ ಆಗುವುದು. ಬಂಧುಗಳ ಭೇಟಿಯು ಖುಷಿಯನ್ನು ಕೊಡುವುದು. ಕುಲದೇವರ ಸ್ತೋತ್ರವನ್ನು ಪಠಿಸಿ.
ಮಿಥುನ: ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸಲು ಹೋಗುವಿರಿ. ಸಮಾರಂಭಗಳಿಗೆ ಹೋಗಿ ಎಲ್ಲರ ಜೊತೆ ಖುಷಿಯಿಂದ ಕಾಲವನ್ನು ಕಳೆಯುವಿರಿ. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಕಷ್ಟಪಡಬೇಕಾಗುವುದು. ಯೋಜನೆಯನ್ನು ಬದಲಿಸಿದ್ದಕ್ಕೆ ಬೇಸರಗೊಳ್ಳುವಿರಿ. ಹೇಳಲಾಗದ ಭಯವು ನಿಮ್ಮನ್ನು ಕಾಡಬಹುದು. ಮಕ್ಕಳ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಆಭರಣವನ್ನು ಖರೀದಿಸುವ ಮನಸ್ಸಾಗಲಿದೆ. ಹಳೆಯದನ್ನು ನೆನಪಿಸಿಕೊಂಡು ಬೇಸರಗೊಳ್ಳುವಿರಿ. ಏಕಾಂತವು ಬೇಕೆ ಎನಿಸಬಹುದು. ಮಹಾವಿಷ್ಣುವಿನ ಸ್ತೋತ್ರವನ್ನು ಪಠಿಸಿ.
ಕಟಕ: ನೀವು ಸ್ವಾರ್ಥಿಗಳಂತೆ ತೋರುವಿರಿ. ಎಲ್ಲವನ್ನೂ ನಿಮಗೆ ಬೇಕೆನ್ನುವ ಬಯಕೆ ಇರಲಿದೆ. ಆರ್ಥಿಕವಾಗಿ ವೃದ್ಧಿಯಾಗಲು ತಂತ್ರಗಳನ್ನು ಹೂಡುವ ಅವಶ್ಯಕತೆ ಇದೆ. ಪ್ರಭಾವೀ ವ್ಯಕ್ತಿಗಳ ಮೆಚ್ಚುಗೆಯಿಂದ ನಿಮಗೆ ಅನುಕೂಲವೂ ಆಗಬಹುದು. ದಾಂಪತ್ಯದಲ್ಲಿ ಹೆಚ್ಚಿನ ಮಾತುಗಳು ಭವಿಷ್ಯದ ಬಗ್ಗೆ ಇರಲಿದ್ದು ಒಂದು ನಿರ್ಧಾರಕ್ಕೆ ಇಬ್ಬರೂ ಬರುವಿರಿ. ಸಿಗದ ವಸ್ತುವಿನ ಬಗ್ಗೆ ಅತಿಯಾದ ಮೋಹವನ್ನು ಬೆಳೆಸಿಕೊಳ್ಳಲಿದ್ದೀರಿ. ನಿಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗೆ ಹಿಂದಿರುಗುವಿರಿ. ನಿಮ್ಮ ತಪ್ಪಿನಿಂದ ನೀವೇ ಪಶ್ಚಾತ್ತಾಪಪಡಬೇಕಾದೀತು. ಮನಸ್ಸು ಬಹಳ ಚಂಚಲವಾಗಿ ಇರಲಿದೆ.
