Horoscope 23 Oct: ದಿನಭವಿಷ್ಯ, ನಿಮ್ಮ ಆದಾಯದ ಮೇಲೆ ಸರ್ಕಾರದ ಕಣ್ಣು ಬೀಳಬಹುದು ಎಚ್ಚರ!

| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2023 | 12:02 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಅಕ್ಟೋಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 23 Oct: ದಿನಭವಿಷ್ಯ, ನಿಮ್ಮ ಆದಾಯದ ಮೇಲೆ ಸರ್ಕಾರದ ಕಣ್ಣು ಬೀಳಬಹುದು ಎಚ್ಚರ!
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು,
ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ,
ನಿತ್ಯನಕ್ಷತ್ರ:ಶ್ರವಣ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ,
ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:22ರ ವರೆಗೆ,
ಯಮಘಂಡ ಕಾಲ ಬೆಳಿಗ್ಗೆ 10:49 ರಿಂದ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:44 ರಿಂದ 03:12ರ ವರೆಗೆ.

ಮೇಷ ರಾಶಿ: ತಂತ್ರಜ್ಞರಿಗೆ ವೃತ್ತಿಯ ವಿಚಾರದಲ್ಲಿ ಗೊಂದಲವಿರುವುದು. ಸ್ನೇಹಿತರ ಉತ್ಸಾಹದ ಮಾತಿಗೆ ಮರುಳಾಗುವ ಸಾಧ್ಯತೆ ಇದೆ. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು.‌ ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಮಕ್ಕಳಿಂದ ಹಣವನ್ನು ಪಡೆಯುವಿರಿ. ಇಂದು ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ‌ ನಿರ್ವಹಣೆಯಲ್ಲಿ ಸೋಲಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾಗಬಹುಸು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಕೃಷಿಯಲ್ಲಿ ನಿಮಗೆ ಇಂದು ನಿರಾಸಕ್ತಿಯು ಇರುವುದು. ಸುಮ್ಮನೇ ಇದ್ದಷ್ಟೂ ನಿಮ್ಮ ಮೇಲೆ ಗೂಬೆ‌ ಕೂರಿಸಬಹುದು.

ವೃಷಭ ರಾಶಿ: ಮನಸ್ಸಿನಲ್ಲಿ ಯಾವುದೋ ಆತಂಕವು ಇರಲಿದ್ದು ಹೊರಹಾಕಲು ಪ್ರಯತ್ನಿಸುವಿರಿ. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಬಂಗಾರದ ಖರೀದಿಗೆ ಉತ್ಸಾಹವನ್ನು ತೋರುವಿರಿ. ಅಸಾಧ್ಯವಾದ ಕಾರ್ಯವನ್ನು ಮಾಡಬೇಕು ಎನಿಸಬಹುದು. ಬರುವ ಅಲ್ಪ ಆದಾಯವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಪ್ರೀತಿಯು ಸಿಗಲಿದೆ. ಕಾರ್ಯದ ನಿಮಿತ್ತ ಓಡಾಟವು ಹೆಚ್ಚಾಗುವುದು. ಬಂಧುಗಳಿಂದ ಸಲ್ಲದ ಮಾತುಗಳನ್ನು ಕೇಳುವಿರಿ. ಆಲಸ್ಯದಿಂದ ನಿಮ್ಮ ಎಲ್ಲ ಕಾರ್ಯಗಳೂ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಆಸೆ ಪಡುವುದು ಬೇಡ.‌ ದುಃಖಪಡಬೇಕಾದೀತು. ಆಪ್ತರ ಮೇಲೆ ಹುಸಿ ಮುನಿಸು ಇರಲಿದೆ.

ಮಿಥುನ ರಾಶಿ: ಹೊಸ ವಸ್ತುಗಳನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುವಿರಿ.‌ ವಾಹನವನ್ನು ಚಲಾಯಿಸುವ ಬೇರೆಯ ಯಾವ ಚಟುವಟಿಕೆಗಳನ್ನು ಮಾಡುವುದು ಬೇಡ. ಆಹಾರದಿಂದ ಆರೋಗ್ಯವು ಕೆಡಲಿದೆ. ನಿಮ್ಮ ಕುಶಲ ಕಾರ್ಯಗಳು ಮೇಲಧಿಕಾರಿಗಳಿಗೆ ತಿಳಿಯುವುದು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ಸಂಪತ್ತಿನ ಉಳಿತಾಯದ ದಾರಿಯನ್ನು ನೀವೇ ಕಂಡುಕೊಳ್ಳುವಿರಿ. ಮುಚ್ಚು ಮರೆ ಇಲ್ಲದೇ ಎಲ್ಲವನ್ನೂ ಆಪ್ತರ ಜೊತೆ ಹಂಚಿಕೊಳ್ಳಿ.