ಸಿಂಹ: ಶತ್ರುಗಳ ಬಲವರ್ಧನೆ ಆಗಲಿದೆ. ನೀವು ಕಾನೂನಾತ್ಮಕ ಹೋರಾಟಕ್ಕೆ ತಯಾರಿ ನಡೆಸುವಿರಿ. ದುರ್ಬಲ್ಯವನ್ನು ಬಳಸಿಕೊಂಡು ಆಡಿಕೊಳ್ಳಬಹುದು. ನೇರವಾದ ಮಾತಿನಿಂದ ನೀವು ನಿಷ್ಠುರರಾಗುವಿರಿ. ಸಹನೆಯನ್ನು ನೀವು ಬೆಳೆಸಿಕೊಳ್ಳಬೇಕಾಗಿದೆ. ದೇಹಕ್ಕೆ ಬಲವಾದ ಹೊಡೆತ ಬೀಳಬಹುದು. ಅಪರಿಚಿತರ ಜೊತೆ ಮಾತನಾಡಲು ಮುಜುಗರಪಟ್ಟುಕೊಳ್ಳಬಹುದು. ಮನೆ ಕೆಲಸದಲ್ಲಿ ನೀವು ವ್ಯಸ್ತರಾಗುವಿರಿ. ಆರಾಮದಿಂದ ದಿನ ಕಳೆಯಬೇಕು ಎಂದು ಅನ್ನಿಸಬಹುದು. ಸಮೀಪದ ದೇವಾಲಯಕ್ಕೆ ಹೋಗಿ ಮನಸ್ಸಿಗೆ ಶಾಂತಿಯನ್ನು ಪಡೆದುಕೊಂಡು ಬರುವಿರಿ.
ಕನ್ಯಾ: ಮಿತ್ರರಿಗೆ ಸಹಾಯ ಮಾಡಲು ಹೋಗಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಆಕಸ್ಮಿಕ ಧನಲಾಭವು ನಿಮಗೆ ನೆಮ್ಮದಿಯನ್ನು ತರಬಹುದು. ಉದ್ಯೋಗದಲ್ಲಿ ಅವಘಡವು ಸಂಭವಿಸಬಹುದು. ಆಕರ್ಷಕವಾಗಿ ನೀವು ಕಾಣಲಿದ್ದೀರಿ. ನಿಮ್ಮ ನಿರ್ಧಾರವನ್ನು ಬದಲಿಸಲು ನೀವು ಒಪ್ಪಲಾರಿರಿ. ಅಸ್ಪಷ್ಟವಾದ ಆಲೋಚನೆಯು ನಿಮ್ಮ ನಿರ್ಧಾರವನ್ನು ಬದಲಿಸೀತು. ವಿದ್ಯಾರ್ಥಿಗಳಿಗೆ ಪಾಲಕರು ಭವಿಷ್ಯದ ಬಗ್ಗೆ ತಿಳಿಸುವರು. ಮಾತನ್ನು ಆಡುವಾಗ ಗಮನವಿರಲಿ. ನಿಮ್ಮ ಅನುಭವವನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳಿ. ಶ್ರದ್ಧೆಯು ಕಡಿಮೆ ಆಗಲಿದೆ. ಕುಲದೇವರ ಸ್ತುತಿಯನ್ನು ಮಾಡಿ.
ತುಲಾ: ಮನಸ್ಸಿಗೆ ಘಾಸಿಯಾಗುವಂತಹ ಮಾತನ್ನು ಬಂಧುಗಳು ಆಡುವರು. ಪ್ರೀತಿಯ ವಿಚಾರದಲ್ಲಿ ನಿಮಗೆ ಕೆಲವು ಹಿತವಚನಗಳನ್ನು ಅನುಭವಿಗಳು ಹೇಳುವರು. ಸರಳವಾಗಿರಲು ಇರುವುದು ಇಷ್ಟವಾಗಲಿದೆ. ನಂಬಿಕೆಯನ್ನು ಇಟ್ಟುಕೊಂಡು ವ್ಯವಹಾರವನ್ನು ಮುಂದುವರಿಸಿ. ನೆಮ್ಮದಿಯನ್ನು ಏಕಾಂತದಲ್ಲಿ ನೀವು ಕಾಣುವಿರಿ. ಮನೆಗೆ ಬೇಕಾದ ಧನವನ್ನು ನೀವು ಕೊಡುವಿರಿ. ಪತ್ನಿಯ ಮಾತಿನಂತೆ ನಡೆಯುವುದು ಕಷ್ಟವಾಗಿ ಬಿರುಸು ಮಾತುಗಳು ಬರಬಹುದು. ಸಹಾಯವನ್ನು ಕೇಳಿದಾಗ ನೀರೀಕ್ಷಿಸಿದಂತೆ ನಿಮ್ಮವರಿಂದ ಉತ್ತರ ಬರಲಿದೆ. ದುರ್ಗಾದೇವಿಯನ್ನು ಸ್ತುತಿಸಿ.
ವೃಶ್ಚಿಕ: ಕುಟುಂಬದ ಕೆಲಸಕ್ಕೆ ಸಹಕಾರವನ್ನು ನೀಡುವಿರಿ. ಸಂಗಾತಿಯ ಬಗ್ಗೆ ಕಾಳಜಿ ಇರಲಿದೆ. ನೀವು ಇಷ್ಟಪಟ್ಟಿದ್ದನ್ನು ಪಡೆದುಕೊಳ್ಳುವಿರಿ. ಪತ್ನಿಯ ಕಡೆಯವರಿಂದ ನಿಮಗೆ ಕೆಲವು ಅಸಂಬದ್ಧ ಮಾತುಗಳು ಕೇಳಿಬರಬಹುದು. ಭವಿಷ್ಯದ ಹಣವನ್ನು ನೀವು ಗೌಪ್ಯವಾಗಿ ಕೂಡಿಡುವಿರಿ. ಇನ್ನೊಬ್ಬರ ಬಗ್ಗೆ ಗೊತ್ತಿಲ್ಲದೇ ಮಾತಡುವಿರಿ. ಸ್ಥಾನಮಾನವನ್ನು ಪಡೆಯಲು ನೀವು ಬಹಳ ಉತ್ಸಾಹದಿಂದ ಇರುವಿರಿ. ಕಾಲವನ್ನು ವ್ಯರ್ಥ ಮಾಡಲು ಮನಸ್ಸು ಇಲ್ಲದಿದ್ದರೂ ಅನಿವಾರ್ಯವಾಗಿ ಕಳೆಯಬೇಕಾದೀತು. ಗುರುಚರಿತ್ರೆಯ ಪಠಣವನ್ನು ಮಾಡಿ.
ಧನು: ಹಣಕಾಸಿನ ಸಹಾಯವನ್ನು ಮಿತ್ರರಿಂದ ಪಡೆಯುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ನಿಮಗೆ ಆತಂಕವಾಗಲಿದೆ. ಬಹಳ ದಿನಗಳ ಅನಂತರ ಸುಗ್ರಾಸ ಭೋಜನವನ್ನು ಮಾಡುವಿರಿ. ನಿಮಗೆ ಬಂದ ಅಪವಾದವು ದೂರಾಗಬಹುದು. ಬಂಧುಗಳನ್ನು ಪ್ರೀತಿಸುವಿರಿ. ಸಾಲದಿಂದ ಮುಕ್ತರಾಗಲು ಎಷ್ಟೇ ಪರಿಶ್ರಮಿಸಿದರೂ ಸಾಧ್ಯವಾಗದು. ತಾಳ್ಮೆಯನ್ನು ಕಳೆದುಕೊಳ್ಳದೇ ವರ್ತಿಸುವುದು ಮುಖ್ಯವಾಗಲಿದೆ. ನೀವು ದ್ವೇಷಿಸುವವರ ಬಳಿಯೇ ಸಹಾಯ ಕೇಳುವ ಸಂದರ್ಭವು ಬರಬಹುದು. ಕಾರ್ತಿಕೇಯನ ಸ್ಮರಣೆಯು ನಿಮಗೆ ಮಾನಸಿಕ ಬಲವನ್ನು ಕೊಡಲಿದೆ. ತೊಂದರೆಗಳನ್ನು ನೆನೆನೆದು ದುಃಖಿಸುವಿರಿ.