ಕರ್ಕ ರಾಶಿ: ಸ್ವಂತ ಉದ್ಯಮದಲ್ಲಿ ಕೆಲವು ಬದಲಾವಣೆಯನ್ನು ಮಾಡಬೇಕಾದ ಅನಿವಾರ್ಯತೆ ಬರಬಹುದು. ‌ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ. ಆದರೂ ಕಷ್ಟವಾದೀತು. ಕುಟುಂಬದ ಸದಸ್ಯರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಪ್ತರ ಒಡನಾಟವು ಖುಷಿಯನ್ನು ಕೊಡಬಹುದು. ವಿದ್ಯಾರ್ಥಿಗಳ ಪ್ರಗತಿಯಲ್ಲಿ ಮಂದಗತಿ ಇರುವುದು. ನಂಬಿಕೆಯನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಹಿತಶತ್ರುಗಳನ್ನು ಅವರಿಗೆ ಗೊತ್ತಾಗದಂತೆ ದೂರವಿಡಿ. ನಿಮ್ಮ ಬಳಿ‌ ಕೇಳಿದರೆ ಮಾತ್ರ ಸಲಹೆಯನ್ನು ಕೊಡಿ.‌ ತಂದೆಯ ಕೋಪವನ್ನು ನೀವು ಸಮಾಧಾನ ಮಾಡುವಿರಿ. ವಿರೋಧಿಗಳು ಸೃಷ್ಟಿಯಾಗಬಹುದು. ಶುಭ ಸಮಾರಂಭಗಳಿಗೆ ಭೇಟಿ ಮಾಡುವಿರಿ. ಕ್ರೀಡೆಯಲ್ಲಿ ಸ ಅಸಕ್ತಿಯು ಕಡಿಮೆ ಆಗುವುದು.

ಸಿಂಹ ರಾಶಿ: ಸಹೋದರನ ಕುಟುಂಬದಲ್ಲಿ ನಿಮ್ಮ ಮಧ್ಯಪ್ರವೇಶವು ಆಗಬೇಕಾಗಬಹುದು. ಧಾರ್ಮಿಕ ಕಾರ್ಯದಲ್ಲಿ ನಿಮ್ಮ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಧಾರ್ಮಿಕ ಮುಖಂಡರಿಗೆ ಅಪವಾದ ಬರುವ ಸಾಧ್ಯತೆ ಇದೆ. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರಲಿದ್ದು ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾದೀತು. ವೃತ್ತಿಯ ಸ್ಥಳದಲ್ಲಿ ರೋಚಕ ಅನುಭವವು ಇರಲಿದೆ. ಅನ್ನಿಸಿದ್ದನ್ನು ಹೇಳಲು ನಿಮಗೆ ಅವಕಾಶವು ಸಿಗದೇ ಹೋಗಬಹುದು. ಹಿರಿಯರಿಂದ ಆಶೀರ್ವಾದವನ್ನು ಪಡೆದುಕೊಂಡು ಮುಂದುವರಿಯಿರಿ. ಪ್ರೇಮಪ್ರಕರಣವು ಬಿಸಿಯ ತುಪ್ಪದಂತಾಗುವುದು. ಕೃಷಿಯಲ್ಲಿ ಆಸಕ್ತಿಯು ಹೆಚ್ಚಿರುವುದು.

ಕನ್ಯಾ ರಾಶಿ: ನಿಮ್ಮ ಆದಾಯದ ಮೇಲೆ ಸರ್ಕಾರದ ಕಣ್ಣು ಬೀಳಬಹುದು. ಲೆಕ್ಕಪತ್ರಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ.‌ ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ. ನಿಮ್ಮ ಪ್ರೀತಿ ಪಾತ್ರರು ನಿಮಗೆ ಉಡುಗೊರೆಯನ್ನು ಕೊಡಬಹುದು. ಸಂಗಾತಿಯ ಪ್ರೀತಿಯಿಂದ ಖುಷಿಯಾಗಲಿದೆ.‌ ಮನಸ್ಸಿನಲ್ಲಿ ಹತಾಶೆ, ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಹೊಸ ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ. ಯಾರ ಮಾತನ್ನೂ ಕೇಳುವ ವ್ಯವಧಾನವೂ ನಿಮ್ಮಲ್ಲಿ ಇರದು. ಎಲ್ಲರ ಮಾತಿಗೂ ನಿಮ್ಮ ಕೋಪ ಮಾಡಿಕೊಳ್ಳುವಿರಿ. ನಿಮ್ಮ ಎಲ್ಲ ನಿರ್ಧಾರಗಳೂ ನಿಮಗೇ ನಕಾರಾತ್ಮಕವಾಗಿ ಇರುವಂತೆ ತೋರುವುದು. ನಿಮ್ಮದಲ್ಲದ ಕೆಲಸಕ್ಕೂ ನೀವೇ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ಸುಮ್ಮನೇ ಕುಳಿತರೇ ಹತ್ತಾರು ಆಲೋಚನೆಗಳಿಂದ ನಿಮ್ಮ ಮನಸ್ಸು ದುರ್ಬಲವಾಗುವುದು.‌

ತುಲಾ ರಾಶಿ: ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು. ಬಂಧುಗಳ ಆಶ್ರಯದಲ್ಲಿ ಇಂದು ನೀವು ಇರಬೇಕಾದೀತು. ಸಂಗಾತಿಗೆ ನೀವು ಉತ್ತಮ ಕೆಲಸವು ಕೊಡಿಸುವಿರಿ. ಕಛೇರಿಯಲ್ಲಿ ನಿಮ್ಮ ಕಾರ್ಯವನ್ನು ಪ್ರಶಂಸಿಸಬಹುದು. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ತಿಳಿಯಿರಿ. ಹೂಡಿಕೆಯ ವಿಚಾರದಲ್ಲಿ ಯಾರಾದರೂ ಒತ್ತಾಯ ಮಾಡಬಹುದು. ದೂರದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಮನೆಯ ನೆನಪಾಗಬಹುದು. ಆಲಂಕಾರಿಕ ಉದ್ಯಮವನ್ನು ಮಾಡಿದರೆ ಆದಾಯ ಸಿಗಲಿದೆ. ಮನೆಯ ಕೆಲಸವು ಮುಗಿಯದಷ್ಟು ಇರಲಿದ್ದು ಚಿಂತೆಯಾಗುವುದು. ವಾಸ್ತವದಲ್ಲಿ ಜೀವಿಸುವುದನ್ನು ಕಲಿಯುವಿರಿ.

ವೃಶ್ಚಿಕ ರಾಶಿ: ರಕ್ಷಣೆಯ ಹೊಣೆಹೊತ್ತವರಿಗೆ ತುರ್ತು ಕಾರ್ಯಗಳು ಬರಲಿದ್ದು, ಅನಿವಾರ್ಯವಾಗಬಹುದು. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಮಾತು ನಡೆಯುತ್ತದೆ ಎನ್ನುವ ಕಲ್ಪನೆ ಬೇಡ. ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಮಾಡಿಕೊಳ್ಳಿ. ವೃತ್ತಿಯ ಕೆಲಸಗಳ ನಡುವೆ ಮನೆಯ ಕೆಲಸವೂ ನಿಮಗೆ ಕಷ್ಟವಾದೀತು‌. ಪರಿಶ್ರಮವಿಲ್ಲದೇ ಆದಾಯವು ಸಿಗಲಿ ಎನ್ನುವ ಮನೋಭಾವ ಇರಲಿದೆ. ಮೇಲಧಿಕಾರಿಗಳ ಹೊಸ ಯೋಜನೆಯನ್ನು ನಿರ್ವಹಿಸಲು ನಿಮ್ಮ ತಲೆಗೆ ಬರುವುದು. ಸ್ತ್ರೀಯರ ಒಡನಾಟ ಅತಿಯಾಗುವುದು ಬೇಡ. ನೌಕರರ ನೇರ ನುಡಿಗಳನ್ನು ನೀವು ಸಹಿಸಲಾರಿರಿ.

ಧನು ರಾಶಿ: ಕಛೇರಿಯ ಗೌಪ್ಯವಾದ ಕಾರ್ಯಕ್ಕೆ ನಿಮ್ಮನ್ನು ಬಳಸಿಕೊಳ್ಳುವಿರಿ. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಗ್ರಾಹಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳುವಿರಿ. ಸಾಹಿತ್ಯ ಕ್ಷೇತ್ರದಲ್ಲಿ ನಿಮ್ಮನ್ನು ಗುರುತಿಸುವರು. ನಿಮ್ಮ‌ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎನಿಸುವುದು. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ‌ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ. ಆರ್ಥಿಕ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹಿಂದಿಸುವುದು ಕಷ್ಟವಾದೀತು. ನಿಮ್ಮ ಮಾತಿನಿಂದ ಸಂಗಾತಿಯು ಸಿಟ್ಟಾಗುವರು. ನಿಮ್ಮ ಕಡೆಯಿಂದ ಬಂಧುಗಳು ಅರ್ಥಿಕ ಸಹಾಯವನ್ನು ಕೇಳಲು ಹಿಂದೇಟು ಹಾಕುವರು. ಕೃಷಿಯಲ್ಲಿ ನಿಮಗೆ ಆಸಕ್ತಿಯು ಕಡಿಮೆ‌ ಆದಂತೆ ತೋರುವುದು. ಮಕ್ಕಳ ಜೊತೆಗೆ ಕಳೆಯುವ ಸಮಯವು ಬಹಳ ಆಪ್ತವೆನಿಸುವುದು.