ಮಕರ: ನಿಮ್ಮ ಆಸ್ತಿಯ ಮೇಲೆ ಬೇರೆಯವರ ಕಣ್ಣು ಬೀಳಲಿದೆ. ಕೆಲವರು ನಿಮ್ಮಿಂದ ಉಪಕಾರವನ್ನು ಪಡೆದುಕೊಳ್ಳುವವರಿದ್ದಾರೆ. ಅನಂತರ ನಿರ್ಲಕ್ಷ್ಯಿಸಬಹುದು. ಸಂಗಾತಿಯಿಂದ ಖುಷಿಯ ಸಮಾಚಾರವನ್ನು ಕೇಳುವಿರಿ. ಸ್ನೇಹಿತ ಜೊತೆ ಸುತ್ತಾಟ ಮಾಡುವಿರಿ. ಕಲಾವಿದರು ಕಾರ್ಯಕ್ರಮದಲ್ಲಿ ಇರುವರು. ಶಿಕ್ಷಕರನ್ನು ಶಿಷ್ಯರು ಭೇಟಿ ಮಾಡಲಿದ್ದು, ಉಡುಗೊರೆಯನ್ನು ನೀಡಲಿದ್ದಾರೆ. ಇನ್ನೊಬ್ಬರಿಂದ ಲಾಭವನ್ನು ಬಯಸುವುದು ಸರಿಯಾಗದು. ನಿಮ್ಮವರೇ ನಿಮಗ ಸಹಕಾರ ಕೊಡದಿರುವುದು ಬೇಸರ ತರಿಸಬಹುದು. ಮನೆಯ ವಸ್ತುಗಳ ಖರೀದಿಯು ಉತ್ಸಾಹದಿಂದ ಸಾಗಲಿದೆ.
ಕುಂಭ: ದೃಷ್ಟಿದೋಷದಿಂದ ನೀವು ಪೀಡಿತರಾಗುವ ಸಾಧ್ಯತೆ ಇದೆ. ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಕಳೆದುಕೊಂಡು ಕಳವಳಗೊಳ್ಳುವಿರಿ. ಆಸ್ತಿಯ ವಿಚಾರದಲ್ಲಿ ವಂಚನೆ ಆಗುವ ಸಾಧ್ಯತೆ ಇದೆ. ಅನಾರೋಗ್ಯವನ್ನು ಇಂದಿನ ವಿಶ್ರಾಂತಿಯಿಂದ ಸರಿಮಾಡಿಕೊಳ್ಳುವಿರಿ. ಇನ್ನೊಬ್ಬರನ್ನು ಕಂಡು ಅಸೂಯೆಪಡುವುದನ್ನು ಬಿಟ್ಟರೆ ನೆಮ್ಮದಿಯು ಸಿಗಬಹುದು. ದಾಂಪತ್ಯವನ್ನು ಸರಿದೂಗಿಸಿಕೊಳ್ಳುವ ಕಲೆಯನ್ನು ನೀವು ಬಲ್ಲವರಾಗಿದ್ದೀರಿ. ಅಪರಿಚಿತರಿಂದ ನಿಮ್ಮ ವಸ್ತುವುದು ಅಪಹರಣವಾಗಬಹುದು. ವಿವಾಹದ ಮಾತುಕತೆ ಗೊಂದಲದಲ್ಲಿ ಮುಕ್ತಾಯವಾಗಬಹುದು. ಇಷ್ಟದೇವರ ಆರಾಧನೆಯನ್ನು ಮಾಡಿ.
ಮೀನ: ಆಸ್ತಿಯ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಸರ್ಕಾರಿಯ ಕೆಲಸದ ವಿಳಂಬದಿಂದ ನಿಮಗೆ ಬೇಸರವಾಗಲಿದೆ. ರಾಜಕಾರಣಿಗಳ ಕಾರ್ಯಕ್ಕೆ ಪ್ರಶಂಸೆಯು ಸಿಗಲಿದೆ. ವಿರೋಧಿಗಳನ್ನು ಸೃಷ್ಟಿ ಮಾಡಿಕೊಳ್ಳುವ ಸಾಧ್ಯತೆ ಇದೆ. ವಾಹನ ಖರೀದಿಯ ಆಲೋಚನೆಯನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಬಹುದು. ಸಂಪತ್ತಿನ ರಕ್ಷಣೆಯು ನಿಮಗೆ ಕಷ್ಟವಾದೀತು. ನಿಮ್ಮ ಅಮೂಲ್ಯ ವಸ್ತುವನ್ನು ನಿಮಗೆ ಗೊತ್ತಿಲ್ಲದೇ ಕೊಟ್ಟು ಬಿಡುವಿರಿ. ನಿಮ್ಮ ಮಾತುಗಳು ಅನ್ಯಾರ್ಥವನ್ನು ಕೊಡಲಿದೆ. ಶಿವಪಂಚಾಕ್ಷರವನ್ನು ಪಠಿಸಿ.