ಮಕರ ರಾಶಿ: ಅನಿರೀಕ್ಷಿತವಾಗಿ ಕನಸನ್ನು ಸಾಕಾರಗೊಳಿಸಿಕೊಳ್ಳುವಿರಿ. ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಅಲಂಕಾರಿಕ ವಸ್ತುಗಳ ಖರೀದಿಯಿಂದ ಲಾಭವಾಗಲಿದೆ. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ. ನಿರೀಕ್ಷಿತ ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರವು ಸಿಗಬಹುದು. ನಿಮ್ಮ ವಿದ್ಯಾಭ್ಯಾಸವನ್ನು ಕಂಡು ಆಚ್ವರಿಯಾಗಬಹುದು. ದೇವತಾರಾಧನೆಗೆ ತಿಳಿದವರ ಜೊತೆ ಚರ್ಚಿಸುವುದು ಸೂಕ್ತ. ಹಣದ ದುಂದುವೆಚ್ಚಕ್ಕೆ ಕಡಿವಾಣ ಹಾಕಿಕೊಳ್ಳಿ. ಪ್ರಯೋಜನವಿಲ್ಲದ ಮಾತುಕತೆಯಲ್ಲಿ ದಿನ‌ವನ್ನು ಕಳಯುವಿರಿ.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು.

ಕುಂಭ ರಾಶಿ: ಇಂದು ಮುಖ್ಯ ಕಾರ್ಯದಲ್ಲಿ ತೊಡಗುವುದು ಅಸಾಧ್ಯವಾಗಬಹುದು. ನಿಮ್ಮಿಂದ ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ. ಸಮಯದ ಹೊಂದಾಣಿಕೆಯಿಂದ ಕಾರ್ಯವನ್ನು ಸಾಧಿಸಬಹುದು. ನಿಮ್ಮ ಒರಟಾದ ಮಾತು ಇನ್ನೊಬ್ಬರಿಗೆ ಬೇಸರವನ್ನು ಕೊಡುವುದು. ವಸ್ತುಗಳ ಖರೀದಿಗೆ ಹಣವನ್ನು ಖರ್ಚು ಮಾಡಬಹುದು. ಪರೀಕ್ಷಿಸಿ ಖರೀದಿಸಿ. ಹೊಸ ಉದ್ಯೋಗಕ್ಕೆ ಅವಕಾಶವು ಪ್ರಾಪ್ತವಾಗಲಿದೆ. ಹೊಸ ಉದ್ಯೋಗವನ್ನು ಉತ್ಸಾಹದಿಂದ ಮಾಡುವಿರಿ. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗುವುದು. ಸಹೋದರಿಯ ನಡುವೆ ವಾಗ್ವಾದ ಮಾಡುವಿರಿ. ಆಸ್ತಿಯ ವಿಚಾರದಲ್ಲಿ ಬೇಸರವಿರಲಿದೆ. ಒತ್ತಾಯಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡುವಿರಿ. ನಿಮ್ಮ ಬಗ್ಗೆ ಹಿಂದಿನಿಂದ‌ ಮಾತನಾಡಿಕೊಳ್ಳುವುದು ಗೊತ್ತಾದೀತು.

ಮೀನ ರಾಶಿ: ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು. ‌ನಿಮ್ಮನ್ನು ಅಪಹಾಸ್ಯ ಮಾಡುವವರಿಗೆ ಪ್ರತ್ಯುತ್ತರ ನೀಡುವಿರಿ. ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಓಡಾಟವಾಗಬಹುದು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು. ನಿಮ್ಮ ಇಂದಿನ ಕೆಲಸಗಳು ಅಡೆತಡೆಯ ನಡೆವೆಯೂ ಮಾಡಿಕೊಳ್ಳುವಿರಿ. ವಾಹನ ಖರೀದಿಗೆ ಹಣವನ್ನು ಹೊಂದಿಸುವುದು ಸವಾಲಾಗಬಹುದು. ಅಪಘಾತ ಭೀತಿಯು ಕಾಡುವುದು. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಮಧ್ಯ ಪ್ರವೇಶ ಬೇಡ. ನಿಮ್ಮ ಬುದ್ಧಿಯು ನಕಾರಾತ್ಮಕ ವಿಚಾರವನ್ನೇ ಯೋಚಿಸುವುದು. ಬಂಧುಗಳ ಭೇಟಿಗೆ ದೂರಪ್ರಯಾಣವನ್ನು ಮಾಡುವಿರಿ.

-ಲೋಹಿತಶರ್ಮಾ – 8762924271 (what’s app only)